ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಶಾಕ್! ಜಾಮೀನು ರದ್ದು, 15 ದಿನಗಳಲ್ಲಿ ಶರಣಾಗಲು ಆದೇಶ!
ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದೆ. ಅವರ ಜಾಮೀನು ರದ್ದುಗೊಳಿಸಿರುವ ವಿಭಾಗೀಯ ಪೀಠ, 15 ದಿನಗಳೊಳಗೆ ಕೆಳ ನ್ಯಾಯಾಲಯದ ಮುಂದೆ ಶರಣಾಗುವಂತೆ ಆದೇಶಿಸಿದೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನ ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಬೆಳವಣಿಗೆಯಿಂದ ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೂ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.
Vinay Kulkarni Bail Cancellation: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್‌ನಿಂದ ದೊಡ್ಡ ಹಿನ್ನಡೆಯಾಗಿದೆ. ಅವರ ಜಾಮೀನಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನ ಸುಪ್ರೀಂಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದೆ. ಅಲ್ಲದೆ 15 ದಿನಗಳೊಳಗೆ ಕೆಳ ನ್ಯಾಯಾಲಯದ ಮುಂದೆ ಶರಣಾಗುವಂತೆ ಆದೇಶಿಸಿದೆ. ಈ ಬೆಳವಣಿಗೆಯಿಂದ ವಿನಯ್ ಕುಲಕರ್ಣಿ ಮುಂದಿನ ಕಾನೂನು ಹೋರಾಟದ ಜೊತೆಗೆ ಶಾಸಕ ಸ್ಥಾನಕ್ಕೂ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂಕೋರ್ಟ್, ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಜಾಮೀನು ನೀಡಲು ಅರ್ಹತೆಯಿಲ್ಲವೆಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶದಿಂದ ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಇದೀಗ ಸುಪ್ರೀಂಕೋರ್ಟ್ ಆ ಆದೇಶವನ್ನ ರದ್ದುಗೊಳಿಸಿರುವುದರಿಂದ ಅವರಿಗೆ ಮತ್ತೆ ಜೈಲು ಸೇರುವ ಪರಿಸ್ಥಿತಿ ಎದುರಾಗಿದೆ.
ಹೈಕೋರ್ಟ್ ನೀಡಿದ್ದ ರಿಲೀಫ್‌ಗೆ ಸುಪ್ರೀಂ ತಡೆ!
ವಿನಯ್ ಕುಲಕರ್ಣಿಗೆ ಈ ಹಿಂದೆ ಜೈಲು ಶಿಕ್ಷೆಯ ಹಿನ್ನೆಲೆಯಲ್ಲಿ ಶಾಸಕ ಸ್ಥಾನ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿತ್ತು. ಆದರೆ ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮೊದಲೇ ಜಾಮೀನು ದೊರೆತಿದ್ದರಿಂದ ಅವರು ಜೈಲಿನಿಂದ ಹೊರಗಿದ್ದರು. ನಂತರ ಹೈಕೋರ್ಟ್ ನೀಡಿದ್ದ ಆದೇಶದಿಂದ ಜಾಮೀನಿಗೆ ಮರುಜೀವ ಸಿಕ್ಕಿತ್ತು. ಆದರೆ ಇದೀಗ ಸುಪ್ರೀಂಕೋರ್ಟ್ ಹೈಕೋರ್ಟ್‌ನ ಆದೇಶವನ್ನ ರದ್ದುಗೊಳಿಸಿದೆ. ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ 15 ದಿನಗಳೊಳಗೆ ಕೆಳ ನ್ಯಾಯಾಲಯದ ಮುಂದೆ ಹಾಜರಾಗಿ ಶರಣಾಗಬೇಕಿದೆ. ಈ ಆದೇಶದಿಂದ ವಿನಯ್ ಕುಲಕರ್ಣಿ ಕಾನೂನು ಹೋರಾಟದಲ್ಲಿ ಮತ್ತೊಂದು ಮಹತ್ವದ ತಿರುವು ಸಿಕ್ಕಂತಾಗಿದೆ.
ಶಾಸಕ ಸ್ಥಾನಕ್ಕೆ ಮತ್ತೆ ಎದುರಾಗುತ್ತಾ ಕುತ್ತು?
ಸುಪ್ರೀಂಕೋರ್ಟ್‌ನ ಈ ಆದೇಶದ ಬೆನ್ನಲ್ಲೇ ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೂ ಸಂಬಂಧಿಸಿದ ಚರ್ಚೆ ಶುರುವಾಗಿದೆ. ಈ ಹಿಂದೆ ಜೈಲು ಶಿಕ್ಷೆಯ ಹಿನ್ನೆಲೆಯಲ್ಲಿ ಅವರ ಶಾಸಕ ಸ್ಥಾನಕ್ಕೆ ಕುತ್ತು ಬಂದಿತ್ತು. ಬಳಿಕ ಜಾಮೀನು ದೊರೆತಿದ್ದರಿಂದ ಪರಿಸ್ಥಿತಿ ಬದಲಾಗಿತ್ತು. ಇದೀಗ ಮತ್ತೆ ಜಾಮೀನು ರದ್ದಾಗಿರುವುದರಿಂದ ಶಾಸಕ ಸ್ಥಾನ ಮುಂದುವರಿಯುವ ವಿಚಾರದಲ್ಲಿ ಪ್ರಶ್ನೆಗಳು ಎದುರಾಗಿವೆ. ಆರು ತಿಂಗಳ ಜೈಲು ಶಿಕ್ಷೆ ಅನುಭವಿಸಿದರೆ ಶಾಸಕ ಸ್ಥಾನ ರದ್ದಾಗುವ ಸಾಧ್ಯತೆಯಿದೆ, ಈ ಹಿಂದೆ ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮೊದಲೇ ಜಾಮೀನು ಪಡೆದುಕೊಂಡಿದ್ದ ವಿನಯ್ ಕುಲಕರ್ಣಿಗೆ ಈಗ ಸುಪ್ರೀಂಕೋರ್ಟ್ ಆದೇಶದಿಂದ ಹೊಸ ಸಂಕಷ್ಟ ಎದುರಾಗಿದೆ.
ಸುಪ್ರೀಂ ಆದೇಶದ ಬಳಿಕ ಮೌನಕ್ಕೆ ಜಾರಿದ ವಿನಯ್
ಸುಪ್ರೀಂಕೋರ್ಟ್‌ನ ತೀರ್ಪು ಪ್ರಕಟವಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಮೌನಕ್ಕೆ ಜಾರಿದ್ದಾರೆ ಎನ್ನಲಾಗಿದೆ. ತಮ್ಮ ಡೈರಿಯಿಂದ ಮನೆಗೆ ಆಗಮಿಸಿದ ಅವರು, ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಧಾರವಾಡದ ಹೊರವಲಯದಲ್ಲಿರುವ ಡೈರಿಯಲ್ಲಿಯೇ ಸದ್ಯ ಅವರು ಇದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಸುಪ್ರೀಂಕೋರ್ಟ್ ಆದೇಶದ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಭೇಟಿಗೆ ಆಗಮಿಸಿದ್ದಾರೆ. ಧಾರವಾಡದ ಬಾರಾಕೊಟ್ರಿ ಹಾಗೂ ಶಿವಗಿರಿಯಲ್ಲಿರುವ ಅವರ ನಿವಾಸದ ಎದುರು ಕಾರ್ಯಕರ್ತರು ಜಮಾಯಿಸಿರುವ ದೃಶ್ಯಗಳು ಕಂಡುಬಂದಿವೆ. ಜಾಮೀನು ರದ್ದಾದ ಬೆಳವಣಿಗೆಯ ಹಿನ್ನೆಲೆಯಲ್ಲಿ ಬೆಂಬಲಿಗರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
15 ದಿನಗಳಲ್ಲಿ ಶರಣಾಗಬೇಕು: ಮುಂದೇನು?
ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದ ಪ್ರಕಾರ ವಿನಯ್ ಕುಲಕರ್ಣಿ ಅವರು 15 ದಿನಗಳೊಳಗೆ ಕೆಳ ನ್ಯಾಯಾಲಯದ ಮುಂದೆ ಶರಣಾಗಬೇಕಿದೆ. ಹೈಕೋರ್ಟ್ ನೀಡಿದ್ದ ಜಾಮೀನಿನ ರಿಲೀಫ್ ರದ್ದಾಗಿರುವುದರಿಂದ ಅವರ ಮುಂದಿನ ಕಾನೂನು ಪ್ರಕ್ರಿಯೆ ಮಹತ್ವ ಪಡೆದುಕೊಂಡಿದೆ. ಒಟ್ನಲ್ಲಿ ಜಾಮೀನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್ ಆದೇಶ ವಿನಯ್ ಕುಲಕರ್ಣಿಗೆ ದೊಡ್ಡ ಹಿನ್ನಡೆಯಾಗಿದೆ. 15 ದಿನಗಳೊಳಗೆ ಶರಣಾಗುವಂತೆ ಸೂಚಿಸಿರುವುದರಿಂದ ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ. ಇದೇ ವೇಳೆ ಶಾಸಕ ಸ್ಥಾನಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಮೇಲೂ ಗಮನ ನೆಟ್ಟಿದೆ.