• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹಂಪಿ ಕನ್ನಡ ವಿವಿಯಲ್ಲಿ ಸಂಬಳವಿಲ್ಲದೆ ನೌಕರರ ಕಣ್ಣೀರು: 16 ತಿಂಗಳ ವೇತನ ಪಾವತಿಗೆ ಆಗ್ರಹಿಸಿ ಬೀದಿಗಿಳಿದ ಸಿಬ್ಬಂದಿ!

ಹಂಪಿ ಕನ್ನಡ ವಿವಿಯಲ್ಲಿ ಸಂಬಳವಿಲ್ಲದೆ ನೌಕರರ ಕಣ್ಣೀರು: 16 ತಿಂಗಳ ವೇತನ ಪಾವತಿಗೆ ಆಗ್ರಹಿಸಿ ಬೀದಿಗಿಳಿದ ಸಿಬ್ಬಂದಿ!

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಕಳೆದ 10 ರಿಂದ 20 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಾ ಬಂದಿರುವ ನಿಷ್ಠಾವಂತ ಸಿಬ್ಬಂದಿಗೆ ಇಂದು ಜೀವಿಸುವುದೇ ದೊಡ್ಡ ಶಿಕ್ಷೆಯಾಗಿ ಪರಿಣಮಿಸಿದೆ.

Reported ByManjunath NaragundEdited ByManjunath Naragund
Published: Sep 22, 2026, 10:22 AM IST|Updated: Sep 22, 2026, 10:27 AM IST
joinshare
ಹಂಪಿ ಕನ್ನಡ ವಿವಿಯಲ್ಲಿ ಸಂಬಳವಿಲ್ಲದೆ ನೌಕರರ ಕಣ್ಣೀರು: 16 ತಿಂಗಳ ವೇತನ ಪಾವತಿಗೆ ಆಗ್ರಹಿಸಿ ಬೀದಿಗಿಳಿದ ಸಿಬ್ಬಂದಿ!
Image Credit: Strike

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ವಿಜಯನಗರ ಜಿಲ್ಲೆಯ ವಿಶ್ವವಿಖ್ಯಾತ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ತೀವ್ರ ಸ್ವರೂಪದ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಕನ್ನಡ ಭಾಷೆ, ಸಂಸ್ಕೃತಿ ಮತ್ತು ನಾಡಿನ ಹಿರಿಮೆಯನ್ನು ಎತ್ತಿಹಿಡಿಯುವ ಪ್ರಮುಖ ಉನ್ನತ ಶಿಕ್ಷಣ ಸಂಸ್ಥೆಯಾಗಿರುವ ಕನ್ನಡ ವಿವಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಹಾಗೂ ತಾತ್ಕಾಲಿಕ/ಹೊರಗುತ್ತಿಗೆ ಸಿಬ್ಬಂದಿ ಕಳೆದ ಹಲವು ತಿಂಗಳುಗಳಿಂದ ವೇತನ ಸಿಗದೆ ಕಂಗಾಲಾಗಿದ್ದಾರೆ. ಬಾಕಿ ಇರುವ ಸಂಬಳವನ್ನು ತಕ್ಷಣವೇ ಪಾವತಿಸುವಂತೆ ಆಗ್ರಹಿಸಿ ಸಿಬ್ಬಂದಿಗಳು ಮಂಗಳವಾರ ವಿಶ್ವವಿದ್ಯಾಲಯದ ಆವರಣದಲ್ಲಿ ಒಂದು ದಿನದ ಭಾರಿ ಸಾಂಕೇತಿಕ ಮುಷ್ಕರ ನಡೆಸಿ ಆಡಳಿತ ಮಂಡಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

16 ತಿಂಗಳ ವೇತನ ಬಾಕಿ: ಬದುಕು ಪೂರ್ತಿ ಅಯೋಮಯ!

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಕಳೆದ 10 ರಿಂದ 20 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಾ ಬಂದಿರುವ ನಿಷ್ಠಾವಂತ ಸಿಬ್ಬಂದಿಗೆ ಇಂದು ಜೀವಿಸುವುದೇ ದೊಡ್ಡ ಶಿಕ್ಷೆಯಾಗಿ ಪರಿಣಮಿಸಿದೆ. ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ಬರೋಬ್ಬರಿ 16 ತಿಂಗಳುಗಳಿಂದ ಒಂದೇ ಒಂದು ರೂಪಾಯಿ ವೇತನ ಪಾವತಿಯಾಗಿಲ್ಲ! ಇನ್ನು ತಾತ್ಕಾಲಿಕ ಆಡಳಿತ ವಿಭಾಗದ ಸಿಬ್ಬಂದಿ ಹಾಗೂ ಹೊರಗುತ್ತಿಗೆ ನೌಕರರಿಗೆ ಕಳೆದ 12 ತಿಂಗಳುಗಳಿಂದ (ಒಂದು ವರ್ಷ) ಸಂಬಳವೇ ನೀಡಿಲ್ಲ.

ದಿನವಿಡೀ ವಿವಿಯ ಏಳಿಗೆಗಾಗಿ ಬೆವರು ಹರಿಸುವ ನೌಕರರು, ಸಂಬಳವಿಲ್ಲದೆ ತೀವ್ರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿ ನಲುಗಿಹೋಗಿದ್ದಾರೆ. "ತಿಂಗಳ ಕೊನೆಯಲ್ಲಿ ಕೈಗೆ ಬರುವ ಅಲ್ಪಸ್ವಲ್ಪ ಸಂಬಳ ನೆಚ್ಚಿಕೊಂಡು ಜೀವನ ನಡೆಸುವ ನಮಗೆ, ವರ್ಷಕ್ಕೂ ಹೆಚ್ಚು ಕಾಲ ವೇತನ ನೀಡದಿದ್ದರೆ ಕುಟುಂಬ ನಡೆಸುವುದು ಹೇಗೆ?" ಎಂದು ಪ್ರತಿಭಟನಾನಿರತ ಸಿಬ್ಬಂದಿಗಳು ತೀವ್ರ ಕಣ್ಣೀರು ಹಾಕುತ್ತಿದ್ದಾರೆ.

ಮನೆ ಬಾಡಿಗೆ, ಮಕ್ಕಳ ಫೀಸಿಗೂ ದುಡ್ಡಿಲ್ಲದೆ ನೌಕರರ ನರಕಯಾತನೆ:

ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ದಿನನಿತ್ಯದ ಬದುಕು ದುಸ್ತರವಾಗಿದೆ. ಮನೆ ಬಾಡಿಗೆ ಕಟ್ಟಲಾಗದೆ ಮಾಲೀಕರಿಂದ ಕಿರಿಕಿರಿ ಅನುಭವಿಸುತ್ತಿದ್ದಾರೆ. ಇನ್ನು ಕುಟುಂಬದವರ ತುರ್ತು ವೈದ್ಯಕೀಯ ವೆಚ್ಚಗಳು, ದಿನಸಿ ಪದಾರ್ಥಗಳ ಖರೀದಿ ಹಾಗೂ ಶಾಲಾ-ಕಾಲೇಜುಗಳಿಗೆ ಮಕ್ಕಳ ಶಿಕ್ಷಣ ಶುಲ್ಕ (Fees) ಪಾವತಿಸಲಾಗದೆ ಪೋಷಕರು ದಿಕ್ಕು ತೋಚದಂತಾಗಿದ್ದಾರೆ. ಸಾಲ ಸೋಲ ಮಾಡಿ ಜೀವನ ನೂಕುತ್ತಿದ್ದ ಸಿಬ್ಬಂದಿಗೆ ಈಗ ಸಾಲವೂ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ.

ತಮಗಾಗುತ್ತಿರುವ ಅನ್ಯಾಯದ ವಿರುದ್ಧ ವಿವಿಯ ಕುಲಪತಿಗಳು, ಕುಲಸಚಿವರು ಹಾಗೂ ರಾಜ್ಯ ಉನ್ನತ ಶಿಕ್ಷಣ ಸಚಿವರಿಗೆ ನೌಕರರ ಸಂಘಟನೆಯಿಂದ ಹತ್ತಾರು ಬಾರಿ ಮನವಿ ಪತ್ರ ಸಲ್ಲಿಸಲಾಗಿದೆ. ಆದರೆ, ಜನಪ್ರತಿನಿಧಿಗಳಾಗಲಿ ಅಥವಾ ವಿವಿ ಆಡಳಿತ ಮಂಡಳಿಯಾಗಲಿ ಈವರೆಗೂ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಗಂಭೀರ ಪ್ರಯತ್ನ ಮಾಡಿಲ್ಲ. ಭರವಸೆಗಳನ್ನೇ ನೀಡುತ್ತಾ ಕಾಲಹರಣ ಮಾಡುತ್ತಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ, ಕೊನೆಗೆ ಬೇಸತ್ತ ಸಿಬ್ಬಂದಿ ಬೀದಿಗಿಳಿದು ಹೋರಾಟ ಮಾಡುವ ಹಾದಿ ಹಿಡಿದಿದ್ದಾರೆ.

ಇಂದು ನಡೆದ ಸಾಂಕೇತಿಕ ಧರಣಿಯ ಮೂಲಕ ಕನ್ನಡ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಹಾಗೂ ಸರ್ಕಾರಕ್ಕೆ ಸಿಬ್ಬಂದಿಗಳು ಅಂತಿಮ ಎಚ್ಚರಿಕೆ ನೀಡಿದ್ದಾರೆ. ಬರುವ ಎರಡು ವಾರಗಳ ಒಳಗಾಗಿ (14 ದಿನಗಳು) ಅತಿಥಿ ಉಪನ್ಯಾಸಕರು ಹಾಗೂ ಹೊರಗುತ್ತಿಗೆ ನೌಕರರ ಎಲ್ಲಾ ಬಾಕಿ ವೇತನವನ್ನು ಬಿಡುಗಡೆ ಮಾಡಬೇಕು. ಒಂದು ವೇಳೆ ನಿಗದಿತ ಗಡುವಿನೊಳಗೆ ಬೇಡಿಕೆ ಈಡೇರದಿದ್ದಲ್ಲಿ, ವಿಶ್ವವಿದ್ಯಾಲಯದ ಎಲ್ಲಾ ಕಾರ್ಯಕಲಾಪಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಹೂಡುವುದಾಗಿ ನೌಕರರ ಒಕ್ಕೂಟ ಖಡಕ್ ಎಚ್ಚರಿಕೆ ನೀಡಿದೆ.

ನಾಡಿನ ಏಕೈಕ ಭಾಷಾ ವಿಶ್ವವಿದ್ಯಾಲಯದಲ್ಲಿ ಇಂತಹ ದಯನೀಯ ಸ್ಥಿತಿ ನಿರ್ಮಾಣವಾಗಿರುವುದು ತೀವ್ರ ವಿಪರ್ಯಾಸದ ಸಂಗತಿಯಾಗಿದ್ದು, ಸರ್ಕಾರ ತಕ್ಷಣವೇ ಹಣಕಾಸಿನ ಅನುದಾನ ಬಿಡುಗಡೆ ಮಾಡಿ ನೌಕರರ ಹಿತ ಕಾಯಬೇಕಿದೆ.
 

Add Zee News as a Preferred Source
TAGS:
Kannada News