ಬೆಂಗಳೂರು : ನಗರದಲ್ಲಿ ನಿನ್ನೆ (ಸೆಪ್ಟೆಂಬರ್ 30, 2026) ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ನಗರದಾದ್ಯಂತ ಭಾರೀ ಅವಾಂತರವೇ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ರಾತ್ರಿ 9 ಗಂಟೆಗೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಮಳೆ ನೀರು ನಿಲುಗಡೆ, ಪ್ರವಾಹ ಸಾಧ್ಯತೆಯಿರುವ ಸ್ಥಳಗಳು ಹಾಗೂ ಅಂಡರ್‌ಪಾಸ್‌ಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟನ ಸೂಚನೆ ನೀಡಲಾಗಿದೆ.
ಈಗಾಗಲೇ ಹಿಂದಿನ ವರ್ಷಗಳಲ್ಲಿ ಮಳೆ ನೀರು ನಿಲುಗಡೆಯಾಗಿರುವ ಸ್ಥಳಗಳು ಹಾಗೂ ತಗ್ಗಿನಲ್ಲಿರುವ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸಲಾಗಿದ್ದು, ಬುಧವಾರದಂದು ಸುರಿದ ಭಾರಿ ಮಳೆಯಲ್ಲಿ ಆ ಸ್ಥಳಗಳಲ್ಲಿ ಎಷ್ಟು ಕಡೆ ನೀರು ನಿಂತಿದೆ ಹಾಗೂ ಎಷ್ಟು ಸ್ಥಳಗಳಲ್ಲಿ ತ್ವರಿತವಾಗಿ ನೀರು ತೆರವುಗೊಳಿಸಲಾಗಿದೆ ಎಂಬುದರ ಸಮಗ್ರ ಮಾಹಿತಿಯನ್ನು ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಪಡೆದರು.
ವಾಟರ್‌ಲಾಗಿಂಗ್, ಸೂಕ್ಷ್ಮ ಸ್ಥಳಗಳು ಹಾಗೂ ಅಂಡರ್‌ಪಾಸ್‌ಗಳ ಸಮಗ್ರ ಪಟ್ಟಿ:
ಮಳೆನೀರು ನಿಲುಗಡೆ ಪಾಯಿಂಟ್‌ಗಳು, ಪ್ರವಾಹ ಸಾಧ್ಯತೆಯಿರುವ ಸೂಕ್ಷ್ಮ ಸ್ಥಳಗಳು ಹಾಗೂ ಅಂಡರ್‌ಪಾಸ್‌ಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸಿ, ಪ್ರತಿ ಸ್ಥಳದಲ್ಲಿ ಉಂಟಾದ ಸಮಸ್ಯೆ, ಕೈಗೊಂಡಿರುವ ಕ್ರಮ ಹಾಗೂ ಶಾಶ್ವತ ಪರಿಹಾರಕ್ಕೆ ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಯುಕ್ತರು ಎಂಜಿನಿಯರ್‌ಗಳಿಗೆ ಸೂಚಿಸಿದ್ದಾರೆ.
🌧️ Rain Response & Civic Works | North city corporation
📍 Kalyana Nagar Junction –
Waterlogging on the service road caused by heavy rainfall was cleared, restoring smooth movement for commuters.
📍 Telecom Layout
🛠️ Shoulder drain blockages are being cleared with the… pic.twitter.com/Sk99v4miU9— Greater Bengaluru Authority (@GBA_office) September 30, 2026
ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆದರೂ ಉತ್ತರವಿಲ್ಲ:-
ವಿದ್ಯಾಶಿಲ್ಪ ಅಂಡರ್‌ಪಾಸ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ, ಈ ಸ್ಥಳದಲ್ಲಿ ಪರಿಹಾರ ಕ್ರಮ ಕೈಗೊಳ್ಳುವ ಕುರಿತು ಪಾಲಿಕೆಯ ಎಂಜಿನಿಯರಿಂಗ್ ವಿಭಾಗದಿಂದ ಹಲವು ಬಾರಿ ಪತ್ರ ಬರೆಯಲಾಗಿದ್ದರೂ ಅಗತ್ಯ ಕ್ರಮವಾಗಿಲ್ಲ ಎಂದು ಗಮನಿಸಿದ ಆಯುಕ್ತರು, ಸಂಬಂಧಿಸಿದ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು.
24 ಗಂಟೆಗಳ ನಿಯಂತ್ರಣ ಕೊಠಡಿ ಕಾರ್ಯಾಚರಣೆ:
ಮಳೆ ಸಂದರ್ಭದಲ್ಲಿ 24 ಗಂಟೆಗಳ ಕಾಲ ನಿಯಂತ್ರಣ ಕೊಠಡಿಯಲ್ಲಿ ಅಧಿಕಾರಿಗಳು ಕರ್ತವ್ಯದಲ್ಲಿದ್ದು, ಸಾರ್ವಜನಿಕರಿಂದ ಬರುವ ದೂರುಗಳು ಹಾಗೂ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದರು.
🌧️ Swift Action to Ensure Smooth Rainwater Flow!
📍 Hoodi Underpass
The Bengaluru East City Corporation cleared the water accumulated at Hoodi Underpass, enabling smooth movement of vehicular traffic.
Waste and other obstructions hindering the flow of rainwater into the… pic.twitter.com/z4KJPvmR91— Greater Bengaluru Authority (@GBA_office) September 30, 2026
ನಿಯಂತ್ರಣ ಕೊಠಡಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದಿರುವುದು ಕಂಡುಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಾರ್ವಜನಿಕರು, ಹಿರಿಯ ಅಧಿಕಾರಿಗಳು ಹಾಗೂ ಸಚಿವರಿಂದ ಬರುವ ಕರೆಗಳಿಗೆ ತಕ್ಷಣ ಸ್ಪಂದಿಸುವಂತೆ ಈ ಸಮಯದಲ್ಲಿ ಆಯುಕ್ತರು ಸೂಚಿಸಿದರು.
ಸಭೆಯಲ್ಲಿ ಅಪರ ಆಯುಕ್ತರು (ಅಭಿವೃದ್ಧಿ) ಶ್ರೀಮತಿ ಆರ್. ಲತಾ, ಅಪರ ಆಯುಕ್ತರು (ಕಂದಾಯ - ಪ್ರಭಾರ) ಶ್ರೀಮತಿ ಪಲ್ಲವಿ, ಜಂಟಿ ಆಯುಕ್ತರಾದ ಶ್ರೀ ಮೊಹಮ್ಮದ್ ನಯೀಮ್ ಮೊಮಿನ್, ಮುಖ್ಯ ಅಭಿಯಂತರರಾದ ಡಾ. ರಾಘವೇಂದ್ರ ಪ್ರಸಾದ್ ಹಾಗೂ ಶ್ರೀಮತಿ ಯಮುನಾ, ಅಧೀಕ್ಷಕ ಅಭಿಯಂತರರು ಹಾಗೂ ಕಾರ್ಯಪಾಲಕ ಅಭಿಯಂತರರು ಉಪಸ್ಥಿತರಿದ್ದರು.