SOCIAL MEDIA

Newsletter

PARTNER SITES
Select Language Select State

ಸಿದ್ದರಾಮಯ್ಯ ವೀಕ್ ಆಗಿಲ್ಲ, ಟಗರು ಇದ್ದಾಗೆ ಇದ್ದಾರೆ: ಜಮೀರ್ ಅಹಮದ್

ಈ ಕಾರ್ಯಕ್ರಮವನ್ನು ಯಾವುದೇ ಅದ್ಧೂರಿತನ ಇಲ್ಲದೆ ಕುಟುಂಬದ ಸದಸ್ಯರಿಗೆ ಮಾತ್ರ ಸೀಮಿತವಾಗಿ ನಡೆಸಲಾಗಿದೆ ಎಂದು ಜಮೀರ್ ಅಹಮದ್ ವಿವರಿಸಿದರು.

Reported By Chetana Devarmani Written By Chetana Devarmani
Published: Sep 22, 2026, 11:07 PM IST | Updated: Sep 22, 2026, 11:10 PM IST
Join

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದ ಬಗ್ಗೆ ಸಚಿವ ಜಮೀರ್ ಅಹಮದ್ ಖಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿರಿಯೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಈಗಲೂ ಗಟ್ಟಿಯಾಗಿದ್ದಾರೆ. ಅವರ ನಾಯಕತ್ವದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರೂ ಮೈಸೂರಿನಲ್ಲಿ ಸ್ವಂತ ಮನೆ ಹೊಂದಿರಲಿಲ್ಲ. ಇದೀಗ ಅವರು ಸರಳವಾಗಿ ಮನೆ ನಿರ್ಮಿಸಿಕೊಂಡು ಗೃಹಪ್ರವೇಶ ಮಾಡಿದ್ದಾರೆ. ಈ ಕಾರ್ಯಕ್ರಮವನ್ನು ಯಾವುದೇ ಅದ್ಧೂರಿತನ ಇಲ್ಲದೆ ಕುಟುಂಬದ ಸದಸ್ಯರಿಗೆ ಮಾತ್ರ ಸೀಮಿತವಾಗಿ ನಡೆಸಲಾಗಿದೆ ಎಂದು ಜಮೀರ್ ಅಹಮದ್ ವಿವರಿಸಿದರು.

ಸಿದ್ದರಾಮಯ್ಯ ಅವರು ಅಹಿಂದ ಸಮುದಾಯಗಳ ನಾಯಕ ಎಂಬುದಷ್ಟೇ ಅಲ್ಲದೆ, ರಾಜ್ಯದ ಎಲ್ಲ ವರ್ಗಗಳನ್ನೂ ಒಟ್ಟಿಗೆ ಕರೆದೊಯ್ಯುವ ನಾಯಕ ಎಂದು ಜಮೀರ್ ಹೇಳಿದರು. ಮುಂದಿನ ಚುನಾವಣೆಯಲ್ಲೂ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಪಕ್ಷ ಸಾಗಲಿದೆ ಎಂದು ಅವರು ತಿಳಿಸಿದರು. ಸಿದ್ದರಾಮಯ್ಯ ಅವರು ಯಾವತ್ತೂ ವೀಕ್ ಆಗಿಲ್ಲ. ಅವರು ತುಂಬಾ ಸ್ಟ್ರಾಂಗ್ ಇದ್ದಾರೆ. ಅವರು ಟಗರು ಇದ್ದಾಗೆ ಇದ್ದಾರೆ. ಅವರನ್ನು ವೀಕ್ ಆಗಲು ನಾವು ಬಿಡುವುದಿಲ್ಲ. ನಮಗೆ ಅವರ ನಾಯಕತ್ವ ಬೇಕು ಎಂದು ಜಮೀರ್ ಅಹಮದ್ ಹೇಳಿದರು.

ತಮ್ಮ ಹಾಗೂ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಇತ್ತೀಚೆಗೆ ಇಬ್ಬರ ನಡುವೆ ಮುನಿಸು ಇದೆ ಎಂಬ ರೀತಿಯಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಪ್ರತಿಕ್ರಿಯಿಸಿದ ಅವರು, ಇವೆಲ್ಲವೂ ಮಾಧ್ಯಮಗಳಲ್ಲಿ ಸೃಷ್ಟಿಯಾಗಿರುವ ಚರ್ಚೆಗಳು ಎಂದು ಹೇಳಿದರು. ನಿನ್ನೆಯೂ ಸಿದ್ದರಾಮಯ್ಯ ಅವರೊಂದಿಗೆ ಇದ್ದು ಮಾತನಾಡಿದ್ದು, ಅವರು ಎಂದಿನಂತೆಯೇ ಉತ್ಸಾಹದಿಂದ ಇದ್ದಾರೆ ಎಂದು ತಿಳಿಸಿದರು.

KPSC ವಿಚಾರದಲ್ಲಿ ಪ್ರತಿಕ್ರಿಯೆ ಇಲ್ಲ

KPSC ಹಗರಣದ ಕುರಿತು ಪ್ರಶ್ನಿಸಿದಾಗ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿರುವುದರಿಂದ ಸದ್ಯ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಜಮೀರ್ ಅಹಮದ್ ಹೇಳಿದರು. ಮುಖ್ಯಮಂತ್ರಿಗಳ ಯೋಜನೆಗಳಿಗೆ ಹಣಕಾಸು ಇಲಾಖೆ ತಡೆ ನೀಡಿದೆ ಎಂಬ ಚರ್ಚೆಯ ಬಗ್ಗೆಯೂ ಸಚಿವರು ಸ್ಪಷ್ಟನೆ ನೀಡಿದರು. ಯಾವುದೇ ಯೋಜನೆಗೆ ಬ್ರೇಕ್ ಹಾಕಲಾಗಿಲ್ಲ. ಸರ್ಕಾರದ ಯೋಜನೆಗಳು ಮುಂದುವರಿಯಲಿವೆ ಎಂದು ಅವರು ಹೇಳಿದರು.

ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಆರು ತಿಂಗಳೊಳಗೆ ಉಪಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಜಮೀರ್ ಅಹಮದ್ ಹೇಳಿದರು. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹಲವು ಹೆಸರುಗಳು ಕೇಳಿಬರುತ್ತಿವೆ. ಡಿ. ಸುಧಾಕರ್ ಅವರ ಪುತ್ರ ಹಾಗೂ ಪೂರ್ಣಿಮಾ ಶ್ರೀನಿವಾಸ್ ಅವರ ಹೆಸರೂ ಚರ್ಚೆಯಲ್ಲಿದೆ ಎಂದು ತಿಳಿಸಿದರು.

ಪಕ್ಷದ ವತಿಯಿಂದ ಸಮೀಕ್ಷೆ ನಡೆಸಿದ ಬಳಿಕ ಅಭ್ಯರ್ಥಿ ಆಯ್ಕೆ ಕುರಿತು ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಸಚಿವರು ಹೇಳಿದರು. ಸಾಲಮನ್ನಾ ವಿಚಾರವಾಗಿ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಜಮೀರ್ ಅಹಮದ್, ಬಡವರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ಹಿಂದಿನ ಆಡಳಿತದ ಅವಧಿಯಲ್ಲಿ ಸ್ಲಂ ಬೋರ್ಡ್ ಮನೆಗಳ ವಿಚಾರದಲ್ಲಿ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಬಡವರಿಗೆ ಮನೆಗಳನ್ನು ಒದಗಿಸುವ ಕೆಲಸ ಮಾಡುತ್ತಿದೆ. ಬಡವರಿಗಾಗಿ ಮನೆ ನೀಡುವ ಯೋಜನೆಯನ್ನು ಸರ್ಕಾರದ ಮತ್ತೊಂದು ಪ್ರಮುಖ ಭರವಸೆ ಎಂದು ಪರಿಗಣಿಸಬಹುದು ಎಂದು ಜಮೀರ್ ಅಹಮದ್ ಹೇಳಿದರು.

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES