SOCIAL MEDIA

Newsletter

PARTNER SITES
Select Language Select State

ಅತ್ತಿಬೆಲೆ ಪೆಟ್ರೋಲ್‌ ಬಂಕ್‌ನಲ್ಲಿ ಅಗ್ನಿ ಅವಘಡ: ನಡೆದಿದ್ದೇನು? ಇಲ್ಲಿದೆ ವಿವರ

ಅತ್ತಿಬೆಲೆಯಲ್ಲಿರುವ ಪೆಟ್ರೋಲ್‌ ಬಂಕ್‌ ಒಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಜಾಗ್ವಾರ್‌ ಕಾರ್‌ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತ ವರದಿ ಇಲ್ಲಿದೆ.

Written By Yashaswini V
Published: Oct 08, 2026, 07:40 AM IST | Updated: Oct 08, 2026, 07:42 AM IST
Join

ಏಕಾಏಕಿ ನುಗ್ಗಿದ ಜಾಗ್ವಾರ್‌ ಕಾರು ಡಿಕ್ಕಿ ಹೊಡೆದ ಪರಿಣಾಮ ಪೆಟ್ರೋಲ್‌ ಬಂಕ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಇದರಿಂದಾಗಿ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್‌ ತಾಲೂಕಿನ ಅತ್ತಿಬೆಲೆಯಲ್ಲಿ ಸಂಭವಿಸಿದೆ. ಕಾರ್‌ ಚಾಲಕ ಕುಡಿದ ಮತ್ತಿನಲ್ಲಿ ಇದ್ದಿದ್ದೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ನಿಜಕ್ಕೂ ಅಲ್ಲಿ ಆಗಿದ್ದೇನು? ಪೆಟ್ರೋಲ್‌ ಪಂಪ್‌ನಲ್ಲಿ ಸಂಭವಿಸಿದ ಬೆಂಕಿ ದುರಂತಕ್ಕೆ ಕಾರಣ ಏನು? ಅಲ್ಲಿ ನಡೆದಿದ್ದೇನು ಎಂಬ ವಿವರ ಇಲ್ಲಿದೆ.

ಅತ್ತಿಬೆಲೆಯಲ್ಲಿ ಪೆಟ್ರೋಲ್‌ ಬಂಕ್‌ಗೆ ಬೆಂಕಿ ಬಿದ್ದಿದ್ದು ಹೇಗೆ?
ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿರುವ ಪೆಟ್ರೋಲ್‌ ಬಂಕ್‌ಗೆ ಜಾಗ್ವಾರ್ ಕಾರು ಚಾಲನೆ ಮಾಡಿಕೊಂಡು ಯುವತಿ ಜೊತೆ ಬಂದಿದ್ದ ಸಂಜಯ್‌ ಎಂಬ ಯುವಕ ಮೊದಲಿಗೆ ಏಕಾಏಕಿ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಡಿಕ್ಕಿ ಹೊಡೆದು, ಬಳಿಕ ಪೆಟ್ರೋಲ್‌ ಪಂಪ್‌ಗೆ ಗುದ್ದಿದ್ದಾನೆ. ಇದರಿಂದಾಗಿ ತಕ್ಷಣವೇ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಐಷಾರಾಮಿ ಕಾರು ಸುಟ್ಟು ಕರಕಲು... ಯುವಕ ಯುವತಿ ಗ್ರೇಟ್‌ ಎಸ್ಕೇಪ್...‌ 
ಜಾಗ್ವಾರ್‌ ಕಾರಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಯುವಕ ಸಂಜಯ್‌ ಹಾಗೂ ಆತನ ಜೊತೆಗಿದ್ದ ಯುವತಿ ಇಬ್ಬರೂ ಕಾರಿನಿಂದ ಹೊರಗೆ ಬಂದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತ್ತ, ನೋಡನೋಡುತ್ತಿದ್ದಂತೆ ಐಷಾರಾಮಿ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಪೆಟ್ರೋಲ್‌ ಪಂಪ್‌ನಲ್ಲಿ ಅಗ್ನಿ ದುರಂತಕ್ಕೆ ಕಾರಣ ಏನು?
ಜಾಗ್ವಾರ್‌ ಕಾರನ್ನು ಚಾಲನೆ ಮಾಡುತ್ತಿದ್ದ ಯುವಕ ಸಂಜಯ್‌ ಕುಡಿದು ಡ್ರೈವ್‌ ಮಾಡುತ್ತಿದ್ದ ಎಂದು ತಿಳಿದು ಬಂದಿದ್ದು, ಚಾಲಕ ಕುಡಿದ ಮತ್ತಿನಲ್ಲಿ ಇದ್ದದ್ದೇ ಪೆಟ್ರೋಲ್‌ ಪಂಪ್‌ನಲ್ಲಿ ಅಗ್ನಿ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.  

ಈ ಘಟನೆಯಲ್ಲಿ ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಗುಡ್ಡು ಕುಮಾರ್ ಎಂಬುವವರ ಕಾಲಿಗೆ ಗಾಯವಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಅತ್ತಿಬೆಲೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಕುಡಿದು ಕಾರು ಚಾಲನೆ ಮಾಡಿದ್ದ ಸಂಜಯ್ ನನ್ನು ವಶಕ್ಕೆ ಪಡೆದಿದ್ದಾರೆ.

ಒಟ್ಟಿನಲ್ಲಿ ಅತ್ತಿಬೆಲೆ ಬಳಿ ಕುಡಿದ ಯುವಕನ ಅವಾಂತರವನ್ನೇ ಸೃಷ್ಟಿಸಿದ್ದು, ಆತನ ಅಜಾಗರೂಕತೆಯಿಂದಾಗಿ ಐಷಾರಾಮಿ ಕಾರುಗಳಲ್ಲಿ ಒಂದು ಎಂದು ಎಣಿಸಲಾಗುವ ಜಾಗ್ವಾರ್‌ ಕಾರು ಕಣ್‌ ಮುಂದೆ ಧಗಧಗಿಸಿ ಉರಿದು ಸುಟ್ಟು ಕರಕಲಾದರೆ, ಜೀವನ ಕಟ್ಟಿಕೊಳ್ಳಲು ಪೆಟ್ರೋಲ್‌ ಪಂಪ್‌ನಲ್ಲಿ ಕೆಲಸ ಮಾಡುತ್ತಿದ್ದ ನೌಕರನ ಕಾಲಿಗೆ ಪೆಟ್ಟಾಗಿ ಆಸ್ಪತ್ರೆ ಸೇರುವಂತಾಗಿದೆ. 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES