SOCIAL MEDIA

Newsletter

PARTNER SITES
Select Language Select State

ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಗೋಡೌನ್‌ಗೆ ಬೆಂಕಿ; ಪಟಾಕಿ ಕಿಡಿಯಿಂದ ಅಗ್ನಿ ಅವಘಡ ಶಂಕೆ

ಪಟಾಕಿ ಸಿಡಿಸುವ ಸಂದರ್ಭದಲ್ಲಿ ಹಾರಿದ ಕಿಡಿ ಪ್ಲಾಸ್ಟಿಕ್ ಸ್ಕ್ರ್ಯಾಪ್‌ಗೆ ತಗುಲಿ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

Written By Chetana Devarmani
Published: Nov 10, 2026, 22:33 IST | Updated: Nov 10, 2026, 22:34 IST
Join

ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆ ಸಮೀಪದ ಪ್ಲಾಸ್ಟಿಕ್ ಸ್ಕ್ರ್ಯಾಪ್ ಗೋಡೌನ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಸ್ತೂರಿ ಬಾನಗರದ ರುದ್ರಪ್ಪ ಗಾರ್ಡನ್ ಬಳಿ ಇರುವ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಿ ಗೋಡೌನ್ ಹೊತ್ತಿ ಉರಿದಿದೆ.

ಪಟಾಕಿ ಸಿಡಿಸುವ ಸಂದರ್ಭದಲ್ಲಿ ಹಾರಿದ ಕಿಡಿ ಪ್ಲಾಸ್ಟಿಕ್ ಸ್ಕ್ರ್ಯಾಪ್‌ಗೆ ತಗುಲಿ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯಾಚರಣೆಗಾಗಿ ಮೂರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಗೋಡೌನ್‌ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಸ್ಕ್ರ್ಯಾಪ್ ಸಾಮಗ್ರಿಗಳಿದ್ದ ಕಾರಣ ಬೆಂಕಿ ತೀವ್ರವಾಗಿ ಹರಡಿರುವ ಸಾಧ್ಯತೆಯಿದೆ.

ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿ ಅವಘಡದಿಂದ ಉಂಟಾಗಿರುವ ನಷ್ಟದ ಪ್ರಮಾಣ ಹಾಗೂ ಘಟನೆಯ ಹಿಂದಿನ ನಿಖರ ಕಾರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES