• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ದಿನಗಣನೆ ಆರಂಭ

ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ದಿನಗಣನೆ ಆರಂಭ

Basavanagudi Kadalekai Parishe: ಕಡಲೆಕಾಯಿ ರೈತರು, ವ್ಯಾಪಾರಿಗಳು ಹಾಗೂ ಗ್ರಾಹಕರ ಸಂಭ್ರಮಕ್ಕೆ ವೇದಿಕೆಯಾಗಲಿರುವ ಪರಿಷೆಯಲ್ಲಿ ಈ ಬಾರಿಯೂ ವಿವಿಧ ಜಿಲ್ಲೆಗಳು ಮತ್ತು ನೆರೆಯ ರಾಜ್ಯಗಳಿಂದ ವ್ಯಾಪಾರಿಗಳು ಭಾಗವಹಿಸಲಿದ್ದಾರೆ.

Written ByChetana Devarmani
Published: Nov 22, 2026, 08:04 IST|Updated: Nov 22, 2026, 08:07 IST
joinshare
ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ದಿನಗಣನೆ ಆರಂಭ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

2

₹1,000 ಇದ್ದರೆ ಸಾಕು! ಈ ವಾರ ಲಾಂಚ್ ಆಗಲಿವೆ 4 ಹೊಸ ಮ್ಯೂಚುವಲ್ ಫಂಡ್‌ಗಳು; ಹೂಡಿಕೆಗೆ ಸಿದ್ಧರಾಗಿ!

3

ʻಐಶಿರ್ʼ ಜೋಡಿಯ ನಿಶ್ಚಿತಾರ್ಥ ಸಂಭ್ರಮ: ಉಂಗುರ ಬದಲಾಯಿಸಿಕೊಂಡ ಶಿಶಿರ್ ಶಾಸ್ತ್ರಿ - ಐಶ್ವರ್ಯಾ

4

ಘೋರ ದುರಂತ: ಪ್ರೀತಿಸಿ ಮದುವೆಯಾದ ಕೇವಲ 45 ದಿನದಲ್ಲೇ ನವದಂಪತಿ ದುರ್ಮರಣ!

5

ಟೊಮೆಟೊ ಜ್ಯೂಸ್ vs ಕಿತ್ತಳೆ ಜ್ಯೂಸ್.. ಸಕ್ಕರೆ ನಿಯಂತ್ರಿಸಲು ಬೆಳಿಗ್ಗೆ ಯಾವುದು ಕುಡಿಯುವುದು ಉತ್ತಮ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಾಂಪ್ರದಾಯಿಕ ಜಾತ್ರೆಗಳಲ್ಲಿ ಒಂದಾದ ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ದಿನಗಣನೆ ಆರಂಭವಾಗಿದೆ. ಪ್ರತಿವರ್ಷ ಸಾವಿರಾರು ಜನರನ್ನು ಆಕರ್ಷಿಸುವ ಈ ಪ್ರಸಿದ್ಧ ಜಾತ್ರೆ ಈ ಬಾರಿ ಡಿಸೆಂಬರ್ 5 ರಿಂದ 8 ರ ವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ. ಕಡಲೆಕಾಯಿ ರೈತರು, ವ್ಯಾಪಾರಿಗಳು ಹಾಗೂ ಗ್ರಾಹಕರ ಸಂಭ್ರಮಕ್ಕೆ ವೇದಿಕೆಯಾಗಲಿರುವ ಪರಿಷೆಯಲ್ಲಿ ಈ ಬಾರಿಯೂ ವಿವಿಧ ಜಿಲ್ಲೆಗಳು ಮತ್ತು ನೆರೆಯ ರಾಜ್ಯಗಳಿಂದ ವ್ಯಾಪಾರಿಗಳು ಭಾಗವಹಿಸಲಿದ್ದಾರೆ.

ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಡಲೆಕಾಯಿ ಪರಿಷೆಯ ಸಂಭ್ರಮ ಮನೆಮಾಡಲಿದೆ. ಹಸಿ ಕಡಲೆಕಾಯಿ, ಹುರಿದ ಕಡಲೆಕಾಯಿ, ಬೇಯಿಸಿದ ಕಡಲೆಕಾಯಿ ಸೇರಿದಂತೆ ವಿವಿಧ ಬಗೆಯ ಕಡಲೆಕಾಯಿ ಖರೀದಿಸಲು ಜನರು ಮುಗಿಬೀಳಲಿದ್ದಾರೆ. ಇದರ ಜೊತೆಗೆ ಸಾಂಪ್ರದಾಯಿಕ ತಿಂಡಿಗಳು, ಸಿಹಿ ತಿನಿಸುಗಳು, ಆಟಿಕೆಗಳು ಹಾಗೂ ವಿವಿಧ ವಸ್ತುಗಳ ಮಳಿಗೆಗಳು ಜಾತ್ರೆಯ ಆಕರ್ಷಣೆಯಾಗಲಿವೆ. ಕುಟುಂಬ ಸಮೇತರಾಗಿ ಜಾತ್ರೆಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

ಯಾವೆಲ್ಲ ಜಿಲ್ಲೆಗಳಿಂದ ಬರಲಿದೆ ಕಡಲೆಕಾಯಿ?

ಕಡಲೆಕಾಯಿ ಪರಿಷೆಗೆ ಕರ್ನಾಟಕದ ವಿವಿಧ ಭಾಗಗಳಿಂದ ರೈತರು ಮತ್ತು ವ್ಯಾಪಾರಿಗಳು ತಮ್ಮ ಉತ್ಪನ್ನಗಳೊಂದಿಗೆ ಆಗಮಿಸಲಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ಚಿಂತಾಮಣಿ, ಶ್ರೀನಿವಾಸಪುರ, ಮಂಡ್ಯ, ಮಾಗಡಿ, ಮೈಸೂರು, ಕುಣಿಗಲ್ ಹಾಗೂ ತುಮಕೂರು ಭಾಗಗಳಿಂದ ಕಡಲೆಕಾಯಿ ಮಾರುಕಟ್ಟೆಗೆ ಬರಲಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ತಮಿಳುನಾಡು ಮತ್ತು ಆಂಧ್ರಪ್ರದೇಶದ ವ್ಯಾಪಾರಿಗಳೂ ತಮ್ಮ ಕಡಲೆಕಾಯಿ ಉತ್ಪನ್ನಗಳನ್ನು ತಂದು ಮಾರಾಟ ಮಾಡಲಿದ್ದಾರೆ.

ವಿವಿಧ ಪ್ರದೇಶಗಳ ಕಡಲೆಕಾಯಿ ಒಂದೇ ಸ್ಥಳದಲ್ಲಿ ಲಭ್ಯವಾಗುವುದರಿಂದ ಗ್ರಾಹಕರಿಗೆ ಹಲವು ಬಗೆಯ ಉತ್ಪನ್ನಗಳನ್ನು ಖರೀದಿಸುವ ಅವಕಾಶ ಸಿಗಲಿದೆ. ರೈತರಿಗೆ ತಮ್ಮ ಬೆಳೆಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಇದು ಪ್ರಮುಖ ವೇದಿಕೆಯಾಗಲಿದೆ.

ಈ ಬಾರಿ ಕಡಲೆಕಾಯಿ ಬೆಲೆ ಹೆಚ್ಚಾಗುತ್ತಾ?

ಈ ವರ್ಷದ ಕಡಲೆಕಾಯಿ ಪರಿಷೆಯಲ್ಲಿ ಗ್ರಾಹಕರ ಗಮನ ಸೆಳೆಯಲಿರುವ ಪ್ರಮುಖ ವಿಚಾರ ಬೆಲೆ ಏರಿಕೆಯ ಸಾಧ್ಯತೆ. ರಾಜ್ಯದ ಹಲವು ಭಾಗಗಳಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಕಡಲೆಕಾಯಿ ಇಳುವರಿ ಕುಸಿದಿದೆ ಎನ್ನಲಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಕಡಲೆಕಾಯಿ ಪೂರೈಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ಜಾತ್ರೆಯ ವೇಳೆಗೆ ಬೆಲೆ ಹೆಚ್ಚಾಗಬಹುದು ಎಂಬ ನಿರೀಕ್ಷೆಯಿದೆ.

ಸದ್ಯ ಮಾರುಕಟ್ಟೆಯಲ್ಲಿ ಕಾಲು ಲೀಟರ್ ಅಳತೆಯ ಕಡಲೆಕಾಯಿ ಬೆಲೆ ಸುಮಾರು 20ರಿಂದ 25 ರೂಪಾಯಿಗಳ ಆಸುಪಾಸಿನಲ್ಲಿದೆ. ಡಿಸೆಂಬರ್ ಆರಂಭದ ವೇಳೆಗೆ ಬೇಡಿಕೆ ಮತ್ತು ಪೂರೈಕೆಯನ್ನು ಅವಲಂಬಿಸಿ ದರದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ಪ್ಲಾಸ್ಟಿಕ್ ಮುಕ್ತ ಜಾತ್ರೆಗೆ ಆದ್ಯತೆ

ಈ ಬಾರಿ ಕಡಲೆಕಾಯಿ ಪರಿಷೆಯನ್ನು ಪರಿಸರ ಸ್ನೇಹಿಯಾಗಿ ಆಯೋಜಿಸಲು ವಿಶೇಷ ಆದ್ಯತೆ ನೀಡಲಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ. ಜಾತ್ರೆಗೆ ಬರುವ ಸಾರ್ವಜನಿಕರು ಕೂಡ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವ ಮೂಲಕ ಸಹಕರಿಸುವ ನಿರೀಕ್ಷೆಯಿದೆ.

ಡಿಸೆಂಬರ್ 5ರಿಂದ ಆರಂಭವಾಗಲಿರುವ ಬಸವನಗುಡಿಯ ಕಡಲೆಕಾಯಿ ಪರಿಷೆ ಬೆಂಗಳೂರಿಗರಿಗೆ ನಾಲ್ಕು ದಿನಗಳ ಹಬ್ಬದ ವಾತಾವರಣವನ್ನು ಸೃಷ್ಟಿಸಲಿದೆ. ಕಡಲೆಕಾಯಿ ಖರೀದಿ, ಸಾಂಪ್ರದಾಯಿಕ ತಿಂಡಿಗಳ ಸವಿರುಚಿ, ವ್ಯಾಪಾರ ವಹಿವಾಟು ಮತ್ತು ಜಾತ್ರೆಯ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಜನರು ಸಜ್ಜಾಗುತ್ತಿದ್ದಾರೆ. ಈ ಬಾರಿ ಕಡಲೆಕಾಯಿ ಬೆಲೆ ಎಷ್ಟಿರಲಿದೆ ಮತ್ತು ಯಾವ ಭಾಗದ ಕಡಲೆಕಾಯಿ ಹೆಚ್ಚು ಬೇಡಿಕೆ ಪಡೆಯಲಿದೆ ಎಂಬ ಕುತೂಹಲವೂ ಹೆಚ್ಚಾಗಿದೆ.

Add Zee News as a Preferred Source
TAGS:
Kannada News