SOCIAL MEDIA

Newsletter

PARTNER SITES
Select Language Select State

ಉಪ್ಪಿನ ಬಳಿಕ ಸಕ್ಕರೆ ಬಳಕೆಗೆ ಕಡಿವಾಣ? WHO ಮಾನದಂಡದಂತೆ ಹೊಸ ಮಾರ್ಗಸೂಚಿಗೆ ರಾಜ್ಯ ಸರ್ಕಾರ ಚಿಂತನೆ

ಸಿಹಿ ಪದಾರ್ಥಗಳು, ಸಕ್ಕರೆ ಸೇರಿಸಿದ ಪಾನೀಯಗಳು ಹಾಗೂ ಪ್ಯಾಕ್ ಮಾಡಿದ ಆಹಾರಗಳಲ್ಲಿ ಸಕ್ಕರೆಯ ಪ್ರಮಾಣವನ್ನು ನಿಯಂತ್ರಿಸಲು ಅಗತ್ಯವಾದ ಮಾರ್ಗಸೂಚಿಗಳನ್ನು ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತಿದೆ.

Written By Chetana Devarmani
Published: Sep 28, 2026, 06:34 PM IST | Updated: Sep 28, 2026, 06:36 PM IST
Join

ಬೆಂಗಳೂರು: ರಾಜ್ಯದಲ್ಲಿ ಮಧುಮೇಹ, ಹೃದ್ರೋಗ ಸೇರಿದಂತೆ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಆಹಾರ ಪದ್ಧತಿಯಲ್ಲಿ ಬದಲಾವಣೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ. ಈಗಾಗಲೇ ಉಪ್ಪಿನ ಬಳಕೆಯನ್ನು ನಿಯಂತ್ರಿಸುವ ಕುರಿತು ಚರ್ಚೆ ನಡೆಸಿರುವ ರಾಜ್ಯ ಸರ್ಕಾರ, ಇದೀಗ ಸಕ್ಕರೆ ಸೇವನೆಯ ಪ್ರಮಾಣಕ್ಕೂ ಕಡಿವಾಣ ಹಾಕುವ ಬಗ್ಗೆ ಚಿಂತನೆ ನಡೆಸಿದೆ. ಸಿಹಿ ಪದಾರ್ಥಗಳು, ಸಕ್ಕರೆ ಸೇರಿಸಿದ ಪಾನೀಯಗಳು ಹಾಗೂ ಪ್ಯಾಕ್ ಮಾಡಿದ ಆಹಾರಗಳಲ್ಲಿ ಸಕ್ಕರೆಯ ಪ್ರಮಾಣವನ್ನು ನಿಯಂತ್ರಿಸಲು ಅಗತ್ಯವಾದ ಮಾರ್ಗಸೂಚಿಗಳನ್ನು ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತಿದೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಶಿಫಾರಸಿನ ಪ್ರಕಾರ, ವಯಸ್ಕರು ಮತ್ತು ಮಕ್ಕಳು ಪ್ರತಿದಿನ ಸೇವಿಸುವ ಒಟ್ಟು ಕ್ಯಾಲೊರಿಗಳಲ್ಲಿ ಫ್ರೀ ಶುಗರ್ ಪ್ರಮಾಣ ಶೇ.10ಕ್ಕಿಂತ ಕಡಿಮೆ ಇರಬೇಕು. ಹೆಚ್ಚಿನ ಆರೋಗ್ಯ ಪ್ರಯೋಜನಕ್ಕಾಗಿ ಈ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆ ಮಾಡುವುದು ಸೂಕ್ತ ಎಂದು WHO ಶಿಫಾರಸು ಮಾಡಿದೆ. ಇದು ದಿನಕ್ಕೆ ಸುಮಾರು 25 ಗ್ರಾಂ ಅಥವಾ 6 ಟೀ ಚಮಚದಷ್ಟು ಸಕ್ಕರೆಗೆ ಸಮನಾಗಿದೆ. ಹೀಗಾಗಿ ಸಕ್ಕರೆ ಹೆಚ್ಚಿರುವ ಆಹಾರ ಮತ್ತು ಪಾನೀಯಗಳ ಸೇವನೆಯನ್ನು ಕಡಿಮೆ ಮಾಡುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಸಕ್ಕರೆಯ ಅತಿಯಾದ ಸೇವನೆಯಿಂದ ಅಧಿಕ ತೂಕ ಮತ್ತು ಬೊಜ್ಜಿನಂತಹ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಸಕ್ಕರೆ ಹೆಚ್ಚಿರುವ ಪಾನೀಯಗಳು ಮತ್ತು ಸಂಸ್ಕರಿತ ಆಹಾರಗಳನ್ನು ನಿರಂತರವಾಗಿ ಸೇವಿಸುವ ಅಭ್ಯಾಸ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಈ ಹಿನ್ನೆಲೆಯಲ್ಲಿ ಮಕ್ಕಳು ಮತ್ತು ವಯಸ್ಕರು ತಮ್ಮ ದಿನನಿತ್ಯದ ಆಹಾರದಲ್ಲಿ ಸಕ್ಕರೆಯ ಪ್ರಮಾಣವನ್ನು ಗಮನಿಸುವಂತೆ ಜಾಗೃತಿ ಮೂಡಿಸುವುದು ಸರ್ಕಾರದ ಉದ್ದೇಶವಾಗಿದೆ.

ಇದರ ಜೊತೆಗೆ ಅಧಿಕ ಉಪ್ಪಿನ ಸೇವನೆಯ ನಿಯಂತ್ರಣಕ್ಕೂ ಸರ್ಕಾರ ಗಮನ ನೀಡುತ್ತಿದೆ. ಉಪ್ಪಿನ ಅತಿಯಾದ ಸೇವನೆಯು ರಕ್ತದೊತ್ತಡ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳೊಂದಿಗೆ ಸಂಬಂಧ ಹೊಂದಿರುವ ಹಿನ್ನೆಲೆಯಲ್ಲಿ ಉಪ್ಪಿನ ಬಳಕೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಗಿದೆ.

ಮದ್ಯದ ಬಾಟಲಿಗಳ ಮೇಲಿರುವ ಆರೋಗ್ಯ ಎಚ್ಚರಿಕೆ ಸಂದೇಶಗಳ ಮಾದರಿಯಲ್ಲಿ ಉಪ್ಪಿನ ಪ್ಯಾಕೆಟ್‌ಗಳ ಮೇಲೂ ‘ಆರೋಗ್ಯಕ್ಕೆ ಹಾನಿಕರ’ ಎಂಬ ಎಚ್ಚರಿಕೆ ಸ್ಟಿಕ್ಕರ್‌ಗಳನ್ನು ಕಡ್ಡಾಯಗೊಳಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಈ ಹಿಂದೆ ತಿಳಿಸಿದ್ದರು. ಜನರಿಗೆ ಉಪ್ಪಿನ ಸರಿಯಾದ ಬಳಕೆಯ ಅರಿವು ಮೂಡಿಸುವುದು ಹಾಗೂ ಆರೋಗ್ಯಕರ ಉಪ್ಪಿನ ಉತ್ಪಾದನೆಗೆ ಒತ್ತು ನೀಡುವುದು ಇದರ ಉದ್ದೇಶವಾಗಿದೆ ಎಂದು ಅವರು ಹೇಳಿದ್ದರು.

ಇದೀಗ ಉಪ್ಪಿನ ಬಳಿಕ ಸಕ್ಕರೆ ಸೇವನೆಯ ಮೇಲೂ ಸರ್ಕಾರ ಗಮನ ಹರಿಸುತ್ತಿರುವುದು ಮಹತ್ವ ಪಡೆದುಕೊಂಡಿದೆ. ಪ್ಯಾಕ್ ಮಾಡಿದ ಆಹಾರ, ಸಿಹಿ ತಿಂಡಿಗಳು ಮತ್ತು ಸಕ್ಕರೆ ಹೆಚ್ಚಿರುವ ಪಾನೀಯಗಳ ಸೇವನೆಯನ್ನು ಕಡಿಮೆ ಮಾಡುವ ಮೂಲಕ ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವುದು ಸರ್ಕಾರದ ಉದ್ದೇಶವಾಗಿದೆ. ಮಾರ್ಗಸೂಚಿಗಳು ಅಂತಿಮಗೊಂಡ ಬಳಿಕ ಸಕ್ಕರೆ ಬಳಕೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES