• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮಾಜಿ ಸಿಎಂ ವೀರಪ್ಪ ಮೊಯಿಲಿ ರಚಿತ 'ಮಹಾಯಾನ' ಗದ್ಯ ಮಹಾಕಾವ್ಯ ಲೋಕಾರ್ಪಣೆ!

ಮಾಜಿ ಸಿಎಂ ವೀರಪ್ಪ ಮೊಯಿಲಿ ರಚಿತ 'ಮಹಾಯಾನ' ಗದ್ಯ ಮಹಾಕಾವ್ಯ ಲೋಕಾರ್ಪಣೆ!

ಮೈಸೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ 'ಮಹಾಯಾನ' ಗದ್ಯ ಮಹಾಕಾವ್ಯ ಲೋಕಾರ್ಪಣೆ ಸಮಾರಂಭವು ಸಾಹಿತ್ಯಿಕ ಗರಿಮೆಯ ಜೊತೆಗೆ ರಾಜ್ಯ ರಾಜಕೀಯದ ಬಿಸಿಬಿಸಿ ಚರ್ಚೆಗೂ ವೇದಿಕೆಯಾಯಿತು. ಈ ಕುರಿತ ಹೆಚ್ಚಿನ ವಿವರಗಳು ಇಲ್ಲಿವೆ..

Written ByKrishna NK
Published: Nov 11, 2026, 14:42 IST|Updated: Nov 11, 2026, 14:44 IST
joinshare
ಮಾಜಿ ಸಿಎಂ ವೀರಪ್ಪ ಮೊಯಿಲಿ ರಚಿತ 'ಮಹಾಯಾನ' ಗದ್ಯ ಮಹಾಕಾವ್ಯ ಲೋಕಾರ್ಪಣೆ!
Image Credit: Veerappa Moily

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮೈಸೂರು: ವೀರಪ್ಪ ಮೊಯಿಲಿ ಅವರ 'ಮಹಾಯಾನ' ಗದ್ಯ ಮಹಾಕಾವ್ಯ ಲೋಕಾರ್ಪಣೆ ಸಮಾರಂಭದಲ್ಲಿ ರಾಜಕೀಯ ಹಾಗೂ ಸಾಹಿತ್ಯಿಕ ವಲಯದ ಹಲವು ಪ್ರಮುಖ ಬೆಳವಣಿಗೆಗಳು ಕಂಡುಬಂದವು. ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ ನಡೆದ ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ದೀಪ ಬೆಳಗುವ ಮೂಲಕ ಗದ್ಯ ಮಹಾಕಾವ್ಯವನ್ನು ಲೋಕಾರ್ಪಣೆ ಮಾಡಲಾಯಿತು.

ಈ ಮಹತ್ವದ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ವೀರಪ್ಪ ಮೊಯಿಲಿ, ಸುತ್ತೂರು ಶ್ರೀಗಳು, ಸಚಿವ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ವೀರಪ್ಪ ಮೊಯಿಲಿ, ಇದು ನನ್ನ ನಾಲ್ಕನೇ ಗದ್ಯ ಕೃತಿಯಾಗಿದ್ದು, ಇಲ್ಲಿಗೆ ನಿಲ್ಲುವುದಿಲ್ಲ, ಮುಂದಿನ ದಿನಗಳಲ್ಲಿ 5, 6, 7 ಅಥವಾ 10ನೇ ಕೃತಿಗಳವರೆಗೂ ಸಾಗಬಹುದು ಎಂದರು. ಸತ್ಯದ ಹುಡುಕಾಟ ಮತ್ತು ಸಂಸ್ಕೃತಿ ವಿಚಾರವಾಗಿ ಬರೆಯುವ ತುಡಿತ ನನ್ನಲ್ಲಿದೆ. ವಿಶ್ವದ ಐಕ್ಯತೆಗೆ ಇದು ಅತ್ಯಾವಶ್ಯಕವಾಗಿದ್ದು, ಹೃದಯ ವಿಶಾಲವಾಗಿದ್ದರೆ ಮಾತ್ರ ಜಗತ್ತು ಸುಂದರವಾಗಿರಲು ಸಾಧ್ಯ ಎಂದರು. ಪ್ರೀತಿಯ ಬಾಂಧವ್ಯದ ಬೆಸುಗೆ ಕಡಿಮೆಯಾಗುತ್ತಿದ್ದು, ಅದನ್ನು ನೀರೆರೆದು ಪೋಷಿಸುವ ಕೆಲಸವಾಗಬೇಕು ಎಂದ ಅವರು, ಡಿ.ಕೆ. ಶಿವಕುಮಾರ್ ಅವರು ತಮ್ಮ ಕಾವ್ಯವನ್ನು ಓದಿಕೊಂಡು ಬಂದಿರುವುದನ್ನು ಅವರ ಮಾತಿನ ದಾಟಿಯಲ್ಲಿ ಅರಿತುಕೊಂಡಿರುವುದಾಗಿ ತಿಳಿಸಿದರು. ಅಲ್ಲದೆ, ಸಿದ್ದರಾಮಯ್ಯ ಅವರು ಸದಾ ತಮ್ಮ ಕೆಲಸಕ್ಕೆ ಬೆಂಬಲವಾಗಿ ನಿಂತಿರುವುದನ್ನು ಸ್ಮರಿಸಿದರು.

ಇನ್ನು ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಕಾರ್ಯಕರ್ತರಿಗೆ ದೀಪಾವಳಿ ಗಿಫ್ಟ್ ನೀಡುವುದಾಗಿ ಘೋಷಿಸಿದರು. ಇಂದು ಸುಮಾರು 500 ಜನ ಕೈ ಕಾರ್ಯಕರ್ತರಿಗೆ ವಿವಿಧ ಅಧಿಕಾರ ಹಂಚಿಕೆ ಮಾಡಲಾಗುತ್ತಿದ್ದು, ನಿಗಮ ಮಂಡಳಿಗಳ ನಿರ್ದೇಶಕರು ಹಾಗೂ ಸದಸ್ಯರ ಪಟ್ಟಿ ಸಿದ್ಧವಾಗಿದೆ. ಸಂಜೆ ವೇಳೆಗೆ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸ್ಪಷ್ಟಪಡಿಸಿದರು. ಒಟ್ಟು ಮೂರು ಹಂತಗಳಲ್ಲಿ ಅಧಿಕಾರ ಹಂಚಿಕೆ ಮಾಡಲಾಗುತ್ತಿದ್ದು, ಮೊದಲ ಹಂತದಲ್ಲಿ ಸದಸ್ಯರು ಹಾಗೂ ನಿರ್ದೇಶಕರ ನೇಮಕ ನಡೆಯಲಿದೆ. ಮುಂದಿನ ಹಂತಗಳಲ್ಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕವಾಗಲಿದ್ದು, ಕೆಲವು ಶಾಸಕರಿಗೂ ಸೂಕ್ತ ಸ್ಥಾನಮಾನ ಕಲ್ಪಿಸಲಾಗುವುದು ಎಂದರು.

ಇದೇ ವೇಳೆ, ಕಾಂಗ್ರೆಸ್ ಕಾರ್ಯಕರ್ತರಿಗೆ 'ನನ್ನ ಮಕ್ಕಳು' ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದರು. "ಹೌದು ರೀ, ನಾವು ಅವರೇ ಮಕ್ಕಳೇ. ಅವರು ಮೇಲಿಂದ ಬಂದ ದೇವೇಂದ್ರ ತಾನೇ?" ಎಂದು ವ್ಯಂಗ್ಯವಾಡಿದರು. ಬಿಜೆಪಿಯಲ್ಲಿ ಕೆಲವರು ತುಂಡು ತುಂಡು ಕತ್ತರಿಸುತ್ತೇವೆ ಎಂದು ಮಾತನಾಡುತ್ತಿದ್ದು, ಬಿಜೆಪಿಯವರು ನಮ್ಮ ಪಕ್ಷದ ಬಗ್ಗೆ ಏನೇ ಮಾತನಾಡಲಿ, ಎಲ್ಲವೂ ನನಗೆ ಗೊತ್ತಿದೆ ಎಂದು ಕೆಂಡಾಮಂಡಲರಾದರು.

ದೇಶದಲ್ಲಿ ನಿರಂತರವಾಗಿ ಕೇಳಿಬರುತ್ತಿರುವ ಬೆಲೆ ಏರಿಕೆ ವಿರುದ್ಧದ ಬಿಜೆಪಿ ಹೋರಾಟದ ಕುರಿತು ಮಾತನಾಡಿದ ಅವರು, ಬಿಜೆಪಿ ನಾಯಕರು ಮೊದಲು ಪೆಟ್ರೋಲ್‌ನಲ್ಲಿ ಎಥನಾಲ್ ಬೆರೆಸಿರುವ ಬಗ್ಗೆ ಉತ್ತರಿಸಬೇಕು ಎಂದು ಆಗ್ರಹಿಸಿದರು. ಎಥನಾಲ್ ಬಳಕೆಯಿಂದ ಸಾಮಾನ್ಯ ಜನರ ಹಾಗೂ ನಮ್ಮ ವಾಹನಗಳು ಸೇರಿದಂತೆ ಸಾಕಷ್ಟು ವಾಹನಗಳು ಡ್ಯಾಮೇಜ್ ಆಗುತ್ತಿವೆ. ಈ ಹಾನಿಗೆ ಹೊಣೆ ಯಾರು? ಕೇಂದ್ರ ಸರ್ಕಾರದ ನಿರ್ಧಾರದಿಂದ ಜನರಿಗೆ ಕಳಪೆ ಹಾಗೂ ಕಲಬೆರಿಕೆ ಪೆಟ್ರೋಲ್ ಸಿಗುತ್ತಿದ್ದು, ಈ ಬಗ್ಗೆ ಬಿಜೆಪಿ ಮಾತನಾಡಬೇಕು ಎಂದು ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಒಟ್ಟಾರೆಯಾಗಿ, ಮೈಸೂರಿನಲ್ಲಿ ನಡೆದ ವೀರಪ್ಪ ಮೊಯಿಲಿ ಅವರ ಕೃತಿ ಲೋಕಾರ್ಪಣೆ ಸಮಾರಂಭವು ಸಾಹಿತ್ಯಿಕ ಗರಿಮೆ ಮತ್ತು ಸೃಜನಶೀಲತೆಯ ಮಹತ್ವವನ್ನು ಸಾರುವುದರ ಜೊತೆಗೆ, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸುವಲ್ಲಿ ಪ್ರಮುಖವಾಯಿತು ಅಂದ್ರೆ ತಪ್ಪಾಗಲ್ಲ..

Add Zee News as a Preferred Source
TAGS:
Karnataka Politics