SOCIAL MEDIA

Newsletter

PARTNER SITES
Select Language Select State

ಕಬ್ಬಿಗೆ ₹3,600 ದರ ನಿಗದಿ... ಆದರೂ ನಾಳೆ ಹೋರಾಟ ಮುಂದುವರಿಕೆ: ಚೂನಪ್ಪ ಪೂಜಾರಿ ಎಚ್ಚರಿಕೆ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟದ ಕುರಿತು ಮಾತನಾಡಿದ ಚೂನಪ್ಪ ಪೂಜಾರಿ, ರೈತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ನಡೆದ ಸಭೆಗಳು ಹಾಗೂ ಚರ್ಚೆಗಳ ಬಳಿಕ ಪ್ರತಿ ಟನ್ ಕಬ್ಬಿಗೆ ₹3,600 ದರ ನಿಗದಿಪಡಿಸಿರುವ ವಿಚಾರ ಮುನ್ನೆಲೆಗೆ ಬಂದಿದೆ. ಈ ದರವನ್ನು ರೈತರು ಒಪ್ಪಿಕೊಳ್ಳಲು ಸಿದ್ಧರಿದ್ದಾರೆ. ಆದರೆ ರೈತರಿಗೆ ನ್ಯಾಯಯುತ ಬೆಲೆ ಸಿಗಬೇಕಾದರೆ ಇನ್ನೂ ₹50 ಹೆಚ್ಚುವರಿಯಾಗಿ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.

Written By Chetana Devarmani
Published: Nov 04, 2026, 11:20 PM IST | Updated: Nov 04, 2026, 11:22 PM IST
Join

ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ ಎಂದು ರೈತ ಮುಖಂಡ ಚೂನಪ್ಪ ಪೂಜಾರಿ ಹೇಳಿದ್ದಾರೆ. ಪ್ರತಿ ಟನ್ ಕಬ್ಬಿಗೆ ₹3,600 ದರ ನಿಗದಿಪಡಿಸಿರುವ ವಿಚಾರಕ್ಕೆ ರೈತರ ಸಹಮತವಿದೆ. ಆದರೆ ಈ ದರಕ್ಕೆ ಹೆಚ್ಚುವರಿಯಾಗಿ ಇನ್ನೂ ₹50 ನೀಡಬೇಕು. ಒಟ್ಟು ₹3,650 ನೀಡುವಂತೆ ರೈತರು ಒತ್ತಾಯಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟದ ಕುರಿತು ಮಾತನಾಡಿದ ಚೂನಪ್ಪ ಪೂಜಾರಿ, ರೈತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ನಡೆದ ಸಭೆಗಳು ಹಾಗೂ ಚರ್ಚೆಗಳ ಬಳಿಕ ಪ್ರತಿ ಟನ್ ಕಬ್ಬಿಗೆ ₹3,600 ದರ ನಿಗದಿಪಡಿಸಿರುವ ವಿಚಾರ ಮುನ್ನೆಲೆಗೆ ಬಂದಿದೆ. ಈ ದರವನ್ನು ರೈತರು ಒಪ್ಪಿಕೊಳ್ಳಲು ಸಿದ್ಧರಿದ್ದಾರೆ. ಆದರೆ ರೈತರಿಗೆ ನ್ಯಾಯಯುತ ಬೆಲೆ ಸಿಗಬೇಕಾದರೆ ಇನ್ನೂ ₹50 ಹೆಚ್ಚುವರಿಯಾಗಿ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಮೊದಲ ಕಂತಿನಲ್ಲಿ ಪ್ರತಿ ಟನ್ ಕಬ್ಬಿಗೆ ₹3,650 ನೀಡಲು ಒಪ್ಪಿದ್ದಾರೆ ಎಂದು ಚೂನಪ್ಪ ಪೂಜಾರಿ ತಿಳಿಸಿದರು. ಯಾರು ಹಣ ನೀಡಲಿ, ಬಿಡಲಿ, ಮೊದಲು ನೀವು ಹಣ ನೀಡಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದೇವೆ. ರೈತರ ನಿರಂತರ ಪ್ರತಿಭಟನೆಗೆ ಸಿಕ್ಕ ಮೊದಲ ಜಯ ಇದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಬ್ಬು ಬೆಳೆಗಾರರಿಗೆ ಕೇವಲ ಒಂದು ಕಂತಿನಲ್ಲಿ ಹಣ ಪಾವತಿಸುವ ಬದಲು ಎರಡು ಕಂತುಗಳಲ್ಲಿ ಹಣ ನೀಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಕಾರ್ಖಾನೆ ಮಾಲೀಕರು ಮತ್ತು ಜಿಲ್ಲಾಡಳಿತ ಈ ಕುರಿತು ಅಧಿಕೃತ ಒಪ್ಪಂದ ಮಾಡಿಕೊಳ್ಳಬೇಕು. ಕೇವಲ ಮೌಖಿಕ ಭರವಸೆ ನೀಡಿದರೆ ಸಾಲದು. ರೈತರಿಗೆ ಸಿಗಬೇಕಾದ ಹಣ, ಅದರ ಪಾವತಿ ವಿಧಾನ ಮತ್ತು ಕಾಲಮಿತಿಯ ಬಗ್ಗೆ ಸ್ಪಷ್ಟವಾದ ಒಪ್ಪಂದವಾಗಬೇಕು ಎಂದು ಚೂನಪ್ಪ ಪೂಜಾರಿ ಆಗ್ರಹಿಸಿದರು. ಕಾರ್ಖಾನೆ ಮಾಲೀಕರು ಮತ್ತು ಜಿಲ್ಲಾಡಳಿತದ ನಡುವೆ ಈ ಕುರಿತು ಅಗ್ರಿಮೆಂಟ್ ಆಗಬೇಕು. ರೈತರಿಗೆ ನೀಡುವ ಭರವಸೆಗಳು ಕಾಗದದ ಮೇಲೆ ದಾಖಲಾಗಬೇಕು. ಆಗ ಮಾತ್ರ ರೈತರಿಗೆ ತಮ್ಮ ಹಕ್ಕಿನ ಹಣ ಸಿಗುವ ವಿಶ್ವಾಸ ಮೂಡುತ್ತದೆ ಎಂದು ಅವರು ಹೇಳಿದರು.

₹3,600 ದರ ನಿಗದಿಪಡಿಸಿರುವ ವಿಚಾರದಲ್ಲಿ ಪ್ರಾಥಮಿಕ ಒಪ್ಪಿಗೆ ವ್ಯಕ್ತವಾಗಿದ್ದರೂ ರೈತರ ಹೋರಾಟವನ್ನು ತಕ್ಷಣವೇ ಹಿಂಪಡೆಯುವುದಿಲ್ಲ ಎಂದು ಚೂನಪ್ಪ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ನಾಳೆಯೂ ನಮ್ಮ ಹೋರಾಟ ಮುಂದುವರಿಯಲಿದೆ. ಬೆಳಗಾವಿ ನಗರದ ಚನ್ನಮ್ಮ ವೃತ್ತದ ಸಮೀಪವಿರುವ ಸಿಪಿಎಡ್ ಮೈದಾನದಲ್ಲಿ ರೈತರು ಮತ್ತೆ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲಾಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರ ಸಮ್ಮುಖದಲ್ಲಿಯೇ ಅಧಿಕೃತವಾಗಿ ದರ ಘೋಷಣೆ ಮಾಡಬೇಕು. ಅವರು ಸ್ಥಳಕ್ಕೆ ಬಂದು ಸ್ಪಷ್ಟನೆ ನೀಡಿದ ಬಳಿಕವೇ ರೈತರು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು. ಪ್ರತಿಭಟನಾ ಸ್ಥಳದಲ್ಲಿ ಅಧಿಕೃತ ಘೋಷಣೆ ಮತ್ತು ರೈತರ ಒಪ್ಪಿಗೆ ದೊರೆತ ನಂತರವೇ ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಅವಕಾಶ ನೀಡಲಾಗುವುದು. ಅದಕ್ಕೂ ಮೊದಲು ಯಾವುದೇ ಕಾರಣಕ್ಕೂ ಕಾರ್ಖಾನೆಗಳನ್ನು ಆರಂಭಿಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ನಾಳೆ ರೈತರ ಹೋರಾಟದ ಸ್ಥಳಕ್ಕೆ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಬಂದು ಅಧಿಕೃತವಾಗಿ ದರ ಘೋಷಣೆ ಮಾಡಬೇಕು. ರೈತರು ಆ ಘೋಷಣೆಗೆ ಒಪ್ಪಿಗೆ ಸೂಚಿಸಿದ ನಂತರ ನಾಡಿದ್ದು ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬಹುದು. ಆದರೆ ನಾಳೆ ಯಾವುದೇ ಕಾರಣಕ್ಕೂ ಕಾರ್ಖಾನೆಗಳನ್ನು ಆರಂಭಿಸಲು ಅವಕಾಶ ನೀಡುವುದಿಲ್ಲ ಎಂದು ಚೂನಪ್ಪ ಪೂಜಾರಿ ಖಡಕ್ ಎಚ್ಚರಿಕೆ ನೀಡಿದರು. ರೈತರ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಕಾರ್ಖಾನೆಗಳ ಆರಂಭಕ್ಕಿಂತ ಮೊದಲು ರೈತರ ಹಿತಾಸಕ್ತಿಗೆ ಆದ್ಯತೆ ನೀಡಬೇಕು. ರೈತರಿಗೆ ಸಿಗಬೇಕಾದ ನ್ಯಾಯಯುತ ದರ ಮತ್ತು ಹಣ ಪಾವತಿಯ ಕುರಿತು ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಬ್ಬು ಬೆಳೆಗಾರರಿಗೆ ದರ ನಿಗದಿ ಮಾಡುವುದರ ಜೊತೆಗೆ ರಾಜ್ಯ ಸರ್ಕಾರದಿಂದ ಪ್ರತಿ ಟನ್ ಕಬ್ಬಿಗೆ ₹1,000 ಪ್ರೋತ್ಸಾಹಧನ ನೀಡಬೇಕು ಎಂಬ ಬೇಡಿಕೆಯನ್ನೂ ರೈತ ಮುಖಂಡರು ಮುಂದಿಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆಯೇ ಈ ಕುರಿತು ಅಧಿಕೃತ ಘೋಷಣೆ ಮಾಡಬೇಕು ಎಂದು ಚೂನಪ್ಪ ಪೂಜಾರಿ ಆಗ್ರಹಿಸಿದರು. ಕಬ್ಬು ಬೆಳೆಗಾರರ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಪ್ರೋತ್ಸಾಹಧನ ನೀಡುವ ನಿರ್ಧಾರ ಕೈಗೊಳ್ಳಬೇಕು. ಕೇವಲ ಕಬ್ಬಿನ ದರ ನಿಗದಿಯಿಂದ ರೈತರ ಎಲ್ಲಾ ಸಮಸ್ಯೆಗಳು ಬಗೆಹರಿಯುವುದಿಲ್ಲ. ರೈತರಿಗೆ ಹೆಚ್ಚುವರಿ ಆರ್ಥಿಕ ನೆರವು ದೊರೆಯುವ ಅಗತ್ಯವಿದೆ ಎಂದು ಹೇಳಿದರು.

ಒಂದು ವೇಳೆ ರಾಜ್ಯ ಸರ್ಕಾರ ಪ್ರತಿ ಟನ್‌ಗೆ ₹1,000 ಪ್ರೋತ್ಸಾಹಧನ ನೀಡುವ ಕುರಿತು ಘೋಷಣೆ ಮಾಡದಿದ್ದರೆ ಮುಂಬರುವ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ರೈತರ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂಬ ಸಂದೇಶವನ್ನೂ ಸರ್ಕಾರಕ್ಕೆ ರವಾನಿಸಿದರು.

ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸರ್ಕಾರವೂ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಚೂನಪ್ಪ ಪೂಜಾರಿ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರ ಕೂಡ ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಣೆ ಮಾಡಬೇಕು. ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ದೊರೆಯುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜವಾಬ್ದಾರಿ ವಹಿಸಬೇಕು ಎಂದರು.

ಪ್ರತಿ ಟನ್ ಕಬ್ಬಿಗೆ ₹3,600 ದರ ನಿಗದಿಯ ವಿಚಾರಕ್ಕೆ ರೈತರು ಪ್ರಾಥಮಿಕ ಒಪ್ಪಿಗೆ ಸೂಚಿಸಿದ್ದರೂ, ಹೆಚ್ಚುವರಿ ₹50, ಎರಡು ಕಂತುಗಳಲ್ಲಿ ಹಣ ಪಾವತಿ, ಕಾರ್ಖಾನೆ ಮಾಲೀಕರು ಮತ್ತು ಜಿಲ್ಲಾಡಳಿತದ ನಡುವೆ ಅಧಿಕೃತ ಒಪ್ಪಂದ ಹಾಗೂ ಪ್ರತಿ ಟನ್‌ಗೆ ₹1,000 ಪ್ರೋತ್ಸಾಹಧನ ಸೇರಿದಂತೆ ಹಲವು ಬೇಡಿಕೆಗಳು ಇನ್ನೂ ಬಾಕಿ ಉಳಿದಿವೆ. ಹೀಗಾಗಿ ನಾಳೆ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯಲಿರುವ ರೈತರ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಸಚಿವರು ಮತ್ತು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಧಿಕೃತ ಘೋಷಣೆ ಮಾಡುತ್ತಾರೆಯೇ? ರೈತರ ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸುತ್ತದೆಯೇ? ಎಂಬುದರ ಮೇಲೆ ಮುಂದಿನ ಬೆಳವಣಿಗೆಗಳು ನಿರ್ಧಾರವಾಗಲಿವೆ. ಕಬ್ಬು ಬೆಳೆಗಾರರ ಹೋರಾಟಕ್ಕೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದನ್ನು ರೈತರು ಕಾದು ನೋಡುತ್ತಿದ್ದಾರೆ.

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES