• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಪಿಯು ಉಪನ್ಯಾಸಕರ ನೇಮಕಾತಿ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನೇರ ಲಿಂಕ್‌ ಜೊತೆಗೆ ಹಂತ ಹಂತದ ಮಾಹಿತಿ ಇಲ್ಲಿದೆ

ಪಿಯು ಉಪನ್ಯಾಸಕರ ನೇಮಕಾತಿ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನೇರ ಲಿಂಕ್‌ ಜೊತೆಗೆ ಹಂತ ಹಂತದ ಮಾಹಿತಿ ಇಲ್ಲಿದೆ

KEA PU Lecturer Recruitment 2026 online application link : 814 ಉಪನ್ಯಾಸಕರ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಹಂತ ಹಂತದ ವಿಧಾನ, ಅಗತ್ಯ ದಾಖಲೆಗಳು ಮತ್ತು ನೇರ ಅರ್ಜಿ ಲಿಂಕ್‌ ಮಾಹಿತಿ ಇಲ್ಲಿದೆ.

Written ByChetana Devarmani
Published: Nov 28, 2026, 10:18 IST|Updated: Nov 28, 2026, 10:23 IST
joinshare
ಪಿಯು ಉಪನ್ಯಾಸಕರ ನೇಮಕಾತಿ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನೇರ ಲಿಂಕ್‌ ಜೊತೆಗೆ ಹಂತ ಹಂತದ ಮಾಹಿತಿ ಇಲ್ಲಿದೆ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ!  ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ! ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

2

ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬಹುದು? ಪ್ಲಾಟ್‌ಫಾರಂ ಡೋರ್ ಹೊರತುಪಡಿಸಿ ಇರುವ ಪರ್ಯಾಯಗಳೇನು?

3

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ತೇಜಸ್ವಿ ಸೂರ್ಯ ಆಗ್ರಹ!

4

ವಿಜಯ್ ಸೇತುಪತಿ ಕಾಲರ್ ಹಿಡಿದ ರಾಜ್ ಬಿ ಶೆಟ್ಟಿ

5

ಇಂದಿನಿಂದ ನಂದಿನಿ ಮೊಸರು ದರ ಇಳಿಕೆ; ಹೊಸ ಬೆಲೆ ಎಷ್ಟು ಗೊತ್ತಾ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

KEA PU Lecturer Recruitment 2026: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ. ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯಲ್ಲಿನ 814 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅರ್ಜಿ ಆಹ್ವಾನಿಸಿದೆ. ಈಗಾಗಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 25, 2026 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕೂ ಮುನ್ನ ಅರ್ಜಿ ಸಲ್ಲಿಸುವುದು ಅಗತ್ಯವಾಗಿದೆ.

ಒಟ್ಟು 814 ಹುದ್ದೆಗಳ ಪೈಕಿ 778 ಹುದ್ದೆಗಳು ಉಳಿಕೆ ಮೂಲ ವೃಂದಕ್ಕೆ ಹಾಗೂ 36 ಹುದ್ದೆಗಳು ಕಲ್ಯಾಣ ಕರ್ನಾಟಕ ವೃಂದಕ್ಕೆ ಸೇರಿವೆ. ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ವಾಣಿಜ್ಯಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳಿಗೆ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಕೆಇಎ ನಿಗದಿಪಡಿಸಿರುವ ವೇಳಾಪಟ್ಟಿಯ ಪ್ರಕಾರ ಅಭ್ಯರ್ಥಿಗಳು ಡಿಸೆಂಬರ್ 25ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ ಪಾವತಿಸಲು ಡಿಸೆಂಬರ್ 26 ಕೊನೆಯ ದಿನವಾಗಿದೆ.

* ನೇಮಕಾತಿ: 814 ಪಿಯು ಉಪನ್ಯಾಸಕರ ಹುದ್ದೆಗಳು
* ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 25, 2026
* ಶುಲ್ಕ ಪಾವತಿಸಲು ಕೊನೆಯ ದಿನ: ಡಿಸೆಂಬರ್ 26, 2026
* ಲಿಖಿತ ಪರೀಕ್ಷೆ: ಮಾರ್ಚ್ 2027ರಲ್ಲಿ ನಡೆಯುವ ನಿರೀಕ್ಷೆ
* ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ಪಿಯು ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೀಗಿದೆ.

ಹಂತ 1: ಮೊದಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://kea.kar.nic.in ಗೆ ಭೇಟಿ ನೀಡಿ.

ಹಂತ 2: ವೆಬ್‌ಸೈಟ್‌ನ ಮುಖಪುಟದಲ್ಲಿ ಪಿಯು ಉಪನ್ಯಾಸಕರ ನೇಮಕಾತಿ 2026ಕ್ಕೆ ಸಂಬಂಧಿಸಿದ ಅಧಿಸೂಚನೆ ಅಥವಾ ಅರ್ಜಿ ಲಿಂಕ್ ಹುಡುಕಿ.

ಹಂತ 3: ನೇಮಕಾತಿ ಅಧಿಸೂಚನೆಯನ್ನು ತೆರೆದು ಶೈಕ್ಷಣಿಕ ಅರ್ಹತೆ, ವಯೋಮಿತಿ, ಮೀಸಲಾತಿ ಹಾಗೂ ಇತರ ನಿಯಮಗಳನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಹಂತ 4: ಆನ್‌ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ. ಹೊಸ ಅಭ್ಯರ್ಥಿಗಳಾಗಿದ್ದರೆ ಸೂಚಿಸಿರುವಂತೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

ಹಂತ 5: ಅರ್ಜಿಯಲ್ಲಿ ಕೇಳಿರುವ ಹೆಸರು, ಜನ್ಮ ದಿನಾಂಕ, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಸೇರಿದಂತೆ ವೈಯಕ್ತಿಕ ವಿವರಗಳನ್ನು ನಮೂದಿಸಿ.

ಹಂತ 6: ನಿಮ್ಮ ಶೈಕ್ಷಣಿಕ ವಿದ್ಯಾರ್ಹತೆ, ಸ್ನಾತಕೋತ್ತರ ಪದವಿ, ಬಿ.ಇಡಿ ವಿವರಗಳು ಹಾಗೂ ಅರ್ಜಿ ಸಲ್ಲಿಸುತ್ತಿರುವ ವಿಷಯವನ್ನು ಸರಿಯಾಗಿ ಆಯ್ಕೆ ಮಾಡಿ.

ಹಂತ 7: ಅಗತ್ಯವಿರುವ ಭಾವಚಿತ್ರ, ಸಹಿ ಮತ್ತು ಇತರ ದಾಖಲೆಗಳನ್ನು ಅಧಿಸೂಚನೆಯಲ್ಲಿ ಸೂಚಿಸಿರುವ ನಮೂನೆ ಹಾಗೂ ಗಾತ್ರದ ಪ್ರಕಾರ ಅಪ್‌ಲೋಡ್ ಮಾಡಿ.

ಹಂತ 8: ಅರ್ಜಿಯಲ್ಲಿ ನಮೂದಿಸಿರುವ ಎಲ್ಲಾ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ. ಯಾವುದೇ ತಪ್ಪುಗಳಿಲ್ಲದಿದ್ದರೆ ಅರ್ಜಿಯನ್ನು ಸಲ್ಲಿಸಿ.

ಹಂತ 9: ನಿಗದಿತ ಅರ್ಜಿ ಶುಲ್ಕವನ್ನು ಡಿಸೆಂಬರ್ 26ರೊಳಗೆ ಆನ್‌ಲೈನ್ ಮೂಲಕ ಪಾವತಿಸಿ.

ಹಂತ 10: ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ಪೂರ್ಣಗೊಂಡ ಬಳಿಕ ಅರ್ಜಿಯ ಅಂತಿಮ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಅರ್ಜಿ ಸಲ್ಲಿಸುವ ಮುನ್ನ ಈ ವಿಷಯಗಳನ್ನು ಗಮನಿಸಿ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ತಮ್ಮ ಶೈಕ್ಷಣಿಕ ದಾಖಲೆಗಳು, ವೈಯಕ್ತಿಕ ವಿವರಗಳು ಹಾಗೂ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡದಂತೆ ಎಚ್ಚರಿಕೆ ವಹಿಸಬೇಕು. ಅರ್ಜಿ ಶುಲ್ಕ ಪಾವತಿಸಿದ ಬಳಿಕ ಅದರ ರಸೀದಿಯನ್ನು ಕೂಡ ಸಂರಕ್ಷಿಸಿಕೊಳ್ಳಬೇಕು.

ಕೊನೆಯ ದಿನದಂದು ವೆಬ್‌ಸೈಟ್‌ನಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದರಿಂದ ಕೊನೆಯ ಕ್ಷಣದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ.

ಅಧಿಕೃತ ವೆಬ್‌ಸೈಟ್: https://kea.kar.nic.in

814 ಪಿಯು ಉಪನ್ಯಾಸಕರ ಹುದ್ದೆಗಳ ನೇಮಕಾತಿಯ ಸಂಪೂರ್ಣ ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ವಯೋಮಿತಿ ಮತ್ತು ಇತರ ಷರತ್ತುಗಳಿಗಾಗಿ ಅಭ್ಯರ್ಥಿಗಳು ಕೆಇಎ ಪ್ರಕಟಿಸಿರುವ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬೇಕು.
 

Add Zee News as a Preferred Source
TAGS:
Education