• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ದೀಪಾವಳಿ ಪಟಾಕಿ ಅಬ್ಬರಕ್ಕೆ ಬೆಂಗಳೂರಿನಲ್ಲಿ ಹೆಚ್ಚಾಯ್ತು ವಾಯು ಮಾಲಿನ್ಯ..!

ದೀಪಾವಳಿ ಪಟಾಕಿ ಅಬ್ಬರಕ್ಕೆ ಬೆಂಗಳೂರಿನಲ್ಲಿ ಹೆಚ್ಚಾಯ್ತು ವಾಯು ಮಾಲಿನ್ಯ..!

ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರಿನಲ್ಲೂ ಸಹ ಗಾಳಿ ವಿಷವಾಗುತ್ತಿದೆ. ದೀಪಾವಳಿ ಪಟಾಕಿಯಿಂದಾಗಿ ಗಾಳಿಯ ಗುಣಮಟ್ಟ ಹದಗೆಡುತ್ತಿದ್ದು, ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದೆ.

Written ByYashaswini V
Published: Nov 11, 2026, 09:23 IST|Updated: Nov 11, 2026, 09:28 IST
joinshare
ದೀಪಾವಳಿ ಪಟಾಕಿ ಅಬ್ಬರಕ್ಕೆ ಬೆಂಗಳೂರಿನಲ್ಲಿ ಹೆಚ್ಚಾಯ್ತು ವಾಯು ಮಾಲಿನ್ಯ..!

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ, ಸಡಗರ ಮುಗಿಯುತ್ತಿದ್ದಂತೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪಟಾಕಿಯ ಅಬ್ಬರದಿಂದಾಗಿ ವಾಯುಮಾಲಿನ್ಯ ಮಿತಿಮೀರಿ ಹೋಗಿದೆ. ವಾಯುಮಾಲಿನ್ಯದಿಂದಾಗಿ ಬೆಂಗಳೂರಿನಲ್ಲಿ ಉಸಿರುಗಟ್ಟಿಸುವಂತಹ ವಾತಾವರಣ ನಿರ್ಮಾಣವಾಗಿದೆ.

ಸಿಲಿಕಾನ್‌ ಸಿಟಿಯಲ್ಲಿ ಸಾಮಾನ್ಯವಾಗಿ 38ರಿಂದ 40% ರಷ್ಟಿದ್ದ ವಾಯು ಮಾಲಿನ್ಯ ಏಕಾಏಕಿ 106ಕ್ಕೆ ಏರಿಕೆ ಆಗಿದೆ. ಇನ್ನು ನಗರದ ಎಕ್ಯುಐ 53 ರಿಂದ 132ಕ್ಕೆ ಜಿಗಿದಿರುವುದು ಕಂಡು ಬಂದಿದೆ.

ಕಳೆದ ವರ್ಷಕ್ಕಿಂತ ಈ‌ ವರ್ಷ ವಾಯು‌ ಮಾಲಿನ್ಯ ಹೆಚ್ಚಳ
2025ರಲ್ಲಿ ದೀಪಾವಳಿ ದಿನ AQI 95ರ ಗರಿಷ್ಠ ಮಟ್ಟದಲ್ಲಿತ್ತು. ಆದರೆ ಈ ವರ್ಷ 2026ರಲ್ಲಿ ದೀಪಾವಳಿಗೆ ಬೆಳಗ್ಗೆ 9 ಗಂಟೆಗೆ AQI 132ಕ್ಕೆ ಏರಿಕೆ ಆಗಿದೆ.

ರಾತ್ರಿ 12 ಗಂಟೆಗೆ AQI 102ಕ್ಕೆ ಏರಿಕೆ ಆಗಿದ್ದರೆ, ಬೆಳಗಿನ ಜಾವ 2 ಗಂಟೆ ಸುಮಾರಿಗೆ AQI 111 ದಾಖಲಾಗಿದೆ, ಬೆಳಗ್ಗೆ 6 ಗಂಟೆಗೆ AQI 124ಕ್ಕೆ ಏರಿಕೆ ಆಗಿದ್ದರೆ, ಬೆಳಗ್ಗೆ 9 ಗಂಟೆಗೆ AQI 132 ದಾಖಲಾಗಿದೆ. ದೀಪಾವಳಿ ಪಟಾಕಿ ಸಿಡಿತದಿಂದ ವಾಯುಮಾಲಿನ್ಯದಲ್ಲಿ ಈ ಮಟ್ಟದ ಹೆಚ್ಚಳ ಕಂಡು ಬಂದಿದೆ ಎಂದು ಹೇಳಲಾಗಿದೆ.

ಬೆಂಗಳೂರಿನ ಹಲವು ಏರಿಯಾಗಳ AQI ವರದಿ ಈ ಕೆಳಕಂಡಂತಿದೆ:
* ಸಿಲ್ಕ್ ಬೋರ್ಡ್‌ನಲ್ಲಿ ಅತಿ ಹೆಚ್ಚು AQI 179 ದಾಖಲು
* ಹೊಂಬೇಗೌಡ ನಗರದಲ್ಲಿ AQI 176
* ಹೆಬ್ಬಾಳದಲ್ಲಿ AQI 168
* ಜಿಗಣಿಯಲ್ಲಿ AQI 122
* ಪೀಣ್ಯದಲ್ಲಿ AQI 120
* ಸನೇಗುರವ ಹಳ್ಳಿಯಲ್ಲಿ AQI 113
* ಬಾಪೂಜಿ ನಗರದಲ್ಲಿ AQI 112
* RVCE ಮೈಲಸಂದ್ರದಲ್ಲಿ AQI 110
* ಬಿಟಿಎಂ ಲೇಔಟ್‌ನಲ್ಲಿ AQI 109 ದಾಖಲು
* ಕೋರಮಂಗಲ AQI 190 
* ಲಾಲ್‌ಬಾಗ ವೆಸ್ಟ್ AQI 181 
* ರಿಚ್ಮೆಂಟ್ ಟೌನ್ AQI 180
* ಕಸ್ತೂರಿನಗರ AQI 131 
* ಬಾಪೂಜಿ ನಗರ AQI 136 
* ಜಿಗಣಿಯಲ್ಲಿ AQI 143

ಈ ಅಂಕಿ ಅಂಶಗಳ ಪ್ರಕಾರ, ಬೆಂಗಳೂರಿನಲ್ಲಿ ಕೋರಮಂಗಲ ಪ್ರದೇಶದಲ್ಲಿ ಅತಿ ಹೆಚ್ಚು ಎಂದರೆ AQI 190 ದಾಖಲಾಗಿದೆ. ಒಟ್ಟಾರೆಯಾಗಿ ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ವಾಯುಮಾಲಿನ್ಯ ಶೇಕಡ 25ರಷ್ಟು ಹೆಚ್ಚಳವಾಗಿದೆ. ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ನಗರದಲ್ಲಿ ಈ ಪ್ರಮಾಣದಲ್ಲಿ ವಾಯುಮಾಲಿನ್ಯ ಹೆಚ್ಚಾಗುರುತ್ತಿರುವುದು ನಿಜಕ್ಕೂ ಆತಂಕಕಾರಿ ವಿಚಾರವಾಗಿದೆ. 
 

Add Zee News as a Preferred Source
TAGS:
Kannada News
Diwali