• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಚಿನ್ನದ ಅಂಬಾರಿ ಹೊರುವ ಪ್ರಶಾಂತ ಆನೆಗೆ ವಿಶೇಷ ಮಜ್ಜನ, ಆರೈಕೆ

ಚಿನ್ನದ ಅಂಬಾರಿ ಹೊರುವ ಪ್ರಶಾಂತ ಆನೆಗೆ ವಿಶೇಷ ಮಜ್ಜನ, ಆರೈಕೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ 2026ರ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಚಿನ್ನದ ಅಂಬಾರಿ ಹೊರುವ ಪ್ರಮುಖ ಆಕರ್ಷಣೆಯಾಗಿರುವ ಪ್ರಶಾಂತ ಆನೆಗೆ ವಿಶೇಷ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಎಲ್ಲ ಆನೆಗಳ ಅಲಂಕಾರದ ನಡುವೆ, ಪ್ರಶಾಂತನಿಗೆ ಮಾವುತರು ಪ್ರತ್ಯೇಕವಾಗಿ ಮಜ್ಜನ ಮಾಡಿಸುತ್ತಿದ್ದಾರೆ.

Reported ByManjunath NaragundEdited ByManjunath Naragund
Published: Oct 21, 2026, 11:24 AM IST|Updated: Oct 21, 2026, 11:30 AM IST
joinshare
ಚಿನ್ನದ ಅಂಬಾರಿ ಹೊರುವ ಪ್ರಶಾಂತ ಆನೆಗೆ ವಿಶೇಷ ಮಜ್ಜನ, ಆರೈಕೆ
Image Credit: Mysuru

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಹುಬ್ಬಳ್ಳಿ–ಧಾರವಾಡದಲ್ಲಿ ಇನ್ಮುಂದೆ AI ಟ್ರಾಫಿಕ್‌ ಕಣ್ಗಾವಲು: ನಿಯಮ ಉಲ್ಲಂಘಿಸಿದ್ರೆ ದಂಡ ಕಟ್ಟಲೇಬೇಕು!

ಹುಬ್ಬಳ್ಳಿ–ಧಾರವಾಡದಲ್ಲಿ ಇನ್ಮುಂದೆ AI ಟ್ರಾಫಿಕ್‌ ಕಣ್ಗಾವಲು: ನಿಯಮ ಉಲ್ಲಂಘಿಸಿದ್ರೆ ದಂಡ ಕಟ್ಟಲೇಬೇಕು!

2

ಕೆಪಿಎಸ್‌ಸಿ ವಿವಾದದ ಬೆನ್ನಲ್ಲೇ ಕೆಎಇ ಬಿರುಸು: 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ತಾತ್ಕಾಲಿಕ ಫಲಿತಾಂಶ ಪ್ರಕಟ!

3

ಚಿನ್ನದ ಅಂಬಾರಿ ಹೊರುವ ಪ್ರಶಾಂತ ಆನೆಗೆ ವಿಶೇಷ ಮಜ್ಜನ, ಆರೈಕೆ

4

Viral Video: ಶೋ ರೂಮ್‌ನಿಂದ ಆಚೆ ಬರ್ತಿದ್ದಂತೆಯೇ ಅಪಘಾತ: ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!

5

“ನನ್ನ ಪ್ರೀತಿಯ ಸ್ವಯಂಸೇವಕರೇ…” RSS ಪಥಸಂಚಲನಕ್ಕೆ ಖರ್ಗೆ ಖಡಕ್ ಸೂಚನೆ; ಅನುಮತಿ ಪಡೆಯಲು ತಾಕೀತು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ.ಈ ಬಾರಿ ಕ್ಯಾಪ್ಟನ್ ಪ್ರಶಾಂತ ಆನೆ ಮೊದಲ ಬಾರಿಗೆ ಸುಮಾರು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲಿದ್ದು, ಒಟ್ಟು 12 ಆನೆಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ರಾತ್ರಿ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಮತ್ತು ಡ್ರೋನ್ ಪ್ರದರ್ಶನ ನಡೆಯಲಿವೆ.

ನಾಡಿನೆಲ್ಲೆಡೆ ಇಂದು ವಿಜಯದಶಮಿ ಸಂಭ್ರಮ ಮನೆಮಾಡಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂತಿಮ ದಿನದ ಸಂಭ್ರಮ ಕಳೆಗಟ್ಟಿದ್ದು, ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ.ಅರಮನೆಯಲ್ಲಿ ನವರಾತ್ರಿ ಉತ್ಸವದ ಕೊನೆಯ ದಿನದ ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು, ಸಂಜೆ ಚಾಮುಂಡೇಶ್ವರಿ ಉತ್ಸವಮೂರ್ತಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಮೆರವಣಿಗೆಯಲ್ಲಿ ಸಾಗಲಿದ್ದಾಳೆ.ಅರಮನೆಯಲ್ಲಿ ಮಂಗಳವಾರ ರಾಜಪರಿವಾರದ ವತಿಯಿಂದ ಆಯುಧ ಪೂಜೆ ನೆರವೇರಿಸಲಾಗಿತ್ತು. ಇಂದು ವಿಜಯದಶಮಿಯ ಅಂಗವಾಗಿ ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಕ್ಯಾಪ್ಟನ್ ಪ್ರಶಾಂತ ಆನೆ ಮೊದಲ ಬಾರಿಗೆ ಚಾಮುಂಡೇಶ್ವರಿ ಉತ್ಸವಮೂರ್ತಿ ಇರುವ ಸುಮಾರು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಲಿದೆ. ಒಟ್ಟು 12 ಆನೆಗಳು ಜಂಬೂಸವಾರಿಯಲ್ಲಿ ಭಾಗವಹಿಸಲಿದ್ದು, ಈ ಹಿಂದೆ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅಭಿಮನ್ಯು ಈ ಬಾರಿ ನಿಶಾನೆ ಆನೆಯಾಗಿ ಮೆರವಣಿಗೆಯಲ್ಲಿ ಸಾಗಲಿದೆ.

ಮಧ್ಯಾಹ್ನ 1.36ರಿಂದ 1.50: ಶುಭ ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಪರಮೇಶ್ವರ್ ಅವರಿಂದ ಪೂಜೆ

ಸಂಜೆ 4.10ರಿಂದ 4.35: ಶುಭ ಮೀನ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ

ಸಂಜೆ 4.35: ಅಂಬಾವಿಲಾಸ ಅರಮನೆಯಿಂದ ವಿಶ್ವವಿಖ್ಯಾತ ಜಂಬೂಸವಾರಿ ಆರಂಭ

ಸಂಜೆ 7: ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು

ರಾತ್ರಿ 8: ಬನ್ನಿಮಂಟಪ ಮೈದಾನದಲ್ಲಿ ಡ್ರೋನ್ ಪ್ರದರ್ಶನ

ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ದೇವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ಬಳಿಕ ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಸಾಗಲಿದೆ.

48 ಕಲಾತಂಡಗಳು, 53 ಸ್ತಬ್ಧಚಿತ್ರಗಳು ಭಾಗಿ

ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ 48 ಕಲಾತಂಡಗಳು ಹಾಗೂ 53 ಸ್ತಬ್ಧಚಿತ್ರಗಳು ಭಾಗವಹಿಸಲಿವೆ.ಕರ್ನಾಟಕದ ಜಾನಪದ ಕಲಾತಂಡಗಳ ಜೊತೆಗೆ ತಮಿಳುನಾಡು, ಕೇರಳ ಮತ್ತು ಮಣಿಪುರದ ಕಲಾವಿದರೂ ತಮ್ಮ ಪ್ರದರ್ಶನಗಳ ಮೂಲಕ ಮೆರವಣಿಗೆಗೆ ಮೆರುಗು ನೀಡಲಿದ್ದಾರೆ.

ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ, ನಗಾರಿ, ಪೂಜಾ ಕುಣಿತ, ಗೊರವನ ಕುಣಿತ, ತಮಟೆ ಮತ್ತು ಕೋಲಾಟ ಸೇರಿದಂತೆ ವಿವಿಧ ಜಾನಪದ ಕಲಾಪ್ರಕಾರಗಳು ಜನರ ಗಮನ ಸೆಳೆಯಲಿವೆ. ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಯ ತುಕಡಿಗಳೂ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.

ಆನೆಗಳಿಗೆ ಪೂಜೆ; ಸಂಪ್ರದಾಯಕ್ಕೆ ವಿಶೇಷ ಮಹತ್ವ

ದಸರಾ ಸಂಪ್ರದಾಯದಂತೆ ವಿಜಯದಶಮಿಯ ಮುನ್ನಾದಿನ ದೇವರಾಜ ಮೊಹಲ್ಲಾದಲ್ಲಿರುವ ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಪೂಜೆ ಸಲ್ಲಿಸಲಾಯಿತು. ಚಿನ್ನದ ಅಂಬಾರಿ ಹೊರುವ ಆನೆ ಹಾಗೂ ಕುಮ್ಕಿ ಆನೆಗಳಿಗೂ ಪೂಜೆ ನೆರವೇರಿಸಲಾಯಿತು. ಮೈಸೂರು ದಸರಾ ತನ್ನ ಧಾರ್ಮಿಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ವೈಭವದೊಂದಿಗೆ ವಿಜಯದಶಮಿಯ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ.

ಚಿನ್ನದ ಅಂಬಾರಿ ಹೊರುವ ಪ್ರಶಾಂತ ಆನೆಗೆ ವಿಶೇಷ ಮಜ್ಜನ, ಆರೈಕೆ:

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ 2026ರ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಚಿನ್ನದ ಅಂಬಾರಿ ಹೊರುವ ಪ್ರಮುಖ ಆಕರ್ಷಣೆಯಾಗಿರುವ ಪ್ರಶಾಂತ ಆನೆಗೆ ವಿಶೇಷ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಎಲ್ಲ ಆನೆಗಳ ಅಲಂಕಾರದ ನಡುವೆ, ಪ್ರಶಾಂತನಿಗೆ ಮಾವುತರು ಪ್ರತ್ಯೇಕವಾಗಿ ಮಜ್ಜನ ಮಾಡಿಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಪ್ರೋಟೀನ್ ಯುಕ್ತ ಪೌಷ್ಟಿಕ ಆಹಾರವನ್ನು ನೀಡಲಾಗಿದ್ದು, ಸಂಪೂರ್ಣ ಆರೋಗ್ಯ ಕಾಪಾಡಿಕೊಳ್ಳಲಾಗುತ್ತಿದೆ.

ಇದೇ ಮೊದಲ ಬಾರಿಗೆ ಪ್ರಶಾಂತ ಆನೆ ಜಂಬೂಸವಾರಿ ನಾಯಕನಾಗಿ ಚಿನ್ನದ ಅಂಬಾರಿ ಹೊರುತ್ತಿದ್ದು, ಈ ಹಿಂದೆ 18 ಬಾರಿ ಮೆರವಣಿಗೆಯಲ್ಲಿ ಭಾಗವಹಿಸಿದ ಅನುಭವವಿದೆ. ರಾಜವಂಶಸ್ಥರ ಸಂಪ್ರದಾಯದಂತೆ ಪ್ರಶಾಂತನಿಗೆ ಅರ್ಧಚಂದ್ರಾಕೃತಿ ಹಾಗೂ ಗಂಡಭೇರುಂಡ ಚಿತ್ತಾರದಂತಹ ವಿಶೇಷ ಅಲಂಕಾರ ಮಾಡಲಾಗುತ್ತದೆ. ಮೆರವಣಿಗೆಯಲ್ಲಿ ಅಭಿಮನ್ಯು ನಿಶಾನೆ ಆನೆಯಾಗಿ, ಗೋಪಿ ನೌಪತ್ ಆನೆಯಾಗಿ, ಮಹೇಂದ್ರ, ಧನಂಜಯ, ಶ್ರೀರಾಮ, ಶ್ರೀಕಂಠ, ಲಕ್ಷ್ಮಿ, ಚೈತ್ರಾ ಸಾಲ್ ಆನೆಗಳಾಗಿ ಸಾಗಲಿವೆ. ರೂಪಾ ಮತ್ತು ಕಾವೇರಿ ಕುಮ್ಕಿ ಆನೆಗಳಾಗಿ ಜೊತೆಗಿರುತ್ತವೆ. ಅರಮನೆಯಲ್ಲಿ ದಸರಾ ಸಂಭ್ರಮ ಸಡಗರ ಹೆಚ್ಚಾಗಿದೆ.

Add Zee News as a Preferred Source
TAGS:
Kannada News