• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ನವೆಂಬರ್‌ 13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ : ಕಾರ್ಯಕ್ರಮದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ನವೆಂಬರ್‌ 13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ : ಕಾರ್ಯಕ್ರಮದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಬೆಂಗಳೂರಿನ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ ಹಾಗೂ ಮೈಸೂರಿನ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ಪ್ಲಾನೆಟೋರಿಯಂ ಲೋಕಾರ್ಪಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಬರುವ ನವೆಂಬರ್ 13ರಂದು ರಾಜ್ಯಕ್ಕೆ ಅಧಿಕೃತ ಭೇಟಿ ನೀಡಲಿದ್ದು, ಈ ಕುರಿತು ಪ್ರಧಾನಿಯವರ ವೇಳಾಪಟ್ಟಿ ಹಾಗೂ ವಿಶೇಷ ಕಾರ್ಯಕ್ರಮಗಳ ವಿವರ ಇಲ್ಲಿದೆ.

Written ByKrishna NK
Published: Nov 06, 2026, 22:31 IST|Updated: Nov 06, 2026, 22:34 IST
joinshare
ನವೆಂಬರ್‌ 13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ : ಕಾರ್ಯಕ್ರಮದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
Image Credit: PM Narendra Modi

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು : ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ನಮ್ಮ ಮೆಟ್ರೋ ಸಜ್ಜಾಗಿದೆ. ಬಹುನಿರೀಕ್ಷಿತ 'ಗುಲಾಬಿ ಮಾರ್ಗ' (ಪಿಂಕ್ ಲೈನ್) ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಖುದ್ದಾಗಿ ಬಂದು ಈ ಹೊಸ ಮಾರ್ಗವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹೌದು, ಇದೇ ಬರುವ ನವೆಂಬರ್ 13ರಂದು ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಲಿದ್ದು, ಮೆಟ್ರೋ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ಸಂಚಾರ
ದೀರ್ಘಕಾಲದಿಂದ ಕಾತುರದಿಂದ ಕಾಯುತ್ತಿದ್ದ ಬನ್ನೇರುಘಟ್ಟ ರಸ್ತೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಇದು ಅತ್ಯಂತ ದೊಡ್ಡ ಸಿಹಿಸುದ್ದಿಯಾಗಿದೆ. ಮೊದಲ ಹಂತವಾಗಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಒಟ್ಟು 6 ನಿಲ್ದಾಣಗಳು ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿವೆ. ಈ ಭಾಗದ ಜನಸಂದಣಿ ಹಾಗೂ ಟ್ರಾಫಿಕ್ ಜಾಮ್‌ ಸಮಸ್ಯೆಗೆ ಈ ಮೆಟ್ರೋ ಸಂಚಾರದಿಂದ ದೊಡ್ಡ ಮಟ್ಟದ ಪರಿಹಾರ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

ನವೆಂಬರ್ 13ರ ಪ್ರಧಾನಿ ಮೋದಿ ಅವರ ಬಿಝಿ ಶೆಡ್ಯೂಲ್ ಇಲ್ಲಿದೆ
ಬೆಳಗ್ಗೆ 10:05: ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಹೊರಡುವ ಪ್ರಧಾನಿ ಮೋದಿ, ನೇರವಾಗಿ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
ಬೆಳಗ್ಗೆ 10:45: ಪ್ರಶಾಂತಿ ಕುಟೀರಂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 12:40: ತಾವರೆಕರೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ, ಮಧ್ಯಾಹ್ನ 12:45ಕ್ಕೆ ಪಿಂಕ್ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲಿದ್ದಾರೆ. ವಿಶೇಷವೆಂದರೆ, ಉದ್ಘಾಟನೆಯ ಬಳಿಕ ಅವರು ತಾವರೆಕೆರೆಯಿಂದ ಐಐಎಂಬಿ (IIMB) ನಿಲ್ದಾಣದವರೆಗೆ ಮೆಟ್ರೋದಲ್ಲೇ ಪ್ರಯಾಣಿಸಿ ಅನುಭವ ಪಡೆಯಲಿದ್ದಾರೆ.
ಮಧ್ಯಾಹ್ನ 1:15: ಐಐಎಂಬಿ ಆಡಿಟೋರಿಯಂನಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2:30: ಬೆಂಗಳೂರಿನಿಂದ ಹೆಲಿಕಾಫ್ಟರ್ ಮೂಲಕ ನೇರವಾಗಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಮೈಸೂರಿನಲ್ಲೂ ಪ್ರಧಾನಿ ಮೋದಿ ಭೇಟಿ ಹಾಗೂ ಪ್ರಮುಖ ಉದ್ಘಾಟನೆಗಳು
ಮಧ್ಯಾಹ್ನ 3:30ಕ್ಕೆ ಮೈಸೂರಿನ ಕೆ.ಸಿ. ಲೇಔಟ್ ಪಾರ್ಕ್‌ನಲ್ಲಿ ನಡೆಯುವ ಭಾರತ್ ವ್ಯಾನ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ 4:00 ಗಂಟೆಗೆ ಮೈಸೂರು ಕಾಸ್ಮೋಸ್ ಅನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.

ವಿಶ್ವದ ಮೊದಲ ಟಿಲ್ಟೆಡ್ LED ಡೋಮ್ ಪ್ಲಾನೆಟೋರಿಯಂ ಲೋಕಾರ್ಪಣೆ
ಇದೇ ಭೇಟಿಯ ಸಮಯದಲ್ಲಿ ಮೈಸೂರಿನಲ್ಲಿ ಮತ್ತೊಂದು ವಿಶೇಷ ಯೋಜನೆಯೂ ಲೋಕಾರ್ಪಣೆಗೊಳ್ಳಲಿದೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯದ ಶ್ರೀ ಜಯಚಾಮರಾಜ ಒಡೆಯರ್ ಉನ್ನತ ಕಲಿಕಾ ಕೇಂದ್ರದ ಆವರಣದಲ್ಲಿ ಅತ್ಯಾಧುನಿಕ ತಾರಾಲಯ ತಲೆಎತ್ತಿದೆ. ಇದು ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ಪ್ಲಾನೆಟೋರಿಯಂ ಎಂಬ ಹೆಗ್ಗಳಿಗೆ ಪಾತ್ರವಾಗಿದೆ.

ವಿಶ್ವವಿದ್ಯಾನಿಲಯವು ನೀಡಿದ 3 ಎಕರೆ ಜಾಗದಲ್ಲಿ ಬರೋಬ್ಬರಿ 91 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಅದ್ಭುತ ಯೋಜನೆ ಸಾಕಾರಗೊಂಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಎಂಪಿಲ್ಯಾಡ್ಸ್ (MPLADS) ನಿಧಿ ಹಾಗೂ ಕೇಂದ್ರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಈ ಮಹತ್ವಾಕಾರಿಯೋಜನೆ ಪೂರ್ಣಗೊಂಡಿದ್ದು, ವಿಜ್ಞಾನಾಸಕ್ತರಿಗೆ ಇದೊಂದು ಅದ್ಭುತ ಕೊಡುಗೆಯಾಗಲಿದೆ.

ಮೈಸೂರಿನಿಂದ ದೆಹಲಿಗೆ ವಾಪಸ್
ಒಟ್ಟಾರೆಯಾಗಿ ನವೆಂಬರ್ 13ರಂದು ಇಡೀ ದಿನ ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಬ್ಯುಸಿಯಾಗಿರಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸಂಜೆ 6:05ಕ್ಕೆ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ನವದೆಹಲಿಗೆ ವಾಪಸ್ ತೆರಳಲಿದ್ದಾರೆ. ಈ ಎಲ್ಲ ಪ್ರಮುಖ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಎರಡೂ ನಗರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಗೂ ಸಿದ್ಧತೆಗಳು ಭರ್ಜರಿಯಾಗಿ ನಡೆಯುತ್ತಿವೆ.

Add Zee News as a Preferred Source
TAGS:
Narendra Modi