• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸರ್ಕಾರದ ನಿರ್ಲಕ್ಷ್ಯ! ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಆಮ್ ಆದ್ಮಿ ಪಕ್ಷದ ಆಗ್ರಹ

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸರ್ಕಾರದ ನಿರ್ಲಕ್ಷ್ಯ! ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಆಮ್ ಆದ್ಮಿ ಪಕ್ಷದ ಆಗ್ರಹ

Asha workers: ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸರ್ಕಾರದ ನಿರ್ಲಕ್ಷ್ಯ ಖಂಡನೀಯ; ತಕ್ಷಣ ಬೇಡಿಕೆ ಈಡೇರಿಸಲು ರಾಜ್ಯಪಾಲರು ಮಧ್ಯಪ್ರವೇಶಿಸಲಿ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಶಶಿಧರ್ ಆರಾಧ್ಯ ಒತ್ತಾಯಿಸಿದರು

Written ByRamya. R. Gowda
Published: Nov 23, 2026, 18:39 IST|Updated: Nov 23, 2026, 18:50 IST
joinshare
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸರ್ಕಾರದ ನಿರ್ಲಕ್ಷ್ಯ! ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಆಮ್ ಆದ್ಮಿ ಪಕ್ಷದ ಆಗ್ರಹ

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸರ್ಕಾರದ ನಿರ್ಲಕ್ಷ್ಯ! ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಆಮ್ ಆದ್ಮಿ ಪಕ್ಷದ ಆಗ್ರಹ

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸರ್ಕಾರದ ನಿರ್ಲಕ್ಷ್ಯ! ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಆಮ್ ಆದ್ಮಿ ಪಕ್ಷದ ಆಗ್ರಹ

2

ಬಲವಂತವಾಗಿ ಕಾಡು ಆನೆ ಸ್ಥಳಾಂತರ ವಿರೋಧಿಸಿ ರಾಜೀನಾಮೆ ಪತ್ರ ಸಲ್ಲಿಸಿದ ಶಾಸಕಿ ನಯನ ಮೋಟಮ್ಮ

3

RCB ಪರ ಮೊದಲ ಸೆಂಚುರಿ ಸಿಡಿಸಿದ್ದು ಯಾರು ಗೊತ್ತಾ? ಈ ಕನ್ನಡಿಗನೇ ಆ ದಾಖಲೆ ವೀರ!

4

ದರ್ಶನ್ ಯಾರು ಅಂತಲೆ ಗೊತ್ತಿಲ್ಲ ಎಂದು ಕೋರ್ಟ್‌ನಲ್ಲೇ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ..

5

ಡಾಲರ್ ಎದುರು ಭರ್ಜರಿ ಚೇತರಿಕೆ ಕಂಡ ರೂಪಾಯಿ; 8 ತಿಂಗಳಲ್ಲಿ ಗರಿಷ್ಠ ಮಟ್ಟಕ್ಕೆ ಏರಿದ ಭಾರತೀಯ ಕರೆನ್ಸಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: Asha workers: ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸರ್ಕಾರದ ನಿರ್ಲಕ್ಷ್ಯ ಖಂಡನೀಯ; ತಕ್ಷಣ ಬೇಡಿಕೆ ಈಡೇರಿಸಲು ರಾಜ್ಯಪಾಲರು ಮಧ್ಯಪ್ರವೇಶಿಸಲಿ ಎಂದು  ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಶಶಿಧರ್ ಆರಾಧ್ಯ ಒತ್ತಾಯಿಸಿದರು.ಕರ್ನಾಟಕದ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿರುವ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದ ಬಗ್ಗೆ ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ, ಆಮ್ ಆದ್ಮಿ ಪಕ್ಷದ ವತಿಯಿಂದ ಇಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷರಾದ ಸೀತಾರಾಮ್ ಗುಂಡಪ್ಪ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಹಾಗೂ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ರಾಜ್ಯಪಾಲರನ್ನು ಒತ್ತಾಯಿಸಲಾಯಿತು.

ಮನವಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಶಶಿಧರ್ ಆರಾಧ್ಯ, "ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಹಗಲಿರುಳು ಜನರ ಆರೋಗ್ಯ ಸೇವೆಗಾಗಿ ದುಡಿಯುವ ಆಶಾ ಕಾರ್ಯಕರ್ತೆಯರು ಇಂದು ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯುವ ಪರಿಸ್ಥಿತಿ ನಿರ್ಮಾಣವಾಗಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಸಭೆಗಳ ನೆಪದಲ್ಲಿ ಕಾಲಹರಣ ಮಾಡುತ್ತಿದ್ದಾರೆಯೇ ಹೊರತು, ಸಮಸ್ಯೆ ಪರಿಹಾರಕ್ಕೆ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಇದು ಮಹಿಳಾ ಕಾರ್ಮಿಕರ ಶ್ರಮಕ್ಕೆ ಮಾಡುತ್ತಿರುವ ಅವಮಾನ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾವಿರಾರು ಮಹಿಳಾ ಕಾರ್ಯಕರ್ತೆಯರು ಚಳಿ, ಮಳೆ ಎನ್ನದೆ ಅಹೋರಾತ್ರಿ ಹೋರಾಟ ನಡೆಸುತ್ತಿದ್ದಾರೆ. ಒಂಟಿ ತಾಯಂದಿರು ತಮ್ಮ ಪುಟ್ಟ ಮಕ್ಕಳನ್ನೂ ಪ್ರತಿಭಟನಾ ಸ್ಥಳಕ್ಕೆ ಕರೆತಂದು ಹೋರಾಟ ನಡೆಸುತ್ತಿರುವುದು ಅತ್ಯಂತ ನೋವಿನ ಸಂಗತಿ. ಪ್ರತಿಭಟನಾ ಸ್ಥಳದಲ್ಲಿ ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಮತ್ತು ವೈದ್ಯಕೀಯ ಸೌಲಭ್ಯಗಳಂತಹ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸದಿರುವುದು ಸರ್ಕಾರದ ಅಮಾನವೀಯತೆಯನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದರು.

"ಜನರ ಆರೋಗ್ಯ ರಕ್ಷಣೆಗಾಗಿ ದುಡಿಯುವ ಮಹಿಳೆಯರ ಆರೋಗ್ಯ ಮತ್ತು ಬದುಕಿನ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲವೇ? ಪ್ರತಿಭಟನೆಯ ಸಂದರ್ಭದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಸರ್ಕಾರ ಮೌನ ವಹಿಸಿರುವುದು ಖಂಡನೀಯ. ಇದು ಕೇವಲ ಕಾರ್ಮಿಕರ ಸಮಸ್ಯೆಯಲ್ಲ, ಮಹಿಳೆಯರ ಗೌರವ, ಜೀವನೋಪಾಯ ಮತ್ತು ಮಾನವ ಹಕ್ಕುಗಳಿಗೆ ಸಂಬಂಧಿಸಿದ ಗಂಭೀರ ವಿಚಾರವಾಗಿದೆ" ಎಂದು ಶಶಿಧರ್ ಆರಾಧ್ಯ ಹೇಳಿದರು.

ರಾಜ್ಯಪಾಲರು ಈ ವಿಚಾರದಲ್ಲಿ ತಕ್ಷಣ ಮಧ್ಯಪ್ರವೇಶಿಸಿ, ಆಶಾ ಕಾರ್ಯಕರ್ತೆಯರ ಎಲ್ಲಾ ನ್ಯಾಯಯುತ ಬೇಡಿಕೆಗಳ ಬಗ್ಗೆ ಸರ್ಕಾರದಿಂದ ಲಿಖಿತ ಭರವಸೆ ಕೊಡಿಸಬೇಕು. ಪರಿಹಾರಕ್ಕೆ ನಿರ್ದಿಷ್ಟ ಕಾಲಮಿತಿ ನಿಗದಿಪಡಿಸುವಂತೆ ನಿರ್ದೇಶನ ನೀಡಬೇಕು. ಅಲ್ಲಿಯವರೆಗೆ ಪ್ರತಿಭಟನಾಕಾರರಿಗೆ ಅಗತ್ಯ ಮೂಲಭೂತ ಸೌಕರ್ಯ ಹಾಗೂ ವೈದ್ಯಕೀಯ ನೆರವು ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಅವರು ಆಗ್ರಹಿಸಿದರು.

ಆಶಾ ಕಾರ್ಯಕರ್ತೆಯರ ನ್ಯಾಯಯುತ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಸಂಪೂರ್ಣ ಬೆಂಬಲ ನೀಡಲಿದ್ದು, ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕಾಗುತ್ತದೆ ಎಂದು ಶಶಿಧರ್ ಆರಾಧ್ಯ ಎಚ್ಚರಿಸಿದರು.

ರಾಜ್ಯಪಾಲರ ಬೇಟೆಯಲ್ಲಿ ಪಕ್ಷದ ನಿಯೋಗದೊಂದಿಗೆ ಪಕ್ಷದ ನಾಯಕರುಗಳಾದ ಜಗದೀಶ್ ಚಂದ್ರ , ಚಂದ್ರಶೇಖರ್ ಸ್ಥಾವರ ಮಠ, ಮುನೇಶ್ ಕುಮಾರ್, ಪುಷ್ಪ ಕೇಶವ್, ಯಾಪಿನ್ ಅಹ್ಮದ್, ರಂಗನಾಥ್ ಸೇರಿದಂತೆ ಇನ್ನಿತರ ನಾಯಕರುಗಳು ಭಾಗವಹಿಸಿದ್ದರು.

 

Add Zee News as a Preferred Source
TAGS:
Kannada News