SOCIAL MEDIA

Newsletter

PARTNER SITES
Select Language Select State

ಬೆಂಗಳೂರಿನಲ್ಲಿ ಇಂದು ತುಂತುರು ಮಳೆ.. ಕೆಲವೆಡೆ ಬಿರುಗಾಳಿ ಸಹಿತ ಭಾರೀ ಮಳೆ

ಇಂದು ನಾಡಿನೆಲ್ಲೆಡೆ ಆಯುಧ ಪೂಜೆಯನ್ನು ಆಚರಿಸಲಾಗುತ್ತಿದೆ. ಈ ಮಧ್ಯೆ ರಾಜ್ಯದ ಕೆಲವೆಡೆ ತುಂತುರು ಮಳೆ ನಿರೀಕ್ಷೆ ಇದ್ದರೆ, ಇನ್ನೂ ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Written By Yashaswini V
Published: Oct 20, 2026, 09:10 AM IST | Updated: Oct 20, 2026, 09:13 AM IST
Join

ನವರಾತ್ರಿಯ ಒಂಭತ್ತನೇ ದಿನವಾದ ಇಂದು ನಾಡಿನೆಲ್ಲೆಡೆ ಬಹಳ ವಿಜೃಂಭಣೆಯಿಂದ ಆಯುಧ ಪೂಜೆ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ನಡುವೆ ನಾಡಿನಾದ್ಯಂತ ಮಳೆ ಮುನ್ಸೂಚನೆ ಬಗ್ಗೆ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

ಹೌದು, ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ವಾತಾವರಣ ಬದಲಾಗುತ್ತಿದ್ದು ಅಕ್ಟೋಬರ್‌ ಮಾಸದಲ್ಲೇ ಬಿರು ಬಿಸಿಲಿನಿಂದ ಬೇಸತ್ತಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಇದೀಗ, ನವರಾತ್ರಿಯ ಕೊನೆಯ ಎರಡು ದಿನಗಳಾದ ಆಯುಧ ಪೂಜೆ ಹಾಗೂ ವಿಜಯದಶಮಿ ದಿನದಂದೂ ಕೂಡ ರಾಜ್ಯದ ಹಲವು ಭಾಗಗಳಲ್ಲಿ ತುಂತುರು ಮಳೆಯಿಂದ ಹಿಡಿದು ಭಾರೀ ಬಿರುಗಾಳಿ ಸಹಿತ ಮಳೆ ಆಗುವ ಬಗ್ಗೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಆಗಲಿದೆ? ಇಲ್ಲಿದೆ ಮಹತ್ವದ ಮಾಹಿತಿ.

ಆಯುಧ ಪೂಜೆ ದಿನ ಬೆಂಗಳೂರಿನಲ್ಲಿ ತಂಪೆರಯಲಿರುವ ಮಳೆರಾಯ:
ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಆಯುಧ ಪೂಜೆಯ ಇಂದು ಸಿಲಿಕಾನ್‌ ಸಿಟಿ ಬೆಂಗಳೂರು ನಗರದಲ್ಲಿ ತುಂತುರು ಮಳೆ ಆಗುವ ನಿರೀಕ್ಷೆ ಇದ್ದು ಗಾರ್ಡನ್‌ ಸಿಟಿಯಲ್ಲಿ ವರುಣ ತಂಪೆರೆಯಲಿದ್ದಾನೆ ಎನ್ನಲಾಗಿದೆ.

ರಾಜ್ಯದ ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ:
ಇದೇ ವೇಳೆ ಆಯುಧ ಪೂಜೆಯ ದಿನ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ ಜಿಲ್ಲೆಗಳಲ್ಲಿ ಬಿರುಗಾಳಿಯಿಂದ ಕೂಡಿದ ಭಾರೀ ಮಳೆ ನಿರೀಕ್ಷೆ ಇದ್ದರೆ, ಕೆಲವು ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ತುಮಕೂರು ಹಗುರ ಮಳೆ ಆಗಲಿದೆ ಎಂದು ಐಎಂಡಿ ಅಲರ್ಟ್‌ ನೀಡಿದೆ.

ಇನ್ನು ಇದೇ ವೇಳೆ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎನ್ನಲಾಗಿದೆ.

 

ಉತ್ತರ ಒಳನಾಡಿನ ಈ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಕೆ:
ಐಎಂಡಿ ಪ್ರಕಾರ, ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್‌, ಬೆಳಗಾವಿ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎನ್ನಲಾಗಿದೆ. 
 

 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES