SOCIAL MEDIA

Newsletter

PARTNER SITES
Select Language Select State

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ.. ಕರಾವಳಿಯಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ!

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.

Written By Chetana Devarmani
Published: Nov 06, 2026, 07:21 IST | Updated: Nov 06, 2026, 07:24 IST
Join

ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಬದಲಾವಣೆ ಮುಂದುವರಿದಿದ್ದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾಣ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.  

ಇನ್ನೊಂದೆಡೆ ಕರಾವಳಿ ಕರ್ನಾಟಕದ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಸೂಚಿಸಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ಇಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಒಂದೇ ರೀತಿಯ ಹವಾಮಾನ ಇರದೆ, ಪ್ರದೇಶದಿಂದ ಪ್ರದೇಶಕ್ಕೆ ಮಳೆಯ ಪ್ರಮಾಣದಲ್ಲಿ ವ್ಯತ್ಯಾಸ ಕಂಡುಬರುವ ಸಾಧ್ಯತೆಯಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯೂ ಇದೆ. ವಿಶೇಷವಾಗಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ. ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಹಿನ್ನೆಲೆಯಲ್ಲಿ ಮಳೆ ಸುರಿದರೆ ವಾಹನ ಸವಾರರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ದ್ವಿಚಕ್ರ ವಾಹನ ಸವಾರರು ಮತ್ತು ರಸ್ತೆಯಲ್ಲಿ ಸಂಚರಿಸುವವರು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಉತ್ತಮ.

ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲಿಯೂ ಇಂದು ಕರಾವಳಿ ಭಾಗದ ಕೆಲವೆಡೆ ಗುಡುಗು ಮತ್ತು ಮಿಂಚು ಕಾಣಿಸಿಕೊಳ್ಳುವ ಮುನ್ಸೂಚನೆ ನೀಡಲಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿಯ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ನಿರೀಕ್ಷಿಸುವಂತಿಲ್ಲ.

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆಯ ಸಾಧ್ಯತೆ ಕಡಿಮೆಯಿದ್ದು, ಬಹುತೇಕ ಕಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಸ್ಥಳೀಯ ಹವಾಮಾನ ಪರಿಸ್ಥಿತಿಯಲ್ಲಿ ಬದಲಾವಣೆ ಉಂಟಾಗಬಹುದು. ಆದ್ದರಿಂದ ಸಾರ್ವಜನಿಕರು ಹವಾಮಾನ ಇಲಾಖೆಯ ಮುಂದಿನ ಸೂಚನೆಗಳನ್ನು ಗಮನಿಸುವುದು ಅಗತ್ಯ.

ನವೆಂಬರ್ 7ರವರೆಗೂ ಗುಡುಗು-ಮಿಂಚಿನ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಕೇವಲ ಇಂದಿಗೆ ಸೀಮಿತವಾಗಿಲ್ಲ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ನವೆಂಬರ್ 7ರವರೆಗೂ ಗುಡುಗು ಮತ್ತು ಮಿಂಚಿನ ಚಟುವಟಿಕೆಗಳು ಕಂಡುಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿಯೂ ಕೆಲವು ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು-ಮಿಂಚು ಕಾಣಿಸಿಕೊಂಡ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಮಳೆಯ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸುವುದು, ವಿದ್ಯುತ್ ಉಪಕರಣಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸುವುದು ಹಾಗೂ ಮರಗಳ ಕೆಳಗೆ ನಿಲ್ಲದಿರುವುದು ಮುಖ್ಯ.

ಯಾವ ಜಿಲ್ಲೆಗಳಲ್ಲಿ ಮಳೆಯಾಗಬಹುದು?

ಒಟ್ಟಾರೆಯಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಮಳೆ ಅಥವಾ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮತ್ತೊಂದೆಡೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ಹವಾಮಾನ ಪರಿಸ್ಥಿತಿಯಲ್ಲಿ ಬದಲಾವಣೆ ಉಂಟಾಗಬಹುದಾದ ಕಾರಣ ಸಾರ್ವಜನಿಕರು ಜಿಲ್ಲಾವಾರು ಹವಾಮಾನ ಮುನ್ಸೂಚನೆಗಳನ್ನು ಗಮನಿಸುವುದು ಉತ್ತಮ. ನವೆಂಬರ್ 6 ರಂದು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಕಂಡುಬರುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜನರು ಮಳೆಯ ಮುನ್ಸೂಚನೆ ಬಗ್ಗೆ ಗಮನಹರಿಸಬೇಕು. ಕರಾವಳಿ ಭಾಗದಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಮುಖ್ಯ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES