• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಎನ್. ಚಲುವರಾಯಸ್ವಾಮಿ ಭರವಸೆ

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಎನ್. ಚಲುವರಾಯಸ್ವಾಮಿ ಭರವಸೆ

ನವೆಂಬರ್ ಅಂತ್ಯದ ಒಳಗೆ ಕಲ್ಪತರು ನಾಡು ತುಮಕೂರಿಗೆ ಎತ್ತಿನಹೊಳೆ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಕಾಮಗಾರಿಗೆ ಚುರುಕು ಮುಟ್ಟಿಸಲು ನಿರ್ದೇಶಿಸಿದರು.

Written ByYashaswini V
Published: Sep 17, 2026, 10:12 AM IST|Updated: Sep 17, 2026, 10:17 AM IST
joinshare
ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಎನ್. ಚಲುವರಾಯಸ್ವಾಮಿ ಭರವಸೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

2

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

3

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

4

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

5

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ತುಮಕೂರು: ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಶತಾಯಗತಾಯ ಪ್ರಯತ್ನಿಸುತ್ತಿರುವ ಬೆನ್ನಲ್ಲೇ, ಇದೀಗ ನವೆಂಬರ್ ಅಂತ್ಯದೊಳಗೆ ಎತ್ತಿನಹೊಳೆ ಯೋಜನೆಯ ಮೂಲಕ ತುಮಕೂರಿಗೆ ನೀರು ಹರಿಸಲು ಸಚಿವರು ಪಣತೊಟ್ಟಿದ್ದಾರೆ. ಇದರ ಭಾಗವಾಗಿ ತುಮಕೂರಿನ ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ 'ಪ್ಯಾಕೇಜ್ 11'ರ ಕಾಮಗಾರಿ ಸ್ಥಳಕ್ಕೆ ಗುರುವಾರ (ಸೆ. 16) ಖುದ್ದು ಭೇಟಿ ನೀಡಿ, ಸಮಗ್ರ ಪರಿಶೀಲನೆ ನಡೆಸಿದರು.

ಎತ್ತಿನಹೊಳೆ ಯೋಜನೆಯ ಕಾಮಗಾರಿ ಚುರುಕುಗೊಳಿಸಲು ಕ್ರಮ:
ಎತ್ತಿನಹೊಳೆ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಎದುರಾಗಿರುವ ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಸಚಿವರು ತ್ವರಿತ ಹೆಜ್ಜೆ ಇಟ್ಟಿದ್ದಾರೆ. ಕಂಚಿಗಾನಹಳ್ಳಿಯ ಅರಣ್ಯ ಇಲಾಖೆಗೆ ಸೇರಿದ 1.9 ಕಿ.ಮೀ ಜಾಗವನ್ನು ಪರಿಶೀಲಿಸಿದ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು, ಯೋಜನೆಗೆ ಅಗತ್ಯವಿರುವ ಅರಣ್ಯ ಇಲಾಖೆಯ 2ನೇ ಹಂತದ (ಸ್ಟೇಜ್ 2) ಅನುಮತಿಗೆ ಸಂಬಂಧಿಸಿದ ಕಡತಗಳು ಈಗಾಗಲೇ ನವದೆಹಲಿಗೆ ತಲುಪಿವೆ ಎಂದು ಸ್ಪಷ್ಟಪಡಿಸಿದರು.

ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು (ACS) ದೆಹಲಿಗೆ ಅರ್ಜಿ ಸಲ್ಲಿಸಿದ್ದು, ಸತತ ಪ್ರಯತ್ನದ ಫಲವಾಗಿ ಇನ್ನೊಂದು ವಾರದಲ್ಲಿ ಕೇಂದ್ರದಿಂದ ಅಂತಿಮ ಒಪ್ಪಿಗೆ (ಕ್ಲಿಯರೆನ್ಸ್) ದೊರೆಯುವ ನಿರೀಕ್ಷೆ ಇದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಗುಣಮಟ್ಟಕ್ಕೆ ಆದ್ಯತೆ:
ಇದೇ ಸಂದರ್ಭದಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿ ಗುರುತ್ವಾಕರ್ಷಣಾ ಕಾಲುವೆ (ಗ್ರಾವಿಟಿ ಕೆನಾಲ್) ನಿರ್ಮಾಣದಲ್ಲಿ ಗುಣಮಟ್ಟಕ್ಕೆ ಅತ್ಯುನ್ನತ ಆದ್ಯತೆ ನೀಡಬೇಕು ಎಂದು ಸಚಿವ ಎನ್.‌ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ತಾಕೀತು ಮಾಡಿದರು.

ಭೂ ಕುಸಿತ ಸಂಭವಿಸದಂತೆ ಎಚ್ಚರಿಕೆವಹಿಸಲು ಸೂಚನೆ:
ಕಾಮಗಾರಿ ಸ್ಥಳದಲ್ಲಿ 28 ಮೀಟರ್ ಆಳದ ಭೂಮಿಯನ್ನು ಅಗೆಯಬೇಕಾಗಿದ್ದು (ಡೀಪ್ ಕಟ್), ಇಲ್ಲಿ ಮಣ್ಣು ಕುಸಿಯದಂತೆ ಅತ್ಯಂತ ಎಚ್ಚರಿಕೆಯಿಂದ 'ಕಟ್ ಅಂಡ್ ಕವರ್' ತಂತ್ರಜ್ಞಾನದ ಮೂಲಕ ಗುಣಮಟ್ಟದ ಕೆಲಸ ನಡೆಯಬೇಕು ಎಂದು ನಿರ್ದೇಶಿಸಿದರು.

ಮಣ್ಣನ್ನು ತಾತ್ಕಾಲಿಕವಾಗಿ ಹೊರಹಾಕಲು ಹೆಚ್ಚುವರಿಯಾಗಿ ನೀಡಿರುವ 10 ಎಕರೆ ಜಾಗದಲ್ಲೇ ಹಾಕಿ, ತದನಂತರ ಅದೇ ಮಣ್ಣನ್ನು ಮರಳಿ ತುಂಬುವ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಚಿವ ಎನ್.‌ ಚಲುವರಾಯಸ್ವಾಮಿ ಸೂಚನೆ ನೀಡಿದರು.

ತುಮಕೂರು ಭಾಗದ ಜನತೆಗೆ ನವೆಂಬರ್‌ ಅಂತ್ಯದೊಳಗೆ ಎತ್ತಿನಹೊಳೆ ನೀರು:
ಎರಡು ಕಡೆ ಕಾಲುವೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಅಕ್ಟೋಬರ್ 15ರ ಒಳಗಾಗಿ ತುಮಕೂರು ಭಾಗದ ಕಾಮಗಾರಿ ಸಂಪೂರ್ಣಗೊಳ್ಳಲಿದೆ ಹಾಗೂ ಶೇಕಡಾ 100ರಷ್ಟು ನೀರು ಪೂರೈಸುವುದು ನಿಶ್ಚಿತ ಎಂದು ಅವರು ಭರವಸೆ ನೀಡಿದರು.

ಎತ್ತಿನಹೊಳೆ ಯೋಜನೆಯ ಕಾಂಗ್ರೆಸ್‌ ಸರ್ಕಾರದ 'ಕನಸಿನ ಯೋಜನೆ':
ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎನ್.‌ ಚಲುವರಾಯಸ್ವಾಮಿ, ಎತ್ತಿನಹೊಳೆ ಯೋಜನೆಯು ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಪ್ರಾರಂಭಗೊಂಡ 'ಕನಸಿನ ಯೋಜನೆ' ಎಂಬುದನ್ನು ಸ್ಮರಿಸಿದರು. ಆರಂಭದಲ್ಲಿ 8 ಸಾವಿರ ಕೋಟಿ ರೂಪಾಯಿಗಳಷ್ಟಿದ್ದ ಯೋಜನಾ ವೆಚ್ಚವು ಪ್ರಸ್ತುತ 23 ಸಾವಿರ ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಆದಾಗ್ಯೂ, ರೈತರ ಹಿತದೃಷ್ಟಿಯಿಂದ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ. ಇದರ ಜೊತೆಗೆ, ಅನಿವಾರ್ಯ ಕಾರಣಗಳಿಂದ ವಿಳಂಬವಾಗಿದ್ದ 'ಬಿಕ್ಕೆಗುಡ್ಡ ಯೋಜನೆ'ಯನ್ನೂ ಸಹ ಮುಂದಿನ ಎರಡು ತಿಂಗಳೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಪ್ರಕಟಿಸಿದರು.

ಹೇಮಾವತಿ ಲಿಂಕ್ ಕೆನಾಲ್ ಕೈಬಿಡುವಂತೆ ಬಂದಿರುವ ರೈತರ ಮನವಿ ಕುರಿತು ಅತ್ಯಂತ ಸೂಕ್ಷ್ಮವಾಗಿ ಹಾಗೂ ಜವಾಬ್ದಾರಿಯುತವಾಗಿ ಪ್ರತಿಕ್ರಿಯಿಸಿದ ಸಚಿವರು, "ತುಮಕೂರು ಮತ್ತು ರಾಮನಗರ ಎರಡೂ ಭಾಗದ ರೈತರು ನಮಗೆ ಸಮಾನರು. ಎಲ್ಲರೂ ನಮ್ಮವರೇ ಆಗಿರುವುದರಿಂದ, ಯಾರೊಬ್ಬರಿಗೂ ಅನ್ಯಾಯವಾಗದಂತೆ ಮುಖ್ಯಮಂತ್ರಿಗಳೊಂದಿಗೆ ವಿಸ್ತೃತವಾಗಿ ಚರ್ಚಿಸಿ, ಎಲ್ಲರಿಗೂ ಒಳಿತಾಗುವ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದರು.

ರೈತರ ಆರ್ಥಿಕ ಶೋಷಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಚಿವರು:
ಇದೇ ವೇಳೆ ರೈತರ ಆರ್ಥಿಕ ಶೋಷಣೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ರೈತರು ಯಾವುದೇ ಕಾರಣಕ್ಕೂ ಮೈಕ್ರೋ ಫೈನಾನ್ಸ್ (ಕಿರು ಸಾಲ) ಮೊರೆ ಹೋಗಬಾರದು ಎಂದು ಕಳಕಳಿಯ ಕಿವಿಮಾತು ಹೇಳಿದರು. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದ ಬಗ್ಗೆ ಬೆರಳೆಣಿಕೆಯಷ್ಟು ಮಂದಿ ಮಾತ್ರ ದೂರು ನೀಡುತ್ತಿದ್ದು, ಲಿಖಿತ ದೂರುಗಳಿಲ್ಲದೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಸರ್ಕಾರಕ್ಕೆ ಕಷ್ಟಕರವಾಗುತ್ತದೆ. ಹೀಗಾಗಿ ರೈತರು ಇಂತಹ ಸಾಲದ ಸುಳಿಗೆ ಸಿಲುಕದೆ ಎಚ್ಚರಿಕೆಯಿಂದ ಇರಬೇಕು ಎಂದು ಸಚಿವರು ಮನವಿ ಮಾಡಿದರು. ಈ ವೇಳೆ ಗುಬ್ಬಿ ಕ್ಷೇತ್ರದ ಶಾಸಕರೂ ಆದ ಕೆಎಸ್ ಆರ್ ಟಿಸಿ ನಿಗಮದ ಅಧ್ಯಕ್ಣ ಪಿ.ವಾಸು, ಇಲಾಖೆ ಅಧಿಕಾರಿಗಳು ಇದ್ದರು.

ಎತ್ತಿನಹೊಳೆ ಯೋಜನೆ ಎಂದರೇನು?
ಎತ್ತಿನಹೊಳೆ ಯೋಜನೆಯು ಕರ್ನಾಟಕದ ದಕ್ಷಿಣ ಭಾಗದ ಏಳು ಬರಪೀಡಿತ ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ರೂಪಿಸಲಾಗಿರುವ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆ. ಎತ್ತಿನಹೊಳೆ ಯೋಜನೆಯು ಪಶ್ಚಿಮದ ಭಾಗಕ್ಕೆ ಹರಿಯುವ ನದಿ ನೀರನ್ನು ತಿರುಗಿಸುವ ಗುರಿಯನ್ನು ಹೊಂದಿದೆ. ಸಕಲೇಶಪುರ ತಾಲೂಕಿನಲ್ಲಿರುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ, ಹೊಂಗಡಹಳ್ಳ- ನೇತ್ರಾವತಿಯ ನಾಲ್ಕು ಉಪನದಿಗಳಿಂದ ಮಳೆಗಾಲದಲ್ಲಿ ಲಭ್ಯವಿರುವ 24.01 ಟಿಎಂಸಿ ಅಡಿ ನೀರನ್ನು ರಾಜ್ಯದ ಕುಡಿಯುವ ನೀರಿನ ಪೂರೈಕೆಗಾಗಿ ಬಳಸುವ ಮಹಾತ್ವಾಕಾಂಕ್ಷೆಯ ಯೋಜನೆ ಆಗಿದೆ.

ಎತ್ತಿನಹೊಳೆ ಯೋಜನೆಯಲ್ಲಿ ಒಟ್ಟು 24.01 ಟಿಎಂಸಿ ಅಡಿ ನೀರನ್ನು 527 ಟ್ಯಾಂಕ್‌ಗಳನ್ನು ತುಂಬಿಸಲು ಮತ್ತು 6,657 ಹಳ್ಳಿಗಳು ಮತ್ತು 38 ಪಟ್ಟಣಗಳ ಲಕ್ಷಾಂತರ ಜನರ ಕುಡಿಯುವ ನೀರಿನ ಅಗತ್ಯತೆಯನ್ನು ಪೂರೈಸಲು ಬಳಸಲಾಗುತ್ತದೆ ಎಂದು ಹೇಳಲಾಗುತ್ತದೆ.

ಎತ್ತಿನಹೊಳೆ ನೀರಾವರಿ ಯೋಜನೆ:
ಎತ್ತಿನಹೊಳೆ ನೀರಾವರಿ ಯೋಜನೆಯು ಕರ್ನಾಟಕದ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆ ಆಗಿದೆ. ಎತ್ತಿನ ಹೊಳೆ ಯೋಜನೆಯ ಮೊದಲ ಹಂತವು ಸುಮಾರು 132 ಕಿ.ಮೀ. ದೂರದಲ್ಲಿನ ವಾಣಿ ವಿಲಾಸ ಸಾಗರಕ್ಕೆ ನೀರನ್ನು ಪಂಪ್‌ ಮಾಡಲು ಅನುವು ಮಾಡಿಕೊಡುತ್ತದೆ. ಎರಡನೇ ಹಂತದಲ್ಲಿ 140 ಕಿ.ಮೀ. ಯೋಜನೆಯ ಎರಡನೇ ಹಂತದ ಅಡಿಯಲ್ಲಿ ಪೂರ್ಣಗೊಳ್ಳಲಿದ್ದು ಈ ಹಂತದಲ್ಲಿ ಕಲ್ಪತರು ನಾಡು ತುಮಕೂರು ಭಾಗದ ಜನರಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.

ಎತ್ತಿನಹೊಳೆ ಯೋಜನೆಯಿಂದ ಯಾರಿಗೆ ಲಾಭವಾಗಲಿದೆ? 
ಎತ್ತಿನಹೊಳೆ ಯೋಜನೆಯಿಂದ ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲಿದೆ ಎಂದು ನಿರೀಕ್ಷಿಸಲಾಗಿದೆ. 
 

Add Zee News as a Preferred Source
TAGS:
Kannada News
D K Shivakumar