SOCIAL MEDIA

Newsletter

PARTNER SITES
Select Language Select State

ಸಿದ್ದರಾಮಯ್ಯ-ಡಿಕೆಶಿ ಜೋಡಿ ಒಂದೇ ತೇರಿನ ಎರಡು ಗಾಲಿಗಳು-ಸಚಿವ ಶಿವರಾಜ ತಂಗಡಗಿ

ಚಾಲಕ ಹಾಗೂ ನಿರ್ವಾಹಕರಹಿತ ಬಸ್ ಸುಮಾರು ದೂರ ಹಿಮ್ಮುಖವಾಗಿ ಸಾಗಿ, ಕೊನೆಗೆ ಬಸ್ ನಿಲ್ದಾಣದ ಬಳಿಯಿದ್ದ ಡಿಪೋ ಗೇಟ್‌ಗೆ ಜೋರಾಗಿ ಡಿಕ್ಕಿ ಹೊಡೆದು ನಿಂತಿದೆ. ಬಸ್‌ನಲ್ಲಿದ್ದ ಇತರ ಪ್ರಯಾಣಿಕರು ಮತ್ತು ನಿಲ್ದಾಣದಲ್ಲಿದ್ದ ಸಾರ್ವಜನಿಕರು ಈ ಅನಿರೀಕ್ಷಿತ ಘಟನೆಯಿಂದ ತೀವ್ರ ಭಯಭೀತರಾದರು.

Reported By Manjunath Naragund Written By Manjunath Naragund
Published: Oct 26, 2026, 03:43 PM IST | Updated: Oct 26, 2026, 04:07 PM IST
Image Credit: Shivaraj Tangadagi
Join

ಕೊಪ್ಪಳ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕು ಎಂದು ಸಚಿವ ಶಿವರಾಜ ತಂಗಡಗಿ ಅಭಿಪ್ರಾಯಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯದಲ್ಲಿ ಹಿಂದುಳಿದ ಹಾಗೂ ರೈತಾಪಿ ವರ್ಗದ ಜನ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದರು.

ಹಿಂದೊಮ್ಮೆ ಮೀಸಲಾತಿ ಹೋರಾಟದ ಪಾದಯಾತ್ರೆಯಲ್ಲಿ ತಾವೂ ಕೂಡ ಭಾಗಿಯಾಗಿರುವುದಾಗಿ ಸ್ಮರಿಸಿದ ಅವರು, ಸಮುದಾಯಕ್ಕೆ ಮೀಸಲಾತಿ ನೀಡುವ ಕುರಿತು ಸರ್ಕಾರ ಗಂಭೀರವಾಗಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಆದಾಗ್ಯೂ, ಒಬಿಸಿ ಪಟ್ಟಿಗೆ ಸೇರಿಸಲು ಅದರದೇ ಆದ ಕಾನೂನು ಹಾಗೂ ನಿಯಮಗಳಿವೆ ಎಂದು ತಿಳಿಸಿದರು.

ಇದೇ ವೇಳೆ, ಸಿದ್ದರಾಮಯ್ಯ ಅವರ ಸ್ಟಿಂಗ್ ವಿಡಿಯೋ ವೈರಲ್ ಪ್ರಕರಣದ ಕುರಿತು ಮಾತನಾಡಿದ ಸಚಿವರು, ವಿಡಿಯೋ ವೈರಲ್ ಮಾಡಿದವರನ್ನು ಈಗಾಗಲೇ ಬಂಧಿಸಲಾಗಿದೆ. ಸಿದ್ದರಾಮಯ್ಯ ಅವರ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ ಮಾಡಲಾಗುತ್ತಿದ್ದು, ಈ ಕಾನೂನು ಹೋರಾಟದ ಪ್ರಕರಣದಿಂದ ಅವರು ಸಂಪೂರ್ಣ ಮುಕ್ತರಾಗಿ ಹೊರಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೋಡಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು, ಇದನ್ನು ವಿರೋಧ ಪಕ್ಷದವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರನ್ನು ಸೈಡ್‌ಲೈನ್ ಮಾಡಲಾಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಸಿದ್ದರಾಮಯ್ಯ ಇಲ್ಲದೆಯೂ ಕಾಂಗ್ರೆಸ್ ಇಲ್ಲ, ಡಿಕೆಶಿ ಇಲ್ಲದೆಯೂ ಕಾಂಗ್ರೆಸ್ ಇಲ್ಲ. ಸೈಡ್‌ಲೈನ್ ಎಂಬುದು ಕೇವಲ ಕುಮಾರಸ್ವಾಮಿ ಅವರ ಭ್ರಮೆ ಅಷ್ಟೇ ಎಂದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ನಮ್ಮ ಪಕ್ಷದ ಎರಡು ಕಣ್ಣುಗಳಿದ್ದಂತೆ, ಒಂದೇ ತೇರಿನ ಎರಡು ಗಾಲಿಗಳು ಒಟ್ಟಾಗಿ ಪಕ್ಷವನ್ನು ಮುನ್ನಡೆಸುತ್ತಿವೆ ಎಂದು ಸ್ಪಷ್ಟಪಡಿಸಿದರು.

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ 'ನಂದಿಧ್ವಜ ಪೂಜೆಗೆ ಸಿಎಂ ಮಾತ್ರ ಬರಬೇಕು' ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಮೊದಲಿನಿಂದಲೂ ಎಲ್ಲರೂ ನಂದಿಧ್ವಜ ಪೂಜೆಗೆ ಹೋಗುತ್ತ ಬಂದಿದ್ದಾರೆ, ನಾವು ಕೂಡ ಅದೇ ಪರಂಪರೆಯಂತೆ ಹೋಗಿದ್ದೇವೆ. ಮುಂದಿನ ದಿನಗಳಲ್ಲಿ ಈ ಕುರಿತು ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಲಾಗುವುದು, ಇಂತಹ ಸಣ್ಣಪುಟ್ಟ ವಿಚಾರಗಳನ್ನು ದೊಡ್ಡದು ಮಾಡುವುದು ಬೇಡ ಎಂದರು. ಅಂತಿಮವಾಗಿ, ರಾಜ್ಯೋತ್ಸವ ಪ್ರಶಸ್ತಿಗಳ ಕುರಿತು ಮಾತನಾಡಿ, ಪ್ರತಿ ಜಿಲ್ಲೆಗೂ ಪ್ರಶಸ್ತಿ ಹಾಗೂ ವಿವಿಧ ಪಂಗಡ ಹಾಗೂ ಸಮುದಾಯಗಳಿಗೂ ಸೂಕ್ತ ಆದ್ಯತೆ ನೀಡಿ ರಾಜ್ಯೋತ್ಸವ ಪ್ರಶಸ್ತಿಗಳನ್ನು ವಿತರಿಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.

 

 

 

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES