• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಸೌಜನ್ಯಾ ಕೇಸ್‌ಗೆ ಬಿಗ್ ಟ್ವಿಸ್ಟ್: ಹೊಸ ತಂಡ ರಚಿಸಿ ಮರುತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಸೌಜನ್ಯಾ ಕೇಸ್‌ಗೆ ಬಿಗ್ ಟ್ವಿಸ್ಟ್: ಹೊಸ ತಂಡ ರಚಿಸಿ ಮರುತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಸೌಜನ್ಯಾ ಪ್ರಕರಣ ದೇಶಾದ್ಯಂತ ಸೃಷ್ಟಿಸಿದ್ದ ಆಕ್ರೋಶ ಸಣ್ಣದಲ್ಲ. ಸಿಐಡಿ ಹಾಗೂ ಸಿಬಿಐ ತನಿಖೆಯ ನಂತರವೂ ನೈಜ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಸೌಜನ್ಯಾ ತಾಯಿ ಕುಸುಮಾವತಿ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅರ್ಜಿಯ ತೀವ್ರತೆ ಹಾಗೂ ತನಿಖಾ ಲೋಪಗಳನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್, ಪ್ರಕರಣಕ್ಕೆ ಹೊಸ ತನಿಖಾ ತಂಡದಿಂದ ಮರುಜೀವ ನೀಡಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..

Reported ByKrishna NKEdited ByKrishna NK
Published: Sep 21, 2026, 12:26 PM IST|Updated: Sep 21, 2026, 12:29 PM IST
joinshare
ಸೌಜನ್ಯಾ ಕೇಸ್‌ಗೆ ಬಿಗ್ ಟ್ವಿಸ್ಟ್: ಹೊಸ ತಂಡ ರಚಿಸಿ ಮರುತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ
Image Credit: Sowjanya Case updates

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ನವದೆಹಲಿ/ಮಂಗಳೂರು : ದೇಶಾದ್ಯಂತ ತೀವ್ರ ಸದ್ದು ಮಾಡಿದ್ದ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪ ನಡೆದಿದ್ದ ಬಹುಚರ್ಚಿತ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಆದೇಶ ನೀಡಿದೆ. ಪ್ರಕರಣದ ಕುರಿತು ಸ್ವತಂತ್ರ ಹಾಗೂ ಹೊಸ ತಂಡದಿಂದ ಮರುತನಿಖೆ ನಡೆಸುವಂತೆ ಅತ್ಯುನ್ನತ ನ್ಯಾಯಾಲಯ ಆದೇಶಿಸಿದ್ದು, ಮೂರು ತಿಂಗಳ ಒಳಗೆ ಸಂಪೂರ್ಣ ವರದಿ ಸಲ್ಲಿಸಲು ಸೂಚನೆ ನೀಡಿದೆ. ಈ ತೀರ್ಪಿನಿಂದಾಗಿ ದಶಕಕ್ಕೂ ಹೆಚ್ಚು ಕಾಲದಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಸೌಜನ್ಯಾ ಕುಟುಂಬಕ್ಕೆ ಮತ್ತು ಸಾರ್ವಜನಿಕರಿಗೆ ಮತ್ತೆ ನ್ಯಾಯದ ಭರವಸೆ ಮೂಡಿದೆ.

ಹಳೆಯ ಅಧಿಕಾರಿಗಳಿಗೆ ಇಲ್ಲ ಜಾಗ
ಸೌಜನ್ಯಾ ಅವರ ತಾಯಿ ಕುಸುಮಾವತಿ ಅವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಈ ನಿರ್ಣಾಯಕ ಆದೇಶವನ್ನು ಹೊರಡಿಸಿದೆ. ಈ ಹಿಂದೆ ಈ ಪ್ರಕರಣದ ತನಿಖೆ ನಡೆಸಿದ ಯಾವುದೇ ತನಿಖಾಧಿಕಾರಿಗಳನ್ನು ಹೊಸ ತಂಡದಲ್ಲಿ ಸೇರಿಸಿಕೊಳ್ಳಬಾರದು ಎಂದು ಕೋರ್ಟ್ ಖಡಕ್ ನಿರ್ದೇಶನ ನೀಡಿದೆ. ಸಂಪೂರ್ಣವಾಗಿ ಹೊಸ ಮತ್ತು ನಿಷ್ಪಕ್ಷಪಾತ ತಂಡವು ಪ್ರಕರಣದ ಪ್ರತಿಯೊಂದು ಮಜಲುಗಳನ್ನು ಮರುಪರಿಶೀಲಿಸಿ, ಸ್ವತಂತ್ರವಾಗಿ ತನಿಖೆ ನಡೆಸಿ ಕೋರ್ಟ್‌ಗೆ ವರದಿ ಸಲ್ಲಿಸಬೇಕೆಂದು ಸ್ಪಷ್ಟಪಡಿಸಿದೆ.

ತನಿಖಾ ಲೋಪ ಹಾಗೂ ಸಾಕ್ಷ್ಯ ನಾಶದ ಆರೋಪ
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಈ ಹಿಂದಿನ ತನಿಖೆಯಲ್ಲಿ ನಡೆದ ವೈಫಲ್ಯಗಳು ಹಾಗೂ ಲೋಪದೋಷಗಳನ್ನು ಪೀಠದ ಗಮನಕ್ಕೆ ತಂದರು. ಈ ಹಿಂದೆ ಬಂಧಿತನಾಗಿದ್ದ ಸಂತೋಷ್ ರಾವ್ ಸಂಪೂರ್ಣ ನಿರಪರಾಧಿಯಾಗಿದ್ದು, ನೈಜ ಅಪರಾಧಿಗಳು ಬೇರೆಯೇ ಇದ್ದಾರೆ ಎಂದು ಪ್ರತಿಪಾದಿಸಲಾಯಿತು. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 140 ರಿಂದ 150 ಪುಟಗಳ ಪ್ರಮುಖ ಸಾಕ್ಷ್ಯಗಳನ್ನು ಹಾಗೂ ದಾಖಲೆಗಳನ್ನು ಮುಚ್ಚಿಡಲಾಗಿದೆ ಅಥವಾ ತೆಗೆದುಹಾಕಲಾಗಿದೆ ಎಂಬ ಗಂಭೀರ ಆರೋಪವೂ ವಿಚಾರಣೆ ವೇಳೆ ಪ್ರಸ್ತಾಪವಾಯಿತು. ಈ ವಾದಗಳನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ಹಳೆಯ ತನಿಖೆಯ ಶೈಲಿಯನ್ನು ಪ್ರಶ್ನಿಸಿ ಮರುತನಿಖೆಗೆ ಅಸ್ತು ಎಂದಿದೆ.

ಪ್ರಕರಣದ ಹಿನ್ನೆಲೆ
2012ರ ಅಕ್ಟೋಬರ್‌ನಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ಸೌಜನ್ಯಾಳನ್ನು ಧರ್ಮಸ್ಥಳದ ಸಮೀಪ ಅಪಹರಿಸಿ, ಅತ್ಯಾಚಾರ ಎಸಗಿ ಕ್ರೂರವಾಗಿ ಕೊಲೆ ಮಾಡಲಾಗಿತ್ತು. ಈ ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣದ ತನಿಖೆಯನ್ನು ಮೊದಲು ಸ್ಥಳೀಯ ಪೊಲೀಸರು, ನಂತರ ಸಿಐಡಿ (CID) ಹಾಗೂ ಸಾರ್ವಜನಿಕರ ತೀವ್ರ ಒತ್ತಡದ ಮೇರೆಗೆ ಸಿಬಿಐ (CBI) ತನಿಖೆಗೆ ವಹಿಸಲಾಗಿತ್ತು. ಸಿಬಿಐ ಸಂತೋಷ್ ರಾವ್ ಎಂಬಾತನನ್ನು ಮುಖ್ಯ ಆರೋಪಿಯನ್ನಾಗಿ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿತ್ತು. ಆದರೆ, ಸೂಕ್ತ ಹಾಗೂ ಬಲವಾದ ಸಾಕ್ಷ್ಯಾಧಾರಗಳಿಲ್ಲದ ಕಾರಣ ಬೆಂಗಳೂರಿನ ಪ್ರತ್ಯೇಕ ಸಿಬಿಐ ವಿಶೇಷ ನ್ಯಾಯಾಲಯವು ಸಂತೋಷ್ ರಾವ್‌ನನ್ನು ಖುಲಾಸೆಗೊಳಿಸಿ ತೀರ್ಪು ನೀಡಿತ್ತು.

ಕಾನೂನು ಹೋರಾಟದ ಹಾದಿ
ಸಿಬಿಐ ತನಿಖೆಯಲ್ಲಿ ಅನೇಕ ಲೋಪಗಳಿವೆ ಮತ್ತು ನೈಜ ಅಪರಾಧಿಗಳನ್ನು ರಕ್ಷಿಸಲು ಯತ್ನಿಸಲಾಗಿದೆ ಎಂದು ಆರೋಪಿಸಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಮರುತನಿಖೆಯ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ತಾಯಿ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಈಗ ನೀಡಿರುವ ಈ ಆದೇಶವು ನೈಜ ತಪ್ಪಿತಸ್ಥರಿಗೆ ಶಿಕ್ಷೆಯಾಗುವ ನಿರೀಕ್ಷೆಯನ್ನು ಹೆಚ್ಚಿಸಿದೆ.

Add Zee News as a Preferred Source
TAGS:
Kannada News