ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ದಿಢೀರ್ ಅಗ್ನಿ ಅವಘಡ ಸಂಭವಿಸಿದೆ. ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ಬಸ್‌ನಲ್ಲಿ ಏಕಾಏಕಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೆಲಕಾಲ ಆತಂಕಗೊಂಡಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ನಿರ್ವಾಹಕ, ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಅದೃಷ್ಟವಶಾತ್ ಸಮಯಕ್ಕೆ ಸರಿಯಾಗಿ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ.
ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ದಿಢೀರ್ ದಟ್ಟ ಹೊಗೆ.. ನೋಡನೋಡುತ್ತಿದ್ದಂತೆ ಬಸ್ ಸುತ್ತ ಆತಂಕದ ವಾತಾವರಣ.. ಪ್ರಯಾಣಿಕರಲ್ಲಿ ಏನಾಗುತ್ತೋ ಅನ್ನೋ ಭೀತಿ..!ಹೌದು.. ಬೆಂಗಳೂರಿನ ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ಎಂದಿನಂತೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ದಟ್ಟವಾದ ಹೊಗೆ ಬಸ್ ಅನ್ನು ಆವರಿಸಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಆತಂಕಗೊಂಡಿದ್ದಾರೆ.
ಇದನ್ನು ಗಮನಿಸಿದ ನಿರ್ವಾಹಕ ತಕ್ಷಣವೇ ಎಚ್ಚೆತ್ತುಕೊಂಡಿದ್ದಾರೆ. ಯಾವುದೇ ತಡ ಮಾಡದೆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ನಿರ್ವಾಹಕನ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ.ಒಟ್ಟಾರೆಯಾಗಿ ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ದಟ್ಟ ಹೊಗೆ ಪ್ರಯಾಣಿಕರನ್ನು ಕೆಲಕಾಲ ಬೆಚ್ಚಿಬೀಳಿಸಿದೆ. ಆದರೆ ಸಮಯಕ್ಕೆ ಸರಿಯಾಗಿ ನಿರ್ವಾಹಕ ತೋರಿದ ಸಮಯಪ್ರಜ್ಞೆ ಪ್ರಯಾಣಿಕರ ಸುರಕ್ಷತೆಗೆ ನೆರವಾಗಿದೆ. ಬಸ್‌ನಲ್ಲಿ ಹೊಗೆ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.