• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮದ್ದೂರಿನಲ್ಲಿ ಆಟೋ ಸ್ಟ್ಯಾಂಡ್ ರಾದ್ಧಾಂತ: ದೆಹಲಿಯಿಂದಲೇ ಅಧಿಕಾರಿಗಳಿಗೆ 'ಕ್ಲಾಸ್' ತಗೆದುಕೊಂಡ ಹೆಚ್.ಡಿ. ಕುಮಾರಸ್ವಾಮಿ!

ಮದ್ದೂರಿನಲ್ಲಿ ಆಟೋ ಸ್ಟ್ಯಾಂಡ್ ರಾದ್ಧಾಂತ: ದೆಹಲಿಯಿಂದಲೇ ಅಧಿಕಾರಿಗಳಿಗೆ 'ಕ್ಲಾಸ್' ತಗೆದುಕೊಂಡ ಹೆಚ್.ಡಿ. ಕುಮಾರಸ್ವಾಮಿ!

ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ನಡೆದ ಮಂಡ್ಯ ಜಿಲ್ಲಾ ದಿಶಾ (DISHA) ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ನಗರಸಭೆ ಆಯುಕ್ತೆ ರಾಧಿಕಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.

Reported ByManjunath NaragundEdited ByManjunath Naragund
Published: Sep 24, 2026, 07:53 PM IST|Updated: Sep 24, 2026, 08:05 PM IST
joinshare
ಮದ್ದೂರಿನಲ್ಲಿ ಆಟೋ ಸ್ಟ್ಯಾಂಡ್ ರಾದ್ಧಾಂತ: ದೆಹಲಿಯಿಂದಲೇ ಅಧಿಕಾರಿಗಳಿಗೆ 'ಕ್ಲಾಸ್' ತಗೆದುಕೊಂಡ ಹೆಚ್.ಡಿ. ಕುಮಾರಸ್ವಾಮಿ!
Image Credit: Maddur

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಆಟೋ ನಿಲ್ದಾಣ ನಿರ್ಮಾಣದ ವಿಚಾರ ಇದೀಗ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸ್ಥಳೀಯ ಶಾಸಕರ ನಡುವಿನ ರಾಜಕೀಯ ಸಮರಕ್ಕೆ ವೇದಿಕೆಯಾಗಿದೆ. ಆಟೋ ಚಾಲಕರ ಬಹುದಿನಗಳ ಬೇಡಿಕೆಯಾಗಿದ್ದ ಆಟೋ ಸ್ಟ್ಯಾಂಡ್ ನಿರ್ಮಾಣಕ್ಕೆ ಅಧಿಕಾರಿಗಳು ಅಡ್ಡಿಪಡಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ದೆಹಲಿಯಿಂದಲೇ ಮಂಡ್ಯ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಪರ್ಯಾಯ ಸ್ಥಳದ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಹೆಚ್‌ಡಿಕೆ, ಅಧಿಕಾರಿಗಳ ವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಮದ್ದೂರಿನಲ್ಲಿ ಸುಸಜ್ಜಿತ ಆಟೋ ನಿಲ್ದಾಣ ನಿರ್ಮಿಸಬೇಕು ಎಂಬುದು ಸ್ಥಳೀಯ ಆಟೋ ಚಾಲಕರ ಕಳಕಳಿಯ ಬೇಡಿಕೆಯಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ಈ ಕಾಮಗಾರಿಗೆ ಅನುಮತಿಯನ್ನೂ ನೀಡಿದ್ದರು. ಆದರೆ, ನಿರ್ಮಾಣ ಕಾರ್ಯ ಆರಂಭವಾಗುವ ಹಂತದಲ್ಲೇ ಮದ್ದೂರು ನಗರಸಭೆ ಆಯುಕ್ತೆ ರಾಧಿಕಾ ಅವರು ಕಾಮಗಾರಿಗೆ ತಡೆ ಒಡ್ಡಿದ್ದಾರೆ. ಅಷ್ಟೇ ಅಲ್ಲದೆ, ಸ್ಥಳದಲ್ಲಿದ್ದ ನಿರ್ಮಾಣ ಸಾಮಗ್ರಿಗಳನ್ನು ನಗರಸಭೆ ಸಿಬ್ಬಂದಿ ವಶಕ್ಕೆ ಪಡೆದಿದ್ದರು. ಇದು ಆಟೋ ಚಾಲಕರು ಹಾಗೂ ಜೆಡಿಎಸ್ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

 

ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ನಡೆದ ಮಂಡ್ಯ ಜಿಲ್ಲಾ ದಿಶಾ (DISHA) ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ನಗರಸಭೆ ಆಯುಕ್ತೆ ರಾಧಿಕಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಜನಪ್ರತಿನಿಧಿಗಳ ಹಾಗೂ ಸಚಿವರ ರಾಜಕೀಯದಾಟದಲ್ಲಿ ಅಧಿಕಾರಿಗಳು ತಟಸ್ಥವಾಗಿರಬೇಕು. ಆಡಳಿತ ಪಕ್ಷದ ಶಾಸಕರ ಒತ್ತಡಕ್ಕೆ ಮಣಿದು ಸಾರ್ವಜನಿಕ ಹಿತಾಸಕ್ತಿಯ ಕೆಲಸಗಳನ್ನು ತಡೆಯುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದರು.


ದೆಹಲಿಯಿಂದಲೇ ವಿಡಿಯೋ ಕಾನ್ಫರೆನ್ಸ್: ಪ್ರಸ್ತಾವನೆ ತಿರಸ್ಕೃತ!

 

ಪ್ರಕರಣ ತಣ್ಣಗಾಗದ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ದೆಹಲಿಯಿಂದಲೇ ಮಂಡ್ಯ ಜಿಲ್ಲಾಧಿಕಾರಿ, ಕೆಎಸ್‌ಆರ್‌ಟಿಸಿ ಡಿಸಿ ಹಾಗೂ ವಿವಿಧ ಇಲಾಖೆಯ ಉನ್ನತಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿಯವರು ಆಟೋ ಸ್ಟ್ಯಾಂಡ್‌ಗೆ ಪರ್ಯಾಯ ಜಾಗ ಗುರುತಿಸುವ ಪ್ರಸ್ತಾವನೆಯನ್ನು ಹೆಚ್‌ಡಿಕೆ ಮುಂದೆ ಇಟ್ಟರು. ಆದರೆ, ಹಾಲಿ ಜಾಗದಲ್ಲೇ ಆಟೋ ಸ್ಟ್ಯಾಂಡ್ ಆಗಬೇಕು ಎಂದು ಪಟ್ಟು ಹಿಡಿದಿರುವ ಚಾಲಕರ ಪರ ನಿಂತ ಕುಮಾರಸ್ವಾಮಿ, ಪರ್ಯಾಯ ಸ್ಥಳದ ಪ್ರಸ್ತಾವನೆಯನ್ನು ಸಾರಾಸಗಟಾಗಿ ನಿರಾಕರಿಸಿದರು.


ಸ್ಥಳೀಯ ಶಾಸಕರ ಬೆಂಬಲಿಗರು ಹಾಗೂ ಶಾಸಕರ ಒತ್ತಡ ಒಂದೆಡೆಯಾದರೆ, ಕೇಂದ್ರ ಸಚಿವರ ಖಡಕ್ ಸೂಚನೆ ಇನ್ನೊಂದೆಡೆ. ಹೀಗಾಗಿ ಮಂಡ್ಯ ಜಿಲ್ಲಾಡಳಿತ ಹಾಗೂ ನಗರಸಭೆ ಅಧಿಕಾರಿಗಳು ಕತ್ತರಿ ಸಿಕ್ಕಿಬಿದ್ದಂತಾಗಿದ್ದಾರೆ. ಆಟೋ ಚಾಲಕರು ಮಾತ್ರ ತಮಗೆ ನಿಗದಿತ ಸ್ಥಳದಲ್ಲೇ ಸುಸಜ್ಜಿತ ನಿಲ್ದಾಣ ಸಿಗಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸಚಿವರ ಈ ಖಡಕ್ ಸೂಚನೆಯ ನಂತರ ಅಧಿಕಾರಿಗಳು ಮುಂದೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಹಾಗೂ ಈ ರಾಜಕೀಯ ಜಟಾಪಟಿ ಎಲ್ಲಿಗೆ ಹೋಗಿ ತಲುಪಲಿದೆ ಎಂಬುದನ್ನು ಕಾದು ನೋಡಬೇಕಿದೆ.

 

Add Zee News as a Preferred Source
TAGS:
Kannada News