• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬಾಗಲಕೋಟೆಯಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ದುರ್ಮರಣ: ಆರು ಜನರಿಗೆ ತೀವ್ರ ಗಾಯ

ಬಾಗಲಕೋಟೆಯಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ದುರ್ಮರಣ: ಆರು ಜನರಿಗೆ ತೀವ್ರ ಗಾಯ

ಸಿಡಿಲು ಬಡಿದ ರಭಸಕ್ಕೆ ಕಾಟಾಪುರ ಗ್ರಾಮದ ಮುತ್ತಪ್ಪ ಕಂಡೇಕರ್ (70), ಜ್ಯೋತಿ ಕಳಕಪ್ಪ ಕಂಡೇಕರ್ (32), ಐಹೊಳೆ ಗ್ರಾಮದ ಜ್ಯೋತಿ ಶರಣಪ್ಪ ಕುರಿ (32) ಹಾಗೂ ರೇವಣ್ಣ ಸುಟ್ಟನ್ನವರ್ (35) ಸೇರಿದಂತೆ ಒಟ್ಟು ಆರು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

Reported ByManjunath NaragundEdited ByManjunath Naragund
Published: Sep 24, 2026, 08:34 PM IST|Updated: Sep 24, 2026, 08:42 PM IST
joinshare
ಬಾಗಲಕೋಟೆಯಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ದುರ್ಮರಣ: ಆರು ಜನರಿಗೆ ತೀವ್ರ ಗಾಯ
Image Credit: Bagalakote

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬಾಗಲಕೋಟೆ: ಜಿಲ್ಲೆಯಲ್ಲಿ ಮಳೆ ಹಾಗೂ ಭಾರಿ ಗಾಳಿಯೊಂದಿಗೆ ಸುರಿದ ದುರಂತದ ಮಳೆಗೆ ಇಬ್ಬರು ಪ್ರಾಣ ಕಳೆದುಕೊಂಡಿದ್ದರೆ, ಆರು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಇನ್ನೊಂದೆಡೆ, ಸುಂಟರಗಾಳಿಗೆ ಮರ ಬಿದ್ದು ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಬೈಕ್‌ನ ಹಿಂಬದಿ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಕಂಡಿದ್ದಾನೆ.

ಸಿಡಿಲಿನ ಆರ್ಭಟಕ್ಕೆ ಇಬ್ಬರು ದುರ್ಮರಣ: ಆರು ಜನರಿಗೆ ತೀವ್ರ ಗಾಯ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಐಹೊಳೆ ಗ್ರಾಮದಲ್ಲಿ ಭಾನುವಾರ ದಿಢೀರನೆ ಸುರಿದ ಮಳೆಯ ವೇಳೆ ಸಿಡಿಲು ಬಡಿದು ಕಾಟಾಪುರ ಗ್ರಾಮದ ಯುವಕ ಭರ್ಮಪ್ಪ ಮಲ್ಲಪ್ಪ ಕಂಡೆಕರ್ (24) ಹಾಗೂ ಐಹೊಳೆ ಗ್ರಾಮದ ವೃದ್ಧೆ ರಾಮವ್ವ ದ್ಯಾಮಪ್ಪ ಹೋಳಿಗೆ (68) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಿಡಿಲು ಬಡಿದ ರಭಸಕ್ಕೆ ಕಾಟಾಪುರ ಗ್ರಾಮದ ಮುತ್ತಪ್ಪ ಕಂಡೇಕರ್ (70), ಜ್ಯೋತಿ ಕಳಕಪ್ಪ ಕಂಡೇಕರ್ (32), ಐಹೊಳೆ ಗ್ರಾಮದ ಜ್ಯೋತಿ ಶರಣಪ್ಪ ಕುರಿ (32) ಹಾಗೂ ರೇವಣ್ಣ ಸುಟ್ಟನ್ನವರ್ (35) ಸೇರಿದಂತೆ ಒಟ್ಟು ಆರು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ಆರು ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ತಕ್ಷಣವೇ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಬಾಗಲಕೋಟೆ ಜಿಲ್ಲಾಧಿಕಾರಿ (ಡಿಸಿ) ಸಂಗಪ್ಪ ಅವರು ಸ್ವತಃ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಜೊತೆಗೆ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ಇನ್ನುಳಿದ ಗಾಯಾಳುಗಳಾದ ಕಾಟಾಪುರ ಗ್ರಾಮದ ನಾಗವ್ವ ಕಮಡೇಕರ್ ಹಾಗೂ ಸಾವಂತರವ್ವ ಕಮಡೇಕರ್ ಅವರಿಗೆ ಐಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನೊಂದೆಡೆ ಬಾಗಲಕೋಟೆ ನಗರದ ಕಿಲ್ಲಾಗಲ್ಲಿಯಲ್ಲಿ ಬಿರುಗಾಳಿಯ ಆರ್ಭಟಕ್ಕೆ ಬೃಹತ್ ಮರವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಪರಿಣಾಮ ವಿದ್ಯುತ್ ತಂತಿಗಳು ರಸ್ತೆಗೆ ಜಾರಿದ್ದವು. ಇದೇ ವೇಳೆ ಅದೇ ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಹಿಂಬದಿ ಸವಾರನಿಗೆ ವಿದ್ಯುತ್ ಸ್ಪರ್ಶಿಸಿ, ಆತ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾನೆ. ಮೃತನ ಹೆಸರು ಮತ್ತು ವಿವರಗಳನ್ನು ತಿಳಿದುಕೊಳ್ಳಲು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಅಕಾಲಿಕ ಮಳೆ ಮತ್ತು ಸಿಡಿಲಿನ ಭೀಕರತೆಗೆ ಇಡೀ ಬಾಗಲಕೋಟೆ ಕಂಗೆಟ್ಟಿದ್ದು, ಸಾರ್ವಜನಿಕರು ಮಳೆ-ಗಾಳಿಯ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರುವಂತೆ ಆಡಳಿತ ಮಂಡಳಿ ಸೂಚಿಸಿದೆ.

Add Zee News as a Preferred Source
TAGS:
Kannada News