SOCIAL MEDIA

Newsletter

PARTNER SITES
Select Language Select State

Ration Card e-KYC: ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್; ಇ-ಕೆವೈಸಿ ಗಡುವು ವಿಸ್ತರಣೆ

Karnataka Ration Card e-KYC Last Date: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ 'ಅನ್ನ ಸೇವೆ' (Anna Seve) ಆ್ಯಪ್ ಮೂಲಕ ಮನೆಯಲ್ಲೇ ಕುಳಿತು ರೇಷನ್ ಕಾರ್ಡ್ ಇ-ಕೆವೈಸಿ (e-KYC) ಮಾಡಿಕೊಳ್ಳಬಹುದು.

Written By Chetana Devarmani
Published: Oct 19, 2026, 07:40 AM IST | Updated: Oct 19, 2026, 07:45 AM IST
Join

Karnataka Ration Card e-KYC Last Date: ಕರ್ನಾಟಕದ ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ ಇಲ್ಲಿದೆ. ಪಡಿತರ ಚೀಟಿಯ ಫಲಾನುಭವಿಗಳು ಇ-ಕೆವೈಸಿ (e-KYC) ದೃಢೀಕರಣ ಮಾಡಿಸಿಕೊಳ್ಳಲು ನೀಡಲಾಗಿದ್ದ ಗಡುವನ್ನು ನವೆಂಬರ್ 10ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಇ-ಕೆವೈಸಿ ಪೂರ್ಣಗೊಳಿಸಲು ಅಕ್ಟೋಬರ್ 20 ಕೊನೆಯ ದಿನಾಂಕವಾಗಿತ್ತು. ಇದೀಗ ಹೆಚ್ಚಿನ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಗಡುವನ್ನು ವಿಸ್ತರಿಸಿದೆ.

ಆಹಾರ ಇಲಾಖೆಯ ಆದೇಶದ ಪ್ರಕಾರ, ಒಂದು ವರ್ಷಕ್ಕೂ ಮೇಲ್ಪಟ್ಟು ಹಿಂದೆ ಇ-ಕೆವೈಸಿ ಮಾಡಿಸಿಕೊಂಡಿರುವ 1,15,87,298 ಫಲಾನುಭವಿಗಳು ಮತ್ತೊಮ್ಮೆ ಇ-ಕೆವೈಸಿ ದೃಢೀಕರಣ ಮಾಡಿಸಿಕೊಳ್ಳ ಬೇಕಿದೆ. ಇದರ ಜೊತೆಗೆ, ಈವರೆಗೆ ಒಮ್ಮೆಯೂ ಇ-ಕೆವೈಸಿ ಮಾಡಿಸದ 3,82,362 ಫಲಾನುಭವಿಗಳು ಹಾಗೂ ಐದು ವರ್ಷಗಳಿಗಿಂತಲೂ ಹಿಂದೆ ಇ-ಕೆವೈಸಿ ಮಾಡಿಸಿಕೊಂಡಿರುವ 54,27,396 ಫಲಾನುಭವಿಗಳು ದೃಢೀಕರಣ ಪೂರ್ಣಗೊಳಿಸಬೇಕಿದೆ.

ಹೀಗಾಗಿ, ಇ-ಕೆವೈಸಿ ಮಾಡಿಸಿಕೊಳ್ಳಬೇಕಿರುವ ಫಲಾನುಭವಿಗಳು ನವೆಂಬರ್ 10ರೊಳಗೆ ಈ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಕೊನೆಯ ದಿನಾಂಕದವರೆಗೆ ಕಾಯದೆ ಆದಷ್ಟು ಬೇಗ ಇ-ಕೆವೈಸಿ ಮಾಡಿಸಿಕೊಳ್ಳುವುದು ಉತ್ತಮ. ನಿಗದಿತ ಗಡುವಿನೊಳಗೆ ದೃಢೀಕರಣ ಮಾಡಿಸದಿದ್ದರೆ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

ಅನ್ನ ಸೇವೆ ಆ್ಯಪ್ ಮೂಲಕವೂ ಇ-ಕೆವೈಸಿ ಮಾಡಿಸಬಹುದು

ಪಡಿತರ ಚೀಟಿದಾರರು ಇ-ಕೆವೈಸಿ ದೃಢೀಕರಣಕ್ಕಾಗಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಬಹುದು. ಅಲ್ಲಿ ‘AHARA’ ತಂತ್ರಾಂಶದ ಮೂಲಕ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶವಿದೆ. ಅಲ್ಲದೆ, ‘ಅನ್ನ ಸೇವೆ’ ಮೊಬೈಲ್ ಆ್ಯಪ್ ಮೂಲಕವೂ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ವಿಶೇಷವಾಗಿ, ಉದ್ಯೋಗ ಅಥವಾ ಇತರ ಕಾರಣಗಳಿಗಾಗಿ ರಾಜ್ಯದಿಂದ ಹೊರಗೆ ವಾಸಿಸುತ್ತಿರುವ ಪಡಿತರ ಚೀಟಿದಾರರಿಗೆ ಅನುಕೂಲವಾಗುವಂತೆ ಅನ್ನ ಸೇವೆ ಆ್ಯಪ್‌ನ ಲಭ್ಯತೆಯನ್ನು ದೇಶಾದ್ಯಂತ ವಿಸ್ತರಿಸಲಾಗಿದೆ. ಇದರಿಂದ ಕರ್ನಾಟಕದ ಪಡಿತರ ಚೀಟಿದಾರರು ಬೇರೆ ರಾಜ್ಯಗಳಲ್ಲಿ ವಾಸಿಸುತ್ತಿದ್ದರೂ ಅಲ್ಲಿಂದಲೇ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಅನ್ನ ಸೇವೆ ಆ್ಯಪ್‌ನ ನವೀಕರಿಸಿದ ಆವೃತ್ತಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ. ಈಗಾಗಲೇ ತಮ್ಮ ಮೊಬೈಲ್‌ನಲ್ಲಿ ಆ್ಯಪ್ ಇನ್‌ಸ್ಟಾಲ್ ಮಾಡಿಕೊಂಡಿರುವವರು ಅದನ್ನು ಅಪ್‌ಡೇಟ್ ಮಾಡಿಕೊಳ್ಳಬಹುದು. ಆ್ಯಪ್ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳುವವರು ಅಗತ್ಯ ಸೂಚನೆಗಳನ್ನು ಅನುಸರಿಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ 'ಅನ್ನ ಸೇವೆ' (Anna Seve) ಆ್ಯಪ್ ಮೂಲಕ ಮನೆಯಲ್ಲೇ ಕುಳಿತು ರೇಷನ್ ಕಾರ್ಡ್ ಇ-ಕೆವೈಸಿ (e-KYC) ಮಾಡಿಕೊಳ್ಳಬಹುದು.

ಅಗತ್ಯವಿರುವ ದಾಖಲೆಗಳು ಮತ್ತು ಮಾಹಿತಿಗಳು:

ರೇಷನ್ ಕಾರ್ಡ್ ನಂಬರ್
ರೇಷನ್ ಕಾರ್ಡ್‌ಗೆ ಲಿಂಕ್ ಮಾಡಲಾದ ಮೊಬೈಲ್ ನಂಬರ್ (OTP ಪಡೆಯಲು)
AadhaarFaceRD ಹಾಗೂ CSC ಆ್ಯಪ್‌ಗಳು ಮೊಬೈಲ್‌ನಲ್ಲಿ ಇರಬೇಕು (ಮುಖದ ದೃಢೀಕರಣಕ್ಕಾಗಿ)

ಇ-ಕೆವೈಸಿ ಮಾಡುವ ಸರಳ ಹಂತಗಳು:

1. ಆ್ಯಪ್ ಡೌನ್‌ಲೋಡ್: ಗೂಗಲ್ ಪ್ಲೇ ಸ್ಟೋರ್‌ನಿಂದ (Google Play Store) 'Anna Seve' ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. ಜೊತೆಗೆ ಮುಖದ ಸ್ಕ್ಯಾನ್ ಮಾಡಲು ಅಗತ್ಯವಿರುವ AadhaarFaceRD ಆ್ಯಪ್ ಕೂಡ ಇನ್‌ಸ್ಟಾಲ್ ಮಾಡಿ.
2. ಲಾಗಿನ್ ಆಗಿ: ಆ್ಯಪ್ ತೆರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ.
3. OTP ಪರಿಶೀಲನೆ: ನಿಮ್ಮ ರೇಷನ್ ಕಾರ್ಡ್‌ಗೆ ಜೋಡಣೆಯಾಗಿರುವ ಮೊಬೈಲ್ ನಂಬರಿಗೆ ಬರುವ OTP ನಮೂದಿಸಿ ಲಾಗಿನ್ ಆಗಿ.
4. ಮುಖದ ದೃಢೀಕರಣ (Face Authentication): ಕುಟುಂಬದ ಸದಸ್ಯರ ವಿವರಗಳನ್ನು ಆಯ್ಕೆ ಮಾಡಿ, ಫೇಸ್ ಅಥೆಂಟಿಕೇಶನ್ ಆಯ್ಕೆ ಬಳಸಿ ಕ್ಯಾಮೆರಾ ಮೂಲಕ ಮುಖದ ಸ್ಕ್ಯಾನ್ ಮಾಡಿ.
5. ಪೂರ್ಣಗೊಳಿಸಿ: ಸ್ಕ್ಯಾನ್ ಯಶಸ್ವಿಯಾದ ನಂತರ ನಿಮ್ಮ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.


ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಫಲಾನುಭವಿಗಳು ತಮ್ಮ ಇ-ಕೆವೈಸಿ ಸ್ಥಿತಿಯನ್ನು ಪರಿಶೀಲಿಸಿಕೊಂಡು, ದೃಢೀಕರಣ ಬಾಕಿ ಇದ್ದರೆ ನವೆಂಬರ್ 10ರೊಳಗೆ ಪೂರ್ಣಗೊಳಿಸಿಕೊಳ್ಳಬೇಕು. ಕೊನೆಯ ದಿನಾಂಕ ವಿಸ್ತರಣೆಯಾಗಿರುವುದರಿಂದ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಇನ್ನಷ್ಟು ಸಮಯಾವಕಾಶ ಸಿಕ್ಕಂತಾಗಿದೆ. ಆದ್ದರಿಂದ ಅರ್ಹ ಫಲಾನುಭವಿಗಳು ಈ ಅವಕಾಶವನ್ನು ಬಳಸಿಕೊಂಡು ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES