• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಅಪ್ಪನ ಕೊಲೆ ಕೃತ್ಯಕ್ಕೆ ಮಗಳೂ ಸಾಥ್? ಬೆಂಗಳೂರು 7 ಮಂದಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್!

ಅಪ್ಪನ ಕೊಲೆ ಕೃತ್ಯಕ್ಕೆ ಮಗಳೂ ಸಾಥ್? ಬೆಂಗಳೂರು 7 ಮಂದಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್!

Bengaluru Murder Case Latest Update: ಸರಣಿ ಹತ್ಯೆ ನಡೆಸಿರುವ ಆರೋಪ ಎದುರಿಸುತ್ತಿರುವ ಕ್ಯಾಬ್ ಚಾಲಕ ಇಂದುಶೇಖರ್ ಪ್ರಕರಣದಲ್ಲಿ ಇದೀಗ ಮತ್ತೊಂದು ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ತಂದೆಯ ಕೊಲೆ ಕೃತ್ಯಕ್ಕೆ ಪಿಯುಸಿ ಓದುತ್ತಿರುವ ಮಗಳೂ ಸಾಥ್ ನೀಡಿದ್ದಾಳೆ ಎಂಬ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ ಎನ್ನಲಾಗಿದೆ.

Written ByChetana Devarmani
Published: Nov 06, 2026, 10:29 IST|Updated: Nov 06, 2026, 10:31 IST
joinshare
ಅಪ್ಪನ ಕೊಲೆ ಕೃತ್ಯಕ್ಕೆ ಮಗಳೂ ಸಾಥ್? ಬೆಂಗಳೂರು 7 ಮಂದಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್!

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪತ್ನಿ ಹಾಗೂ ಆಕೆಯ ಕುಟುಂಬದವರ ಮೇಲಿನ ದ್ವೇಷದಿಂದ ಸರಣಿ ಹತ್ಯೆ ನಡೆಸಿರುವ ಆರೋಪ ಎದುರಿಸುತ್ತಿರುವ ಕ್ಯಾಬ್ ಚಾಲಕ ಇಂದುಶೇಖರ್ ಪ್ರಕರಣದಲ್ಲಿ ಇದೀಗ ಮತ್ತೊಂದು ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ತಂದೆಯ ಕೊಲೆ ಕೃತ್ಯಕ್ಕೆ ಪಿಯುಸಿ ಓದುತ್ತಿರುವ ಮಗಳೂ ಸಾಥ್ ನೀಡಿದ್ದಾಳೆ ಎಂಬ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ ಇಂದುಶೇಖರ್ ತನ್ನ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆದರೆ, ತನ್ನ ಮಗಳನ್ನು ಮಾತ್ರ ಆತ ಕೊಲೆ ಮಾಡದೆ ಬಿಟ್ಟಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಉಳಿದ ಕುಟುಂಬದ ಸದಸ್ಯರನ್ನು ಗುರಿಯಾಗಿಸಿಕೊಂಡು ಹತ್ಯೆ ನಡೆಸಿದ ಆರೋಪಿ, ಮಗಳನ್ನು ಮಾತ್ರ ಏಕೆ ಬಿಟ್ಟಿದ್ದಾನೆ ಎಂಬ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಗಳ ಪಾತ್ರದ ಬಗ್ಗೆಯೂ ಪೊಲೀಸರಿಗೆ ಅನುಮಾನ

ಏಳು ಮಂದಿಯ ಹತ್ಯೆ ಪ್ರಕರಣದಲ್ಲಿ ಇದೀಗ ಆರೋಪಿ ಇಂದುಶೇಖರ್‌ನ ಮಗಳ ಪಾತ್ರದ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಪಿಯುಸಿ ವ್ಯಾಸಂಗ ಮಾಡುತ್ತಿರುವ ಮಗಳು ತಂದೆಯ ಕೃತ್ಯಕ್ಕೆ ಸಹಕರಿಸಿದ್ದಳೇ ಎಂಬ ಪ್ರಶ್ನೆ ಮೂಡಿದೆ. ಹತ್ಯೆ ನಡೆದ ಸಂದರ್ಭದಲ್ಲಿ ಆಕೆಗೆ ಈ ಘಟನೆಗಳ ಬಗ್ಗೆ ಮಾಹಿತಿ ಇತ್ತೇ? ಅಥವಾ ತಂದೆಯ ಯೋಜನೆಗೆ ಯಾವುದಾದರೂ ರೀತಿಯಲ್ಲಿ ನೆರವು ನೀಡಿದ್ದಳೇ ಎಂಬುದನ್ನು ಪೊಲೀಸರು ಪರಿಶೀಲಿಸುವ ಸಾಧ್ಯತೆಯಿದೆ. ಆದರೆ, ಮಗಳು ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದಾಳೆ ಎಂಬುದು ಸದ್ಯಕ್ಕೆ ದೃಢಪಟ್ಟಿಲ್ಲ. ಈ ಕುರಿತು ಪೊಲೀಸ್ ತನಿಖೆಯಿಂದಲೇ ಸ್ಪಷ್ಟ ಮಾಹಿತಿ ಹೊರಬರಬೇಕಿದೆ.

ಎಂಟು ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದ ಶೇಖರ್

ಆರೋಪಿ ಇಂದುಶೇಖರ್ ಕಳೆದ ಎಂಟು ವರ್ಷಗಳಿಂದ ಬೆಂಗಳೂರಿನ ಭಾಷ್ಯಂ ಸರ್ಕಲ್ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಇದೇ ಮನೆಯಲ್ಲಿ ಭೀಕರ ಹತ್ಯಾಕಾಂಡ ನಡೆದಿರುವ ಆರೋಪ ಕೇಳಿಬಂದಿದೆ. ದೀರ್ಘಕಾಲದಿಂದ ಒಂದೇ ಪ್ರದೇಶದಲ್ಲಿ ವಾಸವಿದ್ದ ಆರೋಪಿ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಪತ್ನಿಯ ತವರು ಮನೆಯವರೊಂದಿಗೆ ಆಕೆಯ ಸಂಪರ್ಕ ಹಾಗೂ ಕುಟುಂಬದವರು ನೀಡುತ್ತಿದ್ದ ಆರ್ಥಿಕ ನೆರವಿನ ವಿಚಾರವಾಗಿ ಆರೋಪಿ ಅಸಮಾಧಾನ ಹೊಂದಿದ್ದ ಎನ್ನಲಾಗಿದೆ. ಇದೇ ವಿಚಾರ ಕೌಟುಂಬಿಕ ಕಲಹಕ್ಕೆ ಕಾರಣವಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ತನಿಖೆಯಲ್ಲಿ ಇನ್ನಷ್ಟು ವಿಚಾರಗಳು ಬಹಿರಂಗವಾಗುವ ಸಾಧ್ಯತೆ

ನಳಿನಿ ನಾಪತ್ತೆಯಾಗಿರುವ ಬಗ್ಗೆ ಆಕೆಯ ತಾಯಿ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಬಳಿಕ ಪ್ರಕರಣದ ತನಿಖೆ ಆರಂಭವಾಗಿತ್ತು. ತನಿಖೆಯ ವೇಳೆ ಒಂದೇ ಕುಟುಂಬದ ಏಳು ಮಂದಿ ಹತ್ಯೆಯಾಗಿರುವ ಭಯಾನಕ ಸಂಗತಿ ಬೆಳಕಿಗೆ ಬಂದಿತ್ತು. ಇದೀಗ ಆರೋಪಿ ಬಂಧನದ ಬೆನ್ನಲ್ಲೇ ಮಗಳ ಪಾತ್ರದ ಬಗ್ಗೆಯೂ ಅನುಮಾನ ವ್ಯಕ್ತವಾಗಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ.

ಸದ್ಯ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು, ಮಗಳ ಹೇಳಿಕೆ ಹಾಗೂ ಇತರ ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕವೇ ಆಕೆಯ ಪಾತ್ರದ ಬಗ್ಗೆ ಸ್ಪಷ್ಟತೆ ಸಿಗಲಿದೆ. ತಂದೆಯ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಜೊತೆಗೆ ಮಗಳ ಪಾತ್ರದ ಕುರಿತಾದ ಅನುಮಾನವೂ ಈ ಪ್ರಕರಣದ ತನಿಖೆಯಲ್ಲಿ ಕುತೂಹಲ ಮೂಡಿಸಿದೆ.
 

Add Zee News as a Preferred Source
TAGS:
Crime