• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಪ್ರತಾಪ್‌ ಸಿಂಹ ಜಾತಿ ನಿಂದನೆ ಪ್ರಕರಣ: ವಿಚಾರಣೆ ಸೆಪ್ಟೆಂಬರ್ 28ಕ್ಕೆ ಮುಂದೂಡಿದ ಹೈಕೋರ್ಟ್

ಪ್ರತಾಪ್‌ ಸಿಂಹ ಜಾತಿ ನಿಂದನೆ ಪ್ರಕರಣ: ವಿಚಾರಣೆ ಸೆಪ್ಟೆಂಬರ್ 28ಕ್ಕೆ ಮುಂದೂಡಿದ ಹೈಕೋರ್ಟ್

ಪ್ರತಾಪ್‌ ಸಿಂಹ ಜಾತಿ ನಿಂದನೆ ಪ್ರಕರಣ: ವಿಚಾರಣೆ ಸೆಪ್ಟೆಂಬರ್ 28ಕ್ಕೆ ಮುಂದೂಡಿದ ಹೈಕೋರ್ಟ್

Reported ByManjunath NaragundEdited ByManjunath Naragund
Published: Sep 24, 2026, 07:28 PM IST|Updated: Sep 24, 2026, 07:33 PM IST
joinshare
ಪ್ರತಾಪ್‌ ಸಿಂಹ ಜಾತಿ ನಿಂದನೆ ಪ್ರಕರಣ: ವಿಚಾರಣೆ ಸೆಪ್ಟೆಂಬರ್ 28ಕ್ಕೆ ಮುಂದೂಡಿದ ಹೈಕೋರ್ಟ್
Image Credit: File Photo

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಟಿ.ನರಸೀಪುರದಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆ ವೇಳೆ ದಾಖಲಾಗಿರುವ ಜಾತಿ ನಿಂದನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ಸೆಪ್ಟೆಂಬರ್ 28ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರ ಪ್ರತಾಪ್ ಸಿಂಹ ಪರ ವಕೀಲ ವೆಂಕಟೇಶ್ ದಳವಾಯಿ ಹಾಗೂ ಸರ್ಕಾರದ ಪರ ಎಸ್‌ಪಿಪಿ ಬಿ.ಎನ್. ಜಗದೀಶ್ ನಡುವೆ  ವಾದ-ಪ್ರತಿವಾದ ನಡೆಯಿತು.

ಅರ್ಜಿದಾರರ ಪರ ವಾದವೇನು?

ಪ್ರತಾಪ್ ಸಿಂಹ ಪರ ವಾದ ಮಂಡಿಸಿದ ವಕೀಲ ವೆಂಕಟೇಶ್ ದಳವಾಯಿ, "ಟಿ.ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆ ತೀರಾ ಶಾಂತಿಯುತವಾಗಿ ನಡೆದಿದೆ. ಬೇರೆ ಸಮುದಾಯದವರೂ ಕೂಡ ಮೆರವಣಿಗೆಯನ್ನು ಪ್ರೀತಿಯಿಂದ ಸ್ವಾಗತಿಸಿದ್ದಾರೆ. ಈ ಘಟನೆಗೆ ಯಾವುದೇ ಸಂಬಂಧವಿಲ್ಲದ ವ್ಯಕ್ತಿಯೊಬ್ಬರು ಆಧಾರರಹಿತವಾಗಿ ದೂರು ನೀಡಿದ್ದಾರೆ. ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವ ಯಾವುದೇ ಸೆಕ್ಷನ್‌ಗಳು ಈ ಪ್ರಕರಣಕ್ಕೆ ಅನ್ವಯವಾಗುವುದಿಲ್ಲ" ಎಂದು ನ್ಯಾಯಪೀಠದ ಗಮನಕ್ಕೆ ತಂದರು.

"ಘಟನೆ ವೇಳೆ ಇನ್ಸ್‌ಪೆಕ್ಟರ್ ಧನಂಜಯ್ ಅವರು ನೀಡಿದ 4 ನಿಮಿಷಗಳ ಹೇಳಿಕೆ ತೀರಾ ಸಮಯೋಚಿತವಾಗಿತ್ತು. ಮಸೀದಿ ಮುಂದೆ ಎದ್ದೇಳುತ್ತಾ ಎಂದು ಇನ್ಸ್‌ಪೆಕ್ಟರ್ ಹೇಳಿದಾಗ, ಒಂದೇ ಒಂದು ಪದವನ್ನು ಹಿಡಿದುಕೊಂಡು ಅವರ ಮೇಲೆ ಬೆದರಿಕೆ ಹಾಕಲಾಗಿದೆ. ಪ್ರತಾಪ್ ಸಿಂಹ ಅವರು 'ಅಂಬೇಡ್ಕರ್ ಬಗ್ಗೆ ಓದಿಕೊಳ್ಳಿ' ಎಂದು ಹೇಳಿದ್ದನ್ನೇ ಕಾರಣವಾಗಿಟ್ಟುಕೊಂಡು ದೂರು ನೀಡಲಾಗಿದೆ. ಹೀಗಾಗಿ ಈ ಎಫ್‌ಐಆರ್‌ನಲ್ಲಿ ಯಾವುದೇ ಹುರುಳಿಲ್ಲ" ಎಂದು ವಕೀಲರು ಪ್ರತಿಪಾದಿಸಿದರು.

ಸರ್ಕಾರದ ಪರ ಎಸ್‌ಪಿಪಿ ವಾದ:

ಇದೇ ವೇಳೆ ಸರ್ಕಾರದ ಪರವಾಗಿ ಎಸ್‌ಪಿಪಿ ಬಿ.ಎನ್. ಜಗದೀಶ್ ವಾದ ಮಂಡಿಸಿ, "ಒಬ್ಬರು ಪೊಲೀಸ್ ಸ್ಟೇಷನ್‌ನಲ್ಲಿ ಮಾತನಾಡಿದ್ದರೆ, ಇನ್ನೊಬ್ಬರು ಮೈಕ್‌ನಲ್ಲಿ ಮಾತನಾಡಿದ್ದಾರೆ" ಎಂದು ಘಟನೆಯ ಸ್ವರೂಪವನ್ನು ಕೋರ್ಟ್‌ಗೆ ವಿವರಿಸಿದರು.

ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠ, "ಘಟನೆಯಿಂದ ಯಾವುದೇ ಶಾಂತಿಭಂಗವಾಗಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಆದರೆ, ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ಈ ರೀತಿಯ ಪ್ರತಿಕ್ರಿಯೆಗಳನ್ನು ನೀಡಬಾರದು" ಎಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು.ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಕಾಯ್ದಿರಿಸಿದೆ.

Add Zee News as a Preferred Source
TAGS:
Kannada News