• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ದರ್ಶನ್ ಯಾರು ಅಂತಲೆ ಗೊತ್ತಿಲ್ಲ ಎಂದು ಕೋರ್ಟ್‌ನಲ್ಲೇ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ..

ದರ್ಶನ್ ಯಾರು ಅಂತಲೆ ಗೊತ್ತಿಲ್ಲ ಎಂದು ಕೋರ್ಟ್‌ನಲ್ಲೇ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ..

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಪ್ರಕರಣದಲ್ಲಿ ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಿ ಬದಲಾಗಿದ್ದು, ನ್ಯಾಯಾಲಯದ ಮುಂದೆ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಿದ್ದಾರೆ.

Written ByRamya. R. Gowda
Published: Nov 23, 2026, 16:29 IST|Updated: Nov 23, 2026, 16:39 IST
joinshare
ದರ್ಶನ್ ಯಾರು ಅಂತಲೆ ಗೊತ್ತಿಲ್ಲ ಎಂದು ಕೋರ್ಟ್‌ನಲ್ಲೇ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ..

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ದರ್ಶನ್ ಯಾರು ಅಂತಲೆ ಗೊತ್ತಿಲ್ಲ ಎಂದು ಕೋರ್ಟ್‌ನಲ್ಲೇ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ..

ದರ್ಶನ್ ಯಾರು ಅಂತಲೆ ಗೊತ್ತಿಲ್ಲ ಎಂದು ಕೋರ್ಟ್‌ನಲ್ಲೇ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ..

2

ಡಾಲರ್ ಎದುರು ಭರ್ಜರಿ ಚೇತರಿಕೆ ಕಂಡ ರೂಪಾಯಿ; 8 ತಿಂಗಳಲ್ಲಿ ಗರಿಷ್ಠ ಮಟ್ಟಕ್ಕೆ ಏರಿದ ಭಾರತೀಯ ಕರೆನ್ಸಿ!

3

ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ತಾಯಿ-ಮಕ್ಕಳ ಆಸ್ಪತ್ರೆಗಿಲ್ಲ ಉದ್ಘಾಟನಾ ಭಾಗ್ಯ..!

4

ಅನಿರುದ್ಧ್-ಕಾವ್ಯಾ ಮಾರನ್ ಆರತಕ್ಷತೆಗೆ ಎಷ್ಟು ಖರ್ಚಾಗಿದೆ ಗೊತ್ತಾ?

5

ಗೋಧ್ರಾ ರೈಲು ಹ*ತ್ಯಾಕಾಂಡ: 17 ವರ್ಷಕ್ಕೂ ಹೆಚ್ಚು ಜೈಲುವಾಸ, ಅಪರಾಧಿಗೆ ಜಾಮೀನು ಮಂಜೂರು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಪ್ರಕರಣದಲ್ಲಿ ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಿ ಬದಲಾಗಿದ್ದು, ನ್ಯಾಯಾಲಯದ ಮುಂದೆ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಿದ್ದಾರೆ. ಮತ್ತೊಂದೆಡೆ, ಸಾಕ್ಷಿ ಪುನೀತ್ ಕೂಡ ಪೊಲೀಸರ ಮುಂದೆ ನೀಡಿದ್ದ ಹೇಳಿಕೆಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದು ಅಚ್ಚರಿ ಮೂಡಿಸಿದ್ದರು. ಇದೀಗ ಈ ಪ್ರಕರಣದಲ್ಲಿ ಮತ್ತೊಬ್ಬ ಸಾಕ್ಷಿ ಕೂಡ ಉಲ್ಟಾ ಹೊಡೆದಿದ್ದಾನೆ. ಅಷ್ಟಕ್ಕೂ ನ್ಯಾಯಾಲಯದಲ್ಲಿ ನಡೆದಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇಂದು ಅಂದರೆ ನವೆಂಬರ್ 23ರಂದು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆಯಿತು. ಈ ವೇಳೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಹಾಗೂ ಪ್ರತ್ಯಕ್ಷ ಸಾಕ್ಷಿ ಎನ್ನಲಾಗಿರುವ ಕಿರಣ್ ವಿಚಾರಣೆ ಎದುರಿಸಿದರು. ಆದರೆ ನ್ಯಾಯಾಲಯದಲ್ಲಿ ಕಿರಣ್ ನೀಡಿದ ಹೇಳಿಕೆಗಳು ಪ್ರಕರಣಕ್ಕೆ ಮತ್ತೊಂದು ತಿರುವು ನೀಡಿವೆ.

ಘಟನೆ ನಡೆದ 2024ರ ಜೂನ್ 8ರಂದು ಬೆಳಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೆ ತಾನು ಶೆಡ್‌ನಲ್ಲಿ ಕೆಲಸ ಮಾಡಿದ್ದಾಗಿ ಕಿರಣ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಮಧ್ಯಾಹ್ನ ಊಟಕ್ಕೆ ತೆರಳಿ ವಾಪಸ್ ಬಂದು ಕೆಲಸ ಮುಂದುವರಿಸಿದ್ದಾಗಿಯೂ ಹೇಳಿದ್ದಾರೆ. ಪ್ರತಿದಿನ ಶೆಡ್‌ಗೆ ಸಾಕಷ್ಟು ವಾಹನಗಳು ಬರುತ್ತಿದ್ದವು. ಅಂದು ಮಾತ್ರ ಸ್ವಲ್ಪ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಬಂದಿದ್ದವು. ಆದರೆ ಅಂದು ಶೆಡ್‌ನಲ್ಲಿ ಯಾವುದೇ ಘಟನೆ ನಡೆದಿಲ್ಲ ಎಂದು ಕಿರಣ್ ಹೇಳಿಕೆ ನೀಡಿದ್ದಾರೆ.

ಇನ್ನು ಜೈಲಿನಲ್ಲಿರುವ ಆರೋಪಿಗಳನ್ನು ಗುರುತಿಸಬಹುದೇ ಎಂದು ವಿಶೇಷ ಸರ್ಕಾರಿ ಅಭಿಯೋಜಕರು ಪ್ರಶ್ನಿಸಿದಾಗ, ದರ್ಶನ್ ಸೇರಿದಂತೆ ಯಾವುದೇ ಆರೋಪಿಗಳು ತನಗೆ ಪರಿಚಯವಿಲ್ಲ ಎಂದು ಕಿರಣ್ ಹೇಳಿದ್ದಾರೆ. ಅಷ್ಟೇ ಅಲ್ಲ, ನಟ ದರ್ಶನ್ ಕೂಡ ತನಗೆ ಗೊತ್ತಿಲ್ಲ ಎಂದು ಹೇಳಿರುವುದು ವಿಚಾರಣೆಯಲ್ಲಿ ಕುತೂಹಲ ಮೂಡಿಸಿದೆ.

ಇದೇ ವೇಳೆ ಈ ಹಿಂದೆ ಪೊಲೀಸರ ಮುಂದೆ ನೀಡಿದ್ದ ಹೇಳಿಕೆ ನೆನಪಿಲ್ಲ. ನ್ಯಾಯಾಧೀಶರ ಮುಂದೆ ಸಿಆರ್‌ಪಿಸಿ 164ರ ಅಡಿಯಲ್ಲಿ ದಾಖಲಿಸಿದ್ದ ಹೇಳಿಕೆಯ ಬಗ್ಗೆಯೂ ನೆನಪಿಲ್ಲ ಎಂದು ಕಿರಣ್ ತಿಳಿಸಿದ್ದಾರೆ. ಹೀಗಾಗಿ ಕಿರಣ್ ಅವರ ಹೇಳಿಕೆಯನ್ನು ಪ್ರತಿಕೂಲ ಸಾಕ್ಷಿ ಎಂದು ಪರಿಗಣಿಸುವಂತೆ ವಿಶೇಷ ಸರ್ಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಅಲ್ಲದೆ, ಅವರನ್ನು ಅಡ್ಡ ವಿಚಾರಣೆಗೆ ಒಳಪಡಿಸಲು ಅನುಮತಿ ಕೋರಿದ್ದಾರೆ.

ಆದರೆ ದರ್ಶನ್ ಪರ ವಕೀಲರು ವಿಚಾರಣೆ ಮುಂದೂಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಿದ್ದಾರೆ. ಅಂದು ಕಿರಣ್ ಅವರ ಅಡ್ಡ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಒಟ್ಟಿನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಒಂದರ ಹಿಂದೆ ಮತ್ತೊಂದು ಸಾಕ್ಷಿಗಳು ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಂದಿನ ವಿಚಾರಣೆಯಲ್ಲಿ ಕಿರಣ್ ಯಾವ ರೀತಿಯ ಹೇಳಿಕೆ ನೀಡಲಿದ್ದಾರೆ? ಅಡ್ಡ ವಿಚಾರಣೆಯಲ್ಲಿ ಯಾವೆಲ್ಲಾ ಅಂಶಗಳು ಹೊರಬರಲಿವೆ? ಎಂಬುದನ್ನು ಕಾದುನೋಡಬೇಕಿದೆ.

 

Add Zee News as a Preferred Source
TAGS:
Kannada News