• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಸಾರಿಗೆ ನಿಗಮಗಳಿಗೆ ₹8,000 ಕೋಟಿ ನಷ್ಟದ ಹೊರೆ: ಟಿಕೆಟ್ ದರ ಏರಿಕೆ ಅನಿವಾರ್ಯ ಎಂದ ಸರ್ಕಾರ!

ಸಾರಿಗೆ ನಿಗಮಗಳಿಗೆ ₹8,000 ಕೋಟಿ ನಷ್ಟದ ಹೊರೆ: ಟಿಕೆಟ್ ದರ ಏರಿಕೆ ಅನಿವಾರ್ಯ ಎಂದ ಸರ್ಕಾರ!

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು (KSRTC, BMTC, NWKRTC, KKRTC) ಪ್ರಸ್ತುತ ಬರೋಬ್ಬರಿ ₹8,000 ಕೋಟಿಗೂ ಅಧಿಕ ನಷ್ಟದ ಸುಳಿಯಲ್ಲಿ ಸಿಲುಕಿವೆ. ಕಳೆದ ಕೆಲವು ಸಮಯದಿಂದ ಡೀಸೆಲ್ ದರವು ನಾಲ್ಕು ಬಾರಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿರುವುದು ನಿಗಮಗಳ ದೈನಂದಿನ ನಿರ್ವಹಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಿದೆ.

Reported ByManjunath NaragundEdited ByManjunath Naragund
Published: Sep 28, 2026, 08:55 AM IST|Updated: Sep 28, 2026, 09:01 AM IST
joinshare
ಸಾರಿಗೆ ನಿಗಮಗಳಿಗೆ ₹8,000 ಕೋಟಿ ನಷ್ಟದ ಹೊರೆ: ಟಿಕೆಟ್ ದರ ಏರಿಕೆ ಅನಿವಾರ್ಯ ಎಂದ ಸರ್ಕಾರ!
Image Credit: Representation only

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಹಾಗೂ ದೈನಂದಿನ ಬಸ್ ಪ್ರಯಾಣಿಕರಿಗೆ ಶೀಘ್ರದಲ್ಲೇ ಮತ್ತೊಂದು ದರ ಏರಿಕೆಯ ಶಾಕ್ ಎದುರಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ರಾಜ್ಯ ಸಾರಿಗೆ ಸಂಸ್ಥೆಗಳು ಅನುಭವಿಸುತ್ತಿರುವ ಭಾರಿ ಆರ್ಥಿಕ ನಷ್ಟ ಹಾಗೂ ಇಂಧನ ದರ ಏರಿಕೆಯ ನೆಪವೊಡ್ಡಿ, ಬಸ್ ಪ್ರಯಾಣ ದರವನ್ನು ಹೆಚ್ಚಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಕುರಿತು ಶಾಸನಸಭೆಯಲ್ಲೂ ಚರ್ಚೆಗಳು ನಡೆದಿರುವುದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ.

₹8,000 ಕೋಟಿ ನಷ್ಟದ ಸುಳಿಯಲ್ಲಿ ಸಾರಿಗೆ ನಿಗಮಗಳು:

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು (KSRTC, BMTC, NWKRTC, KKRTC) ಪ್ರಸ್ತುತ ಬರೋಬ್ಬರಿ ₹8,000 ಕೋಟಿಗೂ ಅಧಿಕ ನಷ್ಟದ ಸುಳಿಯಲ್ಲಿ ಸಿಲುಕಿವೆ. ಕಳೆದ ಕೆಲವು ಸಮಯದಿಂದ ಡೀಸೆಲ್ ದರವು ನಾಲ್ಕು ಬಾರಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿರುವುದು ನಿಗಮಗಳ ದೈನಂದಿನ ನಿರ್ವಹಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಿದೆ. ಈ ಭಾರಿ ನಷ್ಟದಿಂದ ಹೊರಬರಬೇಕಾದರೆ ಬಸ್ ಟಿಕೆಟ್ ದರ ಏರಿಕೆ ಮಾಡುವುದು ಒಂದೇ ಮಾರ್ಗ ಹಾಗೂ ಇದು ಅನಿವಾರ್ಯ ಎಂದು ಸರ್ಕಾರಿ ಮೂಲಗಳು ಸುಳಿವು ನೀಡಿವೆ.

ಮತ್ತೊಂದೆಡೆ, ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವರ್ಷಗಳಿಂದ ಹೋರಾಟ ನಡೆಸುತ್ತಲೇ ಇದ್ದಾರೆ. ಆದರೆ ಸರ್ಕಾರದ ಬೊಕ್ಕಸದಲ್ಲಿ ಸೂಕ್ತ ಅನುದಾನವಿಲ್ಲದ ಕಾರಣ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ. ವೇತನ ಪರಿಷ್ಕರಣೆ ಸೇರಿದಂತೆ ಸಾರಿಗೆ ಸಿಬ್ಬಂದಿಯ ನ್ಯಾಯಯುತ ಬೇಡಿಕೆಗಳು ಈ ಆರ್ಥಿಕ ಸಂಕಷ್ಟದಿಂದಾಗಿ ನಡುನೀರಿನಲ್ಲಿ ಸಿಲುಕಿಹಾಕಿಕೊಂಡಿವೆ.

ಸರ್ಕಾರದ ಖಜಾನೆಯಲ್ಲಿ ಹಣವಿಲ್ಲದ ಕಾರಣ, ಸಾರಿಗೆ ಸಂಸ್ಥೆಗಳ ನಷ್ಟವನ್ನು ತೂಗಿಸಲು ಕೊನೆಗೆ ಸಾಮಾನ್ಯ ಸಾರ್ವಜನಿಕರ ಮೇಲೆಯೇ ದರ ಏರಿಕೆಯ ಹೊರೆ ಹಾಕಲು ಸರ್ಕಾರ ಮುಂದಾಗಿದೆ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಬಸ್ ಪ್ರಯಾಣ ದರವೂ ಹೆಚ್ಚಾದರೆ ದೈನಂದಿನ ಜೀವನ ನಡೆಸುವುದು ಮತ್ತಷ್ಟು ಕಷ್ಟಕರವಾಗಲಿದೆ.

ಪ್ರಸ್ತುತ ಸರ್ಕಾರದ ಮಟ್ಟದಲ್ಲಿ ಬಸ್ ಟಿಕೆಟ್ ದರ ಪರಿಷ್ಕರಣೆಯ ಕುರಿತು ಚರ್ಚೆಗಳು ಚುರುಕುಗೊಂಡಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆಯಿದೆ.
 

Add Zee News as a Preferred Source
TAGS:
Kannada News