ಸಿದ್ದು ಸ್ಟಿಂಗ್ ಕೇಸ್‌ಗೆ ಸ್ಫೋಟಕ ತಿರುವು: ಮುಸುಕುಧಾರಿ ಮಹಿಳೆ ಪತ್ತೆ, ಸಿದ್ದರಾಮಯ್ಯಗೆ ಕ್ಲೀನ್ ಚಿಟ್!
ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ವಿಡಿಯೋದಲ್ಲಿದ್ದ ಕೇರಳ ಮೂಲದ ಮುಸುಕುಧಾರಿ ಮಹಿಳೆಯನ್ನು ಪತ್ತೆಹಚ್ಚಿ ವಿಚಾರಣೆ ನಡೆಸಲಾಗಿದೆ.
ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ವಿಡಿಯೋದಲ್ಲಿದ್ದ ಮುಸುಕುಧಾರಿ ಮಹಿಳೆಯನ್ನು ಪತ್ತೆಹಚ್ಚಿರುವ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದು, ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕಿದೆ.ಹಾಗಾದ್ರೆ ಸಿದ್ದು ಸ್ಟಿಂಗ್ ಕೇಸಲ್ಲಿ ಏನೆಲ್ಲಾ ಆಯ್ತು ಅನ್ನೋದನ್ನ ಹೇಳ್ತಿವಿ.
ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ವಿಡಿಯೋದಲ್ಲಿದ್ದ ಕೇರಳ ಮೂಲದ ಮುಸುಕುಧಾರಿ ಮಹಿಳೆಯನ್ನು ಪತ್ತೆಹಚ್ಚಿ ವಿಚಾರಣೆ ನಡೆಸಲಾಗಿದೆ. ವಿಚಾರಣೆ ವೇಳೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಾನು ಎಂದಿಗೂ ಭೇಟಿಯಾಗಿಲ್ಲ, ಅವರಿಂದ ಯಾವುದೇ ತೊಂದರೆಯಾಗಿಲ್ಲ ಎಂದು ಮಹಿಳೆ ಹೇಳಿಕೆ ನೀಡಿದ್ದಾಳೆ.ಅಲ್ಲದೆ, ಕೆಲವರು ಒತ್ತಡ ಹೇರಿ 2023ರಲ್ಲಿ ಸುಳ್ಳು ಹೇಳಿಕೆ ನೀಡುವಂತೆ ಮಾಡಿದ್ದರು ಎಂದು ತಿಳಿಸಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಮಹಿಳೆಯ ಹೇಳಿಕೆಯಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.ಸ್ಟಿಂಗ್ ಆಪರೇಷನ್ ಪ್ರಕರಣದ ಬೆಳವಣಿಗೆ ಇದೀಗ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಪ್ರಕರಣದ ಕುರಿತು ಮಾಹಿತಿ ನೀಡಲಾಗಿದೆ ಎನ್ನಲಾಗಿದೆ.ಸಚಿವ ಯತೀಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಪ್ರಕರಣದ ಹಿನ್ನೆಲೆ ವಿವರಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.ಇದೇ ವೇಳೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮಟ್ಟದಲ್ಲೂ ತನಿಖೆಯ ಪ್ರಗತಿ ಕುರಿತು ಚರ್ಚೆಗಳು ನಡೆದಿವೆ. ನವೆಂಬರ್ 1ರಂದು ಸಿದ್ದರಾಮಯ್ಯ ದೆಹಲಿಗೆ ತೆರಳುವ ಸಾಧ್ಯತೆಯಿದ್ದು, ನವೆಂಬರ್ 2ರಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಸಮಯ ಕೋರಿದ್ದಾರೆ.
ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.ಈಗಾಗಲೇ ಕಾಂಗ್ರೆಸ್ ಮುಖಂಡೆ ಕೃಪಾ ಅಳ್ವಾ ಹಾಗೂ ವಿಡಿಯೋದಲ್ಲಿದ್ದ ಮುಸುಕುಧಾರಿ ಮಹಿಳೆಯ ಹೇಳಿಕೆಗಳನ್ನು ಸಿಸಿಬಿ ಪೊಲೀಸರು ದಾಖಲಿಸಿಕೊಂಡಿದ್ದಾರೆ ಎಂಬ ಮಾಹಿತಿ ಇದೆ.ಮುಂದಿನ ದಿನಗಳಲ್ಲಿ ತನಿಖೆಯ ಪ್ರಮುಖ ಅಂಶಗಳು ಬಹಿರಂಗವಾಗುವ ನಿರೀಕ್ಷೆಯಿದ್ದು, ಚಾರ್ಜ್‌ಶೀಟ್ ಸಲ್ಲಿಕೆ ಕುರಿತೂ ಕುತೂಹಲ ಹೆಚ್ಚಾಗಿದೆ.ಆದರೆ ಪ್ರಕರಣದಲ್ಲಿ ನಿಜವಾಗಿಯೂ ಯಾರು ಭಾಗಿಯಾಗಿದ್ದಾರೆ ಮತ್ತು ಸಿದ್ದರಾಮಯ್ಯ ವಿರುದ್ಧದ ಆರೋಪಗಳ ಬಗ್ಗೆ ತನಿಖೆಯ ಅಂತಿಮ ನಿರ್ಧಾರ ಏನು ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಹೀಗಾಗಿ, ಈ ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ರಾಜ್ಯ ರಾಜಕೀಯದ ಚಿತ್ತ ನೆಟ್ಟಿದೆ.