• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮತ್ತೆ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸ್ತಿದೆಯಾ ರಾಜ್ಯ ಸರ್ಕಾರ?.....

ಮತ್ತೆ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸ್ತಿದೆಯಾ ರಾಜ್ಯ ಸರ್ಕಾರ?.....

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಒಂದು ಕಡೆ ತಮಿಳುನಾಡಿಗೆ ನೀರು ಹರಿಸುವುದಿಲ್ಲ ಎಂದು ಹೇಳುವ ಸರ್ಕಾರ, ಮತ್ತೊಂದು ಕಡೆ ಡ್ಯಾಂನಿಂದ ಕಾವೇರಿ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

Written ByRamya. R. Gowda
Published: Nov 24, 2026, 12:52 IST|Updated: Nov 24, 2026, 12:55 IST
joinshare
ಮತ್ತೆ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸ್ತಿದೆಯಾ ರಾಜ್ಯ ಸರ್ಕಾರ?.....

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಮತ್ತೆ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸ್ತಿದೆಯಾ ರಾಜ್ಯ ಸರ್ಕಾರ?.....

ಮತ್ತೆ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸ್ತಿದೆಯಾ ರಾಜ್ಯ ಸರ್ಕಾರ?.....

2

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್‌? ಟಿಕೆಟ್ ಬೆಲೆ ಹೆಚ್ಚಿಸಲು BMRCL ಸಿದ್ಧತೆ!?

3

ಸಿನಿಮಾ ರಂಗಕ್ಕೆ ಕಿಯಾರಾ ಅಡ್ವಾಣಿ ಗುಡ್‌ಬೈ? ಟಾಕ್ಸಿಕ್ ಬೆಡಗಿ ಕೊಟ್ಟ ಸ್ಪಷ್ಟನೆ ಏನು?

4

ಸಿಎಂ ಡಿ.ಕೆ.ಶಿವಕುಮಾರ್‌ ಜಪಾನ್ ಪ್ರವಾಸ: ರಾಜ್ಯದಲ್ಲಿ ಎಷ್ಟು ಉದ್ಯೋಗ ಸೃಷ್ಟಿಯಾಗಬಹುದು?

5

ಚಿಕ್ಕಮಗಳೂರಿನಲ್ಲಿ ಲೋಕಾಯುಕ್ತ ದಾಳಿ 8 ADLR ಕಚೇರಿಗಳ ಮೇಲೆ ಏಕಕಾಲಕ್ಕೆ ರೇಡ್!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಒಂದು ಕಡೆ ತಮಿಳುನಾಡಿಗೆ ನೀರು ಹರಿಸುವುದಿಲ್ಲ ಎಂದು ಹೇಳುವ ಸರ್ಕಾರ, ಮತ್ತೊಂದು ಕಡೆ ಡ್ಯಾಂನಿಂದ ಕಾವೇರಿ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ನಾಲೆಗಳಿಗೆ ನೀರು ಬಿಡುವ ನೆಪದಲ್ಲಿ ನದಿ ಮೂಲಕ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂಬ ಅನುಮಾನ ಇದೀಗ ರೈತರು ಹಾಗೂ ಕಾವೇರಿ ಹೋರಾಟಗಾರರನ್ನು ಕೆರಳಿಸಿದೆ. ಅಷ್ಟಕ್ಕೂ ಸರ್ಕಾರದ ಈ ನಡೆ ಹಿಂದಿನ ಮರ್ಮವೇನು? ಕಾವೇರಿ ಕೊಳ್ಳದ ಜಲಾಶಯಗಳ ಸ್ಥಿತಿ ಏನಾಗಿದೆ? ನೋಡೋಣ ಈ ವರದಿ.

ತಮಿಳುನಾಡಿಗೆ ನೀರು ಬಿಡಲ್ಲ ಅಂತಿದೆ ರಾಜ್ಯ ಸರ್ಕಾರ.. ಆದ್ರೆ ಡ್ಯಾಂನಿಂದ ಮಾತ್ರ ಕಾವೇರಿ ನದಿಗೆ ನೀರು ಹರಿಯುತ್ತಲೇ ಇದೆ. ಸರ್ಕಾರದ ಈ ನಡೆ ಈಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ನಾಲೆಗಳಿಗೆ ನೀರು ಬಿಡುಗಡೆ ಮಾಡುವ ನೆಪದಲ್ಲಿ ಕಾವೇರಿ ನದಿಗೆ ನೀರು ಹರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕಾವೇರಿ ನದಿಯಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಳವಾಗಿರುವುದು ಈ ಅನುಮಾನಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

ಇನ್ನು CWRC ಅಂದ್ರೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶದಂತೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸಬೇಕಿದೆ. CWRC ಆದೇಶ ನೀಡಿದಾಗಲೆಲ್ಲ ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡುತ್ತಿದೆ ಎಂಬುದು ರೈತರ ಆರೋಪ. ಒಂದು ಕಡೆ ರಾಜ್ಯದ ರೈತರ ಹಿತಾಸಕ್ತಿ ಕಾಪಾಡುತ್ತೇವೆ ಎನ್ನುವ ಸರ್ಕಾರ, ಮತ್ತೊಂದೆಡೆ ತಮಿಳುನಾಡಿಗೆ ನೀರು ಹರಿಸುತ್ತಿರುವುದೇಕೆ ಎಂಬ ಪ್ರಶ್ನೆ ಇದೀಗ ಎದುರಾಗಿದೆ.
ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿರುವುದು ರೈತರ ಆತಂಕವನ್ನು ಹೆಚ್ಚಿಸಿದೆ. ಕೃಷಿ ಚಟುವಟಿಕೆಗಳಿಗೆ ನೀರಿನ ಅಗತ್ಯವಿರುವ ಸಂದರ್ಭದಲ್ಲಿ ನಿರಂತರ ನೀರು ಬಿಡುಗಡೆ ಮಾಡುತ್ತಿರುವುದಕ್ಕೆ ಜಿಲ್ಲೆಯ ರೈತರು ಹಾಗೂ ಕಾವೇರಿ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಡೆ ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯ ಎಂದು ಕಿಡಿಕಾರಿದ್ದಾರೆ.

ಇನ್ನು ಕೆಆರ್‌ಎಸ್ ಜಲಾಶಯದ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.
* ಗರಿಷ್ಠ ನೀರಿನ ಮಟ್ಟ: 124.80 ಅಡಿ
* ಇಂದಿನ ನೀರಿನ ಮಟ್ಟ: 96.24 ಅಡಿ
* ಒಳಹರಿವು: 483 ಕ್ಯೂಸೆಕ್
*ಹೊರಹರಿವು: 5,333 ಕ್ಯೂಸೆಕ್
* ಪ್ರಸ್ತುತ ನೀರಿನ ಸಂಗ್ರಹ: 20.006 ಟಿಎಂಸಿ
ಗರಿಷ್ಠ ಮಟ್ಟಕ್ಕೆ ಹೋಲಿಸಿದರೆ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಒಳಹರಿವಿಗಿಂತಲೂ ಹೊರಹರಿವು ಹಲವು ಪಟ್ಟು ಹೆಚ್ಚಾಗಿದೆ.

ಒಟ್ಟಿನಲ್ಲಿ ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಮತ್ತೆ ವಿವಾದದ ಕಿಡಿ ಹೊತ್ತಿಸಿದೆ. ತಮಿಳುನಾಡಿಗೆ ನೀರು ಬಿಡುವುದಿಲ್ಲ ಎನ್ನುವ ಸರ್ಕಾರದ ಮಾತಿಗೂ, ಜಲಾಶಯದಿಂದ ನಡೆಯುತ್ತಿರುವ ನೀರು ಬಿಡುಗಡೆಯ ಪ್ರಮಾಣಕ್ಕೂ ತಾಳೆಯಾಗುತ್ತಿಲ್ಲ ಎಂಬುದು ರೈತರ ಆಕ್ರೋಶ. ರಾಜ್ಯದ ರೈತರ ಹಿತ ಕಾಯಬೇಕಾದ ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟನೆ ನೀಡಬೇಕಿದೆ. ಕಾವೇರಿ ನೀರಿನ ವಿಚಾರದಲ್ಲಿ ಸರ್ಕಾರದ ಮುಂದಿನ ನಡೆ ಏನು ಅನ್ನೋದನ್ನು ಕಾದು ನೋಡಬೇಕಿದೆ.

 

Add Zee News as a Preferred Source
TAGS:
Kannada News