• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • / ಶೈಕ್ಷಣಿಕ ಪ್ರವಾಸದಲ್ಲಿ ಇನ್ಮುಂದೆ ಸೆಲ್ಫಿ, ರೀಲ್ಸ್‌ ಬ್ಯಾನ್ – ಕಾಲೇಜು ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ!

ಶೈಕ್ಷಣಿಕ ಪ್ರವಾಸದಲ್ಲಿ ಇನ್ಮುಂದೆ ಸೆಲ್ಫಿ, ರೀಲ್ಸ್‌ ಬ್ಯಾನ್ – ಕಾಲೇಜು ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ!

ಪ್ರವಾಸಿ ತಾಣಗಳಲ್ಲಿ ಮೊಬೈಲ್ ಕ್ಯಾಮೆರಾ ಹಿಡಿದು ಸೆಲ್ಫಿ, ವೀಡಿಯೋ ಮತ್ತು ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುವ ಹುಚ್ಚಾಟದಲ್ಲಿ ಅನೇಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ.

Reported ByManjunath NaragundEdited ByManjunath Naragund
Published: Sep 19, 2026, 12:07 PM IST|Updated: Sep 19, 2026, 12:58 PM IST
joinshare
 ಶೈಕ್ಷಣಿಕ ಪ್ರವಾಸದಲ್ಲಿ ಇನ್ಮುಂದೆ ಸೆಲ್ಫಿ, ರೀಲ್ಸ್‌ ಬ್ಯಾನ್ – ಕಾಲೇಜು ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ!
Image Credit: Representation only

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ತಿಂಗಳಿಗೆ ₹1.5 ಲಕ್ಷ ದಾಟುವುದೇ ಸರ್ಕಾರಿ ನೌಕರರ ವೇತನ? ಇಲ್ಲಿದೆ ಕಂಪ್ಲೀಟ್ ಲೆಕ್ಕಾಚಾರ

ತಿಂಗಳಿಗೆ ₹1.5 ಲಕ್ಷ ದಾಟುವುದೇ ಸರ್ಕಾರಿ ನೌಕರರ ವೇತನ? ಇಲ್ಲಿದೆ ಕಂಪ್ಲೀಟ್ ಲೆಕ್ಕಾಚಾರ

2

ಇನ್ನು ಕೆಲವೇ ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

3

ಇಂದಿನ ದಿನ ಭವಿಷ್ಯ: ಈ ರಾಶಿಯವರಿಗೆ ಸುಖದ ಸುಪ್ಪತ್ತಿಗೆ, ದಿಢೀರ್‌ ಧನಯೋಗ! 12 ರಾಶಿಗಳ ಭವಿಷ್ಯ ಇಲ್ಲಿದೆ

4

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

5

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಳಗಾವಿ / ಬೆಂಗಳೂರು: ಕಾಲೇಜು ದಿನಗಳಲ್ಲಿ ಸ್ನೇಹಿತರೊಂದಿಗೆ ಶೈಕ್ಷಣಿಕ ಪ್ರವಾಸಕ್ಕೆ ತೆರಳುವುದೆಂದರೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಅದೊಂದು ಅವಿಸ್ಮರಣೀಯ ಅನುಭವ. ಸುಂದರ ತಾಣಗಳನ್ನು ವೀಕ್ಷಿಸುತ್ತಾ, ಜ್ಞಾನಾರ್ಜನೆ ಪಡೆಯಬೇಕಾದ ಪ್ರವಾಸಗಳು ಇತ್ತೀಚಿನ ದಿನಗಳಲ್ಲಿ ಅಪಾಯಕಾರಿ ಸಾಹಸಗಳಿಗೆ ವೇದಿಕೆಯಾಗುತ್ತಿವೆ. 

ಪ್ರವಾಸಿ ತಾಣಗಳಲ್ಲಿ ಮೊಬೈಲ್ ಕ್ಯಾಮೆರಾ ಹಿಡಿದು ಸೆಲ್ಫಿ, ವೀಡಿಯೋ ಮತ್ತು ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುವ ಹುಚ್ಚಾಟದಲ್ಲಿ ಅನೇಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಈ ಗಂಭೀರ ಪರಿಸ್ಥಿತಿಯನ್ನು ಅರಿತಿರುವ ಕಾಲೇಜು ಶಿಕ್ಷಣ ಇಲಾಖೆಯು ಇದೀಗ ವಿದ್ಯಾರ್ಥಿಗಳ ಪ್ರಾಣರಕ್ಷಣೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಮಹತ್ವದ ಹಾಗೂ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದೆ.

ಇನ್ಮುಂದೆ ಶೈಕ್ಷಣಿಕ ಪ್ರವಾಸಗಳ ಸಮಯದಲ್ಲಿ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಳ್ಳುವುದು, ವೀಡಿಯೋ ಚಿತ್ರೀಕರಣ ಮಾಡುವುದು ಹಾಗೂ ಸಾಮಾಜಿಕ ಜಾಲತಾಣಗಳಿಗೆ ರೀಲ್ಸ್ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಕಾಲೇಜು ಶಿಕ್ಷಣ ಇಲಾಖೆಯು ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಿಗೆ ಸ್ಪಷ್ಟ ಮಾರ್ಗಸೂಚಿಯನ್ನು ರವಾನಿಸಿದೆ.

ಪ್ರಾಣಾಪಾಯ ತಡೆಯಲು ಇಲಾಖೆಯ ಬಿಗಿ ಕ್ರಮ:

ಇತ್ತೀಚಿನ ವರ್ಷಗಳಲ್ಲಿ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳು ಜಲಪಾತಗಳು, ನದಿ ತೀರಗಳು, ಅಪಾಯಕಾರಿ ಎತ್ತರದ ಬೆಟ್ಟ-ಗುಡ್ಡಗಳು ಹಾಗೂ ಸಮುದ್ರ ಕಿನಾರೆಗಳಲ್ಲಿ ನಿಂತು ಫೋಟೋ ಹಾಗೂ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಜೀವ ಕಳೆದುಕೊಂಡ ಅನೇಕ ದುರಂತಗಳು ನಡೆದಿವೆ. 'ಇನ್‌ಸ್ಟಾಗ್ರಾಮ್', 'ಫೇಸ್‌ಬುಕ್' ಹಾಗೂ 'ಯೂಟ್ಯೂಬ್‌'ಗಳಲ್ಲಿ ಹೆಚ್ಚು ಲೈಕ್ಸ್ ಹಾಗೂ ವಿಫ್ಯೂಸ್ ಪಡೆಯುವ ಹಂಬಲದಿಂದ ವಿದ್ಯಾರ್ಥಿಗಳು ತಮ್ಮ ಜೀವವನ್ನೇ ಪಣಕ್ಕಿಡುತ್ತಿದ್ದಾರೆ.

ಈ ರೀತಿಯ ಮೈಮರೆವಿನ ನಡವಳಿಕೆ ಹಾಗೂ ಅಪಾಯಕಾರಿ ಸಾಹಸಗಳಿಗೆ ಶಾಶ್ವತ ಬ್ರೇಕ್ ಹಾಕುವ ಉದ್ದೇಶದಿಂದ ಇಲಾಖೆಯು ಈ ನಿರ್ಧಾರಕ್ಕೆ ಬಂದಿದೆ. ಪ್ರವಾಸದ ಮುಖ್ಯ ಉದ್ದೇಶ ಜ್ಞಾನಾರ್ಜನೆ ಮತ್ತು ಶೈಕ್ಷಣಿಕ ಕಲಿಕೆಯಾಗಬೇಕೇ ಹೊರತು ಅಪಾಯಕಾರಿ ವೀಡಿಯೋ ಚಿತ್ರೀಕರಣಗಳಲ್ಲ ಎಂಬ ಸಂದೇಶವನ್ನು ಇಲಾಖೆ ಈ ಮೂಲಕ ಸಾರಿದೆ.

ಇಲಾಖೆಯ ಅನುಮತಿ ಕಡ್ಡಾಯ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ಜವಾಬ್ದಾರಿ:

ಹೊಸ ಮಾರ್ಗಸೂಚಿಯ ಪ್ರಕಾರ, ಯಾವುದೇ ಕಾಲೇಜು ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಮುನ್ನ ಕಾಲೇಜು ಶಿಕ್ಷಣ ಇಲಾಖೆಯಿಂದ ಪೂರ್ವಾಪರ ಅನುಮತಿಯನ್ನು ಪಡೆಯುವುದು ಕಡ್ಡಾಯವಾಗಿದೆ. ಪ್ರವಾಸ ಆರಂಭವಾಗುವ ಮೊದಲೇ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ, ಈ ನಿಯಮಗಳ ಕುರಿತು ಸೂಕ್ತ ಅರಿವು ಮೂಡಿಸಬೇಕು ಮತ್ತು ಸ್ಪಷ್ಟ ಸೂಚನೆಗಳನ್ನು ನೀಡಬೇಕು.

ಅಷ್ಟೇ ಅಲ್ಲದೆ, ಪ್ರವಾಸದ ಸಮಯದಲ್ಲಿ ವಿದ್ಯಾರ್ಥಿಗಳ ಜೊತೆಗೆ ತೆರಳುವ ಉಪನ್ಯಾಸಕರು ಮತ್ತು ಬೋಧಕ ಸಿಬ್ಬಂದಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಲಾಗಿದೆ. ಪ್ರವಾಸದ ಉದ್ದಕ್ಕೂ ವಿದ್ಯಾರ್ಥಿಗಳು ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಉಪನ್ಯಾಸಕರು ತೀವ್ರ ನಿಗಾವಹಿಸಬೇಕು. ಯಾವುದೇ ವಿದ್ಯಾರ್ಥಿ ನಿಯಮ ಉಲ್ಲಂಘಿಸಿ ಅಪಾಯಕಾರಿ ಸ್ಥಳಗಳಲ್ಲಿ ಫೋಟೋ ಅಥವಾ ರೀಲ್ಸ್ ಮಾಡಲು ಯತ್ನಿಸಿದರೆ ತಕ್ಷಣವೇ ತಡೆಯಬೇಕು. ಒಂದು ವೇಳೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಅನಾಹುತ ಸಂಭವಿಸಿದರೆ ಅದಕ್ಕೆ ಸಂಬಂಧಪಟ್ಟ ಆಡಳಿತ ಮಂಡಳಿ ಹಾಗೂ ಜೊತೆಯಲ್ಲಿದ್ದ ಉಪನ್ಯಾಸಕರನ್ನೇ ನೇರ ಹೊಣೆಗಾರರನ್ನಾಗಿ ಮಾಡುವ ಎಚ್ಚರಿಕೆಯನ್ನೂ ನೀಡಲಾಗಿದೆ.

ಹೆತ್ತವರಲ್ಲೂ ಸಮಾಧಾನ, ವಿದ್ಯಾರ್ಥಿಗಳಲ್ಲಿ ಮಿಶ್ರಪ್ರತಿಕ್ರಿಯೆ:

ಶಿಕ್ಷಣ ಇಲಾಖೆಯ ಈ ಕಟ್ಟುನಿಟ್ಟಿನ ಕ್ರಮಕ್ಕೆ ಪೋಷಕರು ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. "ಮಕ್ಕಳು ಪ್ರವಾಸಕ್ಕೆ ಹೋದಾಗ ಅವರ ಸುರಕ್ಷತೆಯ ಬಗ್ಗೆ ಮನೆಯಲ್ಲಿ ಸದಾ ಭಯವಿರುತ್ತಿತ್ತು. ಇಲಾಖೆಯ ಈ ಹೊಸ ನಿಯಮದಿಂದ ಅನಾಹುತಗಳು ತಪ್ಪಲಿವೆ" ಎಂದು ಅನೇಕ ಪೋಷಕರು ಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತ ವಿದ್ಯಾರ್ಥಿ ವಲಯದಲ್ಲಿ ಈ ಆದೇಶಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರವಾಸದ ನೆನಪುಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ಅವಕಾಶವಿಲ್ಲವೇ ಎಂಬ ಬೇಸರ ಕೆಲವರಲ್ಲಿದ್ದರೆ, ಇನ್ನು ಕೆಲವರು ಜೀವದ ಸುರಕ್ಷತೆಯ ದೃಷ್ಟಿಯಿಂದ ಇಲಾಖೆ ತೆಗೆದುಕೊಂಡಿರುವ ಈ ನಿರ್ಧಾರ ಸರಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಒಟ್ಟಿನಲ್ಲಿ, ಶೈಕ್ಷಣಿಕ ಪ್ರವಾಸಗಳನ್ನು ಸುರಕ್ಷಿತ ಮತ್ತು ಶಿಸ್ತುಬದ್ಧಗೊಳಿಸಲು ಶಿಕ್ಷಣ ಇಲಾಖೆ ತಂದಿರುವ ಈ ಹೊಸ ನಿಯಮ ಪ್ರವಾಸದ ಸ್ವರೂಪವನ್ನೇ ಬದಲಾಯಿಸಲಿದೆ.

 

Add Zee News as a Preferred Source
TAGS:
Kannada News