• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಕುಡಿಯುವ ನೀರಿನ ಚರ್ಚೆ, ಕೆರೆ ತುಂಬಿಸುವಲ್ಲಿ ತಾರತಮ್ಯ : ಅಧಿಕಾರಿಗಳ ವಿರುದ್ಧ ಇಂಡಿ ಶಾಸಕ ಕಿಡಿ

ಕುಡಿಯುವ ನೀರಿನ ಚರ್ಚೆ, ಕೆರೆ ತುಂಬಿಸುವಲ್ಲಿ ತಾರತಮ್ಯ : ಅಧಿಕಾರಿಗಳ ವಿರುದ್ಧ ಇಂಡಿ ಶಾಸಕ ಕಿಡಿ

ಕೆಡಿಪಿ ಸಭೆಯಲ್ಲಿ ಕುಡಿಯುವ ನೀರಿನ ಚರ್ಚೆ ವೇಳೆ, ಕೆರೆಗೆ ನೀರು ತುಂಬಿಸುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಇಂಡಿ ಶಾಸಕ ಯಶವಂತರಾಯಗೌಡ ಕಿಡಿ ಕಾರಿದರು. ಅಲ್ಲದೆ, ಇಂಡಿ ತಾಲೂಕನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಬಿಡಿ ಎಂದು ಶಾಸಕರು ಆಕ್ರೋಶ ಹೊರ ಹಾಕಿದರು.

Written ByKrishna NK
Published: Nov 22, 2026, 15:30 IST|Updated: Nov 22, 2026, 15:31 IST
joinshare
ಕುಡಿಯುವ ನೀರಿನ ಚರ್ಚೆ, ಕೆರೆ ತುಂಬಿಸುವಲ್ಲಿ ತಾರತಮ್ಯ :  ಅಧಿಕಾರಿಗಳ ವಿರುದ್ಧ ಇಂಡಿ ಶಾಸಕ ಕಿಡಿ
Image Credit: Kannada News

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

2

₹1,000 ಇದ್ದರೆ ಸಾಕು! ಈ ವಾರ ಲಾಂಚ್ ಆಗಲಿವೆ 4 ಹೊಸ ಮ್ಯೂಚುವಲ್ ಫಂಡ್‌ಗಳು; ಹೂಡಿಕೆಗೆ ಸಿದ್ಧರಾಗಿ!

3

ʻಐಶಿರ್ʼ ಜೋಡಿಯ ನಿಶ್ಚಿತಾರ್ಥ ಸಂಭ್ರಮ: ಉಂಗುರ ಬದಲಾಯಿಸಿಕೊಂಡ ಶಿಶಿರ್ ಶಾಸ್ತ್ರಿ - ಐಶ್ವರ್ಯಾ

4

ಘೋರ ದುರಂತ: ಪ್ರೀತಿಸಿ ಮದುವೆಯಾದ ಕೇವಲ 45 ದಿನದಲ್ಲೇ ನವದಂಪತಿ ದುರ್ಮರಣ!

5

ಟೊಮೆಟೊ ಜ್ಯೂಸ್ vs ಕಿತ್ತಳೆ ಜ್ಯೂಸ್.. ಸಕ್ಕರೆ ನಿಯಂತ್ರಿಸಲು ಬೆಳಿಗ್ಗೆ ಯಾವುದು ಕುಡಿಯುವುದು ಉತ್ತಮ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ವಿಜಯಪುರ : ಈ ಜಿಲ್ಲೆಯಲ್ಲಿ ಪಂಚ ನದಿಗಳು ಹರಿದರು ಇಲ್ಲಿನ‌ ಜನರು ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ನೀರಿನ ವಿಚಾರವೇ ದೊಡ್ಡ ಕಿಚ್ಚು ಹಚ್ಚಿದೆ. ಕೆರೆ ತುಂಬಿಸುವ ವಿಚಾರದಲ್ಲಿ ತಾರತಮ್ಯವಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ್ ಅಧಿಕಾರಿಗಳ ವಿರುದ್ಧ ವಿರುದ್ದ ಆಕ್ರೋಶ ಹೊರ ಹಾಕಿದರೆ, ಇದರ ಮದ್ಯೆ ಇಂಡಿ ತಾಲೂಕನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಬಿಡಿ ಎಂದು ಶಾಸಕರು ಆಕ್ರೋಶ ಹೊರ ಹಾಕಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಬರದ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಸಂಪೂರ್ಣ ಕುಸಿದು ಹೋಗಿದೆ. ಈ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯಿತು. ಸಭೆಯ ಆರಂಭದಿಂದಲೇ ಕುಡಿಯುವ ನೀರಿನ ವಿಚಾರವಾಗಿ ಗಂಭೀರ ಚರ್ಚೆ ನಡೆಯಿತು. ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದರು.

ಇಂಡಿ ತಾಲೂಕು ಕಾಲುವೆಯ ಕೊನೆಯ ಭಾಗವಾಗಿದ್ದು, ಕುಡಿಯುವ ನೀರಿಗಾಗಿ ಕೆರೆಗಳಿಗೆ ನೀರು ತುಂಬಿಸುವಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಯಶವಂತರಾಯಗೌಡ ಆರೋಪಿಸಿದರು. ಈ ಹಿಂದೆ ಸಭೆಯಲ್ಲಿ ಆದ ನಿರ್ಣಯದಂತೆ ನೀರು ಬಿಟ್ಟಿದ್ದೀರಾ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಯಾರದೋ ಒತ್ತಡಕ್ಕೆ ಮಣಿದು ಅಧಿಕಾರಿಗಳು ಸಮರ್ಪಕವಾಗಿ ನೀರು ಬಿಡುತ್ತಿಲ್ಲ. ಒಂದೆಡೆ ಭೀಮಾ ನದಿಯಲ್ಲೂ ನೀರಿಲ್ಲ. ಈ ಹಿಂದೆ ಮಹಾರಾಷ್ಟ್ರ ಗಡಿಭಾಗದ ಕನ್ನಡಿಗರು ಕರ್ನಾಟಕಕ್ಕೆ ಸೇರಿಸಿ ಎನ್ನುತ್ತಿದ್ದರು. ಆದರೆ ಈಗ ನೀರಿನ ಗಂಭೀರ ಪರಿಸ್ಥಿತಿ ನೋಡಿದರೆ, ನಮ್ಮ ಇಂಡಿ ಭಾಗವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿ ಎನ್ನುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು...

ಯಶವಂತರಾಯಗೌಡ ಪಾಟೀಲ್ ಅವರ ಮಾತಿಗೆ ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹಾಗೂ ಸಿಂದಗಿ ಶಾಸಕ ಅಶೋಕ್ ಮನಗೂಳಿ ಕೂಡ ಧ್ವನಿಗೂಡಿಸಿದರು. ನಮ್ಮ ಭಾಗದ ಕೆರೆಗಳಿಗೂ ನೀರು ಬಂದಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು. ಶಾಸಕರ ಆಕ್ರೋಶಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್, ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನ ಮಾಡಿದರು. ನದಿ ತೀರದಲ್ಲಿ ಅಕ್ರಮವಾಗಿ ಪಂಪ್‌ಸೆಟ್ ಅಳವಡಿಸಿ ನೀರು ಎತ್ತುತ್ತಿದ್ದ 130ಕ್ಕೂ ಹೆಚ್ಚು ರೈತರ ಮೇಲೆ ಈಗಾಗಲೇ ಕೇಸ್ ದಾಖಲಿಸಲಾಗಿದೆ. ಇನ್ನು ಮುಂದೆ ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ ನೀರು ಬಿಡದಂತೆ ನಿರ್ಧಾರ ಕೈಗೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಕೆರೆ ತುಂಬಿಸುವ ವಿಚಾರವಾಗಿ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ನಿರ್ಣಯ ಕೈಗೊಳ್ಳೋಣ ಎಂದು ಭರವಸೆ ನೀಡಿದರು...

ಬರದ ನಡುವೆ ವಿಜಯಪುರ ಜಿಲ್ಲೆಯಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದ್ದು, ಆಡಳಿತ ಪಕ್ಷದ ಶಾಸಕರೇ ತಮ್ಮ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮುಂದೆ ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಾದರೂ ಗಡಿ ಭಾಗದ ಕೆರೆಗಳಿಗೆ ನೀರು ಹರಿಯುತ್ತಾ ಎಂಬುದು ಕಾದು ನೋಡಬೇಕಿದೆ..

Add Zee News as a Preferred Source
TAGS:
Kannada News