SOCIAL MEDIA

Newsletter

PARTNER SITES
Select Language Select State

ಕರ್ನಾಟಕದಲ್ಲಿ ಬಸ್ ಟಿಕೆಟ್ ದರದ ಏರಿಕೆಯಾಗೋದು ಪಕ್ಕಾ!!

ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಒಲವು ವ್ಯಕ್ತಪಡಿಸಿದ್ದು, ಸಚಿವ ಸಂಪುಟ ಸಭೆಯಲ್ಲೂ ದರ ಏರಿಕೆಗೆ ಸಮ್ಮತಿ ದೊರೆತಿದೆ ಎಂದು ತಿಳಿದುಬಂದಿದೆ.

Written By Chetana Devarmani
Published: Oct 07, 2026, 04:53 PM IST | Updated: Oct 07, 2026, 04:54 PM IST
Join

ಬೆಂಗಳೂರು: ರಾಜ್ಯದ ಜನರಿಗೆ ಡಬಲ್ ಶಾಕ್ ಫಿಕ್ಸ್ ಆಗಿದ್ದು, ಈಗಾಗಲೇ ನಂದಿನಿ ಹಾಲಿನ ದರ ಏರಿಕೆ  ಬಹುತೇಕ ಖಚಿತವಾಗಿದೆ. ಇದರ ಜೊತೆಯೇ ಬಸ್ ಟಿಕೆಟ್ ದರದ ಏರಿಕೆಯಾಗೋದು ಪಕ್ಕಾ ಆಗಿದ್ದು, ಜನರಿಗೆ ಬೆಲೆ ಏರಿಕೆ ಹೊರೆ ಹೆಚ್ಚಲಿದೆ. ಸದ್ಯ ಇದರ ಬಗ್ಗೆ ಜನಸಾಮಾನ್ಯರು ಆಕ್ರೋಶ ಹೊರಹಾಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಕುರಿತಾದ ವರದಿ ಇಲ್ಲಿದೆ

ಇನ್ನೇನು ಹಬ್ಬದ ಖುಷಿಯಲ್ಲಿರುವ ಜನರಿಗೆ ದಸರಾಗೂ ಮುನ್ನ ರಾಜ್ಯದ ಜನತೆಗೆ ಮತ್ತೆ ಹಾಲಿನ ದರ ಏರಿಕೆಯ ಶಾಕ್ ಎದುರಾಗಿದೆ. ಪ್ರತಿ ಲೀಟರ್ ಹಾಲಿನ ದರ 10 ರೂಪಾಯಿ ಹೆಚ್ಚಿಸಬೇಕೆಂದು ಹಾಲು ಮಾರಾಟ ಒಕ್ಕೂಟಗಳು ಮನವಿ ಮಾಡಿತ್ತು. ಆದರೆ ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಒಲವು ವ್ಯಕ್ತಪಡಿಸಿದ್ದು, ಸಚಿವ ಸಂಪುಟ ಸಭೆಯಲ್ಲೂ ದರ ಏರಿಕೆಗೆ ಸಮ್ಮತಿ ದೊರೆತಿದೆ ಎಂದು ತಿಳಿದುಬಂದಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸದ್ಯ ಹಾಲಿನ ದರ ಏರಿಕೆ ಕುರಿತು ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿದೆ ಎನ್ನಲಾಗಿದೆ. ಇನ್ನು ಅಕ್ಟೋಬರ್ 27ರ ಬಳಿಕ ಹಾಲಿನ ದರ ಏರಿಕೆ ಬಗ್ಹೆ ಅನೌನ್ಸ್ ಮಾಡುವ ಸಾಧ್ಯತೆ ಇದೆ

ಹಾಗೆ ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣದ ಬಾಕಿ ಮೊತ್ತ ಪಾವತಿಯಾಗದ ಕಾರಣ, ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಸಂಸ್ಥೆಗಳ ಮೇಲಿನ ಒಟ್ಟು ಸಾಲ 8,095 ಕೋಟಿ ರೂ.ಗೆ ತಲುಪಿದ್ದು, ಆರ್ಥಿಕ ನಷ್ಟ ಸರಿದೂಗಿಸಲು ಶೀಘ್ರದಲ್ಲೇ ಬಸ್ ದರ ಏರಿಕೆಯಾಗುವ ಸಾಧ್ಯತೆಯಿದೆ. ಸಂಸ್ಥೆಗಳು ಒಟ್ಟು ಸುಮಾರು ₹22,330 ಕೋಟಿ ವೆಚ್ಚದ ಪ್ರಯಾಣ ಸೇವೆ ಒದಗಿಸಿವೆ. ಸರ್ಕಾರ ಕೇವಲ ₹16,705 ಕೋಟಿ ಬಿಡುಗಡೆ ಮಾಡಿದೆ. ಇನ್ನು ₹5,648 ಕೋಟಿ ಮರುಪಾವತಿ ಬಾಕಿಯಿದೆ.. ಸದ್ಯ ಖರ್ಚು ಹೆಚ್ಚುತ್ತಿದೆ. ಆದಾಯ ಕಡಿಮೆ ಆಗುತ್ತಿರೋದ್ರಿಂದ 4 ಸಂಸ್ಥೆಗಳು ನಷ್ಟದಲ್ಲಿವೆ. ಇತ್ತೀಚಿನ ಆರ್ಥಿಕ ವರ್ಷದಲ್ಲಿ ಒಟ್ಟು ₹40,567 ಕೋಟಿ ಆದಾಯದ ವಿರುದ್ಧ ₹44,291 ಕೋಟಿ ವೆಚ್ಚವಾಗಿದ್ದು, ಒಟ್ಟಾರೆ ₹3,724 ಕೋಟಿ ಕಾರ್ಯಾಚರಣೆ ನಷ್ಟ ದಾಖಲಾಗಿದೆ
ಖರ್ಚು ಹೆಚ್ಚುತ್ತಿದೆ. ಆದಾಯ ಕಡಿಮೆ ಆಗುತ್ತಿರೋದ್ರಿಂದ 4 ಸಂಸ್ಥೆಗಳು ನಷ್ಟದಲ್ಲಿವೆ. ಇತ್ತೀಚಿನ ಆರ್ಥಿಕ ವರ್ಷದಲ್ಲಿ ಒಟ್ಟು ₹40,567 ಕೋಟಿ ಆದಾಯದ ವಿರುದ್ಧ ₹44,291 ಕೋಟಿ ವೆಚ್ಚವಾಗಿದ್ದು, ಒಟ್ಟಾರೆ ₹3,724 ಕೋಟಿ ಕಾರ್ಯಾಚರಣೆ ನಷ್ಟ ದಾಖಲಾಗಿದೆ ,ಹೀಗಾಗಿ ಬಸ್ಸು ದರ ಏರಿಕೆ ಅನಿವಾರ್ಯವಾಗಿದೆ..

ಸದ್ಯ ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರ ಜೀವನವನ್ನು ದುಬಾರಿಯಾಗಿಸಿದ್ದು, ಇದರ ವಿರುದ್ಧ ರಾಜಕೀಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ. ಈ ಬೆಲೆ ಏರಿಕೆ ಕಾರಣ ಹೋಟೆಲ್ಗಳು ಕಾಫಿ ,ಟೀ ,ಸ್ವೀಟ್ ಪದಾರ್ಥಗಳ ಬೆಲೆ ಏರಿಕೆಗೆ ನಿರ್ಧಾರ ಮಾಡಿದ್ದು, ಎಲ್ಲಾ ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ. 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES