• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 11 ವರ್ಷದ ಬಾಲಕನಿಗೆ ಕರೆಂಟ್‌ ಶಾಕ್

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 11 ವರ್ಷದ ಬಾಲಕನಿಗೆ ಕರೆಂಟ್‌ ಶಾಕ್

ಬೆಸ್ಕಾಂ ನಿರ್ಲಕ್ಷ್ಯದಿಂದ 11 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಬೇಗೂರು ಪೊಲೀಸ್‌ ಠಾಣಾ ವ್ಯಾಪ್ತಿಯ ದೇವರಚಿಕ್ಕನಹಳ್ಳಿಯಲ್ಲಿ ನಡೆದಿದೆ. ವಿದ್ಯುತ್‌ ತಂತಿ ತೆರವುಗೊಳಿಸದ ಕಾರಣ ಈ ಅವಘಡ ನಡೆದಿದೆ ಎನ್ನಲಾಗಿದೆ.

Written ByYashaswini V
Published: Nov 16, 2026, 09:30 IST|Updated: Nov 16, 2026, 09:32 IST
joinshare
ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 11 ವರ್ಷದ ಬಾಲಕನಿಗೆ ಕರೆಂಟ್‌ ಶಾಕ್

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು : ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 11 ವರ್ಷದ ಬಾಲಕನೊರ್ವ ವಿದ್ಯುತ್‌ ಅವಘಡಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಬೇಗೂರು ಪೊಲೀಸ್‌ ಠಾಣಾ ವ್ಯಾಪ್ತಿಯ ದೇವರಚಿಕ್ಕನಹಳ್ಳಿಯಲ್ಲಿ ನಡೆದಿದೆ.

ವಿದ್ಯುತ್‌ ತಂತಿ ತೆರವುಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ನಿರ್ಲಕ್ಷ್ಯ ತೋರಿದ ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಬಾಲಕ ದರ್ಶನ್‌ ಬಲಗೈ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಇದಲ್ದೆ ದೇಹದ ಹಲವು ಭಾಗಗಳಲ್ಲಿ ಸುಟ್ಟ ಗಾಯಗಳಾಗಿ ನರಳಾಡುವಂತಾಗಿದೆ. ಘಟನೆಯ ಸಂಬಂಧ ಬಾಲಕನ ತಂದೆ ಕುಪ್ಪಣ್ಣ ನೀಡಿದ ದೂರಿನ ಮೇರೆಗೆ ಬೇಗೂರು ಪೊಲೀಸರು ಬೆಸ್ಕಾಂ ಅಧಿಕಾರಿಗಳ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದಾರೆ.

ದೇವರಚಿಕ್ಕನಹಳ್ಳಿಯಲ್ಲಿ ದರ್ಶನ್‌ ತಂದೆ ಕುಪ್ಪಣ್ಣ ಗ್ಯಾರೇಜ್‌ ನಡೆಸುತ್ತಿದ್ದರು. ದೀಪಾವಳಿ ಅಂಗಡಿ ಪುಜೆಯ ಹಿನ್ನಲೆಯಲ್ಲಿ ಕುಪ್ಪಣ್ಣ ಅವರ ಇಬ್ಬರು ಮಕ್ಕಳು ಗ್ಯಾರೇಜ್‌ಗೆ ಬಂದಿದ್ದರು. ಈ ವೇಳೆ ರಾತ್ರಿ ಸುಮಾರು 8 ಗಂಟೆಗೆ ದರ್ಶನ್‌ ಕಟ್ಟಡದ ಮೇಲ್ಛಾವಣಿಯಲ್ಲಿದ್ದ ವಾಶ್‌ರೂಂಗೆ ತೆರಳಿದ್ದಾನೆ. ಆಗ ಕಟ್ಟಡದ ಸಮೀಪದಲ್ಲೇ ಹಾದು ಹೋಗಿದ್ದ ಬೆಸ್ಕಾಂನ ವಿದ್ಯುತ್‌ ತಂತಿ ಬಾಲಕನ ಕೈಗೆ ತಲುಗಿದೆ. ಇದರ ಪರಿಣಾಮ ಭೀಕರ ವಿದ್ಯುತ್‌ ಶಾಕ್‌ ಹೊಡೆದು ಬಾಲಕನ ಬಲಗೈ ಚರ್ಮ ಸುಟ್ಟು ಹೋಗಿದೆ. ಅಲ್ಲದೆ ಎದೆ, ಬೆನ್ನು ಹಾಗೂ ತಲೆಯ ಕೂದಲು ಕೂಡ ಸುಟ್ಟು ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ಮಗನಿಗೆ ವಿದ್ಯುತ್‌ ಶಾಕ್‌ ಹೊಡೆಯುತ್ತಿದ್ದಂತೆ ಆತಂಕಗೊಂಡ ತಂದೆ ತಕ್ಷಣ ಬಾಲಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ವೈದ್ಯರು ಕರೆಂಟ್‌ ಶಾಕ್‌ ನಿಂದ ನರಳಾಡುತ್ತಿದ್ದ ಬಾಲಕನಿಗೆ ಚಿಕಿತ್ಸೆ ನೀಡಿ, ಗಾಯಗಳಿಗೆ ಬ್ಯಾಂಡೇಜ್‌ ಹಾಕಿ ಬಾಲಕನನ್ನು ಮನೆಗೆ ಕಳುಹಿಸಿದ್ದಾರೆ. ಆದರೆ ಗಾಯಗಳು ಸಂಪೂರ್ಣ ಗುಣವಾಗುವ ಮುನ್ನವೇ ಮನೆಗೆ ಕಳುಹಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮತ್ತೊಂದೆಡೆ ಬಾಲಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದ್ದರು ಅಧಿಕಾರಿಗಳು ಬಂದು ಆರೋಗ್ಯ ವಿಚಾರಿಸಿಲ್ಲ. 

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ!
ಇನ್ನು ಈ ಅವಘಡಕ್ಕೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬುದು ತಂದೆ ಕುಪ್ಪಣ್ಣನ ಆರೋಪ. ಕಟ್ಟಡ ಸಮೀಪ ವಿದ್ಯತ್‌ ತಂತಿ ಹಾದು ಹೋಗಿದ್ದು, ಅದನ್ನು ತೆರವುಗೊಳಿಸುವಂತೆ ಈ ಹಿಂದೆಯೇ ಕಟ್ಟಡದಲ್ಲಿದ್ದ ಅಂಗಡಿ ಮಾಲೀಕರು ಹಾಗೂ ಕುಪ್ಪಣ್ಣ ಬೆಸ್ಕಾಂ ಸಿಬ್ಬಂದಿಗೆ ದೂರು ನೀಡಿದ್ದರು. ಸಣ್ಣ ಮಕ್ಕಳು ಆಟವಾಡುವಾಗ ತಂತಿ ತಗುಲುವ ಅಪಾಯವಿದೆ.  ಹೀಗಾಗಿ ಬೇಗನೆ ತಂತಿಯನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಕೆಲಸ ಮುಗಿದ ಬಳಿಕ ತೆರವಿಗೊಳಿಸುತ್ತೇನೆ ಎಂದಿದ್ದಾರೆ ಎನ್ನಲಾಗಿದೆ. ಅಲ್ಲದೇ ಕೆಲಸ ಮುಗಿದ ಮೇಲೆ ಬೆಸ್ಕಾಂ ಕಚೇರಿಗೆ ಬಂದು ಮಾತನಾಡುವಂತೆ ಉಡಾಫೆಯ ಉತ್ತರ ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. 

ಇಷ್ಟೆಲ್ಲಾ ಮನವಿ ಮಾಡಿದರೂ, ಅಧಿಕಾರಿಗಳು ನಿರ್ಲಕ್ಷಿಸಿದ ಕಾರಣ ಬಾಲಕ ದರ್ಶನ್‌ ಅವರ ಇಂದಿನ ಸ್ಥಿತಿಗೆ ಬೆಸ್ಕಾಂ ಅಧಿಕಾರಿಗಳೇ ನೇರ ಹೊಣೆ ಎಂದು ತಂದೆ ಆರೋಪಿಸಿದ್ದಾರೆ. ಈ ಬಗ್ಗೆ ತಂದೆ ಕುಪ್ಪಣ್ಣ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸ್‌ ಅಧಿಕಾರಿಗಳು ಘಟನಾ ಸಂಬಂಧ ತನಿಖೆ ನಡೆಸುತ್ತಿದ್ದಾರೆ. 
 

Add Zee News as a Preferred Source
TAGS:
Kannada News