SOCIAL MEDIA

Newsletter

PARTNER SITES
Select Language Select State

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಸುತ್ತಮುತ್ತ ಕಾಡಾನೆಗಳು ಪ್ರತ್ಯಕ್ಷ

ಜನರ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಗಳ ಚಲನವಲನದ ಮೇಲೆ ನಿರಂತರವಾಗಿ ಕಣ್ಗಾವಲು ಇರಿಸಿದ್ದಾರೆ. ರೈತರು ಮತ್ತು ಸಾರ್ವಜನಿಕರು ರಾತ್ರಿ ಅಥವಾ ಮುಂಜಾನೆ ವೇಳೆ ಒಂಟಿಯಾಗಿ ಓಡಾಡುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Reported By Manjunath Naragund Written By Manjunath Naragund
Published: Oct 29, 2026, 04:30 PM IST | Updated: Oct 29, 2026, 04:37 PM IST
Join

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಹಾಗೂ ಅದರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳು ಪ್ರತ್ಯಕ್ಷಗೊಂಡಿದ್ದು, ಸ್ಥಳೀಯ ಜನರಲ್ಲಿ ತೀವ್ರ ಆತಂಕ ಮೂಡಿಸಿದೆ. ಬೆಳಂದೂರು ಅರಣ್ಯಕ್ಕೆ ಹೊಂದಿಕೊಂಡಿರುವ ಗೌತಮಪುರ ಮತ್ತು ಚನ್ನಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಆನೆಗಳು ಬೀಡುಬಿಟ್ಟಿವೆ ಎಂದು ಅಂಬ್ಲಿಗೋಳ ಅರಣ್ಯ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾಡಾನೆಗಳು ಮುಂಬರುವ ದಿನಗಳಲ್ಲಿ ನಾಡವಳ್ಳಿ, ಕುಡಿಗೇರಿ ಹಾಗೂ ಲಾವಿಗೇರಿ ಮಾರ್ಗವಾಗಿ ಚಲಿಸುವಸಾಧ್ಯತೆಯಿದೆ ಎಂದು ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.ಜನರ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಗಳ ಚಲನವಲನದ ಮೇಲೆ ನಿರಂತರವಾಗಿ ಕಣ್ಗಾವಲು ಇರಿಸಿದ್ದಾರೆ. ರೈತರು ಮತ್ತು ಸಾರ್ವಜನಿಕರು ರಾತ್ರಿ ಅಥವಾ ಮುಂಜಾನೆ ವೇಳೆ ಒಂಟಿಯಾಗಿ ಓಡಾಡುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಯಾವುದೇ ಕಾರಣಕ್ಕೂ ಕಾಡಾನೆಗಳ ಹತ್ತಿರ ತೆರಳದೆ, ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಒಂದು ವೇಳೆ ಗ್ರಾಮಗಳ ಸುತ್ತಮುತ್ತ ಆನೆಗಳ ಹೆಜ್ಜೆ ಗುರುತುಗಳು ಅಥವಾ ಓಡಾಟ ಕಂಡುಬಂದ ಕೂಡಲೇ ಸ್ಥಳೀಯ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
 

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES