SOCIAL MEDIA

Newsletter

PARTNER SITES
Select Language Select State

ಪರಿಷತ್ ಚುನಾವಣೆ ಫಲಿತಾಂಶ; ಜನರ ಸಂದೇಶದ ಕೂಲಂಕುಷ ಅಧ್ಯಯನ: ಸಿಎಂ ಡಿ ಕೆ ಶಿವಕುಮಾರ್

"ವಿಧಾನ ಪರಿಷತ್ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಮತದಾರರು ಕೊಟ್ಟಿರುವ ತೀರ್ಮಾನವನ್ನು ಗೌರವದಿಂದ ಸ್ವೀಕಾರ ಮಾಡುತ್ತೇವೆ. ನಮ್ಮ ಪಕ್ಷಕ್ಕೆ ಎರಡು ಸ್ಥಾನಗಳು ಬರುವ ನಿರೀಕ್ಷೆಯಿತ್ತು. ಅದಾಗಿಲ್ಲ. ನಮ್ಮ ಪಕ್ಷ ಸೋತಿದ್ದರೂ ಮತಗಳು ಚೆನ್ನಾಗಿಯೇ ಬಂದಿವೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ನಿರೀಕ್ಷಿಸಿರಲಿಲ್ಲ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ" ಎಂದರು.

Written By Chetana Devarmani
Published: Oct 28, 2026, 04:53 PM IST | Updated: Oct 28, 2026, 04:54 PM IST
Join

ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಮತದಾರರು ಕೊಟ್ಟಿರುವ ಸಂದೇಶವನ್ನು ಕೂಲಂಕುಷ ಅಧ್ಯಯನ ಮಾಡಿ ಸರಿಪಡಿಸಿಕೊಳ್ಳುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ನಿರೀಕ್ಷಿಸಿರಲಿಲ್ಲ

"ವಿಧಾನ ಪರಿಷತ್ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ  ಚುನಾವಣೆಯಲ್ಲಿ ಮತದಾರರು ಕೊಟ್ಟಿರುವ ತೀರ್ಮಾನವನ್ನು ಗೌರವದಿಂದ ಸ್ವೀಕಾರ ಮಾಡುತ್ತೇವೆ. ನಮ್ಮ ಪಕ್ಷಕ್ಕೆ ಎರಡು ಸ್ಥಾನಗಳು ಬರುವ ನಿರೀಕ್ಷೆಯಿತ್ತು. ಅದಾಗಿಲ್ಲ. ನಮ್ಮ ಪಕ್ಷ ಸೋತಿದ್ದರೂ ಮತಗಳು ಚೆನ್ನಾಗಿಯೇ ಬಂದಿವೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ನಿರೀಕ್ಷಿಸಿರಲಿಲ್ಲ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ" ಎಂದರು.

ನಾವು ಕಲಿಯಬೇಕಾದ ವಿಚಾರಗಳಿವೆ

"ಬಿಜೆಪಿ ಮತ್ತು ಜೆಡಿಎಸ್ ನವರು. ಇದು ಭವಿಷ್ಯದ ಮುನ್ಸೂಚನೆ ಎನ್ನುತ್ತಿದ್ದಾರೆ. ಆದರೆ ಚನ್ನಪಟ್ಟಣ ಮತ್ತು ಶಿಗ್ಗಾಂವಿ ಬಗ್ಗೆ ಏನು ಉತ್ತರ  ಕೊಡುತ್ತಾರೆ? ಅದು ಕೂಡ ಮುನ್ಸೂಚನೆಯೇ ಅಲ್ಲವೇ ? ಎಂದು ಪ್ರಶ್ನಿಸಿದರು. ನಾವು ಕಲಿಯಬೇಕಾದ ವಿಚಾರಗಳಿವೆ. ಈ ಬಗ್ಗೆ ಪರಿಶೀಲಿಸಿ, ನಮ್ಮ ಕಾರ್ಯಕರ್ತರನ್ನು ಹೇಗೆ ತಯಾರು ಮಾಡಬೇಕೆಂದೂ ತಿಳಿದಿದೆ" ಎಂದರು.

ಮತಪತ್ರ ಚುನಾವಣೆ: ನೂತನ ಕ್ರಿಯಾ ಯೋಜನೆ

ನಾಲ್ಕು ವಿಧಾನ ಪರಿಷತ್ ಸ್ಥಾನಗಳ  ಚುನಾವಣೆಯನ್ನು ಸಂಪೂರ್ಣವಾಗಿ ಮತಪತ್ರ ಮೂಲಕವೇ ನಡೆಸಲಾಗಿದ್ದರೂ ಕಾಂಗ್ರೆಸ್ ಸೋತಿರುವುದು ಪಕ್ಷಕ್ಕೆ ಹಿನ್ನಡೆಯಾಗಿದೆ ಎಂಬ ಬಿಜೆಪಿ, ಜೆಡಿಎಸ್ ಹೇಳಿಕೆ ಬಗ್ಗೆ  ಕೇಳಿದಾಗ, "ಹೌದು, ಮತಪತ್ರದ ಮೂಲಕ ಚುನಾವಣೆಯ ಅಗತ್ಯವಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಹಲವಾರು ಸಮಸ್ಯೆಗಳಿವೆ. ನವೆಂಬರ್ ನಂತರ ನಮ್ಮ ಪಕ್ಷ ಈ ಕುರಿತು ಹೊಸ ಕ್ರಿಯಾ ಯೋಜನೆಯನ್ನು ಹೊರತರಲಿದೆ" ಎಂದರು.

ಸಮಸ್ಯೆಗಳ ಕುರಿತು ಚರ್ಚಿಸಲು ಸಮುದಾಯವಾರು ಶಾಸಕರ ಸಭೆ

ಸಮುದಾಯವಾರು ಶಾಸಕರ ಸಭೆ ಕರೆದಿರುವ ಬಗ್ಗೆ ಕೇಳಿದಾಗ, "ಸಮುದಾಯಗಳ  ಸಮಸ್ಯೆಗಳು ಹಾಗೂ  ನ್ಯಾಯಾಲಯದ ತೀರ್ಪಿನ ಬಗ್ಗೆ ಚರ್ಚಿಸಬೇಕಿದ್ದು, ಅದಕ್ಕಾಗಿ ಸಭೆ ಕರೆಯಲಾಗಿದೆ" ಎಂದರು.

ಬರ ಪರಿಹಾರ: ಖಾತೆಗಳ ಪರಿಶೀಲನೆ

ಬರ ಪರಿಹಾರ ಹಣ ಬಿಡುಗಡೆಯ ಬಗ್ಗೆ ಕೇಳಿದಾಗ, "ಖಾತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಸರ್ಕಾರಿ ಆದೇಶ ಹೊರಡಿಸಿ ಹಣ ಬಿಡುಗಡೆ ಮಾಡಲಾಗಿದೆ. ಎಲ್ಲವನ್ನು ಸರಿಪಡಿಸಿ ಖಾತೆಗಳಿಗೆ ಪರಿಹಾರದ ಮೊತ್ತ ಜಮೆ ಮಾಡಲಾಗುವುದು" ಎಂದರು.

ಬೆಂಗಳೂರಿನಲ್ಲಿಯೇ ಸರ್ವ ಪಕ್ಷ ನಿಯೋಗ ಭೇಟಿಗೆ ಪ್ರಧಾನಿಗಳ ಸಮಯಕ್ಕೆ ಕೋರಿಕೆ

"ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಸಮಯ ನಿಗದಿ ಮಾಡಲು ಕೋರಲಾಗಿದೆ. ಪ್ರಧಾನ ಮಂತ್ರಿಗಳು ಮೆಟ್ರೋ ಉದ್ಘಾಟನೆಗಾಗಿ ನವೆಂಬರ್ 15 ರಂದು ಬೆಂಗಳೂರಿಗೆ ಆಗಮಿಸಿದಾಗ, ಸಮಯ ನಿಗದಿ ಮಾಡಲು ಕೋರುತ್ತೇನೆ. ಅವರು ಮೈಸೂರಿಗೆ ಬರುವ ಕಾರ್ಯಕ್ರಮವೂ ಇತ್ತು. ಆದರೆ ದಸರಾ ಪ್ರಯುಕ್ತ ಅದನ್ನು ಮುಂದೂಡಲಾಗಿದೆ. ಅಲ್ಲಿ ಕೇಳಲು ಸಾಧ್ಯವಾಗದಿದ್ದರೆ ಬೆಂಗಳೂರಿಗೆ ಭೇಟಿ ನೀಡಿದಾಗ ಇಲ್ಲಿಯೇ ಸರ್ವ ಪಕ್ಷ ನಿಯೋಗ ಭೇಟಿ ಮಾಡಲು ಸಮಯ ನಿಗದಿ ಮಾಡುವಂತೆ  ಕೇಳುತ್ತೇನೆ ಎಂದರು.

ಮತದಾರರ ಅಂತಿಮ ಪಟ್ಟಿ ಬಗ್ಗೆ ಆಕ್ಷೇಪಗಳಿವೆ

ಚುನಾವಣಾ ಆಯೋಗದ ಅಂತಿಮ ಪಟ್ಟಿ ಹೊರಡಿಸಿದ್ದು ಸರ್ಕಾರದಿಂದ ಆಕ್ಷೇಪಣೆಗಳಿವೆಯೇ ಎಂದು ಕೇಳಿದಾಗ "ಖಂಡಿತ ಆಕ್ಷೇಪಣೆಗಳಿವೆ. ಅವುಗಳನ್ನು ಸಲ್ಲಿಸಲು ಅವಕಾಶ ನೀಡಿದ್ದಾರೆ. ಫಾರಂ 7 ವಿಚಾರದಲ್ಲಿ ನಾವು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಆಯೋಗ ಒಪ್ಪಿದೆ" ಎಂದರು.

ದೇವರು ಒಳ್ಳೇದು ಮಾಡಲಿ

ಈ ಬಾರಿ ದೀಪಾವಳಿಯಿಂದಲೇ ನರಕಾಸುರರ ಸಂಹಾರ ಆರಂಭ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ "ದೇವರು ಒಳ್ಳೆಯದು ಮಾಡಲಿ" ಎಂದು ಸಿಎಂ  ಉತ್ತರಿಸಿದರು.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES