• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಪರಿಷತ್ ಚುನಾವಣೆಯಲ್ಲಿ ಎನ್‌ಡಿಎಗೆ ಗೆಲುವಿನ ಸಿಹಿ; ಕಾಂಗ್ರೆಸ್‌ಗೆ ಸೋಲಿನ ಕಹಿ!

ಪರಿಷತ್ ಚುನಾವಣೆಯಲ್ಲಿ ಎನ್‌ಡಿಎಗೆ ಗೆಲುವಿನ ಸಿಹಿ; ಕಾಂಗ್ರೆಸ್‌ಗೆ ಸೋಲಿನ ಕಹಿ!

ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಗೆಲುವು ಸಾಧಿಸಿದ್ದು, ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. 2023ರ ವಿಧಾನಸಭಾ ಚುನಾವಣೆ ಹಾಗೂ ಉಪಚುನಾವಣೆಗಳಲ್ಲಿ ಸತತ ಗೆಲುವು ಕಂಡಿದ್ದ ಕಾಂಗ್ರೆಸ್‌ಗೆ ಈ ಫಲಿತಾಂಶ ಆಘಾತ ನೀಡಿದೆ. ಅಭ್ಯರ್ಥಿಗಳ ಆಯ್ಕೆ, ಶಾಸಕರು ಮತ್ತು ಸಚಿವರ ನಿರ್ಲಕ್ಷ್ಯ, ಡಿ.ಕೆ.ಶಿವಕುಮಾರ್ ಅವರ ಕಾರ್ಯತಂತ್ರ ಹಾಗೂ ಸರ್ಕಾರದ ಇತ್ತೀಚಿನ ಬೆಳವಣಿಗೆಗಳು ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿವೆ.

Written ByPuttaraj K Alur
Published: Oct 28, 2026, 08:42 AM IST|Updated: Oct 28, 2026, 08:55 AM IST
joinshare
ಪರಿಷತ್ ಚುನಾವಣೆಯಲ್ಲಿ ಎನ್‌ಡಿಎಗೆ ಗೆಲುವಿನ ಸಿಹಿ; ಕಾಂಗ್ರೆಸ್‌ಗೆ ಸೋಲಿನ ಕಹಿ!
Image Credit: Council Elections

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬೆಂಗಳೂರಿನಲ್ಲಿ ಡಿಆರ್‌ಡಿಒ ಹಿರಿಯ ವಿಜ್ಞಾನಿ ಆತ್ಮಹ*ತ್ಯೆ: ಸೀಗೇಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ದುರಂತ!

ಬೆಂಗಳೂರಿನಲ್ಲಿ ಡಿಆರ್‌ಡಿಒ ಹಿರಿಯ ವಿಜ್ಞಾನಿ ಆತ್ಮಹ*ತ್ಯೆ: ಸೀಗೇಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ದುರಂತ!

2

ಪರಿಷತ್ ಚುನಾವಣೆಯಲ್ಲಿ ಎನ್‌ಡಿಎಗೆ ಗೆಲುವಿನ ಸಿಹಿ; ಕಾಂಗ್ರೆಸ್‌ಗೆ ಸೋಲಿನ ಕಹಿ!

3

ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಎಸ್.ವಿ.ಸಂಕನೂರ್‌ಗೆ ಭರ್ಜರಿ ಗೆಲುವು; ಕಾಂಗ್ರೆಸ್ ಅಭ್ಯರ್ಥಿಗಿಂತ 9,323 ಮತಗಳ ಮುನ್ನಡೆ!

4

Today Horoscope October 28th: ಈ ರಾಶಿಯವರಿಗೆ ದೇವರ ಅನುಗ್ರಹದಿಂದ ದೊಡ್ಡ ಯಶಸ್ಸು, ಸುಖ-ಸಮೃದ್ಧಿ!

5

ಆಂಧ್ರ, ಒಡಿಶಾಗೆ ‘ಅರ್ನಬ್’ ಚಂಡಮಾರುತ ಭೀತಿ: 50 ರೈಲು, 21 ವಿಮಾನ ರದ್ದು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Karnataka Legislative Council Elections: 2023ರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ರಾಜ್ಯದಲ್ಲಿ ನಡೆದ ಹಲವು ಚುನಾವಣೆಗಳಲ್ಲಿ ಸತತ ಜಯದ ಸಂಭ್ರಮದಲ್ಲಿದ್ದ ಕಾಂಗ್ರೆಸ್‌ಗೆ ಪರಿಷತ್ ಚುನಾವಣೆಗಳಲ್ಲಿ ಹಿನ್ನಡೆಯಾಗಿದೆ. ಮತ್ತೊಂದೆಡೆ ಎನ್‌ಡಿಎ ಗೆಲುವಿನ ಸಿಹಿ ಸವಿದಿದೆ. ವಿಧಾನಸಭಾ ಚುನಾವಣೆ ಹಾಗೂ ಉಪಚುನಾವಣೆಗಳಲ್ಲಿ ಗೆಲುವಿನ ನಾಗಾಲೋಟ ಮುಂದುವರಿಸಿದ್ದ ಕಾಂಗ್ರೆಸ್‌ಗೆ ಪರಿಷತ್ ಚುನಾವಣೆಯ ಫಲಿತಾಂಶ ರಾಜಕೀಯವಾಗಿ ಹಿನ್ನಡೆಯಾಗಿ ಪರಿಣಮಿಸಿದೆ.

2023ರ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ರಾಜ್ಯದಲ್ಲಿ ನಡೆದ ಹಲವು ಉಪಚುನಾವಣೆಗಳಲ್ಲಿ ಗೆಲುವು ಸಾಧಿಸಿತ್ತು. ಬಾಗಲಕೋಟೆ, ದಾವಣಗೆರೆ, ಸಂಡೂರು ಮತ್ತು ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದರು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರ ಆಡಳಿತಾವಧಿಯಲ್ಲಿ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸುತ್ತಾ ಬಂದಿತ್ತು. ಈ ಮೂಲಕ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಹೆಚ್ಚಾಗಿತ್ತು.

ಆದರೆ ಇದೀಗ ನಡೆದ ಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ನಿರೀಕ್ಷಿತ ಯಶಸ್ಸು ದೊರೆತಿಲ್ಲವೆಂಬ ಚರ್ಚೆ ಮುನ್ನೆಲೆಗೆ ಬಂದಿದೆ. ನಾಲ್ಕು ಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ಪ್ರಮುಖ ನಾಯಕರಾದ ಬಿ.ಕೆ.ಹರಿಪ್ರಸಾದ್ ಮತ್ತು ಡಿ.ಕೆ.ಶಿವಕುಮಾರ್ ಅವರ ಚುನಾವಣಾ ನಿರ್ವಹಣೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ವಿಧಾನಸಭಾ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ ಯಶಸ್ಸು ಕಂಡಿದ್ದ ಕಾಂಗ್ರೆಸ್‌ಗೆ ಪದವೀಧರರು ಸೇರಿದಂತೆ ಬುದ್ಧಿವಂತ ಮತದಾರರನ್ನ ಒಳಗೊಂಡ ಪರಿಷತ್ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದಿರುವುದು ಪಕ್ಷದ ಗಮನ ಸೆಳೆದಿದೆ.

ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ನಿರ್ವಹಣೆ ಚರ್ಚೆಗೆ

ಪರಿಷತ್ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ಅವರ ವೈಯಕ್ತಿಕ ಪ್ರಭಾವದ ವಿಚಾರವೂ ಚರ್ಚೆಯಾಗುತ್ತಿದೆ. ಚುನಾವಣೆಯಲ್ಲಿ ಅಭ್ಯರ್ಥಿಗಳ ಮೇಲೆಯೇ ಹೆಚ್ಚಿನ ಜವಾಬ್ದಾರಿ ಬಿಡಲಾಗಿತ್ತೇ ಎಂಬ ಪ್ರಶ್ನೆ ಮೂಡಿದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ಸಮನ್ವಯದಿಂದ ಕೆಲಸ ಮಾಡುವ ಅಗತ್ಯವಿದ್ದರೂ, ಶಾಸಕರು ಮತ್ತು ಸಚಿವರು ಚುನಾವಣೆಯನ್ನ ಗಂಭೀರವಾಗಿ ಪರಿಗಣಿಸಲಿಲ್ಲವೆಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.

ಪಕ್ಷದ ನಾಯಕರು, ಶಾಸಕರು ಮತ್ತು ಸಚಿವರು ಚುನಾವಣೆಯನ್ನ ಎಷ್ಟು ಗಂಭೀರವಾಗಿ ತೆಗೆದುಕೊಂಡಿದ್ದರು ಎಂಬುದು ಈಗ ಚರ್ಚೆಯ ವಿಷಯವಾಗಿದೆ. ಚುನಾವಣಾ ಪ್ರಚಾರ, ಮತದಾರರನ್ನ ತಲುಪುವ ಪ್ರಯತ್ನ ಮತ್ತು ಅಭ್ಯರ್ಥಿಗಳ ಗೆಲುವಿಗಾಗಿ ಸಂಘಟಿತವಾಗಿ ಕಾರ್ಯನಿರ್ವಹಿಸುವ ವಿಚಾರಗಳು ಫಲಿತಾಂಶದ ಬಳಿಕ ಮುನ್ನೆಲೆಗೆ ಬಂದಿವೆ.

ಡಿ.ಕೆ.ಶಿವಕುಮಾರ್ ಕಾರ್ಯತಂತ್ರದ ಬಗ್ಗೆ ಪ್ರಶ್ನೆ

ಪರಿಷತ್ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಾರ್ಯತಂತ್ರದ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಚುನಾವಣೆಯಲ್ಲಿ ಅತಿಯಾದ ಆತ್ಮವಿಶ್ವಾಸ ತೋರಿದರೇ ಎಂಬ ಪ್ರಶ್ನೆ ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ. ವಿಧಾನಸಭಾ ಚುನಾವಣೆ ಹಾಗೂ ಉಪಚುನಾವಣೆಗಳಲ್ಲಿ ಸತತ ಗೆಲುವು ಸಾಧಿಸಿದ್ದರಿಂದ ಕಾಂಗ್ರೆಸ್ ನಾಯಕರು ಇದೇ ಯಶಸ್ಸು ಪರಿಷತ್ ಚುನಾವಣೆಯಲ್ಲಿಯೂ ಮುಂದುವರಿಯಲಿದೆ ಎಂದು ಭಾವಿಸಿದ್ದರೇ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರವು ಸ್ಟಿಂಗ್ ಕಾರ್ಯಾಚರಣೆಗೆ ಸಂಬಂಧಿಸಿದ ವಿಚಾರದಲ್ಲೇ ಹೆಚ್ಚು ಸಮಯ ಕಳೆಯಿತು ಎಂಬ ಆರೋಪವೂ ಕೇಳಿಬರುತ್ತಿದೆ. ಇದೇ ಸಂದರ್ಭದಲ್ಲಿ ಪುಟ್ಟಣ್ಣ ಮತ್ತು ರಂಗನಾಥ್ ವಿರುದ್ಧ ಕೆಲವರು ನೀಡಿದ ಹೇಳಿಕೆಗಳು ಹಾಗೂ ಬಳಸಿದ ಭಾಷೆಯೂ ಚರ್ಚೆಯಲ್ಲಿವೆ. ಈ ವಿಚಾರಗಳು ಚುನಾವಣಾ ಸಂದರ್ಭದಲ್ಲಿ ರಾಜಕೀಯ ಚರ್ಚೆಯ ಭಾಗವಾಗಿದ್ದವು.

ಗೆಲುವಿನ ಸರಣಿಗೆ ತಾತ್ಕಾಲಿಕ ಹಿನ್ನಡೆ?

ವಿಧಾನಸಭಾ ಚುನಾವಣೆಯಿಂದ ಆರಂಭವಾಗಿ ಉಪಚುನಾವಣೆಗಳವರೆಗೆ ಗೆಲುವಿನ ಸರಣಿಯನ್ನ ಮುಂದುವರಿಸಿದ್ದ ಕಾಂಗ್ರೆಸ್‌ಗೆ ಪರಿಷತ್ ಚುನಾವಣೆಯ ಫಲಿತಾಂಶ ಹೊಸ ಸವಾಲು ಎದುರಿಸಿದೆ. ಎನ್‌ಡಿಎ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಎರಡೂ ರಾಜಕೀಯ ಬಣಗಳ ನಡುವೆ ಚುನಾವಣಾ ಯಶಸ್ಸಿನ ಕುರಿತು ಚರ್ಚೆ ಆರಂಭವಾಗಿದೆ.

ಒಟ್ನಲ್ಲಿ ಪರಿಷತ್ ಚುನಾವಣೆಯ ಫಲಿತಾಂಶವು ಕಾಂಗ್ರೆಸ್‌ನ ಹಿಂದಿನ ಗೆಲುವುಗಳ ನಡುವೆಯೇ ಗಮನ ಸೆಳೆದಿದೆ. ಅಭ್ಯರ್ಥಿಗಳ ಮೇಲಿನ ಅವಲಂಬನೆ, ಶಾಸಕರು ಮತ್ತು ಸಚಿವರ ಚುನಾವಣಾ ತೊಡಗಿಸಿಕೊಳ್ಳುವಿಕೆ, ನಾಯಕತ್ವದ ಕಾರ್ಯತಂತ್ರ ಹಾಗೂ ಚುನಾವಣೆಯನ್ನ ಗಂಭೀರವಾಗಿ ಪರಿಗಣಿಸಿದ ರೀತಿ—ಇವೆಲ್ಲವೂ ಈ ಫಲಿತಾಂಶದ ಬಳಿಕ ಚರ್ಚೆಗೆ ಬಂದಿರುವ ಪ್ರಮುಖ ವಿಚಾರಗಳಾಗಿವೆ.

Add Zee News as a Preferred Source
TAGS:
Karnataka Politics
Kannada News