• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ಝೀರೋ: ಸ್ಟಿಂಗ್ ಆಪರೇಷನ್‌ ಹಿಂದೆ ಯಾರಿದ್ದಾರೆ? ಹೆಚ್‌ಡಿಕೆ ಪ್ರಶ್ನೆ

ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ಝೀರೋ: ಸ್ಟಿಂಗ್ ಆಪರೇಷನ್‌ ಹಿಂದೆ ಯಾರಿದ್ದಾರೆ? ಹೆಚ್‌ಡಿಕೆ ಪ್ರಶ್ನೆ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಇಲ್ಲದೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ‘ಝೀರೋ’ ಎಂದು ಹೇಳಿದ್ದು, ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದ ಕಾರಣವನ್ನು ಕಾಂಗ್ರೆಸ್‌ ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ನಿರ್ಗಮನದ ಹಿಂದೆ ಸ್ಟಿಂಗ್ ಆಪರೇಷನ್ ನಡೆದಿರುವ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.

Written ByPuttaraj K Alur
Published: Oct 07, 2026, 05:59 PM IST|Updated: Oct 07, 2026, 06:15 PM IST
joinshare
ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ಝೀರೋ: ಸ್ಟಿಂಗ್ ಆಪರೇಷನ್‌ ಹಿಂದೆ ಯಾರಿದ್ದಾರೆ? ಹೆಚ್‌ಡಿಕೆ ಪ್ರಶ್ನೆ
Image Credit: HD Kumaraswamy

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ಝೀರೋ: ಸ್ಟಿಂಗ್ ಆಪರೇಷನ್‌ ಹಿಂದೆ ಯಾರಿದ್ದಾರೆ? ಹೆಚ್‌ಡಿಕೆ ಪ್ರಶ್ನೆ

ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ಝೀರೋ: ಸ್ಟಿಂಗ್ ಆಪರೇಷನ್‌ ಹಿಂದೆ ಯಾರಿದ್ದಾರೆ? ಹೆಚ್‌ಡಿಕೆ ಪ್ರಶ್ನೆ

2

ನಕಲಿ ಔಷಧಿ ಜಾಲದ ಜೊತೆ ಸಂಪರ್ಕದಲ್ಲಿದ್ದ ಮೂರು ಕಂಪನಿಗಳ ಮೇಲೆ ದಾಳಿ

3

ಈ ರಾಜ್ಯದ ಸರ್ಕಾರಿ ನೌಕರರಿಗೆ ದಸರಾ ಬಂಪರ್ ಗಿಫ್ಟ್;‌ ಶೇ 3ರಷ್ಟು DA ಶೇ 2ರಷ್ಟು HRA ಹೆಚ್ಚಳ! ಎಷ್ಟಾಗಲಿದೆ ಒಟ್ಟು ಸಂಬಳ?

4

ಐಐಎಸ್‌ಸಿ ಪ್ರೊ. ಮಹೇಶ್ ಕಾಕ್ಡೆಗೆ ರಾಮಾನುಜನ್ ಪ್ರಶಸ್ತಿ! ಗಣಿತ ಕ್ಷೇತ್ರದ ಸಾಧನೆಗೆ ಜಾಗತಿಕ ಮನ್ನಣೆ

5

ಸಿದ್ದರಾಮಯ್ಯ ವಿರುದ್ಧ ಡಿ.ಕೆ. ಶಿವಕುಮಾರ್ ಸ್ಟಿಂಗ್ ಆಪರೇಶನ್! ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

HD Kumaraswamy Slams DK Shivakumar: ಕರ್ನಾಟಕದ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಹಾಗೂ ಮುಖ್ಯಮಂತ್ರಿ ಸ್ಥಾನದಿಂದ ಅವರ ನಿರ್ಗಮನದ ಕುರಿತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೊಸ ಆರೋಪಗಳನ್ನ ಮಾಡಿದ್ದಾರೆ. ಸಿದ್ದರಾಮಯ್ಯ ಇಲ್ಲದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ‘ಝೀರೋ’ ಎಂದು ಹೇಳಿರುವ ಅವರು, ಅಂತಹ ನಾಯಕನನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕಾರಣವೇನು ಎಂಬುದನ್ನ ಕಾಂಗ್ರೆಸ್ ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಉಳಿದುಕೊಂಡಿದ್ದರೆ ಅದಕ್ಕೆ ಸಿದ್ದರಾಮಯ್ಯ ಅವರ ಕೊಡುಗೆ ಪ್ರಮುಖವಾಗಿದೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ದೇವರಾಜ ಅರಸು ಅವರಿಗಿಂತ ಹೆಚ್ಚು ಅವಧಿ ರಾಜ್ಯವನ್ನ ಆಳಿದವರು ಎಂದು ಉಲ್ಲೇಖಿಸಿದ ಅವರು, ಒಂದು ವರ್ಗದಲ್ಲಿ ಸಿದ್ದರಾಮಯ್ಯ ಅವರ ಬಗ್ಗೆ ಉತ್ತಮ ಅಭಿಪ್ರಾಯವಿದೆ ಎಂದರು. ಇಂತಹ ಹಿನ್ನೆಲೆಯ ವ್ಯಕ್ತಿಯನ್ನ ಸಂಪುಟ ವಿಸ್ತರಣೆ ನೆಪದಲ್ಲಿ ದೆಹಲಿಗೆ ಕರೆಸಿ, ಬಳಿಕ ಅಲ್ಪಾವಧಿಯಲ್ಲೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರ ನಿರ್ಗಮನದ ಹಿಂದೆ ಸ್ಟಿಂಗ್ ಆಪರೇಷನ್‌ ಪಾತ್ರವಿತ್ತೆಂಬ ಚರ್ಚೆ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ವಿಚಾರದ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯಬೇಕು ಎಂದು ಆಗ್ರಹಿಸಿರುವ ಅವರು, ಅಗತ್ಯವಿದ್ದರೆ ವಿಶೇಷ ತನಿಖಾ ತಂಡ (SIT) ಮೂಲಕ ತನಿಖೆ ನಡೆಸಲಿ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ವಿರುದ್ಧದ ಯಾವುದೇ ಸ್ಟಿಂಗ್ ಆಪರೇಷನ್ ನಡೆದಿದ್ದರೆ, ಅದರ ಸಂಪೂರ್ಣ ಹಿನ್ನೆಲೆ ಮತ್ತು ಅದರ ಹಿಂದೆ ಇದ್ದವರ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರು ನಕಲಿ ಸಿಮ್ ಬಳಸಿ ಮುಖ್ಯಮಂತ್ರಿ ವಿರುದ್ಧ ಕುತಂತ್ರ ನಡೆಸಲಾಗಿದೆ ಎಂಬ ಆರೋಪ ಮಾಡಿರುವ ವಿಚಾರಕ್ಕೂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಆರೋಪದ ಬಗ್ಗೆಯೂ SIT ತನಿಖೆ ನಡೆಸಲಿ ಎಂದು ಅವರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ತಮ್ಮ ರಾಜಕೀಯ ಹೋರಾಟ ‘ಕುಮಾರಸ್ವಾಮಿ vs ಕಾಂಗ್ರೆಸ್ ಪಕ್ಷ’ ಎಂಬ ರೀತಿಯಲ್ಲಿ ಸಾಗಲಿದೆ ಎಂದು ಹೇಳಿರುವ ಅವರು, ತಮ್ಮ ವಿರುದ್ಧ ಬರುತ್ತಿರುವ ಆರೋಪಗಳಿಗೆಲ್ಲ ತಾವು ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದಿದ್ದಾರೆ.

ಸದ್ಯ ರಾಜ್ಯ ರಾಜಕೀಯದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವುದು ಸಚಿವರ ಮೇಲಿನ ಸಂಭಾವ್ಯ ಸ್ಟಿಂಗ್ ಆಪರೇಷನ್ ವಿಚಾರ. ಅಕ್ಟೋಬರ್ 6ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವರಿಗೆ ಎಚ್ಚರಿಕೆ ನೀಡಿದ್ದು, ಖಾಸಗಿ ಏಜೆನ್ಸಿಗಳು ಸಚಿವರ ಮಾತುಕತೆ, ಚಲನವಲನ ಹಾಗೂ ಭೇಟಿಗಳನ್ನ ರಹಸ್ಯವಾಗಿ ದಾಖಲಿಸುತ್ತಿರಬಹುದು ಎಂದು ಸೂಚಿಸಿರುವುದಾಗಿ ವರದಿಯಾಗಿದೆ. ಕೆಲವು ಸಚಿವರು ಗುರಿಯಾಗಿರಬಹುದು ಎಂಬ ಮಾಹಿತಿ ಕೂಡ ಸಭೆಯಲ್ಲಿ ಪ್ರಸ್ತಾಪವಾಗಿತ್ತು ಎಂದು ವರದಿಗಳು ಹೇಳಿವೆ. ಆದರೆ ಈ ಸ್ಟಿಂಗ್ ಆಪರೇಷನ್‌ಗಳನ್ನ ಯಾರು ನಡೆಸುತ್ತಿದ್ದಾರೆ ಮತ್ತು ಅದರ ಉದ್ದೇಶವೇನು ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.  

ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಕಾಂಗ್ರೆಸ್‌ನ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ಹಿಂದಿನ ಹೇಳಿಕೆಗಳನ್ನೂ ಪ್ರಸ್ತಾಪಿಸಿದ್ದಾರೆ. ಸ್ಟಿಂಗ್ ಆಪರೇಷನ್ ಬಗ್ಗೆ ರಾಜಣ್ಣ ಅವರು ಏನು ಚರ್ಚೆ ಮಾಡಿದ್ದರು? ‘ಸಂಪುಟದ ಮಂತ್ರಿಯೇ ಮಾಡಿಸಿದ್ದಾರೆ’ ಎಂಬ ರೀತಿಯ ಹೇಳಿಕೆ ನೀಡಿದ್ದರೆ, ನಂತರ ಆ ವಿಚಾರ ಏಕೆ ಮುಂದುವರಿಯಲಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

‘ಸಂಪುಟ ಸಭೆಯಲ್ಲಿ ಸಿಎಂ ನಿನ್ನೆ ಸ್ಟಿಂಗ್ ಆಪರೇಷನ್ ವಿಚಾರವನ್ನ ಏಕೆ ಪ್ರಸ್ತಾಪಿಸಿದರು? ಯಾವುದೋ ಫೈಲ್ ಇಟ್ಟುಕೊಂಡು ವಿಧಾನಸೌಧಕ್ಕೆ ಹೋಗುತ್ತಿದ್ದರು. ಆ ಫೈಲ್‌ನಲ್ಲಿ ಯಾರು ಸ್ಟಿಂಗ್ ಮಾಡಿದ್ದಾರೆಂಬ ಮಾಹಿತಿ ಇರಬೇಕಲ್ಲವೇ?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಪ್ರಕರಣದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಅಥವಾ ತಮ್ಮ ಮೇಲೆಯೇ ಆರೋಪ ಮಾಡಲಾಗುತ್ತಿದೆಯೇ ಎಂಬುದನ್ನ ಸ್ಪಷ್ಟಪಡಿಸಬೇಕೆಂದು ಅವರು ಹೇಳಿದ್ದಾರೆ.

ಇದರೊಂದಿಗೆ ಸಿದ್ದರಾಮಯ್ಯರ ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮನದ ಬಗ್ಗೆ ಮತ್ತಷ್ಟು ರಾಜಕೀಯ ಚರ್ಚೆಗೆ ಕುಮಾರಸ್ವಾಮಿ ಚಾಲನೆ ನೀಡಿದ್ದಾರೆ. ಸಿದ್ದರಾಮಯ್ಯ ಅವರನ್ನ ಸ್ಟಿಂಗ್ ಆಪರೇಷನ್ ಮೂಲಕ ಸ್ಥಾನದಿಂದ ಕೆಳಗಿಳಿಸಲಾಯಿತು ಎಂಬುದು ಕುಮಾರಸ್ವಾಮಿ ಅವರ ಆರೋಪವಾಗಿದ್ದು, ಈ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿಯಲ್ಲಿ ನಿರ್ದಿಷ್ಟ ಸ್ಟಿಂಗ್ ವಿಡಿಯೋ ಅಥವಾ ಅದರ ಅಧಿಕೃತ ದೃಢೀಕರಣದ ವಿವರಗಳು ಸದ್ಯಕ್ಕೆ ಬಹಿರಂಗವಾಗಿಲ್ಲ.

ಇತ್ತ ಕುಮಾರಸ್ವಾಮಿ ಅವರ ಆರೋಪಗಳಿಗೆ ಕಾಂಗ್ರೆಸ್ ಕಡೆಯಿಂದ ಪ್ರತಿಕ್ರಿಯೆಗಳೂ ವ್ಯಕ್ತವಾಗಿವೆ. ಸಚಿವ ಎಚ್.ಸಿ.ಬಾಲಕೃಷ್ಣ ಅವರು ಕುಮಾರಸ್ವಾಮಿ ಅವರ ಹೇಳಿಕೆಯನ್ನ ಟೀಕಿಸಿದ್ದು, ಸ್ಟಿಂಗ್ ಆಪರೇಷನ್ ಮೂಲಕ ಸರ್ಕಾರವನ್ನ ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಸ್ಟಿಂಗ್ ಆಪರೇಷನ್ ವಿಚಾರವು ಇದೀಗ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ನಡುವಿನ ಹೊಸ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಈ ಆರೋಪಗಳಿಗೆ ಸಂಬಂಧಿಸಿದಂತೆ ಸರ್ಕಾರ ಅಥವಾ ತನಿಖಾ ಸಂಸ್ಥೆಗಳು ಯಾವುದೇ ಅಧಿಕೃತ ತನಿಖೆ ಕೈಗೊಳ್ಳುತ್ತವೆಯೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ದಾಖಲೆಗಳು ಅಥವಾ ಸಾಕ್ಷ್ಯಗಳು ಬಹಿರಂಗವಾಗುತ್ತವೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Add Zee News as a Preferred Source
TAGS:
Karnataka Politics
Kannada News