• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಪ್ರತಿಭಟನೆ: ಬೆಂಗಳೂರಿನಲ್ಲಿ ಬೃಹತ್ ಹೋರಾಟ 8 ಬೇಡಿಕೆಗಳೇನು?

ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಪ್ರತಿಭಟನೆ: ಬೆಂಗಳೂರಿನಲ್ಲಿ ಬೃಹತ್ ಹೋರಾಟ 8 ಬೇಡಿಕೆಗಳೇನು?

Asha workers protest: ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಮತ್ತೆ ಸಮರ ಸಾರಿದ್ದಾರೆ. ಹಲವು ವರ್ಷಗಳಿಂದ ದುಡಿಯುತ್ತಿದ್ದರೂ ಸೂಕ್ತ ಗೌರವಧನ ಸಿಗುತ್ತಿಲ್ಲ ಎಂಬುದು ಆಶಾ ಕಾರ್ಯಕರ್ತೆಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written ByRamya. R. Gowda
Published: Nov 17, 2026, 10:49 IST|Updated: Nov 17, 2026, 12:26 IST
joinshare
ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಪ್ರತಿಭಟನೆ: ಬೆಂಗಳೂರಿನಲ್ಲಿ ಬೃಹತ್ ಹೋರಾಟ 8 ಬೇಡಿಕೆಗಳೇನು?

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Asha workers protest: ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಮತ್ತೆ ಸಮರ ಸಾರಿದ್ದಾರೆ. ಹಲವು ವರ್ಷಗಳಿಂದ ದುಡಿಯುತ್ತಿದ್ದರೂ ಸೂಕ್ತ ಗೌರವಧನ ಸಿಗುತ್ತಿಲ್ಲ ಎಂಬುದು ಆಶಾ ಕಾರ್ಯಕರ್ತೆಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಮತ್ತೆ ಸಮರ ಸಾರಿದ್ದಾರೆ. ಹಲವು ವರ್ಷಗಳಿಂದ ದುಡಿಯುತ್ತಿದ್ದರೂ ಸೂಕ್ತ ಗೌರವಧನ ಸಿಗುತ್ತಿಲ್ಲ ಎಂಬುದು ಆಶಾ ಕಾರ್ಯಕರ್ತೆಯರ ಆಕ್ರೋಶ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ತಿಂಗಳಿಗೆ 15 ಸಾವಿರ ರೂಪಾಯಿ ನಿಶ್ಚಿತ ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಹಾಗಾದ್ರೆ ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳೇನು? ಸರ್ಕಾರದ ಮುಂದೆ ಇಟ್ಟಿರುವ ಆಗ್ರಹಗಳೇನು? ನೋಡೋಣ ಈ ವರದಿ.

ಕಳೆದ 18 ವರ್ಷಗಳಿಂದ ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಹಳ್ಳಿಹಳ್ಳಿಗೂ ತೆರಳಿ ಆರೋಗ್ಯ ಸೇವೆ ನೀಡುವ ಇವರು, ಪ್ರತಿದಿನ 6ರಿಂದ 8 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ 24 ಗಂಟೆಯೂ ಸೇವೆಗೆ ಸಿದ್ಧರಾಗಿರುತ್ತಾರೆ. ಆದ್ರೆ ಇಷ್ಟೆಲ್ಲಾ ದುಡಿದರೂ ಇವರಿಗೆ ಸಿಗುತ್ತಿರುವುದು ಪ್ರೋತ್ಸಾಹಧನ ಆಧಾರಿತ ವೇತನ. ಇದರಿಂದ ಆರ್ಥಿಕ ಭದ್ರತೆಯೇ ಇಲ್ಲದಂತಾಗಿದೆ ಎಂಬುದು ಕಾರ್ಯಕರ್ತೆಯರ ಅಳಲು.

ಆಶಾ ಕಾರ್ಯಕರ್ತೆಯರ 7 ಪ್ರಮುಖ ಬೇಡಿಕೆಗಳು

1. ₹15 ಸಾವಿರ ನಿಶ್ಚಿತ ಗೌರವಧನ:: ಪ್ರೋತ್ಸಾಹಧನ ಪದ್ಧತಿ ಬದಲು ಮಾಸಿಕ 15 ಸಾವಿರ ರೂ. ನಿಗದಿತ ಗೌರವಧನ ನೀಡಬೇಕು.

2. ಮೊಬೈಲ್ ಮತ್ತು ರೀಚಾರ್ಜ್ ಭತ್ಯೆ: ಉತ್ತಮ ಗುಣಮಟ್ಟದ ಮೊಬೈಲ್ ಫೋನ್ ಹಾಗೂ ಮಾಸಿಕ ರೀಚಾರ್ಜ್ ಭತ್ಯೆ ನೀಡಬೇಕು.

3. ಹೆರಿಗೆ ರಜೆ: 6 ತಿಂಗಳ ವೇತನ ಸಹಿತ ಹೆರಿಗೆ ರಜೆ ಸೌಲಭ್ಯ ಕಲ್ಪಿಸಬೇಕು.

4. ಹೆಚ್ಚುವರಿ ಕೆಲಸಕ್ಕೆ ಬ್ರೇಕ್: ಆರೋಗ್ಯ ಇಲಾಖೆಗೆ ಸಂಬಂಧಪಡದ ಇತರೆ ಇಲಾಖೆಗಳ ಕೆಲಸಗಳನ್ನು ವಹಿಸುವುದನ್ನು ನಿಲ್ಲಿಸಬೇಕು.

5. ಸುಗಮಕಾರರ ಮರುನೇಮಕ: ಸೇವೆಯಿಂದ ಹಿಂಪಡೆದಿರುವ ಆಶಾ ಸುಗಮಕಾರರನ್ನು ಮರುನೇಮಕ ಮಾಡಬೇಕು.

6. ಬಾಕಿ ಪ್ರೋತ್ಸಾಹಧನ ಬಿಡುಗಡೆ: 2024-25ನೇ ಸಾಲಿನ ಹೆಚ್ಚುವರಿ ಮಾಸಿಕ 1,500 ರೂ. ಪ್ರೋತ್ಸಾಹಧನ ಸೇರಿದಂತೆ ಬಾಕಿ ಹಣ ಬಿಡುಗಡೆ ಮಾಡಬೇಕು.

7. ಆರ್ಥಿಕ ಭದ್ರತೆ ಮತ್ತು ಸೌಲಭ್ಯ: ಆಶಾ ಕಾರ್ಯಕರ್ತೆಯರ ಸೇವೆಗೆ ತಕ್ಕಂತೆ ಸೂಕ್ತ ಗೌರವಧನ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು.̇

8. ನಿವೃತ್ತಿ ಸೌಲಭ್ಯ

ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಸಂಘಟನೆಯ ಆರೋಪ. ಹೀಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಶಾ ಕಾರ್ಯಕರ್ತೆಯರು ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಒಟ್ಟಾರೆಯಾಗಿ ರಾಜ್ಯದ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿರುವ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸರ್ಕಾರ ಯಾವ ರೀತಿ ಸ್ಪಂದಿಸಲಿದೆ 15 ಸಾವಿರ ರೂ. ನಿಶ್ಚಿತ ಗೌರವಧನದ ಬೇಡಿಕೆ ಈಡೇರಿಸುತ್ತಾ ಇಲ್ಲವಾ  ಅನ್ನೋದನ್ನ ಕಾದು ನೋಡಬೇಕಿದೆ.


 

 

Add Zee News as a Preferred Source
TAGS:
Kannada News