• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪ

ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬುದನ್ನು ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಎರಡು ತಿಂಗಳ ಹಿಂದೆಯೇ ಹಣಕಾಸು ಇಲಾಖೆ ಎಚ್ಚರಿಕೆ ನೀಡಿದ್ದರೂ, ಸತ್ಯ ಮುಚ್ಚಿಡಲಾಗಿತ್ತು

Reported ByManjunath NaragundEdited ByManjunath Naragund
Published: Oct 29, 2026, 01:13 PM IST|Updated: Oct 29, 2026, 01:18 PM IST
joinshare
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪ
Image Credit: Chalavadi Narayanaswamy

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ತೂಕ ಇಳಿಕೆಗೆ ಆತುರ ಬೇಡ.. ಕೇವಲ ಈ ನಿಯಮಗಳನ್ನು ರೂಢಿಸಿಕೊಂಡರೆ ಸಾಕು.. ಡೊಳ್ಳು ಹೊಟ್ಟೆಯೂ ಫ್ಲಾಟ್‌ ಆಗುತ್ತೆ!

ತೂಕ ಇಳಿಕೆಗೆ ಆತುರ ಬೇಡ.. ಕೇವಲ ಈ ನಿಯಮಗಳನ್ನು ರೂಢಿಸಿಕೊಂಡರೆ ಸಾಕು.. ಡೊಳ್ಳು ಹೊಟ್ಟೆಯೂ ಫ್ಲಾಟ್‌ ಆಗುತ್ತೆ!

2

ಚೆನ್ನೈ ಜೂನಿಯರ್ ಅಥ್ಲೆಟಿಕ್ಸ್: U-20 ರಿಲೇ ಓಟದಲ್ಲಿ ಸ್ವರ್ಣ, 200 ಮೀಟರ್‌ನಲ್ಲಿ ಬೆಳ್ಳಿ ಗೆದ್ದ ಕನ್ನಡಿಗ ಆಯುಷ್

3

ಮಂಡ್ಯದ ಮೈಶುಗರ್ ಕಾರ್ಖಾನೆ ಸಕ್ಕರೆ ಗೋದಾಮಿಗೆ ಮುತ್ತಿಗೆ ಹಾಕಿ ರೈತರ ಆಕ್ರೋಶ

4

ಪರಿಷತ್ ಚುನಾವಣಾ ಫಲಿತಾಂಶ 2028ರ ವಿಧಾನಸಭಾ ಚುನಾವಣೆಗೆ ಸ್ಪಷ್ಟ ಶುಭ ಸೂಚನೆ: ಜಗದೀಶ್ ಶೆಟ್ಟರ್

5

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಶಿವಮೊಗ್ಗ: ಶಿವಮೊಗ್ಗದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ ಸ್ಥಿತಿಯಲ್ಲಿದ್ದು, ಆಡಳಿತ ನಡೆಸಲು ಪರದಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಶೇ. 82ರಷ್ಟು ಬೆಳೆ ನಾಶವಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಕೇವಲ 2,500 ರೂ. ಪರಿಹಾರ ಘೋಷಿಸಿರುವುದು ಹಾಸ್ಯಾಸ್ಪದ. ನಾವು 25,000 ರೂ. ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದರೂ ಸರ್ಕಾರ ಕೇವಲ ಅಲ್ಪ ಮೊತ್ತ ನೀಡಿ ರೈತರಿಗೆ ವಂಚಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬುದನ್ನು ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಎರಡು ತಿಂಗಳ ಹಿಂದೆಯೇ ಹಣಕಾಸು ಇಲಾಖೆ ಎಚ್ಚರಿಕೆ ನೀಡಿದ್ದರೂ, ಸತ್ಯ ಮುಚ್ಚಿಡಲಾಗಿತ್ತು. ಇಂದು ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಯಾವುದೇ ಹಣ ಸಕಾಲಕ್ಕೆ ಬಿಡುಗಡೆಯಾಗುತ್ತಿಲ್ಲ ಎಂದು ಟೀಕಿಸಿದರು. ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಗೊಂದಲ ಸೃಷ್ಟಿಸಿದ್ದು, ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸುವಲ್ಲಿ ವಿಫಲವಾಗಿ ದಲಿತರಿಗೆ ಅನ್ಯಾಯವೆಸಗಿದೆ ಎಂದು ದೂರಿದರು.

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಮುಂದಾಗಿದೆ ಎಂದು ಹರಿಹಾಯ್ದರು, ಚುನಾವಣೆಯಲ್ಲಿ ಸೋತಾಗಲೆಲ್ಲಾ ಇವಿಎಂ ಅಥವಾ ಬ್ಯಾಲೆಟ್ ಪೇಪರ್ ಮೇಲೆ ಗೂಬೆ ಕೂರಿಸುವುದು ಆ ಪಕ್ಷದ ಚಾಳಿಯಾಗಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಹಮಾಕಿ ಹಾಕುವ ಕಾಂಗ್ರೆಸ್ ನಾಯಕರು, ದೇಶದ ಆರ್ಥಿಕ ಪ್ರಗತಿಯನ್ನು ಸಹಿಸದೆ ವಿದೇಶಿ ನಾಯಕರ ಜತೆ ಸೇರಿ ದೇಶ ವಿರೋಧಿ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದಾರೆ ಎಂದು ಟೀಕಿಸಿದರು. ಜೆನ್-ಝೀ ಯುವಕರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದ್ದು, ಸರ್ಕಾರ ಬದಲಾವಣೆ ಬೀದಿ ಹೋರಾಟದಿಂದ ಆಗಬಾರದು, ಬದಲಾಗಿ ಜನರ ತೀರ್ಪಿನಿಂದ ಬರಬೇಕು ಎಂದರು. ಎಸ್.ಐ.ಆರ್. (SIR) ಎನ್ನುವುದು ಬೆಳೆಯಲ್ಲಿನ ಕಳೆ ತೆಗೆದಂತೆ ಹೊರತು ಬೆಳೆ ತೆಗೆಯುವುದಲ್ಲ ಎಂದು ಸ್ಪಷ್ಟಪಡಿಸಿದರು.

Add Zee News as a Preferred Source
TAGS:
Kannada News