• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /‘2G, ಕೋಲ್ ಸ್ಕ್ಯಾಮ್‌ಗಿಂತ ನೈಸ್ ದೊಡ್ಡ ಹಗರಣ’; ಡಿಕೆಶಿ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ!

‘2G, ಕೋಲ್ ಸ್ಕ್ಯಾಮ್‌ಗಿಂತ ನೈಸ್ ದೊಡ್ಡ ಹಗರಣ’; ಡಿಕೆಶಿ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ!

ನೈಸ್ ಯೋಜನೆಯ ಮೂಲ ಒಪ್ಪಂದದ ಇತಿಹಾಸವನ್ನ ಪ್ರಸ್ತಾಪಿಸಿದ ಕುಮಾರಸ್ವಾಮಿ, ಆರಂಭದಲ್ಲಿ ನೈಸ್ ಕಂಪನಿ ಇರಲಿಲ್ಲ ಎಂದು ಹೇಳಿದ್ದಾರೆ. ವಿಹೆಚ್‌ಬಿ, ಕಲ್ಯಾಣಿ ಗ್ರೂಪ್ ಹಾಗೂ ಎಸ್‌.ಎ.ಬಿ. ಇಂಜಿನಿಯರಿಂಗ್ ಸಂಸ್ಥೆಗಳೊಂದಿಗೆ ಅಂದಿನ ಮುಖ್ಯಮಂತ್ರಿ ಹೆಚ್‌.ಡಿ.ದೇವೇಗೌಡರು 1995ರ ಫೆಬ್ರವರಿ 20ರಂದು ಎಂಒಯುಗೆ ಸಹಿ ಹಾಕಿದ್ದರು ಎಂದು ಅವರು ತಿಳಿಸಿದ್ದಾರೆ.

Written ByPuttaraj K Alur
Published: Sep 29, 2026, 02:02 PM IST|Updated: Sep 29, 2026, 02:17 PM IST
joinshare
‘2G, ಕೋಲ್ ಸ್ಕ್ಯಾಮ್‌ಗಿಂತ ನೈಸ್ ದೊಡ್ಡ ಹಗರಣ’; ಡಿಕೆಶಿ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ!
Image Credit: HD Kumaraswamy

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

HD Kumaraswamy on NICE Project: ನೈಸ್‌ (NICE) ಯೋಜನೆ ವಿಚಾರವಾಗಿ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಕರ್ನಾಟಕ ಸರ್ಕಾರದ ನಡುವಿನ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ನೈಸ್ ಯೋಜನೆ ದೇಶದಲ್ಲೇ ಅತಿದೊಡ್ಡ ಹಗರಣವಾಗಿದ್ದು, ಸುಪ್ರೀಂಕೋರ್ಟ್ ಆದೇಶಗಳನ್ನೂ ಉಲ್ಲಂಘಿಸಲಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. 1995ರಿಂದ ಈವರೆಗಿನ ಯೋಜನೆಗೆ ಸಂಬಂಧಿಸಿದ ದಾಖಲೆಗಳನ್ನ ಬಿಡುಗಡೆ ಮಾಡಲು ಸಿದ್ಧವಿರುವುದಾಗಿ ಹೇಳಿರುವ ಅವರು, ವಿಧಾನಸೌಧದಲ್ಲಿ ನೇರ ಚರ್ಚೆಗೂ ಸಿದ್ಧ ಎಂದು ತಿಳಿಸಿದ್ದಾರೆ.

ನೈಸ್ ಯೋಜನೆಯ ಮೂಲ ಒಪ್ಪಂದದ ಇತಿಹಾಸವನ್ನ ಪ್ರಸ್ತಾಪಿಸಿದ ಕುಮಾರಸ್ವಾಮಿ, ಆರಂಭದಲ್ಲಿ ನೈಸ್ ಕಂಪನಿ ಇರಲಿಲ್ಲ ಎಂದು ಹೇಳಿದ್ದಾರೆ. ವಿಹೆಚ್‌ಬಿ, ಕಲ್ಯಾಣಿ ಗ್ರೂಪ್ ಹಾಗೂ ಎಸ್‌.ಎ.ಬಿ. ಇಂಜಿನಿಯರಿಂಗ್ ಸಂಸ್ಥೆಗಳೊಂದಿಗೆ ಅಂದಿನ ಮುಖ್ಯಮಂತ್ರಿ ಹೆಚ್‌.ಡಿ.ದೇವೇಗೌಡರು 1995ರ ಫೆಬ್ರವರಿ 20ರಂದು ಎಂಒಯುಗೆ ಸಹಿ ಹಾಕಿದ್ದರು ಎಂದು ಅವರು ತಿಳಿಸಿದ್ದಾರೆ.

ಮೇ ತಿಂಗಳಲ್ಲಿ ನಡೆದ ಪತ್ರವ್ಯವಹಾರಗಳ ಬಳಿಕ, ನವೆಂಬರ್ 8ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇವಲ ಐದು ಟೌನ್‌ಶಿಪ್‌ಗಳ ಅನುಷ್ಠಾನಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಂತರದ ವರ್ಷಗಳಲ್ಲಿ ಯೋಜನೆಯ ಸ್ವರೂಪದಲ್ಲಿ ಹಲವು ಬದಲಾವಣೆಗಳಾಗಿವೆ ಎಂದು ಅವರು ಆರೋಪಿಸಿದ್ದಾರೆ.

‘2G, ಕೋಲ್ ಸ್ಕ್ಯಾಮ್‌ಗಿಂತ ನೈಸ್ ದೊಡ್ಡದು’

ನೈಸ್ ಯೋಜನೆಯಲ್ಲಿನ ಅಕ್ರಮಗಳು 2G ಹಾಗೂ ಕೋಲ್ ಸ್ಕ್ಯಾಮ್‌ಗಿಂತಲೂ ದೊಡ್ಡ ಹಗರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಯೋಜನೆಯ ಹೆಸರಿನಲ್ಲಿ ರೈತರ ಜೊತೆ ಚೆಲ್ಲಾಟ ನಡೆಯುತ್ತಿದೆ ಎಂದು ದೂರಿರುವ ಅವರು, ಸರ್ಕಾರವು ಕೆಲವರ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ನೈಸ್ ಯೋಜನೆಗೆ ಸಂಬಂಧಿಸಿದ ವಿಚಾರಗಳಲ್ಲಿ ನ್ಯಾಯಾಲಯದ ಆದೇಶಗಳನ್ನ ಪಾಲಿಸಬೇಕಾಗಿದೆ ಎಂದು ಒತ್ತಿಹೇಳಿರುವ ಕುಮಾರಸ್ವಾಮಿ, ಸರ್ಕಾರದ ಕ್ರಮಗಳ ಮೇಲೂ ನ್ಯಾಯಾಲಯದ ನಿಗಾ ಇದೆ ಎಂದು ಹೇಳಿದ್ದಾರೆ.

ಡಿಕೆಶಿ–ಖೇಣಿ ವಿರುದ್ಧ ಗಂಭೀರ ಆರೋಪ

2002ರ ಆಗಸ್ಟ್‌ನಲ್ಲಿ ನಡೆದ ನಂದಿ ಎಕಾನಮಿಕ್ ಕಾರಿಡಾರ್ ಒಪ್ಪಂದವನ್ನ ಉಲ್ಲೇಖಿಸಿದ ಕುಮಾರಸ್ವಾಮಿ, ಅಂದು ಡಿ.ಕೆ.ಶಿವಕುಮಾರ್ ನಗರಾಭಿವೃದ್ಧಿ ಸಚಿವರಾಗಿದ್ದ ಸಂದರ್ಭದಲ್ಲಿ ಅಶೋಕ್ ಖೇಣಿ ಅವರೊಂದಿಗೆ ಸೇರಿ ನೈಸ್ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ. ಸಂಪುಟದ ಅನುಮೋದನೆಯಿಲ್ಲದೆ ಟೌನ್‌ಶಿಪ್ ಮತ್ತು ಟೋಲ್ ರಸ್ತೆಗೆ ಸಂಬಂಧಿಸಿದ ಭೂಮಿಯ ಅಳತೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ. ಇದರಿಂದ 10ರಿಂದ 12 ಕೆರೆಗಳು ನಾಶವಾಗಿವೆ ಎಂಬ ಆರೋಪವನ್ನೂ ಕುಮಾರಸ್ವಾಮಿ ಮಾಡಿದ್ದಾರೆ.

‘ನನ್ನ ಸಂಪುಟದಲ್ಲೇ ಒಪ್ಪಂದ ರದ್ದು ಮಾಡಲು ನಿರ್ಧಾರ’

ನೈಸ್ ಯೋಜನೆಗೆ ಸಂಬಂಧಿಸಿದ ಒಪ್ಪಂದದಲ್ಲಿ ಫ್ರೇಮ್‌ವರ್ಕ್ ಅಗ್ರಿಮೆಂಟ್ ಹೊರತುಪಡಿಸಿ ಯಾವುದೇ ಬದಲಾವಣೆ ಮಾಡಬಾರದು ಎಂದು ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಹೇಳಿದ್ದರೂ, 2002ರಲ್ಲಿ ಅಕ್ರಮ ತ್ರಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಒಪ್ಪಂದವನ್ನ ರದ್ದುಪಡಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಅವರು ಹೇಳಿದ್ದಾರೆ. ಈ ಮೂಲಕ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಯೋಜನೆಗೆ ಸಂಬಂಧಿಸಿದಂತೆ ಕೈಗೊಂಡ ನಿರ್ಧಾರಗಳನ್ನೂ ಅವರು ಪ್ರಶ್ನಿಸಿದ್ದಾರೆ.

ಡಿಕೆಶಿ ಆಸ್ತಿ ಹೆಚ್ಚಳವನ್ನೂ ಪ್ರಸ್ತಾಪಿಸಿದ ಹೆಚ್‌ಡಿಕೆ

ಸುದ್ದಿಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಚುನಾವಣಾ ಅಫಿಡವಿಟ್‌ನಲ್ಲಿ ಘೋಷಿಸಿರುವ ಆಸ್ತಿ ವಿವರಗಳನ್ನೂ ಕುಮಾರಸ್ವಾಮಿ ಪ್ರಸ್ತಾಪಿಸಿದ್ದಾರೆ. 2003ರಲ್ಲಿ ಸುಮಾರು ₹4 ಕೋಟಿ ಇದ್ದ ಆಸ್ತಿ 2023ರ ವೇಳೆಗೆ ₹1,413 ಕೋಟಿಗೂ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.
ನೈಸ್ ಯೋಜನೆಯ ಒಡಿಪಿ ಬದಲಾವಣೆ ಹಾಗೂ ಅಶೋಕ್ ಖೇಣಿ ಅವರೊಂದಿಗಿನ ವ್ಯವಹಾರಗಳೇ ಆಸ್ತಿ ಹೆಚ್ಚಳಕ್ಕೆ ಕಾರಣ ಎಂಬ ರೀತಿಯಲ್ಲಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. 2023ರ ವಿಧಾನಸಭಾ ಚುನಾವಣಾ ಅಫಿಡವಿಟ್‌ನಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಅವರ ಅವಲಂಬಿತರ ಒಟ್ಟು ಘೋಷಿತ ಆಸ್ತಿ ₹1,413.78 ಕೋಟಿ ಎಂದು ವರದಿಯಾಗಿದೆ.

‘ಅಡುಗೆ ಭಟ್ಟನಿಗೂ NOC ನೀಡಲಾಗಿದೆ’

ನೈಸ್ ಯೋಜನೆಗೆ ಸಂಬಂಧಿಸಿದ ಎನ್‌ಒಸಿ ನೀಡಿಕೆಯಲ್ಲೂ ಅಕ್ರಮ ನಡೆದಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. 2004ರಲ್ಲಿ ಸರ್ಕಾರಿ ಜಮೀನು ಖರೀದಿಸಿ, 2015ರಲ್ಲಿ ಎನ್‌ಒಸಿ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ. ಅಶೋಕ್ ಖೇಣಿ ಅವರ ಮನೆಯ ಅಡುಗೆ ಭಟ್ಟನಿಗೂ ಎನ್‌ಒಸಿ ನೀಡಲಾಗಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ. ಈ ಕುರಿತು ಸಮಗ್ರ ತನಿಖೆ ನಡೆದರೆ ಇನ್ನಷ್ಟು ವಿವರಗಳು ಹೊರಬರಲಿವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

30 ವರ್ಷಗಳಾದರೂ ಮುಂದುವರಿದ ವಿವಾದ

ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಯ ಇತಿಹಾಸ 1990ರ ದಶಕಕ್ಕೆ ಹೋಗುತ್ತದೆ. 1997ರಲ್ಲಿ ಅಂದಿನ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ನೇತೃತ್ವದ ಸರ್ಕಾರ ಮತ್ತು NICE ನಡುವೆ ಫ್ರೇಮ್‌ವರ್ಕ್ ಅಗ್ರಿಮೆಂಟ್ ನಡೆದಿತ್ತು ಎಂದು ವರದಿಗಳಿವೆ. ಯೋಜನೆಯ ಭೂಸ್ವಾಧೀನ, ರೈತರ ಪರಿಹಾರ, ಟೌನ್‌ಶಿಪ್ ಮತ್ತು ಇತರ ಅಂಶಗಳ ಕುರಿತು ಹಲವು ವರ್ಷಗಳಿಂದ ವಿವಾದ ಮುಂದುವರಿದಿದೆ. ಇತ್ತೀಚಿನ ಬೆಳವಣಿಗೆಯಲ್ಲೂ NICE ಯೋಜನೆಗೆ ಸಂಬಂಧಿಸಿದ ಭೂಮಿ ಮತ್ತು ರೈತರಿಗೆ ನಿವೇಶನ ಹಂಚಿಕೆ ವಿಚಾರವಾಗಿ ರಾಜಕೀಯ ವಾಗ್ವಾದ ಮುಂದುವರಿದಿದೆ. 

ಸರ್ಕಾರ ಕಾನೂನು ಚೌಕಟ್ಟಿನೊಳಗೆ ನಿರ್ಧಾರ ಕೈಗೊಳ್ಳುವುದಾಗಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಮಾಡಿರುವ ಆರೋಪಗಳು ಇದೀಗ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿವೆ. ಯೋಜನೆಗೆ ಸಂಬಂಧಿಸಿದ ದಾಖಲೆಗಳು, ನ್ಯಾಯಾಲಯದ ಆದೇಶಗಳು ಮತ್ತು ಸರ್ಕಾರದ ಮುಂದಿನ ಕ್ರಮಗಳು ಈ ವಿವಾದದ ದಿಕ್ಕನ್ನ ನಿರ್ಧರಿಸುವ ಪ್ರಮುಖ ಅಂಶಗಳಾಗಿವೆ.

Add Zee News as a Preferred Source
TAGS:
Karnataka Politics
Kannada News