SOCIAL MEDIA

Newsletter

PARTNER SITES
Select Language Select State

ಕೈದಿ ಹೆಂಡತಿ ಅಂದ್ರೆ ಇಷ್ಟನಾ.. ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಪ್ರತಿ ಸೃಷ್ಟಿ.. DIG ಸೋಮಶೇಖರ್‌ ಪೊಲೀಸ್‌ ವಶಕ್ಕೆ

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ಅವರನ್ನು ಪೊಲೀಸರ ವಶಕ್ಕೆ ಪಡೆದಿದ್ದರು.

Written By Bhimappa
Published: Oct 06, 2026, 10:17 AM IST | Updated: Oct 06, 2026, 10:20 AM IST
Image Credit: DIG_Somashekar
Join

DIG Somashekar arrested: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಪ್ರತಿಯನ್ನು ಸೃಷ್ಟಿಸಿ ಅಪರಾಧಿಯೊಬ್ಬನನ್ನು ಅಕ್ರಮವಾಗಿ ಬಿಡುಗಡೆ ಮಾಡಿದ ಗಂಭೀರ ಪ್ರಕರಣದಲ್ಲಿ ಕರಾಗೃಹ ಇಲಾಖೆಯ ಹಾಲಿ ಡಿಐಜಿ ಎಂ. ಸೋಮಶೇಖರ್‌ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. 2004 ರಲ್ಲಿ ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಶಂಕರ್ ಎಂಬ ಅಪರಾಧಿಯ ಅರ್ಜಿಯನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳು ವಜಾಗೊಳಿಸಿದ್ದವು. ಎರಡು ಮಹತ್ವದ ಕೋರ್ಟ್‌ಗಳು ಅರ್ಜಿಯನ್ನು ತಿರಸ್ಕಾರ ಮಾಡಿದ್ದವು. ಆದರೆ, 2018ರಲ್ಲಿ ಪರಪ್ಪನ ಅಗ್ರಹಾರದ ಮುಖ್ಯ ಸೂಪರಿಂಟೆಂಡೆಂಟ್ ಆಗಿದ್ದ ಸೋಮಶೇಖರ್, ಜೈಲಿಗೆ ಭೇಟಿ ನೀಡುತ್ತಿದ್ದ ಶಂಕರ್ ಪತ್ನಿಯ ಮೇಲೆ ಲೈಂಗಿಕ ಶೋಷಣೆ ನಡೆಸಿ, ಆಕೆಗೆ ಸಹಾಯ ಮಾಡುವ ಭರವಸೆ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ.

ಅಧಿಕಾರಿ ಸೋಮಶೇಖರ್ ಸೂಚನೆಯಂತೆ ಸಜಾ ಬಂಧಿಗಳ ವಿಭಾಗದ ಸಿಬ್ಬಂದಿ ಶ್ರೀಕಾಂತ್  2018ರ ನವೆಂಬರ್‌ನಲ್ಲಿ ನಕಲಿ ಸುಪ್ರೀಂ ಕೋರ್ಟ್ ಆದೇಶ ಪ್ರತಿಯನ್ನು ಸಿದ್ಧಪಡಿಸಿದ್ದ. ಇದರ ಆಧಾರದ ಮೇಲೆ ನವೆಂಬರ್ 13, 2018 ರಂದು ಶಂಕರ್‌ನನ್ನು ಜೈಲಿನಿಂದ ರಿಲೀಸ್ ಮಾಡಲಾಗಿತ್ತು. ಆದರೆ ಜೈಲಿನಿಂದ ಹೊರಬಂದ ಶಂಕರ್‌ ತನ್ನ ಪತ್ನಿಗೆ ಮೋಸ ಮಾಡಿ ಮತ್ತೊಂದು ಮದುವೆಯಾಗಿದ್ದರಿಂದ, ಕೆರಳಿದ ಪತ್ನಿ ತನಿಖಾಧಿಕಾರಿಗಳ ಮುಂದೆ ಸತ್ಯ ಬಿಚ್ಚಿಟ್ಟಿದ್ದಾಳೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಅನಾಮಧೇಯ ಪತ್ರದ ಆಧಾರದ ಮೇಲೆ ಕಾರಾಗೃಹ ಇಲಾಖೆ ತನಿಖೆ ನಡೆಸಿದಾಗ ಈ ಬೃಹತ್ ವಂಚನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಶಂಕರ್ ಹಾಗೂ ಶ್ರೀಕಾಂತ್‌ನನ್ನು ಬಂಧಿಸಿದ್ದ ಪೊಲೀಸರು, ತನಿಖೆಗೆ ಅಸಹಕಾರ ತೋರಿದ ಆರೋಪದ ಮೇಲೆ ಡಿಐಜಿ ಸೋಮಶೇಖರ್ ಅವರನ್ನು ಬಂಧಿಸಿ ಅಕ್ಟೋಬರ್ 9ರ ವರೆಗೆ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ಅವರನ್ನು ಪೊಲೀಸರ ವಶಕ್ಕೆ ಪಡೆದಿದ್ದರು. ಪರಪ್ಪನ ಅಗ್ರಹಾರ ಪೊಲೀಸರಿಂದ ಡಿಐಜಿ ವಿಚಾರಣೆ ನಡೆಸಲಾಗುತ್ತದೆ. 2018ರಲ್ಲಿ ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಕೈದಿಯನ್ನು ಬಿಡುಗಡೆ ಮಾಡಿದ್ದರು. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್, ಶ್ರೀಕಾಂತ್ ಎಸ್. ಎಂಬ ಎಸ್‌ಡಿಎಯಿಂದ ನಕಲಿ ಆದೇಶ ಸೃಷ್ಟಿಸಿರುವ ಆರೋಪ ಇದೆ.

ನಕಲಿ ಆದೇಶದ ಆಧಾರದಲ್ಲಿ 2018ರ ನವೆಂಬರ್ 13ರಂದು ಶಂಕರ್ ಬಿಡುಗಡೆ ಮಾಡಲಾಗಿತ್ತು. ಶಂಕರ್ ಹಾಗೂ ಆರೋಪಿ ಶ್ರೀಕಾಂತ್ ಈಗಾಗಲೇ ಬಂಧನ ಆಗಿದ್ದಾರೆ. ಅಂದಿನ ಜೈಲು ಚೀಫ್ ಸೂಪರಿಂಟೆಂಡೆಂಟ್ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಅಂದಿನ ಚೀಫ್ ಸೂಪರಿಂಟೆಂಡೆಂಟ್, ಹಾಲಿ ಡಿಐಜಿ ಸೋಮಶೇಖರ್ ವಶಕ್ಕೆ ಪಡೆಯಲಾಗಿದೆ. ನಕಲಿ ಆದೇಶದ ಮೂಲಕ ಜೀವಾವಧಿ ಕೈದಿ ಬಿಡುಗಡೆ ಪ್ರಕರಣದಲ್ಲಿ ತನಿಖೆ ಚುರುಕುಗೊಂಡಿದೆ.

ಸೋಮಶೇಖರ್ ಡಿಐಜಿ ಕಾರಾಗೃಹ, ಉತ್ತರ ವಲಯ ಕಲಬುರಗಿ ಇವರನ್ನು ಪರಪ್ಪನ ಅಗ್ರಹಾರದಲ್ಲಿ ಸುಪ್ರೀಂ ಕೋರ್ಟ್ ನಕಲಿ ಆದೇಶ ಸೃಷ್ಟಿಸಿ ಅಪರಾಧಿ ಬಿಡುಗಡೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಸೋಮಶೇಖರ್ ಅವರನ್ನು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. 9 ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. 9ನೇ ತಾರೀಖಿನವರೆಗೆ 5 ದಿನಗಳ ಕಾಲ ಸೋಮಶೇಖರ್ ಡಿಐಜಿ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪರಪ್ಪನ ಅಗ್ರಹಾರ ಪೊಲೀಸರು ಸೋಮಶೇಖರ್ ಅವರನ್ನು ವಿಚಾರಣೆ ಮಾಡಲಿದ್ದಾರೆ. ವಿಚಾರಣೆ ಬರುವ ಸತ್ಯಾಸತೆಯನ್ನು ದಾಖಲು ಮಾಡಲಾಗಿದ್ದಾರೆ. ಸುಪ್ರೀಂ ಕೋರ್ಟ್‌ ಆದೇಶ ಸೃಷ್ಟಿಸಿ ಅಪರಾಧ ಎಸಗಿರುವುದು ಸಾಮಾನ್ಯವಾದ ವಿಷಯ ಅಲ್ಲವೇ ಅಲ್ಲ. ಸರ್ಕಾರದ ಒಬ್ಬ ಜವಾಬ್ದಾರಿಯುತವಾದ ಅಧಿಕಾರಿಯೇ ಇಂತಹ ತಪ್ಪು ದಾರಿ ಹಿಡಿದಿದ್ದಾರೆ ಎಂದರೆ ಸಾಮಾನ್ಯ ಜನರ ಗತಿ ಏನು?.  

Add Zee News as a Preferred Source
TAGS:

About the Author

ಭೀಮಪ್ಪ (Bhimappa) ಜೀ ಕನ್ನಡ ನ್ಯೂಸ್‌ನಲ್ಲಿ ಸದ್ಯ ಡಿಜಿಟಲ್ (ವೆಬ್‌ಸೈಟ್‌) ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ, ಸ್ಫೋರ್ಟ್ಸ್‌, ಸಿನಿಮಾ, ಆರೋಗ್ಯ, ಎಂಟರ್ಟೈನ್‌ಮೆಂಟ್, ಲೈಫ್‌ಸ್ಟೈಲ್‌, ವೈರಲ್‌ ಸುದ್ದಿಗಳನ್ನು ಓದುಗರಿಗೆ ನೀಡುತ್ತಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡಿರುವ ಇವರು ಪ್ರಜಾವಾಣಿಯಲ್ಲಿ ಒಂದು ವರ್ಷ ಅಪ್ರೆಂಟಿಸ್‌ ಹಾಗೂ ನ್ಯೂಸ್‌ಫಸ್ಟ್‌ನಲ್ಲಿ ಡಿಜಿಟಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 

ZEENEWS TRENDING STORIES