• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಆರೋಗ್ಯ ಏರುಪೇರಿನ ನಡುವೆಯೂ ನಿಲ್ಲದ ಆಶಾ ಹೋರಾಟ : 25ಕ್ಕೂ ಹೆಚ್ಚು ಕಾರ್ಯಕರ್ತೆಯರು ಅಸ್ವಸ್ಥ

ಆರೋಗ್ಯ ಏರುಪೇರಿನ ನಡುವೆಯೂ ನಿಲ್ಲದ ಆಶಾ ಹೋರಾಟ : 25ಕ್ಕೂ ಹೆಚ್ಚು ಕಾರ್ಯಕರ್ತೆಯರು ಅಸ್ವಸ್ಥ

ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಇಂದಿಗೆ 11ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳ ಈಡೇರಿಕೆಗಾಗಿ ಹೋರಾಡುತ್ತಿರುವ ಕಾರ್ಯಕರ್ತೆಯರಿಗೆ ವಿವಿಧ ಸಂಘಟನೆಗಳ ಬೆಂಬಲ ಹೆಚ್ಚುತ್ತಿದ್ದರೂ, ಸರ್ಕಾರದ ಸಂಧಾನ ಮಾತುಕತೆಗಳು ಇನ್ನೂ ಫಲ ನೀಡಿಲ್ಲ. ಇದರ ನಡುವೆಯೇ ಧರಣಿ ನಿರತ ಹಲವರ ಆರೋಗ್ಯದಲ್ಲಿ ಏರುಪೇರಾಗುತ್ತಿರುವುದು ಆತಂಕ ಮೂಡಿಸಿದೆ. 11ನೇ ದಿನದ ಬೆಳವಣಿಗೆಗಳು ಮತ್ತು ಕಾರ್ಯಕರ್ತೆಯರ ಆರೋಗ್ಯ ಸ್ಥಿತಿಯ ಸಂಪೂರ್ಣ ವಿವರ ಇಲ್ಲಿದೆ.

Written ByKrishna NK
Published: Nov 27, 2026, 17:18 IST|Updated: Nov 27, 2026, 17:23 IST
joinshare
ಆರೋಗ್ಯ ಏರುಪೇರಿನ ನಡುವೆಯೂ ನಿಲ್ಲದ ಆಶಾ ಹೋರಾಟ : 25ಕ್ಕೂ ಹೆಚ್ಚು ಕಾರ್ಯಕರ್ತೆಯರು ಅಸ್ವಸ್ಥ
Image Credit: Asha Protest

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ!  ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ! ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

2

ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬಹುದು? ಪ್ಲಾಟ್‌ಫಾರಂ ಡೋರ್ ಹೊರತುಪಡಿಸಿ ಇರುವ ಪರ್ಯಾಯಗಳೇನು?

3

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ತೇಜಸ್ವಿ ಸೂರ್ಯ ಆಗ್ರಹ!

4

ವಿಜಯ್ ಸೇತುಪತಿ ಕಾಲರ್ ಹಿಡಿದ ರಾಜ್ ಬಿ ಶೆಟ್ಟಿ

5

ಇಂದಿನಿಂದ ನಂದಿನಿ ಮೊಸರು ದರ ಇಳಿಕೆ; ಹೊಸ ಬೆಲೆ ಎಷ್ಟು ಗೊತ್ತಾ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು : ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಇಂದಿಗೆ 11ನೇ ದಿನ. ಬೇಡಿಕೆಗಳ ಈಡೇರಿಕೆಗಾಗಿ ಹಗಲು,ರಾತ್ರಿ ಎನ್ನದೆ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸುತ್ತಿರುವ ಆಶಾಗಳಿಗೆ ವಿವಿಧ ಸಂಘಟನೆಗಳು ಹಾಗೂ ಗಣ್ಯರು ಬೆಂಬಲ ಸೂಚಿಸಿದ್ದಾರೆ. ಮತ್ತೊಂದೆಡೆ ಸರ್ಕಾರದ ಸಂಧಾನ ಪ್ರಯತ್ನಗಳೂ ಫಲ ನೀಡಿಲ್ಲ. ಹಾಗಾದ್ರೆ 11ನೇ ದಿನದ ಹೋರಾಟದಲ್ಲಿ ಏನೆಲ್ಲಾ ಆಯ್ತು..? ಆಶಾಗಳ ಆರೋಗ್ಯ ಸ್ಥಿತಿ ಹೇಗಿದೆ..? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್

ಮಳೆ, ಚಳಿ, ಬಿಸಿಲು ಯಾವುದಕ್ಕೂ ಜಗ್ಗದೆ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮುಂದುವರಿಸಿದ್ದಾರೆ. ದಿನದಿಂದ ದಿನಕ್ಕೆ ಪ್ರತಿಭಟನೆಗೆ ಬೆಂಬಲವೂ ಹೆಚ್ಚಾಗುತ್ತಿದೆ. ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್, INTUC ಅಧ್ಯಕ್ಷ ಶ್ಯಾಮಣ್ಣ ರೆಡ್ಡಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಆಶಾಗಳ ಹೋರಾಟಕ್ಕೆ ಕೈಜೋಡಿಸಿದ್ದಾರೆ.

ಇನ್ನೊಂದೆಡೆ ಆಶಾಗಳ ಪ್ರತಿಭಟನೆ ಅಂತ್ಯಗೊಳಿಸಲು ಸರ್ಕಾರದ ಕಡೆಯಿಂದ ಮಾತುಕತೆಯ ಪ್ರಯತ್ನಗಳು ನಡೆಯುತ್ತಲೇ ಇವೆ. ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರ ನೇತೃತ್ವದಲ್ಲಿ ಹಲವು ಸುತ್ತಿನ ಸಂಧಾನಕ್ಕೆ ಪ್ರಯತ್ನ ನಡೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಿನ್ನೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಜಿ.ಸಿ. ಚಂದ್ರಶೇಖರ್ ಅವರೊಂದಿಗೆ ನಡೆದ ಸಭೆಯೂ ಯಶಸ್ವಿಯಾಗಿಲ್ಲ. ಹೀಗಾಗಿ ಸರ್ಕಾರ ಮತ್ತು ಆಶಾ ಕಾರ್ಯಕರ್ತೆಯರ ನಡುವಿನ ಬಿಕ್ಕಟ್ಟು ಇನ್ನೂ ಮುಂದುವರಿದಿದೆ.

ಒಂದೆಡೆ ಬೇಡಿಕೆ ಈಡೇರಿಕೆಗಾಗಿ ಹೋರಾಟ ನಡೆಯುತ್ತಿದ್ದರೆ, ಮತ್ತೊಂದೆಡೆ ಪ್ರತಿಭಟನಾ ಸ್ಥಳದಲ್ಲೇ ಆಶಾ ಕಾರ್ಯಕರ್ತೆಯರ ಆರೋಗ್ಯ ಕೈಕೊಡುತ್ತಿದೆ. ಕಳೆದ 11 ದಿನಗಳಲ್ಲಿ 25ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥರಾಗಿದ್ದಾರೆ. ಎದೆನೋವು, ಮೂರ್ಛೆ ತಪ್ಪುವುದು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ. ಅಸ್ವಸ್ಥಗೊಂಡ ಕಾರ್ಯಕರ್ತೆಯರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ತಡರಾತ್ರಿಯೂ ಆಶಾ ಕಾರ್ಯಕರ್ತೆಯೊಬ್ಬರು ಅಸ್ವಸ್ಥರಾಗಿದ್ದಾರೆ. ಚಿಕ್ಕಮಗಳೂರು ಮೂಲದ 38 ವರ್ಷದ ಗಂಗಾ ಎಂಬುವವರಿಗೆ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣವೇ ರಾತ್ರಿ 2.30ರ ಸುಮಾರಿಗೆ ಅವರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಗಂಗಾ ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಒಟ್ಟಿನಲ್ಲಿ 11 ದಿನಗಳಿಂದ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಒಂದೆಡೆ ಬೇಡಿಕೆ ಈಡೇರಿಸುವಂತೆ ಆಶಾಗಳ ಪಟ್ಟು, ಮತ್ತೊಂದೆಡೆ ಸಂಧಾನಕ್ಕೆ ಮುಂದಾಗಿರುವ ಸರ್ಕಾರ. ಈ ಹಗ್ಗಜಗ್ಗಾಟಕ್ಕೆ ಕೊನೆ ಯಾವಾಗ..? ಆಶಾಗಳ ಬೇಡಿಕೆಗಳಿಗೆ ಸರ್ಕಾರ ಯಾವಾಗ ಸ್ಪಂದಿಸುತ್ತೆ..? ಕಾರ್ಯಕರ್ತೆಯರು ಮತ್ತೆ ಕರ್ತವ್ಯಕ್ಕೆ ಮರಳೋದು ಯಾವಾಗ ಅನ್ನೋದನ್ನ ಕಾದುನೋಡಬೇಕಿದೆ.

Add Zee News as a Preferred Source
TAGS:
Kannada News