• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು
  • /ಬೆಲೆ ಏರಿಕೆಯ ನಡುವೆಯೂ ಖರೀದಿ ಭರಾಟೆ.. ಹೂವು, ಹಣ್ಣುಗಳ ಖರೀದಿಗೆ ಮುಗಿಬಿದ್ದ ಜನ!

ಬೆಲೆ ಏರಿಕೆಯ ನಡುವೆಯೂ ಖರೀದಿ ಭರಾಟೆ.. ಹೂವು, ಹಣ್ಣುಗಳ ಖರೀದಿಗೆ ಮುಗಿಬಿದ್ದ ಜನ!

Diwali festival 2026 People rush to purchase flowers and fruits: ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆಮಾಡಿದೆ. ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಜನಸಾಗರವೇ ಹರಿದುಬರುತ್ತಿದೆ. ಹೂವು, ಹಣ್ಣು, ಪೂಜಾ ಸಾಮಗ್ರಿಗಳು ಹಾಗೂ ಮಣ್ಣಿನ ಹಣತೆಗಳ ಖರೀದಿ ಜೋರಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ, ಹಬ್ಬದ ಸಂಭ್ರಮಕ್ಕೆ ಮಾತ್ರ ಯಾವುದೇ ಕೊರತೆಯಿಲ್ಲ. ಕೆ.ಆರ್. ಮಾರ್ಕೆಟ್ ಸೇರಿದಂತೆ ನಗರದ ಪ್ರಮುಖ ಮಾರುಕಟ್ಟೆಗಳು ಜನರಿಂದ ತುಂಬಿ ತುಳುಕುತ್ತಿವೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ...

Written ByRamya. R. Gowda
Published: Nov 07, 2026, 18:34 IST|Updated: Nov 07, 2026, 18:39 IST
joinshare
ಬೆಲೆ ಏರಿಕೆಯ ನಡುವೆಯೂ ಖರೀದಿ ಭರಾಟೆ.. ಹೂವು, ಹಣ್ಣುಗಳ ಖರೀದಿಗೆ ಮುಗಿಬಿದ್ದ ಜನ!

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆಮಾಡಿದೆ. ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಜನಸಾಗರವೇ ಹರಿದುಬರುತ್ತಿದೆ. ಹೂವು, ಹಣ್ಣು, ಪೂಜಾ ಸಾಮಗ್ರಿಗಳು ಹಾಗೂ ಮಣ್ಣಿನ ಹಣತೆಗಳ ಖರೀದಿ ಜೋರಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದರೂ, ಹಬ್ಬದ ಸಂಭ್ರಮಕ್ಕೆ ಮಾತ್ರ ಯಾವುದೇ ಕೊರತೆಯಿಲ್ಲ. ಕೆ.ಆರ್. ಮಾರ್ಕೆಟ್ ಸೇರಿದಂತೆ ನಗರದ ಪ್ರಮುಖ ಮಾರುಕಟ್ಟೆಗಳು ಜನರಿಂದ ತುಂಬಿ ತುಳುಕುತ್ತಿವೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ...

ಬೆಳಕಿನ ಹಬ್ಬ ದೀಪಾವಳಿಗೆ ರಾಜಧಾನಿ ಬೆಂಗಳೂರು ಸಕಲ ಸಿದ್ಧತೆ ಮಾಡಿಕೊಂಡಿದೆ. ಹಬ್ಬದ ಖರೀದಿಗಾಗಿ ನಗರದ ಪ್ರಮುಖ ಮಾರುಕಟ್ಟೆಗಳಿಗೆ ಜನರು ಲಗ್ಗೆ ಇಟ್ಟಿದ್ದಾರೆ. ಕೆ.ಆರ್. ಮಾರ್ಕೆಟ್ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಬೆಳಗ್ಗೆಯಿಂದಲೇ ಜನಜಂಗುಳಿ ಕಂಡುಬಂದಿದೆ. ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಮತ್ತೊಂದೆಡೆ ಹಬ್ಬದ ಖರೀದಿಯ ಭರಾಟೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಭಾರಿ ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರು ಪರದಾಡುವಂತಾಗಿದೆ.

ಇನ್ನು ಹಬ್ಬದ ಸಂಭ್ರಮದ ನಡುವೆಯೇ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಮಾರುಕಟ್ಟೆಯಲ್ಲಿ ಚೆಂಡು ಹೂವು, ಸೇವಂತಿ ಸೇರಿದಂತೆ ವಿವಿಧ ಹೂಗಳ ದರ ಗಣನೀಯವಾಗಿ ಹೆಚ್ಚಾಗಿದೆ. ಹಣ್ಣುಗಳ ಬೆಲೆಯೂ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ. ಏಲಕ್ಕಿ ಬಾಳೆಹಣ್ಣು ಕೆ.ಜಿ.ಗೆ 150ರಿಂದ 180 ರೂಪಾಯಿ, ಸೇಬು ಹಾಗೂ ದಾಳಿಂಬೆ ಕೆ.ಜಿ.ಗೆ 250ರಿಂದ 300 ರೂಪಾಯಿವರೆಗೆ ಮಾರಾಟವಾಗುತ್ತಿದೆ. ಮೋಸಂಬಿ ಕೆ.ಜಿ.ಗೆ 150 ರೂಪಾಯಿ ತಲುಪಿದೆ. ಇನ್ನು ಒಂದು ತೆಂಗಿನಕಾಯಿಗೆ 40ರಿಂದ 50 ರೂಪಾಯಿ ಹಾಗೂ ನಾಲ್ಕು ನಿಂಬೆಹಣ್ಣುಗಳಿಗೆ 40 ರೂಪಾಯಿ ದರ ನಿಗದಿಯಾಗಿದೆ.

ಇನ್ನು ದೀಪಾವಳಿ ಪೂಜೆಗೆ ಅಗತ್ಯವಾದ ಸಾಮಗ್ರಿಗಳ ಬೆಲೆಯೂ ಹೆಚ್ಚಾಗಿದೆ. ಬಾಳೆಕಂದು ಜೋಡಿಗೆ 100 ರೂಪಾಯಿ, ಮಾವಿನ ತೋರಣ ಒಂದಕ್ಕೆ 40 ರೂಪಾಯಿ ಬೆಲೆಯಿದೆ. ಇತ್ತ ದೀಪಾವಳಿಯ ಪ್ರಮುಖ ಆಕರ್ಷಣೆಯಾದ ಮಣ್ಣಿನ ಹಣತೆಗಳಿಗೂ ಭಾರಿ ಬೇಡಿಕೆ ವ್ಯಕ್ತವಾಗಿದೆ. ಗಾತ್ರಕ್ಕೆ ಅನುಗುಣವಾಗಿ ಒಂದು ಡಜನ್ ಹಣತೆಗಳು 50ರಿಂದ 150 ರೂಪಾಯಿವರೆಗೆ ಮಾರಾಟವಾಗುತ್ತಿವೆ. ಬೆಲೆ ಏರಿಕೆಯ ನಡುವೆಯೂ ಜನರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಹಬ್ಬದ ಸಾಮಗ್ರಿಗಳನ್ನು ಖರೀದಿಸುತ್ತಿದ್ದಾರೆ.

ಒಟ್ಟಿನಲ್ಲಿ ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಬೆಲೆ ಗಗನಕ್ಕೇರಿದ್ದರೂ ದೀಪಾವಳಿ ಹಬ್ಬದ ಸಂಭ್ರಮಕ್ಕೆ ಮಾತ್ರ ಬ್ರೇಕ್ ಬಿದ್ದಿಲ್ಲ. ಬೆಲೆ ಏರಿಕೆಯ ಬಿಸಿಯನ್ನು ಸಹಿಸಿಕೊಂಡೇ ರಾಜಧಾನಿಯ ಜನತೆ ಖುಷಿಯಿಂದ ಹಬ್ಬದ ಖರೀದಿಯಲ್ಲಿ ತೊಡಗಿದ್ದಾರೆ. ಮಾರುಕಟ್ಟೆಗಳೆಲ್ಲವೂ ದೀಪಾವಳಿಯ ಬೆಳಕಿನ ಹಬ್ಬದ ಸಂಭ್ರಮದಲ್ಲಿ ಮಿಂದೇಳುತ್ತಿವೆ.
 

Add Zee News as a Preferred Source
TAGS:
Kannada News