• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತರಿಂದ ದಿಢೀರ್‌ ನೈಟ್‌ ರೌಂಡ್ಸ್:‌ ಅಧಿಕಾರಿಗಳಿಗೆ ಖಡಕ್ ಸೂಚನೆ

ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತರಿಂದ ದಿಢೀರ್‌ ನೈಟ್‌ ರೌಂಡ್ಸ್:‌ ಅಧಿಕಾರಿಗಳಿಗೆ ಖಡಕ್ ಸೂಚನೆ

ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್‌ ಶುಕ್ರವಾರ ತಡರಾತ್ರಿ ದಿಢೀರನೆ ಸಿಟಿ ರೌಂಡ್ಸ್‌ ನಡೆಸಿದರು. ಈ ವೇಳೆ, ಅಗತ್ಯ ಮೂಲಭೂತ ಸೌಕರ್ಯಗಳ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Written ByYashaswini V
Published: Nov 21, 2026, 08:56 IST|Updated: Nov 21, 2026, 09:04 IST
joinshare
ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತರಿಂದ ದಿಢೀರ್‌ ನೈಟ್‌ ರೌಂಡ್ಸ್:‌ ಅಧಿಕಾರಿಗಳಿಗೆ ಖಡಕ್ ಸೂಚನೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

ಹಿರಿಯ ನಾಗರಿಕರಿಗೆ ಎಲ್ಲಿ ಹೆಚ್ಚು ಬಡ್ಡಿ ಆದಾಯ? SBI FD ಅಥವಾ SCSS; ₹10, ₹20, ₹30 ಲಕ್ಷಕ್ಕೆ ಇಲ್ಲಿದೆ ಲೆಕ್ಕಾಚಾರ!

2

₹1,000 ಇದ್ದರೆ ಸಾಕು! ಈ ವಾರ ಲಾಂಚ್ ಆಗಲಿವೆ 4 ಹೊಸ ಮ್ಯೂಚುವಲ್ ಫಂಡ್‌ಗಳು; ಹೂಡಿಕೆಗೆ ಸಿದ್ಧರಾಗಿ!

3

ʻಐಶಿರ್ʼ ಜೋಡಿಯ ನಿಶ್ಚಿತಾರ್ಥ ಸಂಭ್ರಮ: ಉಂಗುರ ಬದಲಾಯಿಸಿಕೊಂಡ ಶಿಶಿರ್ ಶಾಸ್ತ್ರಿ - ಐಶ್ವರ್ಯಾ

4

ಘೋರ ದುರಂತ: ಪ್ರೀತಿಸಿ ಮದುವೆಯಾದ ಕೇವಲ 45 ದಿನದಲ್ಲೇ ನವದಂಪತಿ ದುರ್ಮರಣ!

5

ಟೊಮೆಟೊ ಜ್ಯೂಸ್ vs ಕಿತ್ತಳೆ ಜ್ಯೂಸ್.. ಸಕ್ಕರೆ ನಿಯಂತ್ರಿಸಲು ಬೆಳಿಗ್ಗೆ ಯಾವುದು ಕುಡಿಯುವುದು ಉತ್ತಮ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ನಿನ್ನೆ (ನ. 20) ತಡ ರಾತ್ರಿ ಅಧಿಕಾರಿಗಳ ಜೊತೆ ದಿಢೀರ್ ನೈಟ್ ರೌಂಡ್ಸ್ ನಡೆಸಿದ್ದು, ಈ ವೇಳೆ ಕಂಡು ಬಂದ ಹಲವು ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಖಡಕ್‌ ಸೂಚನೆ ನೀಡಿದ್ದಾರೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ವೆಂಕಟಾಚಲಪತಿ ಆರ್, ಮುಖ್ಯ ಅಭಿಯಂತರ ವಿಜಯ್ ಕುಮಾರ ಹರಿದಾಸ್, ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರು, ತ್ಯಾಜ್ಯ ನಿರ್ವಹಣೆ ವಿಭಾಗದ ಅಧಿಕಾರಿಗಳು, ಆರೋಗ್ಯ ವಿಭಾಗದ ಅಧಿಕಾರಿಗಳ ಜೊತೆ ಸೇರಿ ತಡ ರಾತ್ರಿ ಕೈಗೊಳ್ಳಲಾಗಿದ್ದ ನೈಟ್‌ ರೌಂಡ್ಸ್ ನಲ್ಲಿ ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತರಾದ ಜಗದೀಶ್‌, ಹಲಸೂರು ಕೆರೆ ಸುತ್ತಲಿನ ಕಾಮಗಾರಿ ಪರಿಶೀಲಿಸಿದರಲ್ಲದೆ, ರಿಚ್ಮಂಡ್ ರಸ್ತೆಯಲ್ಲೂ ಓಡಾಡಿ ಹಲವು ಸಮಸ್ಯೆಗಳನ್ನು ಪರಿಹರಿಸಲು ನಿರ್ದೇಶನ ನೀಡಿದರಲ್ಲದೆ, ಕೂಡಲೇ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಈ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಪಾಲಿಕೆ ಆಯುಕ್ತರ ಸೂಚನೆ:
* ರಸ್ತೆ ಗುಂಡಿಗಳನ್ನು ಮುಚ್ಚುವುದು
* ಬೀದಿ ದೀಪಗಳ ಕಾರ್ಯ ನಿರ್ವಹಣೆ, ಅಳವಡಿಕೆ ಹಾಗೂ ನಿರ್ವಹಣೆ, 
* ರಸ್ತೆ ಡಾಂಬರೀಕರಣ ಕಾಮಗಾರಿ ಗುಣಮಟ್ಟದ ಪರಿಶೀಲನೆ,
* ತ್ಯಾಜ್ಯ ನಿರ್ವಹಣೆ, ಬ್ಲ್ಯಾಕ್ ಸ್ಪಾಟ್ ಗಳ ತೆರವುಗೊಳಿಸುವುದು 
* ಪಾದಚಾರಿ ಮಾರ್ಗ ದುರಸ್ಥಿ
* ಚರಂಡಿ ಹೂಳು ತೆಗೆಯುವುದು
* ರಸ್ತೆ ವಿಭಜಕಗಳ ಸ್ವಚ್ಛತೆ
* ಮರಗಳ ಒಣಗಿದ ರೆಂಬೆ ಕೊಂಬೆಗಳ ತೆರವು
* ಅನಧಿಕೃತ ಕೇಬಲ್ ತೆರವು ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಸಿಟಿ ರೌಂಡ್ಸ್ ವೇಳೆ ಪಾದಚಾರಿ ಮಾರ್ಗದಲ್ಲಿ ವಾರಸುದಾರರಿಲ್ಲದ ಹಾಗೂ ಅನುಪಯುಕ್ತ ತಳ್ಳುವ ಗಾಡಿ ತೆರವಿಗೆ ಆಯುಕ್ತರಾದ ಜಗದೀಶ್ ರವರು ಸೂಚನೆ ನೀಡಿದರು. ಇದಲ್ಲದೆ ರಸ್ತೆಯಲ್ಲಿ ನೇತಾಡುತ್ತಿರುವ ಅನಧಿಕೃತ ಕೇಬಲ್‌ಗಳನ್ನು ಸಹ ಕೂಡಲೇ ತೆರವುಗೊಳಿಸುವಂತೆ ಆದೇಶಿಸಿದರು.

ಸಿಟಿ ರೌಂಡ್ಸ್ ವೇಳೆ ರಿಚ್ಮಂಡ್ ರಸ್ತೆ ಲೈಫ್ ಸ್ಟೈಲ್ ಹತ್ತಿರ ಪಾದಚಾರಿ ಮಾರ್ಗದಲ್ಲಿ ಕಸ ಸುರಿದಿದ್ದು ಈ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇದರಿಂದ ನಗರ ನೈರ್ಮಲ್ಯ ಹಾಳಾಗಿ, ಜನರು ತಿರುಗಾಡಲು ಸಮಸ್ಯೆ ಆಗುತ್ತಿದ್ದು, ಕೂಡಲೇ ತ್ಯಾಜ್ಯ ತೆರವುಗೊಳಿಸಲು ಹಾಗೂ ಸ್ಥಳ ಸ್ವಚ್ಛಗೊಳಿಸುವಂತೆ ಹಾಗೂ ಲೈಫ್ ಸ್ಟೈಲ್ ಹತ್ತಿರ ರಸ್ತೆ ಪಕ್ಕದ ಸಸಿಗಳಲ್ಲಿ ಕಸ ತುಂಬಿಕೊಂಡಿದ್ದು, ಕಳೆ ಬೆಳೆದುಕೊಂಡಿದ್ದು, ಕೂಡಲೇ ತ್ಯಾಜ್ಯ ತೆರವುಗೊಳಿಸಲು ಹಾಗೂ ಕಳೆ ತೆಗೆದು ಹಾಕಿ ರಸ್ತೆ ಬದಿ ಸಸಿಗಳನ್ನು ಸರಿಯಾದ ಬೆಳವಣಿಗೆಗೆ ಕ್ರಮ ವಹಿಸಲು ಸುಂದರೀಕರಣ ಹಾಗೂ ಹಸಿರೀಕಾರಣಕ್ಕೆ ಒತ್ತು ನೀಡಲು ಕೇಂದ್ರ ಪಾಲಿಕೆ ಆಯುಕ್ತರು ಅಧಿಕಾರಿಗಳಿಗೆ ನಿರ್ದೇಶಿಸಿದರು.

Add Zee News as a Preferred Source
TAGS:
Kannada News
Civic Issues