SOCIAL MEDIA

Newsletter

PARTNER SITES
Select Language Select State

ಸಿಎಂ ಸೇರಿ ಎಲ್ಲರ ಫೋನ್ ಕದ್ದಾಲಿಕೆ ಆಗುತ್ತೆ! ನನ್ನ ಫೋನ್ ಕೂಡ ಸೇಫ್ ಇಲ್ಲವೆಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಹುಲ್ ಗಾಂಧಿ ಅವರ ಫೋನ್ ಕದ್ದಾಲಿಕೆ ಆರೋಪಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿ ಸೇರಿದಂತೆ ಪ್ರತಿಯೊಬ್ಬರ ಫೋನ್‌ಗಳೂ ಕದ್ದಾಲಿಕೆ ಆಗುತ್ತಿವೆ ಎಂದು ಆರೋಪಿಸಿದ್ದಾರೆ. ತಮ್ಮ ಫೋನ್ ಕೂಡ ಕದ್ದಾಲಿಕೆಗೆ ಒಳಗಾಗುತ್ತಿದೆ ಎಂದು ಹೇಳಿರುವ ಅವರು, ಪೆಗಾಸಸ್ ಸ್ಪೈವೇರ್ ಖರೀದಿ ಮತ್ತು ಬಳಕೆಯ ಬಗ್ಗೆಯೂ ಪ್ರಶ್ನೆ ಎತ್ತಿದ್ದಾರೆ. ವಿರೋಧ ಪಕ್ಷಗಳನ್ನ ಹೆದರಿಸಿ ನಿಯಂತ್ರಿಸಲು ಕೇಂದ್ರ ಸರ್ಕಾರ ಇಂತಹ ಪ್ರಯತ್ನ ನಡೆಸುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ದೂರಿದ್ದಾರೆ.

Written By Puttaraj K Alur
Published: Nov 16, 2026, 17:24 IST | Updated: Nov 16, 2026, 17:30 IST
Image Credit: Phone Tapping
Join

Phone Tapping Allegation: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂಬ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪ ಇದೀಗ ರಾಜಕೀಯ ವಲಯದಲ್ಲಿ ಮತ್ತೊಂದು ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿ ಸೇರಿದಂತೆ ಪ್ರತಿಯೊಬ್ಬರ ಫೋನ್‌ಗಳೂ ಕದ್ದಾಲಿಕೆಗೆ ಒಳಗಾಗುತ್ತಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ ಗೃಹ ಸಚಿವರಾಗಿರುವ ತಮ್ಮ ಮೊಬೈಲ್ ಫೋನ್ ಕೂಡ ಕದ್ದಾಲಿಕೆ ಆಗುತ್ತಿದೆ ಎಂದು ಅವರು ದೂರಿದ್ದಾರೆ.

ರಾಹುಲ್ ಗಾಂಧಿ ಅವರ ಫೋನ್ ಕದ್ದಾಲಿಕೆ ಆರೋಪದ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ಫೋನ್ ಕದ್ದಾಲಿಕೆ ವಿಚಾರವನ್ನ ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳಿಂದ ಹಿಡಿದು ಸಾಮಾನ್ಯ ವ್ಯಕ್ತಿಗಳವರೆಗೆ ಯಾರ ಫೋನ್‌ಗಳೂ ಇದರಿಂದ ಹೊರತಾಗಿಲ್ಲವೆಂಬ ರೀತಿಯಲ್ಲಿ ಅವರು ಹೇಳಿಕೆ ನೀಡಿದ್ದಾರೆ. ತಮ್ಮ ಫೋನ್ ಕೂಡ ಕದ್ದಾಲಿಕೆಗೆ ಒಳಗಾಗುತ್ತಿದೆ ಎಂದು ಹೇಳುವ ಮೂಲಕ ಈ ವಿಚಾರಕ್ಕೆ ಮತ್ತಷ್ಟು ಮಹತ್ವ ನೀಡಿದ್ದಾರೆ.

ಪೆಗಾಸಸ್ ಖರೀದಿ, ಬಳಕೆಯ ಬಗ್ಗೆ ಪ್ರಶ್ನೆ

ಫೋನ್ ಕದ್ದಾಲಿಕೆ ಆರೋಪದ ಬೆನ್ನಲ್ಲೇ ಪೆಗಾಸಸ್ ಸ್ಪೈವೇರ್ ಖರೀದಿ ಮತ್ತು ಅದರ ಬಳಕೆಯ ಬಗ್ಗೆಯೂ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳನ್ನ ಎತ್ತಿದ್ದಾರೆ. ಈ ತಂತ್ರಜ್ಞಾನವನ್ನ ಯಾರಿಗಾಗಿ ಖರೀದಿಸಲಾಯಿತು? ಅದನ್ನ ಯಾವ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ? ಎಂಬ ವಿಚಾರಗಳ ಕುರಿತು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷಗಳ ನಾಯಕರ ಚಟುವಟಿಕೆಗಳ ಮೇಲೆ ನಿಗಾ ಇಡಲು ಮತ್ತು ಅವರ ಧ್ವನಿಯನ್ನ ಹತ್ತಿಕ್ಕಲು ಇಂತಹ ತಂತ್ರಜ್ಞಾನವನ್ನ ಬಳಸಲಾಗುತ್ತಿದೆ ಎಂಬ ಆರೋಪವನ್ನ ಸಚಿವರು ಮಾಡಿದ್ದಾರೆ. ಈ ರೀತಿಯ ಕ್ರಮಗಳನ್ನ ಅವರು “ಗುಜರಾತ್ ಮಾದರಿ” ಎಂದು ಕರೆದಿದ್ದಾರೆ. ರಾಜಕೀಯ ವಿರೋಧಿಗಳನ್ನ ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬುದು ಅವರ ಹೇಳಿಕೆಯ ಪ್ರಮುಖ ಅಂಶವಾಗಿದೆ.

ವಿರೋಧ ಪಕ್ಷಗಳನ್ನ ಹೆದರಿಸುವ ಪ್ರಯತ್ನವೆಂದು ಆರೋಪ

ಕೇಂದ್ರ ಸರ್ಕಾರದ ವಿರುದ್ಧವೂ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲವೆಂದು ಅವರು ಆರೋಪಿಸಿದ್ದಾರೆ. ಸರ್ಕಾರದ ಕಾರ್ಯವೈಖರಿಯನ್ನ ಪ್ರಶ್ನಿಸುವ ವಿರೋಧ ಪಕ್ಷಗಳ ನಾಯಕರನ್ನ ಎದುರಿಸುವ ಬದಲು, ಅವರನ್ನ ಹೆದರಿಸುವ ಮತ್ತು ನಿಯಂತ್ರಿಸುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದ್ದಾರೆ. ನಿರುದ್ಯೋಗ, ಚೀನಾದೊಂದಿಗಿನ ಸಂಬಂಧ ಹಾಗೂ ಪಾಕಿಸ್ತಾನದೊಂದಿಗಿನ ಸಂಬಂಧಗಳಂತಹ ಪ್ರಮುಖ ವಿಚಾರಗಳನ್ನ ವಿರೋಧ ಪಕ್ಷಗಳು ಪ್ರಸ್ತಾಪಿಸುತ್ತಿವೆ.

ಇಂತಹ ಪ್ರಶ್ನೆಗಳಿಗೆ ಉತ್ತರಿಸುವ ಬದಲು, ಪ್ರಶ್ನಿಸುವವರನ್ನೇ ಗುರಿಯಾಗಿಸಲಾಗುತ್ತಿದೆ ಎಂಬುದು ಪ್ರಿಯಾಂಕ್ ಖರ್ಗೆ ಅವರ ಆರೋಪವಾಗಿದೆ. ದೇಶದ ಪ್ರಮುಖ ಸಮಸ್ಯೆಗಳ ಕುರಿತು ವಿರೋಧ ಪಕ್ಷಗಳು ಧ್ವನಿ ಎತ್ತಿದಾಗ ಅವರ ಮೇಲೆ ನಿಗಾ ಇಡುವುದು ಹಾಗೂ ಅವರನ್ನ ಬೆದರಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಫೋನ್ ಕದ್ದಾಲಿಕೆ ಆರೋಪವನ್ನೂ ಇದೇ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಪ್ರಸ್ತಾಪಿಸಿದ್ದಾರೆ.

ರಾಹುಲ್ ಗಾಂಧಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ಪ್ರಧಾನಿ ಮೋದಿ ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂಬ ರಾಹುಲ್ ಗಾಂಧಿ ಅವರ ಆರೋಪದ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸುವ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಈ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಫೋನ್ ಕದ್ದಾಲಿಕೆ ವಿಚಾರಕ್ಕೆ ಕರ್ನಾಟಕದ ಗೃಹ ಸಚಿವರೂ ಧ್ವನಿಗೂಡಿಸಿದ್ದಾರೆ. ಮುಖ್ಯಮಂತ್ರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಇರುವವರ ಫೋನ್‌ಗಳೂ ಕದ್ದಾಲಿಕೆಗೆ ಒಳಗಾಗುತ್ತಿವೆ ಮತ್ತು ತಮ್ಮ ಫೋನ್ ಕೂಡ ಇದರಿಂದ ಹೊರತಾಗಿಲ್ಲವೆಂಬ ಸಚಿವರ ಹೇಳಿಕೆ ರಾಜಕೀಯ ಚರ್ಚೆಗೆ ಹೊಸ ಆಯಾಮ ನೀಡಿದೆ.

ಪೆಗಾಸಸ್ ಸ್ಪೈವೇರ್ ಬಳಕೆಯ ಕುರಿತು ಅವರು ಎತ್ತಿರುವ ಪ್ರಶ್ನೆಗಳೂ ಈ ಬೆಳವಣಿಗೆಯ ಭಾಗವಾಗಿವೆ. ಒಟ್ನಲ್ಲಿ ರಾಹುಲ್ ಗಾಂಧಿ ಅವರ ಫೋನ್ ಕದ್ದಾಲಿಕೆ ಆರೋಪದ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನ ಮಾಡಿದ್ದಾರೆ. ಪೆಗಾಸಸ್ ಬಳಕೆ, ವಿರೋಧ ಪಕ್ಷಗಳ ಮೇಲೆ ನಿಗಾ ಹಾಗೂ ರಾಜಕೀಯ ನಾಯಕರ ಫೋನ್ ಕದ್ದಾಲಿಕೆ ಕುರಿತು ಅವರು ವ್ಯಕ್ತಪಡಿಸಿರುವ ಆಕ್ಷೇಪಗಳು ಇದೀಗ ಗಮನ ಸೆಳೆದಿವೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ZEENEWS TRENDING STORIES