SOCIAL MEDIA

Newsletter

PARTNER SITES
Select Language Select State

ಬಿಜೆಪಿ ಸೇವಾ ಸಂಕಲ್ಪ ಯಾತ್ರೆ ಹಾಗೂ ಬೂತ್ ಅಭಿಯಾನಕ್ಕೆ ಚಾಲನೆ

ಈ ವೇಳೆ ವಿಜಯೇಂದ್ರ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯ್ತು. ಇದೇ ವೇಳೆ ಗುಬ್ಬಿಯ ಚೇಳೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಮುಖಂಡರ ನಡುವೆ ಗಲಾಟೆಯೂ ಕೂಡ ನಡೆದಿದೆ.

Written By Chetana Devarmani
Published: Oct 04, 2026, 08:53 PM IST | Updated: Oct 04, 2026, 08:54 PM IST
Join

ತುಮಕೂರು: ಇಲ್ಲಿನ ಗುಬ್ಬಿ ತಾಲೂಕಿನ ಹಾಗಲವಾಡಿ ಜುಂಜಪ್ಪನಹಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೇವಾ ಸಂಕಲ್ಪ ಅಭಿಯಾನ ಹಾಗೂ ಬೂತ್ ವಿಜಯ ಸಂಕಲ್ಪ ಯಾತ್ರೆ ನಡೆಯಿತು. ಈ ವೇಳೆ ವಿಜಯೇಂದ್ರ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯ್ತು. ಇದೇ ವೇಳೆ ಗುಬ್ಬಿಯ ಚೇಳೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಮುಖಂಡರ ನಡುವೆ ಗಲಾಟೆಯೂ ಕೂಡ ನಡೆದಿದೆ. ಏನಿದು ಕಥೆ ಅಂತೀರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ...

ಮುಂಬರುವ 2028 ರ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಣತೊಟ್ಟಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇವಾ ಸಂಕಲ್ಪ ಯಾತ್ರೆ ಹಾಗೂ ಬೂತ್ ಮಟ್ಟದ ಕಾರ್ಯಕರ್ತರ ಅಭಿಯಾನ ಆರಂಭಿಸಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಾಗಲವಾಡಿ ಬಳಿಯ ಜುಂಜಪ್ಪನಹಟ್ಟಿಯಲ್ಲಿ ಸೇವಾ ಸಂಕಲ್ಪ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದರು. ಇದೇ ವೇಳೆ ಗ್ರಾಮಸ್ಥರು ಅದ್ದೂರಿ ಹರೇವಾದ್ಯ, ಪೂರ್ಣಕುಂಭ ಹಾಗೂ ಸೋಬಾನೆ ಪದಗಳ ಮೂಲಕ ವಿಜಯೇಂದ್ರ ಅವರನ್ನು ಮಾಡಿಕೊಳ್ಳಲಾಯ್ತು.

ಇನ್ನು ಜುಂಜಪ್ಪನ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ವಿಜಯೇಂದ್ರ, ಪ್ರಧಾನಿ ನರೇಂದ್ರ ಮೋದಿಯವರಿಗೆ ಆಯಸ್ಸು, ಆರೋಗ್ಯ ಹಾಗೂ ಶಕ್ತಿ ನೀಡುವಂತೆ ಪ್ರಾರ್ಥಿಸಿದ್ರು. ಕಂಸಾಳೆ, ಕೋಲಾಟ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಬಳಿಕ ಬೂತ್ ಅಧ್ಯಕ್ಷ ಬಸವರಾಜು ಅವರ ಮನೆಯಲ್ಲಿ ವಿಜಯೇಂದ್ರ ಉಪಹಾರ ಸೇವಿಸಿದ್ರು. ಮೋದಿಯವರ 25 ವರ್ಷಗಳ ಸಾರ್ವಜನಿಕ ಜೀವನದ ಸಾಧನೆಯನ್ನು ಸೇವಾ ಸಂಕಲ್ಪ ಅಭಿಯಾನದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗ್ತಿದೆ. ರಕ್ತದಾನ ಶಿಬಿರ, ಸಸಿ ನೆಡುವ ಕಾರ್ಯಕ್ರಮ, ಮಕ್ಕಳಿಗೆ ಚೆಸ್ ಸ್ಪರ್ಧೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸೇವಾ ಸಂಕಲ್ಪ ಹಾಗೂ ಬೂತ್ ವಿಜಯ ಸಂಕಲ್ಪ ಅಭಿಯಾನವನ್ನು ಒಟ್ಟಿಗೆ ಜೋಡಿಸಿಕೊಂಡು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡಲಾಗ್ತಿದೆ.

ಇನ್ನು ಸೇವಾ ಸಂಕಲ್ಪ ಅಭಿಯಾನದ ವೇದಿಕೆಯಿಂದಲೇ ರಾಜ್ಯ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ರು. ಭೀಕರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ರೂ ರಾಜ್ಯ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ ಅಂತ ಆರೋಪಿಸಿದ್ರು. ಒಂದು ಹೆಕ್ಟೇರ್‌ಗೆ ಕನಿಷ್ಠ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಆದ್ರೆ ಸರ್ಕಾರ ಘೋಷಣೆ ಮಾಡಿದ ಪರಿಹಾರವನ್ನೂ ಸಂಪೂರ್ಣವಾಗಿ ಬಿಡುಗಡೆ ಮಾಡಿಲ್ಲ ಅಂತ ವಿಜಯೇಂದ್ರ ಆರೋಪಿಸಿದ್ರು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಇದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಅಂತ ಸರ್ಕಾರದ ವಿರುದ್ಧ ಕಿಡಿಕಾರಿದ್ರು.

ಇನ್ನು ಸೇವಾ ಸಂಕಲ್ಪ ಅಭಿಯಾನದ ನಡುವೆ ಗುಬ್ಬಿ ಬಿಜೆಪಿಯ ಆಂತರಿಕ ಬೇಗುದಿಯೂ ಬಹಿರಂಗವಾಯ್ತು. ಗುಬ್ಬಿ ತಾಲೂಕಿನ ಚೇಳೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಮುಖಂಡ ಚಂದ್ರಶೇಖರ್ ಭಾಷಣ ಮಾಡುತ್ತಿದ್ದ ವೇಳೆ ಗದ್ದಲ ಶುರುವಾಯ್ತು. ಸ್ವಾಗತ ಭಾಷಣದಲ್ಲಿ ಮತ್ತೊಬ್ಬ ಮುಖಂಡ ದಿಲೀಪ್ ಕುಮಾರ್ ಅವರ ಹೆಸರು ಪ್ರಸ್ತಾಪ ಮಾಡದ ಹಿನ್ನೆಲೆ ದಿಲೀಪ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ರು. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲೇ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಎರಡೂ ಮುಖಂಡರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡ್ರು. ವೇದಿಕೆಯಲ್ಲೇ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಮುಖಂಡರು ಹರಸಾಹಸ ಪಟ್ಟರು. ಕೊನೆಗೆ ವಿಜಯೇಂದ್ರ ಅವರೇ ಭಾಷಣಕ್ಕೆ ಮುಂದಾಗಿ ಕಾರ್ಯಕರ್ತರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಿದ್ರು.

ಒಂದೆಡೆ ಪ್ರಧಾನಿ ನರೇಂದ್ರ ಮೋದಿಯವರ 25 ವರ್ಷಗಳ ಸಾರ್ವಜನಿಕ ಜೀವನದ ಹಿನ್ನೆಲೆಯಲ್ಲಿ ಸೇವಾ ಸಂಕಲ್ಪ ಅಭಿಯಾನ... ಮತ್ತೊಂದೆಡೆ ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ... ಇದರ ನಡುವೆಯೇ ವಿಜಯೇಂದ್ರ ಸಮ್ಮುಖದಲ್ಲೇ ನಡೆದ ಬಿಜೆಪಿ ಕಾರ್ಯಕರ್ತರ ಗಲಾಟೆ, ಗುಬ್ಬಿ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತವನ್ನೂ ಬಹಿರಂಗಪಡಿಸಿದೆ. ಇನ್ನು ಚುನಾವಣಾ ಪೂರ್ವದಲ್ಲೆ ಪಕ್ಷದಲ್ಲನ ಆಂತರೀಕ ಬೇಗುದಿ ಯಾವ ರೀತಿ ರಾಜ್ಯಾಧ್ಯಕ್ಷ ಬಿ.ವೈ.ವಿ ಶಮನ ಮಾಡ್ತಾರೆ ಅನ್ನೋದು ಕಾದುನೋಡಬೇಕಿದೆ.

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES