• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /Karnataka Bus Fare Hike: ನವೆಂಬರ್ 5 ರಿಂದ ಬಸ್ ಪ್ರಯಾಣ ದರ ಏರಿಕೆ ಫಿಕ್ಸ್? ಎಷ್ಟಾಗಲಿದೆ ಟಿಕೆಟ್‌ ಬೆಲೆ?

Karnataka Bus Fare Hike: ನವೆಂಬರ್ 5 ರಿಂದ ಬಸ್ ಪ್ರಯಾಣ ದರ ಏರಿಕೆ ಫಿಕ್ಸ್? ಎಷ್ಟಾಗಲಿದೆ ಟಿಕೆಟ್‌ ಬೆಲೆ?

ಈ ಕುರಿತು ಮಾತನಾಡಿದ ಸಚಿವ ಭೈರತಿ ಸುರೇಶ್, ನವೆಂಬರ್ 3ರವರೆಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಸಭೆಯಲ್ಲಿ

Written ByChetana Devarmani
Published: Oct 29, 2026, 09:55 PM IST|Updated: Oct 29, 2026, 09:56 PM IST
joinshare
Karnataka Bus Fare Hike: ನವೆಂಬರ್ 5 ರಿಂದ ಬಸ್ ಪ್ರಯಾಣ ದರ ಏರಿಕೆ ಫಿಕ್ಸ್? ಎಷ್ಟಾಗಲಿದೆ ಟಿಕೆಟ್‌ ಬೆಲೆ?

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಸಹಕಾರಿ ಸಂಸ್ಥೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿ: ಸಿಎಂ ಡಿ ಕೆ ಶಿವಕುಮಾರ್

ಸಹಕಾರಿ ಸಂಸ್ಥೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿ: ಸಿಎಂ ಡಿ ಕೆ ಶಿವಕುಮಾರ್

2

ಹಣ ಉಳಿತಾಯ ಹಾಗೂ ನಿವೃತ್ತಿ ಯೋಜನೆಯ ಹೊಸ ದಾರಿ: ಕೇವಲ ರೂ. 1,000ಕ್ಕೆ ಭವಿಷ್ಯ ರೂಪಿಸಿ

3

ಶಾಲಾ - ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿ : ಕರವೇ ಆಗ್ರಹ

4

ಅಂದು ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದ ಈತ ಇಂದು ಬಿಗ್ ಬಾಸ್ ಕನ್ನಡ ಸೀಸನ್ 13 ರ ಸ್ಪರ್ಧಿ!

5

'ಬೆಳ್ಳಗಿರುವವರಿಗೆ ಮಾತ್ರ ಅವಕಾಶಗಳು ಸಿಗುತ್ತವೆ': ಸೌತ್‌ ಸಿನಿ ಇಂಡಸ್ಟ್ರಿ ಬಗ್ಗೆ ನಟಿ ರಾಧಿಕಾ ಆಪ್ಟೆ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಕರ್ನಾಟಕದಲ್ಲಿ ಬಸ್ ಪ್ರಯಾಣ ದರ ಏರಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈಗಾಗಲೇ ದರ ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ, ದರ ಏರಿಕೆಯ ಪ್ರಮಾಣವನ್ನು ನಿರ್ಧರಿಸುವ ಜವಾಬ್ದಾರಿಯನ್ನು ಸಾರಿಗೆ ಇಲಾಖೆಗೆ ವಹಿಸಿದೆ. ಪ್ರತಿ ಸ್ಟೇಜ್‌ಗೆ 4ರಿಂದ 5 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂಬ ಚರ್ಚೆ ನಡೆಯುತ್ತಿದ್ದು, ಈ ಕುರಿತು ನವೆಂಬರ್ 4ರಂದು ಅಧಿಕೃತ ಮಾಹಿತಿ ನೀಡುವುದಾಗಿ ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಕುರಿತು ಚರ್ಚೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದರ ಏರಿಕೆಯ ಪ್ರಮಾಣದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ನವೆಂಬರ್ 4 ರಂದು ಸಚಿವರಿಂದ ಸುದ್ದಿಗೋಷ್ಠಿ

ಈ ಕುರಿತು ಮಾತನಾಡಿದ ಸಚಿವ ಭೈರತಿ ಸುರೇಶ್, ನವೆಂಬರ್ 3ರವರೆಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಸಭೆಯಲ್ಲಿ ದರ ಏರಿಕೆಯ ಪ್ರಮಾಣದ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಬಳಿಕ ನವೆಂಬರ್ 4 ರಂದು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಡೀಸೆಲ್ ಬೆಲೆಯನ್ನು ಐದು ಬಾರಿ ಹೆಚ್ಚಿಸಿರುವುದರಿಂದ ಸಾರಿಗೆ ಸಂಸ್ಥೆಗಳ ಮೇಲೆ ಆರ್ಥಿಕ ಒತ್ತಡ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಅಗತ್ಯವಿದೆ ಎಂದು ಸಚಿವರು ಹೇಳಿದ್ದಾರೆ.

ನವೆಂಬರ್ 5 ರಿಂದಲೇ ದರ ಏರಿಕೆಯಾಗುತ್ತಾ?

ನವೆಂಬರ್ 5ರಿಂದಲೇ ಹೊಸ ಬಸ್ ಪ್ರಯಾಣ ದರ ಜಾರಿಗೆ ಬರಲಿದೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ, ಸಚಿವರ ಹೇಳಿಕೆಯ ಪ್ರಕಾರ ನವೆಂಬರ್ 4ರಂದು ದರ ಏರಿಕೆಯ ಕುರಿತು ಮಾಹಿತಿ ನೀಡಲಾಗುತ್ತದೆ. ದರ ಏರಿಕೆಯ ನಿಖರ ಪ್ರಮಾಣ ಮತ್ತು ಜಾರಿಗೆ ಬರುವ ದಿನಾಂಕವನ್ನು ಸರ್ಕಾರ ಅಧಿಕೃತವಾಗಿ ಪ್ರಕಟಿಸಿದ ಬಳಿಕವಷ್ಟೇ ಸ್ಪಷ್ಟವಾಗಲಿದೆ. ಹೀಗಾಗಿ, ಪ್ರತಿ ಸ್ಟೇಜ್‌ಗೆ 4 ರಿಂದ 5 ರೂಪಾಯಿ ದರ ಹೆಚ್ಚಳವಾಗಲಿದೆ ಎಂಬ ಮಾಹಿತಿಯೂ ಸದ್ಯಕ್ಕೆ ಸಾಧ್ಯತೆಯ ಹಂತದಲ್ಲಿದೆ. ಪ್ರಯಾಣಿಕರು ಸರ್ಕಾರದ ಅಧಿಕೃತ ಘೋಷಣೆಯನ್ನು ಕಾಯಬೇಕಿದೆ.

ಸ್ಟಿಂಗ್ ಆಪರೇಷನ್ ಪ್ರಕರಣದ ಬಗ್ಗೆಯೂ ಸಚಿವರ ಹೇಳಿಕೆ

ಇದೇ ವೇಳೆ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ದೊರೆತಿರುವ ವಿಚಾರದ ಕುರಿತು ಮಾತನಾಡಿದ ಭೈರತಿ ಸುರೇಶ್, ಈ ಬಗ್ಗೆ ಗೃಹ ಸಚಿವರು ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ಹೇಳಿದ್ದಾರೆ. ಇತರ ಪಕ್ಷಗಳವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದರು. ಸಿದ್ದರಾಮಯ್ಯ ಅವರ ತೇಜೋವಧೆ ಮಾಡಲಾಗಿದೆ ಎಂದು ಹೇಳಿದ ಸಚಿವರು, ಪ್ರಕರಣದ ಕುರಿತು ಪಾರದರ್ಶಕ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.
 

Add Zee News as a Preferred Source
TAGS:
Kannada News