SOCIAL MEDIA

Newsletter

PARTNER SITES
Select Language Select State

ದೀಪಾವಳಿಗೆ ಬೇಕಾಬಿಟ್ಟಿ ಪಟಾಕಿ ಸಿಡಿಸಿದರೆ ಬೀಳುತ್ತೆ ಭಾರೀ ದಂಡ! ಕೇವಲ 2 ಗಂಟೆ ಮಾತ್ರ ಅವಕಾಶ

2026ನೇ ಸಾಲಿನ ದೀಪಾವಳಿ ಹಬ್ಬವನ್ನ ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾ ರೆಡ್ಡಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Written By Puttaraj K Alur
Published: Nov 07, 2026, 08:12 IST | Updated: Nov 07, 2026, 08:23 IST
Image Credit: Firecracker Rules
Join

Firecracker Rules: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದ್ದಂತೆ ಎಲ್ಲೆಡೆ ಸಂಭ್ರಮದ ವಾತಾವರಣ ಮನೆಮಾಡಿದೆ. ಹಬ್ಬವನ್ನ ಸಡಗರ ಸಂಭ್ರಮದಿಂದ ಆಚರಿಸಲು ಜನರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈ ಬಾರಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವವರಿಗೆ ಕಟ್ಟುನಿಟ್ಟಿನ ಸಮಯದ ಮಿತಿ ವಿಧಿಸಲಾಗಿದೆ. ಸಾರ್ವಜನಿಕರ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ನಿಗದಿತ ಎರಡು ಗಂಟೆಗಳ ಅವಧಿಯಲ್ಲಿ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ನಿಯಮ ಉಲ್ಲಂಘಿಸಿ ಬೇರೆ ಸಮಯದಲ್ಲಿ ಪಟಾಕಿ ಸಿಡಿಸಿದರೆ ಕಾನೂನು ಕ್ರಮ ಹಾಗೂ ದಂಡ ಎದುರಿಸಬೇಕಾಗಬಹುದು.

2026ನೇ ಸಾಲಿನ ದೀಪಾವಳಿ ಹಬ್ಬವನ್ನ ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾ ರೆಡ್ಡಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಪಟಾಕಿಗಳಿಂದ ಉಂಟಾಗುವ ವಾಯು ಮತ್ತು ಶಬ್ದ ಮಾಲಿನ್ಯ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ, ಹಬ್ಬದ ಆಚರಣೆಯ ವೇಳೆ ಪರಿಸರದ ಬಗ್ಗೆಯೂ ಕಾಳಜಿ ವಹಿಸುವಂತೆ ಅವರು ತಿಳಿಸಿದ್ದಾರೆ.

ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದು ಹಬ್ಬದ ಸಂಭ್ರಮದ ಭಾಗವಾಗಿದೆ. ಆದರೆ ಪಟಾಕಿಗಳ ಸ್ಫೋಟದಿಂದ ವಾತಾವರಣಕ್ಕೆ ವಿವಿಧ ರಾಸಾಯನಿಕ ವಸ್ತುಗಳು ಬಿಡುಗಡೆಯಾಗುತ್ತವೆ. ಇವುಗಳಿಂದ ವಾಯುಮಾಲಿನ್ಯ ಉಂಟಾಗುವುದರ ಜೊತೆಗೆ ಶಬ್ದ ಮಾಲಿನ್ಯವೂ ಹೆಚ್ಚಾಗುತ್ತದೆ. ಹೀಗಾಗಿ ಪಟಾಕಿಗಳ ಬಳಕೆಯನ್ನ ನಿಯಂತ್ರಿಸುವುದು ಅಗತ್ಯವಾಗಿದೆ.

ಪಟಾಕಿ ಸಿಡಿತದಿಂದ ಉಂಟಾಗುವ ಮಾಲಿನ್ಯವು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅದರಲ್ಲೂ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ಸಿಡಿಸುವುದರಿಂದ ವಾತಾವರಣದಲ್ಲಿ ಮಾಲಿನ್ಯ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಈ ಸಮಸ್ಯೆಯನ್ನ ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂಕೋರ್ಟ್, ಪಟಾಕಿ ಸಿಡಿಸಲು ನಿರ್ದಿಷ್ಟ ಸಮಯವನ್ನ ನಿಗದಿಪಡಿಸಿ ನಿರ್ದೇಶನ ನೀಡಿದೆ. ನ್ಯಾಯಾಲಯದ ಸೂಚನೆಯಂತೆ ರಾಜ್ಯ ಸರ್ಕಾರವೂ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಿದೆ.

ರಾತ್ರಿ 8ರಿಂದ 10ರವರೆಗೆ ಮಾತ್ರ ಅವಕಾಶ

ಸುಪ್ರೀಂಕೋರ್ಟ್ ನಿರ್ದೇಶನದ ಪ್ರಕಾರ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ. ಅಂದರೆ ಸಾರ್ವಜನಿಕರು ಕೇವಲ ಎರಡು ಗಂಟೆಗಳ ಅವಧಿಯಲ್ಲಿ ಮಾತ್ರ ಪಟಾಕಿ ಸಿಡಿಸಬಹುದಾಗಿದೆ. ಈ ಸಮಯವನ್ನ ಹೊರತುಪಡಿಸಿ ಉಳಿದ ಯಾವುದೇ ಅವಧಿಯಲ್ಲಿ ಪಟಾಕಿ ಸಿಡಿಸುವುದಕ್ಕೆ ಅವಕಾಶವಿಲ್ಲ. ಹೀಗಾಗಿ ಬೆಳಗಿನ ಜಾವ, ಮಧ್ಯಾಹ್ನ ಅಥವಾ ರಾತ್ರಿ 10 ಗಂಟೆಯ ನಂತರ ಪಟಾಕಿ ಸಿಡಿಸುವುದನ್ನ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಬ್ಬದ ಸಂಭ್ರಮದ ಹೆಸರಿನಲ್ಲಿ ನಿಗದಿತ ಸಮಯವನ್ನ ಮೀರಿ ಪಟಾಕಿ ಸಿಡಿಸುವಂತಿಲ್ಲ. ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿ ಹಾಗೂ ನ್ಯಾಯಾಲಯದ ನಿರ್ದೇಶನಗಳನ್ನ ಪಾಲಿಸಬೇಕೆಂದು ಸೂಚಿಸಲಾಗಿದೆ.

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಮನವಿ

ದೀಪಾವಳಿ ಬೆಳಕಿನ ಹಬ್ಬವಾಗಿದ್ದು, ಸಂಭ್ರಮದ ಜೊತೆಗೆ ಪರಿಸರದ ಸಂರಕ್ಷಣೆಯನ್ನೂ ಗಮನದಲ್ಲಿಟ್ಟುಕೊಂಡು ಆಚರಿಸಬೇಕಾಗಿದೆ. ಪಟಾಕಿಗಳಿಂದ ಉಂಟಾಗುವ ವಾಯುಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನ ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಈ ಮಾರ್ಗಸೂಚಿಗಳನ್ನ ಜಾರಿಗೆ ತಂದಿದೆ. ಸಾರ್ವಜನಿಕರು ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಮುಂದಾಗಬೇಕೆಂದು ಸಚಿವ ರಾಮಲಿಂಗಾ ರೆಡ್ಡಿ ಮನವಿ ಮಾಡಿದ್ದಾರೆ. ಪಟಾಕಿಗಳ ಸ್ಫೋಟದಿಂದ ವಾಯುಮಾಲಿನ್ಯ ಉಂಟಾಗುವುದಷ್ಟೇ ಅಲ್ಲದೆ, ಕೆಲವು ಸಂದರ್ಭಗಳಲ್ಲಿ ಪ್ರಾಣಹಾನಿ ಪ್ರಕರಣಗಳೂ ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪಟಾಕಿ ಬಳಕೆಯ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವುದು ಹಾಗೂ ನಿಗದಿತ ನಿಯಮಗಳನ್ನ ಪಾಲಿಸುವುದು ಮುಖ್ಯವಾಗಿದೆ.

ದೀಪಾವಳಿ ಹಬ್ಬವನ್ನ ಸಂತೋಷದಿಂದ ಆಚರಿಸುವುದರ ಜೊತೆಗೆ ಸಾರ್ವಜನಿಕರ ಆರೋಗ್ಯ ಮತ್ತು ಪರಿಸರದ ಸುರಕ್ಷತೆಯನ್ನೂ ಕಾಪಾಡಬೇಕಾಗಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನ ಎಲ್ಲರೂ ಪಾಲಿಸಬೇಕು. ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ಉಳಿದ ಸಮಯದಲ್ಲಿ ಪಟಾಕಿ ಬಳಕೆಗೆ ಸಂಪೂರ್ಣ ನಿಷೇಧವಿದೆ. ಹೀಗಾಗಿ ಈ ಬಾರಿಯ ದೀಪಾವಳಿಯಲ್ಲಿ ನಿಯಮಗಳನ್ನ ಉಲ್ಲಂಘಿಸದೆ ಪರಿಸರ ಸ್ನೇಹಿ ಹಬ್ಬ ಆಚರಿಸುವಂತೆ ಸರ್ಕಾರ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ZEENEWS TRENDING STORIES