Bengaluru Liquor Ban: ಕರ್ನಾಟಕ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಮತದಾನದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟವನ್ನ ನಿಷೇಧಿಸಲಾಗಿದೆ. ಅಕ್ಟೋಬರ್ 21ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್ 23ರ ಸಂಜೆ 4 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ನಗರ ಪೊಲೀಸ್ ಕಮಿಷನರೇಟ್‌ನ ಒಟ್ಟು 11 ವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಆಯ್ದ ಪೊಲೀಸ್ ಠಾಣಾ ಪ್ರದೇಶಗಳಿಗೆ ಈ ಆದೇಶ ಅನ್ವಯವಾಗಲಿದೆ. ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುವುದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ. ಮದ್ಯ ಮಾರಾಟ ನಿಷೇಧದ ಅವಧಿಯಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿರುವ ಮದ್ಯದಂಗಡಿಗಳು ಮತ್ತು ಮದ್ಯ ಮಾರಾಟಕ್ಕೆ ಸಂಬಂಧಿಸಿದ ಪರವಾನಗಿ ಹೊಂದಿರುವ ಸಂಸ್ಥೆಗಳು ಆದೇಶವನ್ನ ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ.
ಯಾವಾಗಿನಿಂದ ಯಾವಾಗದವರೆಗೆ ಮದ್ಯ ನಿಷೇಧ?
ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶದ ಪ್ರಕಾರ, ಅಕ್ಟೋಬರ್ 21ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್ 23ರ ಸಂಜೆ 4 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ ಜಾರಿಯಲ್ಲಿರಲಿದೆ. ಶಿಕ್ಷಕರ ಮತದಾನಕ್ಕೆ ಸಂಬಂಧಿಸಿದಂತೆ ಶಾಂತಿಯುತ ವಾತಾವರಣ ನಿರ್ಮಿಸುವುದು ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಅಡಚಣೆ ಉಂಟಾಗದಂತೆ ನೋಡಿಕೊಳ್ಳುವುದು ಆಡಳಿತದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ನಿರ್ದಿಷ್ಟ ಪೊಲೀಸ್ ಠಾಣಾ ವ್ಯಾಪ್ತಿಗಳನ್ನ ಗುರುತಿಸಿ ಮದ್ಯ ಮಾರಾಟದ ಮೇಲೆ ನಿರ್ಬಂಧ ಹೇರಲಾಗಿದೆ.
ಕೇಂದ್ರ ವಿಭಾಗದಲ್ಲಿ ಎಲ್ಲಿ ಮದ್ಯ ಮಾರಾಟ ಬಂದ್?
ಬೆಂಗಳೂರಿನ ಕೇಂದ್ರ ವಿಭಾಗದ ಹೈಗ್ರೌಂಡ್ಸ್, ಕಬ್ಬನ್ ಪಾರ್ಕ್ ಮತ್ತು ಶೇಷಾದ್ರಿಪುರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟ ನಿಷೇಧ ಜಾರಿಯಲ್ಲಿರಲಿದೆ.
ಪೂರ್ವ ವಿಭಾಗದ ವ್ಯಾಪ್ತಿ
ಪೂರ್ವ ವಿಭಾಗದ ಪುಲಿಕೇಶಿನಗರ ಮತ್ತು ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿಯೂ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.
ಪಶ್ಚಿಮ ವಿಭಾಗದ ಪ್ರದೇಶಗಳು
ಪಶ್ಚಿಮ ವಿಭಾಗದ ಚಾಮರಾಜಪೇಟೆ, ವಿಜಯನಗರ, ಗೋವಿಂದರಾಜನಗರ ಮತ್ತು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟ ಬಂದ್ ಆಗಲಿದೆ.
ಉತ್ತರ ವಿಭಾಗದಲ್ಲಿ ನಿರ್ಬಂಧ
ಉತ್ತರ ವಿಭಾಗದ ರಾಜಾಜಿನಗರ, ಮಲ್ಲೇಶ್ವರ, ಸುಬ್ರಹ್ಮಣ್ಯನಗರ ಮತ್ತು ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ದಕ್ಷಿಣ ವಿಭಾಗದ ಠಾಣಾ ವ್ಯಾಪ್ತಿಗಳು
ದಕ್ಷಿಣ ವಿಭಾಗದ ವಿವಿ ಪುರ, ಹನುಮಂತನಗರ ಮತ್ತು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿಯೂ ಈ ಆದೇಶ ಅನ್ವಯವಾಗಲಿದೆ.
ಆಗ್ನೇಯ ಮತ್ತು ನೈರುತ್ಯ ವಿಭಾಗ
ಆಗ್ನೇಯ ವಿಭಾಗದ ಕೋರಮಂಗಲ ಮತ್ತು ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಇನ್ನು ನೈರುತ್ಯ ವಿಭಾಗದ ಕೆಂಗೇರಿ, ಸುಬ್ರಹ್ಮಣ್ಯಪುರ ಮತ್ತು ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿಯೂ ನಿರ್ಬಂಧ ಜಾರಿಯಲ್ಲಿರಲಿದೆ.
ವಾಯುವ್ಯ ಮತ್ತು ಈಶಾನ್ಯ ವಿಭಾಗಗಳಲ್ಲೂ ಮದ್ಯ ನಿಷೇಧ
ವಾಯುವ್ಯ ವಿಭಾಗದ ಬ್ಯಾಡರಹಳ್ಳಿ ಮತ್ತು ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಈಶಾನ್ಯ ವಿಭಾಗದ ದೇವನಹಳ್ಳಿ, ಅಮೃತಹಳ್ಳಿ ಮತ್ತು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿಯೂ ಮದ್ಯ ಮಾರಾಟ ನಿಷೇಧ ಜಾರಿಯಲ್ಲಿರಲಿದೆ.
ವೈಟ್‌ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿ ವಿಭಾಗ
ವೈಟ್‌ಫೀಲ್ಡ್ ವಿಭಾಗದ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಎಲೆಕ್ಟ್ರಾನಿಕ್ ಸಿಟಿ ಮತ್ತು ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿಯೂ ಈ ಆದೇಶ ಅನ್ವಯವಾಗಲಿದೆ.
ಮದ್ಯದಂಗಡಿಗಳಿಗೆ ಸೂಚನೆ
ಮದ್ಯ ಮಾರಾಟ ನಿಷೇಧದ ಆದೇಶವನ್ನ ಸಂಬಂಧಪಟ್ಟ ವ್ಯಾಪ್ತಿಗಳಲ್ಲಿರುವ ಎಲ್ಲಾ ಪರವಾನಗಿ ಹೊಂದಿರುವ ಮದ್ಯ ಮಾರಾಟಗಾರರು ಪಾಲಿಸಬೇಕಾಗಿದೆ. ನಿಯಮ ಉಲ್ಲಂಘನೆ ಆಗದಂತೆ ಪೊಲೀಸ್ ಇಲಾಖೆ ನಿಗಾ ವಹಿಸುವ ಸಾಧ್ಯತೆಯಿದೆ. ಒಟ್ನಲ್ಲಿ ಕರ್ನಾಟಕ ವಿಧಾನ ಪರಿಷತ್ ಶಿಕ್ಷಕರ ಮತದಾನದ ಹಿನ್ನೆಲೆಯಲ್ಲಿ ಬೆಂಗಳೂರಿನ 11 ಪೊಲೀಸ್ ವಿಭಾಗಗಳ ಆಯ್ದ ಠಾಣಾ ವ್ಯಾಪ್ತಿಗಳಲ್ಲಿ ಮೂರು ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.